ಮಾರ್ಚ್ 26ರಂದು ದೇಶದ ವಿವಿಧ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಇಳಿಕೆ
ಬೆಂಗಳೂರು, ಮಾರ್ಚ್ 26: ಭಾರತದ ಆಭರಣ ಮಾರುಕಟ್ಟೆಯಲ್ಲಿ ಗುರುವಾರ ಏರಿಕೆ ಕಂಡಿದ್ದ ಚಿನ್ನದ ದರ, ಶುಕ್ರವಾರ ಮತ್ತೆ ಕೊಂಚ ಇಳಿಕೆಯಾಗಿದೆ. ಗುರುವಾರ ಪ್ರತಿ ಒಂದು ಗ್ರಾಂ ಬಂಗಾರದ ದರ 102 ರೂಪಾಯಿಯಷ್ಟು ತುಟ್ಟಿಯಾಗಿತ್ತು. ಅದು ಇಂದು 10 ಗ್ರಾಂಗೆ 100 ರೂಪಾಯಿಯಷ್ಟು ಇಳಿಕೆಯಾಗಿದೆ. ಪ್ರತಿ ಗ್ರಾಂ ಚಿನ್ನದ ಬೆಲೆ ಶುಕ್ರವಾರ ಬೆಳಗಿನ ವೇಳೆಗೆ 4,392 ರೂಪಾಯಿಯಷ್ಟಿದೆ.
ದೇಶದಲ್ಲಿ ಪ್ರತಿ ಗ್ರಾಂ ಚಿನ್ನದ ಬೆಲೆ 4,402 ರೂಪಾಯಿಗೆ ತಲುಪಿದೆ. 22 ಕ್ಯಾರಟ್ನ ಚಿನ್ನದ ಬೆಲೆ ಕೂಡ ಪ್ರತಿ 10 ಗ್ರಾಂಗೆ 1020 ರೂಪಾಯಿ ಹೆಚ್ಚಳವಾಗಿದೆ. 10 ಗ್ರಾಂನ ಚಿನ್ನದ ದರ 43,000 ರೂ.ದಿಂದ 44,020 ರೂಪಾಯಿಗೆ ತಲುಪಿದೆ. 24 ಕ್ಯಾರಟ್ ತೂಕದ ಚಿನ್ನದ ದರ 45,020 ರೂಪಾಯಿಗೆ ಏರಿಕೆಯಾಗಿದೆ. ಆದರೆ ಬೆಳ್ಳಿ ದರದಲ್ಲಿ ಮತ್ತೆ ಇಳಿಕೆಯಾಗಿದೆ.
ಗೋಲ್ಡ್ ಗುರು ಮಾತು: ಈ ವಾರದಲ್ಲಿ ಚಿನ್ನದ ಬೆಲೆ ಭಾರಿ ಇಳಿಕೆಗೆ 3 ಕಾರಣ!
ಮಲ್ಟಿ ಕಮಾಡಿಟಿ ಎಕ್ಸ್ಚೇಂಜ್ನಲ್ಲಿ (ಎಂಸಿಎಕ್ಸ್) ಹಳದಿ ಲೋಹದ ಬೆಲೆ ಗೋಲ್ಡ್ ಫ್ಯೂಚರ್ ಬೆಲೆ ಶೇ 0.34ರಷ್ಟು ಇಳಿಕೆಯಾಗಿದ್ದು, ಪ್ರತಿ 10 ಗ್ರಾಂಗೆ 44,542 ರೂಪಾಯಿ ದರವಿದೆ. ಬೆಳ್ಳಿ ದರದಲ್ಲಿ ಶೇ 0.23ರ ಇಳಿಕೆಯೊಂದಿಗೆ ಪ್ರತಿ ಕೆಜಿಗೆ 65,017 ರೂಪಾಯಿಗೆ ತಲುಪಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ವಹಿವಾಟು ತೆರೆದಂತೆ ಭಾರತದಲ್ಲಿನ ಚಿನ್ನದ ದರದಲ್ಲಿಯೂ ಬದಲಾವಣೆಗಳಾಗಲಿವೆ. ಹೀಗಾಗಿ ದಿನದ ಚಿನ್ನ-ಬೆಳ್ಳಿ ದರದಲ್ಲಿ ಬದಲಾವಣೆಗಳಾಗುವ ಸಾಧ್ಯತೆ ಇದೆ.
ದೆಹಲಿಯಲ್ಲಿ ದರ ಏರಿಕೆ
ಬಂಗಾರದ ಬೆಲೆ ದೆಹಲಿಯಲ್ಲಿ ಪ್ರತಿ ಹತ್ತು ಗ್ರಾಂಗೆ 10 ರೂ ಏರಿಕೆಯಾಗಿದೆ. 22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ 44,160 ರೂಪಾಯಿಗೆ ತಲುಪಿದೆ. 24 ಕ್ಯಾರಟ್ ಚಿನ್ನ ಬೆಲೆ ಪ್ರತಿ 10 ಗ್ರಾಂ ಚಿನ್ನದ ದರ 48,170 ರೂಪಾಯಿಗೆ ಹೆಚ್ಚಳ ಕಂಡಿದೆ.
ಬೆಂಗಳೂರಲ್ಲಿ ಚಿನ್ನದ ದರ ಏರಿಕೆ ಹೆಚ್ಚು
ಬೆಂಗಳೂರಿನಲ್ಲಿ ಚಿನ್ನದ ದರ ಗುರುವಾರ 100 ರೂಪಾಯಿಯಷ್ಟು ತುಟ್ಟಿಯಾಗಿತ್ತು. 22 ಕ್ಯಾರಟ್ ಚಿನ್ನದ ಪ್ರತಿ ಹತ್ತು ಗ್ರಾಂ ಇಂದು 300 ರೂಪಾಯಿ ಇಳಿಕೆಯಾಗಿದೆ. 42,000 ರೂಪಾಯಿಯಿಂದ 41,700ಕ್ಕೆ ತಗ್ಗಿದೆ. ಹಾಗೆಯೇ 24 ಕ್ಯಾರಟ್ನ 10 ಗ್ರಾಂ ಚಿನ್ನದ ದರ 330 ರೂಪಾಯಿ ಇಳಿಕೆಯೊಂದಿಗೆ 45,490 ರೂಪಾಯಿಗೆ ಕುಸಿದಿದೆ. ಮೈಸೂರು ಮತ್ತು ಮಂಗಳೂರಿನಲ್ಲಿ ಕೂಡ ಬಂಗಾರದ ಬೆಲೆ ಇದೇ ಮಟ್ಟದಲ್ಲಿದೆ.
ಚಿನ್ನ ಖರೀದಿಸುವ ಕರ್ನಾಟಕದ ಜನರಿಗೆ ರಾಜ್ಯ ಸರ್ಕಾರದ ಬಂಪರ್ ಆಫರ್!
ಚೆನ್ನೈನಲ್ಲಿ ಬೆಲೆ ಏರಿಕೆ
ಚೆನ್ನೈನಲ್ಲಿ ಚಿನ್ನದ ದರದಲ್ಲಿ ಶುಕ್ರವಾರ ಇಳಿಕೆ ಕಂಡಿದೆ. ಪ್ರತಿ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 190 ರೂಪಾಯಿ ಇಳಿಕೆಯೊಂದಿಗೆ 42,160 ರೂ.ಗೆ ಮಾರಾಟವಾಗುತ್ತಿದೆ ಹಾಗೆಯೇ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 200 ರೂಪಾಯಿ ಇಳಿಕೆಯಾಗಿದ್ದು, 46,000 ರೂಪಾಯಿಗೆ ತಲುಪಿದೆ.
ಮುಂಬೈನಲ್ಲಿ ಚಿನ್ನದ ಬೆಲೆ ಕೊಂಚ ಇಳಿಕೆ
ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 10 ರೂ ಇಳಿಕೆಯಾಗಿದ್ದು, 43,910 ರೂಪಾಯಿಗೆ ತಗ್ಗಿದೆ. 24 ಕ್ಯಾರಟ್ ಚಿನ್ನದ ಬೆಲೆ ಕೂಡ 10 ರೂಪಾಯಿ ಇಳಿಕೆಯೊಂದಿಗೆ 44,910 ರೂ ದರಕ್ಕೆ ಮಾರಾಟವಾಗುತ್ತಿದೆ. ಕೇರಳದಲ್ಲಿ ಚಿನ್ನದ ಬೆಲೆ ತುಟ್ಟಿಯಾಗಿದೆ. 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 41,700 ರೂ ಮತ್ತು 24 ಕ್ಯಾರಟ್ ಹಳದಿ ಲೋಹ 45,490 ರೂಪಾಯಿಯಲ್ಲಿ ನಿಂತಿದೆ.
'ಚಿನ್ನ' ಖರೀದಿಸುವವರಿಗೆ ಬಂಗಾರದಂಥ ಸುದ್ದಿ ಕೊಟ್ಟ ರಾಜ್ಯ ಬಿಜೆಪಿ ಸರ್ಕಾರ!
ದೇಶದಲ್ಲಿ ಬೆಳ್ಳಿ ಬೆಲೆ
ಬೆಳ್ಳಿ ದರದಲ್ಲಿ ಶುಕ್ರವಾರ ಮತ್ತೆ ಇಳಿಕೆಯಾಗಿದೆ. ದೇಶಿ ಮಾರುಕಟ್ಟೆಯಲ್ಲಿ ಪ್ರಸ್ತುತ ಒಂದು ಕೆಜಿ ಬೆಳ್ಳಿ ದರ 700 ರೂ ಏರಿಕೆಯೊಂದಿಗೆ 65,000 ರೂ.ಗೆ ತಲುಪಿದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 400 ರೂ. ಕಡಿಮೆಯಾಗಿದ್ದು, 65,400 ರೂಪಾಯಿಯಲ್ಲಿದೆ. ಚೆನ್ನೈನಲ್ಲಿ ಪ್ರತಿ ಕೆಜಿ ಬೆಳ್ಳಿ 100 ರೂ. ತುಟ್ಟಿಯಾಗಿದ್ದು, ಒಂದು ಕೆಜಿಗೆ 69,500 ರೂಪಾಯಿ ಇದೆ. ಮುಂಬೈನಲ್ಲಿ ಬೆಳ್ಳಿ ದರ ಇಳಿಕೆಯಾಗಿದ್ದು, ಪ್ರತಿ ಕೆಜಿಗೆ 65,000 ರೂಪಾಯಿ ಇದೆ.
* ಚಿನ್ನ ಮತ್ತು ಬೆಳ್ಳಿ ಬೆಲೆಯು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರ ಬದಲಾವಣೆ ಮತ್ತು ಸ್ಥಳೀಯ ತೆರಿಗೆ ನೀತಿಗಳಿಗೆ ಅನುಗುಣವಾಗಿ ಬದಲಾಗುತ್ತದೆ. ಈ ಮಾಹಿತಿ ಬೆಳಿಗ್ಗೆ 11 ಗಂಟೆಯವರೆಗಿನ ಮಾರುಕಟ್ಟೆ ದರ ಬದಲಾವಣೆಯನ್ನು ಆಧರಿಸಿದೆ.