ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾರ್ಚ್ 31ರಂದು ದೇಶದ ವಿವಿಧ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟು?

|
Google Oneindia Kannada News

ಬೆಂಗಳೂರು, ಮಾರ್ಚ್ 31: ದೇಶದಲ್ಲಿ ಬುಧವಾರ ಚಿನ್ನ-ಬೆಳ್ಳಿ ದರದಲ್ಲಿ ಏರಿಳಿತ ದಾಖಲಾಗಿದೆ. ಕೆಲವು ನಗರಗಳಲ್ಲಿ ಹಳದಿ ಲೋಹದ ದರ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಇನ್ನು ಕೆಲವು ನಗರಗಳು ಬೆಲೆ ಇಳಿಕೆಯ ಖುಷಿ ಸುದ್ದಿ ಪಡೆದಿವೆ.

ಮಲ್ಟಿ ಕಮಾಡಿಟಿ ಎಕ್ಸ್‌ಚೇಂಜ್‌ನಲ್ಲಿ (ಎಂಸಿಎಕ್ಸ್) ಸತತ ಐದನೇ ದಿನ ಚಿನ್ನದ ದರದಲ್ಲಿ ಇಳಿಕೆಯಾಗಿದೆ. ಬೆಳ್ಳಿ ದರ ಕೂಡ ಇಳಿಕೆಯತ್ತ ಸಾಗುವುದು ಮುಂದುವರಿದಿದೆ. ಎಂಸಿಎಕ್ಸ್‌ನಲ್ಲಿ ಗೋಲ್ಡ್ ಫ್ಯೂಚರ್ ಶೇ 0.3ರಷ್ಟು ಕುಸಿದಿದ್ದು, ಸುಮಾರು ಒಂದು ವರ್ಷದ ಹಿಂದಿನ 44,300 ರೂಪಾಯಿಗೆ ಇಳಿಕೆಯಾಗಿದೆ. ಬೆಳ್ಳಿ ದರ ಕೂಡ ಶೇ 0.8ರ ಇಳಿಕೆಯೊಂದಿಗೆ 62,617 ರೂಪಾಯಿಗೆ ತಲುಪಿದೆ.

ಗೋಲ್ಡ್ ಗುರು ಮಾತು: ಈ ವಾರದಲ್ಲಿ ಚಿನ್ನದ ಬೆಲೆ ಭಾರಿ ಇಳಿಕೆಗೆ 3 ಕಾರಣ! ಗೋಲ್ಡ್ ಗುರು ಮಾತು: ಈ ವಾರದಲ್ಲಿ ಚಿನ್ನದ ಬೆಲೆ ಭಾರಿ ಇಳಿಕೆಗೆ 3 ಕಾರಣ!

ಮಂಗಳವಾರ ಬಂಗಾರದ ದರ ಶೇ 0.5 ಹಾಗೂ ಬೆಳ್ಳಿ ದರ ಶೇ 1.7ರಷ್ಟು ಕುಸಿತ ಕಂಡಿದ್ದವು. ಆದರೆ ಚಿನ್ನದ ಮಾರಾಟ ದರದಲ್ಲಿ ಬುಧವಾರ ಏರಿಕೆಯಾಗಿದೆ. 22 ಕ್ಯಾರಟ್‌ನ ಪ್ರತಿ 10 ಗ್ರಾಂ ಚಿನ್ನ 640 ರೂ. ತುಟ್ಟಿಯಾಗಿದೆ. ಇದರಿಂದ ದೇಶದಲ್ಲಿ 22 ಕ್ಯಾರಟ್‌ನ ಸರಾಸರಿ ಚಿನ್ನದ ದರ ಪ್ರತಿ 10 ಗ್ರಾಂಗೆ 43,630 ರೂಪಾಯಿಗೆ ಏರಿಕೆಯಾಗಿದೆ. 24 ಕ್ಯಾರಟ್ ತೂಕದ ಬಂಗಾರದ ದರ 44,630 ರೂಪಾಯಿಗೆ ತಲುಪಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ವಹಿವಾಟು ಬದಲಾದಂತೆ ಭಾರತದಲ್ಲಿನ ಚಿನ್ನದ ದರದಲ್ಲಿಯೂ ಬದಲಾವಣೆಗಳಾಗಲಿವೆ. ಹೀಗಾಗಿ ದಿನದ ಚಿನ್ನ-ಬೆಳ್ಳಿ ದರದಲ್ಲಿ ಬದಲಾವಣೆಗಳಾಗುವ ಸಾಧ್ಯತೆ ಇದೆ.

ಚಿನ್ನ ಖರೀದಿಸುವ ಕರ್ನಾಟಕದ ಜನರಿಗೆ ರಾಜ್ಯ ಸರ್ಕಾರದ ಬಂಪರ್ ಆಫರ್!ಚಿನ್ನ ಖರೀದಿಸುವ ಕರ್ನಾಟಕದ ಜನರಿಗೆ ರಾಜ್ಯ ಸರ್ಕಾರದ ಬಂಪರ್ ಆಫರ್!

ದೆಹಲಿಯಲ್ಲಿ ಬೆಲೆ ಇಳಿಕೆ

ದೆಹಲಿಯಲ್ಲಿ ಬೆಲೆ ಇಳಿಕೆ

ಬಂಗಾರದ ಬೆಲೆ ದೆಹಲಿಯಲ್ಲಿ ಪ್ರತಿ ಹತ್ತು ಗ್ರಾಂಗೆ ಮತ್ತೆ 10 ರೂ ಇಳಿಕೆಯಾಗಿದೆ. 22 ಕ್ಯಾರಟ್‌ನ 10 ಗ್ರಾಂ ಚಿನ್ನದ ಬೆಲೆ 43,490 ರೂಪಾಯಿಗೆ ತಲುಪಿದೆ. 24 ಕ್ಯಾರಟ್ ಚಿನ್ನ ಬೆಲೆ ಪ್ರತಿ 10 ಗ್ರಾಂ ಚಿನ್ನದ ದರ 47,440 ರೂಪಾಯಿಗೆ ಇಳಿಕೆಯಾಗಿದೆ.

ಬೆಂಗಳೂರಲ್ಲಿ ಬಂಗಾರ ಅಗ್ಗ

ಬೆಂಗಳೂರಲ್ಲಿ ಬಂಗಾರ ಅಗ್ಗ

ಬೆಂಗಳೂರಿನಲ್ಲಿ ಬಂಗಾರದ ಬೆಲೆ ಸತತ ಇಳಿಕೆಯಾಗುತ್ತಿರುವುದು ಆಭರಣ ಪ್ರಿಯರಿಗೆ ಖುಷಿ ನೀಡಿದೆ. ಬುಧವಾರ 22 ಕ್ಯಾರಟ್ ಚಿನ್ನದ ಪ್ರತಿ ಹತ್ತು ಗ್ರಾಂ 250 ರೂಪಾಯಿಯಷ್ಟು ಇಳಿಕೆಯಾಗಿದೆ. ಪ್ರತಿ ಹತ್ತು ಗ್ರಾಂ ಚಿನ್ನಕ್ಕೆ 41,100 ರೂಪಾಯಿ ಇದೆ. ಹಾಗೆಯೇ 24 ಕ್ಯಾರಟ್‌ನ 10 ಗ್ರಾಂ ಚಿನ್ನದ ದರ 270 ರೂಪಾಯಿ ಇಳಿಕೆಯೊಂದಿಗೆ 44,840 ರೂಪಾಯಿಗೆ ಕುಸಿದಿದೆ. ಮೈಸೂರು ಮತ್ತು ಮಂಗಳೂರಿನಲ್ಲಿ ಕೂಡ ಬಂಗಾರದ ಬೆಲೆ ಇದೇ ರೀತಿ ಇದೆ.

'ಚಿನ್ನ' ಖರೀದಿಸುವವರಿಗೆ ಬಂಗಾರದಂಥ ಸುದ್ದಿ ಕೊಟ್ಟ ರಾಜ್ಯ ಬಿಜೆಪಿ ಸರ್ಕಾರ!'ಚಿನ್ನ' ಖರೀದಿಸುವವರಿಗೆ ಬಂಗಾರದಂಥ ಸುದ್ದಿ ಕೊಟ್ಟ ರಾಜ್ಯ ಬಿಜೆಪಿ ಸರ್ಕಾರ!

ಚೆನ್ನೈನಲ್ಲಿ ದರ ಏರಿಕೆ

ಚೆನ್ನೈನಲ್ಲಿ ದರ ಏರಿಕೆ

ನೆರೆಯ ಚೆನ್ನೈನಲ್ಲಿ ಚಿನ್ನದ ದರದಲ್ಲಿ ಸತತ ಹೆಚ್ಚಳ ಕಂಡಿದೆ. ಪ್ರತಿ 10 ಗ್ರಾಂನ 22 ಕ್ಯಾರಟ್ ಚಿನ್ನದ ಬೆಲೆ 100 ರೂಪಾಯಿ ಏರಿಕೆಯೊಂದಿಗೆ 42,020 ರೂ.ಗೆ ತಲುಪಿದೆ. ಹಾಗೆಯೇ 24 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 110 ರೂಪಾಯಿ ಏರಿಕೆಯಾಗಿದ್ದು, 45,840 ರೂಪಾಯಿಗೆ ತಲುಪಿದೆ.

ಮುಂಬೈನಲ್ಲಿ ಚಿನ್ನದ ಬೆಲೆ ಹೆಚ್ಚಳ

ಮುಂಬೈನಲ್ಲಿ ಚಿನ್ನದ ಬೆಲೆ ಹೆಚ್ಚಳ

ವಾಣಿಜ್ಯ ನಗರಿ ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 10 ರೂ ಏರಿಕೆಯಾಗಿದ್ದು, 43,630 ರೂಪಾಯಿಗೆ ಏರಿದೆ. 24 ಕ್ಯಾರಟ್ ಚಿನ್ನದ ಬೆಲೆ ಕೂಡ 10 ರೂಪಾಯಿ ಹೆಚ್ಚಳದೊಂದಿಗೆ 44,630 ರೂ ದರಕ್ಕೆ ಮಾರಾಟವಾಗುತ್ತಿದೆ. ಕೇರಳದಲ್ಲಿ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 250 ರೂ. ಅಗ್ಗವಾಗಿದೆ. 22 ಕ್ಯಾರೆಟ್ ಚಿನ್ನ 10 ಗ್ರಾಂಗೆ 41,100 ರೂ ಮತ್ತು 24 ಕ್ಯಾರಟ್ ಹಳದಿ ಲೋಹ 44,840 ರೂಪಾಯಿಗೆ ಮಾರಾಟವಾಗುತ್ತಿದೆ.

ದೇಶದಲ್ಲಿ ಬೆಳ್ಳಿ ಬೆಲೆ

ದೇಶದಲ್ಲಿ ಬೆಳ್ಳಿ ಬೆಲೆ

ಬೆಳ್ಳಿ ದರ ಮತ್ತೆ ಅಗ್ಗವಾಗಿದೆ. ದೇಶದಲ್ಲಿ ಒಟ್ಟಾರೆಯಾಗಿ ಬೆಳ್ಳಿ ಬೆಲೆ ಪ್ರತಿ ಕೆಜಿಗೆ 1,100 ರೂಪಾಯಿ ಕುಸಿದಿದ್ದು, 62,800 ರೂಪಾಯಿ ಇದೆ. ಬೆಂಗಳೂರಿನಲ್ಲಿ ಬೆಳ್ಳಿ ಬೆಲೆಯಲ್ಲಿ ಬದಲಾವಣೆಗಳಾಗಿಲ್ಲ. ಪ್ರತಿ ಕೆಜಿ ಬೆಳ್ಳಿ 65,500 ರೂಪಾಯಿಯಲ್ಲಿದೆ. ಚೆನ್ನೈನಲ್ಲಿ ಬೆಳ್ಳಿ ಬೆಲೆ ಏರಿಕೆಯಾಗಿದ್ದು, ಒಂದು ಕೆಜಿಗೆ 68,700 ರೂಪಾಯಿ ಇದೆ. ಮುಂಬೈನಲ್ಲಿ ಬೆಳ್ಳಿ ದರ ಇಳಿಕೆಯಾಗಿದ್ದು, ಪ್ರತಿ ಕೆಜಿಗೆ 62,800 ರೂಪಾಯಿ ಇದೆ.

* ಚಿನ್ನ ಮತ್ತು ಬೆಳ್ಳಿ ಬೆಲೆಯು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿನ ದರ ಬದಲಾವಣೆ ಮತ್ತು ಸ್ಥಳೀಯ ತೆರಿಗೆ ನೀತಿಗಳಿಗೆ ಅನುಗುಣವಾಗಿ ಬದಲಾಗುತ್ತದೆ. ಈ ಮಾಹಿತಿ ಬೆಳಿಗ್ಗೆ 1೦ ಗಂಟೆಯವರೆಗಿನ ಮಾರುಕಟ್ಟೆ ದರ ಬದಲಾವಣೆಯನ್ನು ಆಧರಿಸಿದೆ.

English summary
Gold and silver rates down on March 31 in some major cities. Here is the price details of major cities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X