ಚೀಪ್ ಆಂಡ್ ಬೆಸ್ಟ್ ಚಿನ್ನ: ಬೆಂಗಳೂರಿನಲ್ಲಿ ಬಂಗಾರ-ಬೆಳ್ಳಿ ಏರಿಳಿತ ತಿಳಿದುಕೊಳ್ಳೋಣ

ಬೆಂಗಳೂರು, ಆಗಸ್ಟ್ 16: ಸ್ವಾತಂತ್ರ್ಯ ದಿನಾಚರಣೆ ಮರುದಿನವೇ ಚಿನ್ನದ ಅಂಗಡಿಗಳತ್ತ ಜನರು ಮುಖ ಮಾಡಿದ್ದಾರೆ. ಬೆಂಗಳೂರು ಆದಿಯಾಗಿ ಮಹಾನಗರಗಳಲ್ಲಿ ಚಿನ್ನ-ಬೆಳ್ಳಿ ಖರೀದಿ ಬಲುಜೋರಾಗಿ ನಡೆಯುತ್ತಿದೆ.

ದೇಶದಲ್ಲಿ ಬಂಗಾರ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಆಗಸ್ಟ್ 16ರ ಮಂಗಳವಾರ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಬೆಳ್ಳಿ ಬೆಲೆಯಂತೂ ಬೊಂಬಾಟ್ ಆಗಿ ಕುಸಿದಿದೆ. ಚಿನ್ನ-ಬೆಳ್ಳಿಯ ಬೆಲೆಗಳು ಆಭರಣ ಪ್ರಿಯರನ್ನು ಕೈಬೀಸಿ ಕರೆಯುತ್ತಿವೆ.

ಸಿಲಿಕಾನ್ ಸಿಟಿಯಲ್ಲಿ ಚಿನ್ನ ಬೆಳ್ಳಿ ದರ ಎಷ್ಟಿದೆ?, ಭಾರತದ ಪ್ರಮುಖ ನಗರಗಳಲ್ಲಿ ಆಭರಣಗಳ ಬೆಲೆ ಹೇಗಿದೆ ಎಂಬುದನ್ನು ಈ ವರದಿಯಲ್ಲಿ ತಿಳಿದುಕೊಳ್ಳೋಣ.

ಚಿನ್ನದ ದರದಲ್ಲಿ 150 ರೂಪಾಯಿ ಇಳಿಕೆ

ಚಿನ್ನದ ದರದಲ್ಲಿ 150 ರೂಪಾಯಿ ಇಳಿಕೆ

ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 140 ರೂಪಾಯಿ ಇಳಿಕೆಯಾಗಿದ್ದು, 48,050 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ 160 ರೂಪಾಯಿ ಇಳಿಕೆಯಾಗಿದ್ದು, 52,420 ರೂಪಾಯಿ ಆಗಿದೆ. ಬೆಳ್ಳಿ ದರದಲ್ಲೂ ಬರೋಬ್ಬರಿ 1400 ರೂಪಾಯಿ ಇಳಿಕೆಯಾಗಿದ್ದು, ಒಂದು ಕೆಜಿ ಬೆಳ್ಳಿಗೆ 63,400 ರೂಪಾಯಿ ಇದೆ.

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ

ಬೆಂಗಳೂರಲ್ಲಿ ಕಳೆದ 7 ದಿನಗಳ ಧಾರಣೆ

ಬೆಲೆ 22 ಕ್ಯಾರೆಟ್- 24 ಕ್ಯಾರೆಟ್ (ಬೆಲೆ ರೂ ಗಳಲ್ಲಿ)

ಆಗಸ್ಟ್ 16: 48,050 ರೂ, 52,420 ರೂ

ಆಗಸ್ಟ್ 15: 48,200 ರೂ, 52,580 ರೂ

ಆಗಸ್ಟ್ 14: 48,200 ರೂ, 52,580 ರೂ

ಆಗಸ್ಟ್ 13: 48,200 ರೂ, 52,580 ರೂ

ಆಗಸ್ಟ್ 12: 47,800 ರೂ, 52,150 ರೂ

ಆಗಸ್ಟ್ 11: 47,400 ರೂ, 51,710 ರೂ

ಆಗಸ್ಟ್ 10: 47,400 ರೂ, 51,710 ರೂ


ಬೆಳ್ಳಿ ಬೆಲೆ ಕೆ.ಜಿಗೆ 63,400 ರೂಪಾಯಿ

ದೇಶದ ಮಹಾನಗರಗಳಲ್ಲಿ ಬಂಗಾರದ ಬೆಲೆ

ದೇಶದ ಮಹಾನಗರಗಳಲ್ಲಿ ಬಂಗಾರದ ಬೆಲೆ

ಬೆಂಗಳೂರಿನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,050 ರೂ ಇದೆ, 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,420 ರೂ ಇದೆ. ಮುಂಬೈನಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,000 ರೂ ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,360 ರೂ. ಇದೆ. ದೆಹಲಿಯಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,150 ರೂ. ಇದ್ದು, 24 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 52,530 ರೂ. ಇದೆ. ಚೆನ್ನೈನಲ್ಲಿ 48,550 ರೂ. ಹಾಗೂ ಅಪರಂಜಿ 10 ಗ್ರಾಂ ಚಿನ್ನದ ಬೆಲೆಯು 52,960 ರೂಪಾಯಿ ಆಗಿದೆ. ಕೋಲ್ಕತ್ತಾದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನಕ್ಕೆ 48,000 ರೂಪಾಯಿ ಹಾಗೂ 24 ಕ್ಯಾರೆಟ್‌ನ 10 ಗ್ರಾಂ ಅಪರಂಜಿ ಚಿನ್ನಕ್ಕೆ 52,360 ರೂ ಇದೆ. ಇದೇ ರೀತಿ ಚಂಡೀಗಢ, ಸೂರತ್‌, ನಾಸಿಕ್‌ನಲ್ಲೂ 48 ಸಾವಿರಕ್ಕಿಂತ ಹೆಚ್ಚಾಗಿದೆ. ಇನ್ನು, ವಿಶಾಖಪಟ್ಟಣಂ, ವಿಜಯವಾಡ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಇಂದಿನ 24 ಕ್ಯಾರೆಟ್‌ ಚಿನ್ನದ ಬೆಲೆ 52 ಸಾವಿರಕ್ಕಿಂತ ಹೆಚ್ಚಾಗಿದೆ.

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆಯನ್ನು ಹೇಗೆ ನಿರ್ಧರಿಸಲಾಗುತ್ತದೆ?

ಚಿನ್ನದ ಬೆಲೆ ಒಂದು ನಗರದಿಂದ ಮತ್ತೊಂದು ನಗರಕ್ಕೆ ಬದಲಾಗುತ್ತದೆ. ಮುಖ್ಯವಾದ ವಿಷಯವೆಂದರೆ ಸಾಮಾನ್ಯ ಚಿನ್ನದ ದರ ಮತ್ತು ಹಾಲ್‌ಮಾರ್ಕ್ ಚಿನ್ನದ ದರಗಳ ನಡುವೆ ಯಾವುದೇ ವ್ಯತ್ಯಾಸವಿಲ್ಲ. ನಿಮಗೆ ಹಾಲ್‌ಮಾರ್ಕ್ ಮಾಡಿದ ಚಿನ್ನದ ದರವನ್ನು ನೀಡಲು ಯಾರೂ ಹೆಚ್ಚುವರಿ ಶುಲ್ಕ ವಿಧಿಸುವುದಿಲ್ಲ. ಸಾಮಾನ್ಯ ಚಿನ್ನವನ್ನು ಮಾರಾಟ ಮಾಡುವ ದರವೇ ಇದು. ಬೆಂಗಳೂರಿನಲ್ಲಿ ಆಯಾ ದಿನದ ಚಿನ್ನದ ಬೆಲೆಯನ್ನು ಚಿನ್ನದ ವ್ಯಾಪಾರಿಗಳ ಒಕ್ಕೂಟ ಅಥವಾ ಸ್ವತಃ ಚಿನ್ನದ ವ್ಯಾಪಾರಿಗಳು ನಿರ್ಧರಿಸುತ್ತಾರೆ. ದೈನಂದಿನ ಚಿನ್ನದ ಬೆಲೆ ಅಂತಾರಾಷ್ಟ್ರೀಯ ಟ್ರೆಂಡ್ ಮತ್ತು ಚಿನ್ನದ ಮೇಲಿನ ಆಮದು ಸುಂಕವನ್ನು ಆಧರಿಸಿರುತ್ತದೆ. ಡಾಲರ್ ಮೌಲ್ಯ ಹೆಚ್ಚಾದಂತೆ ಚಿನ್ನದ ಮೌಲ್ಯ ಕುಸಿತ ಕಾಣುವುದನ್ನು ಜಾಗತಿಕ ಮಾರುಕಟ್ಟೆಯಲ್ಲಿ ಕಾಣಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+