Gold Price: ಚಿನ್ನದ ಬೆಲೆಯಲ್ಲಿ 8,000 ರೂಪಾಯಿ ಕಡಿತ, ಬೆಳ್ಳಿ ಬೆಲೆ 1,500 ರೂಪಾಯಿ ಢಮಾರ್!

ಚಿನ್ನ & ಬೆಳ್ಳಿ ಬೆಲೆ ಮತ್ತೊಮ್ಮೆ ಭಾರಿ ಕುಸಿತ ಕಂಡಿದೆ. ಇಂದು ಷೇರು ಮಾರುಕಟ್ಟೆಯಲ್ಲಿ ಮತ್ತೊಮ್ಮೆ ಕುಸಿತ ದಾಖಲಾದ ಬೆನ್ನಲ್ಲೇ ಚಿನ್ನ & ಬೆಳ್ಳಿ ಬೆಲೆಯಲ್ಲಿ ಕೂಡ ಕುಸಿತ ಇದೀಗ ದಾಖಲಾಗಿದೆ. ಹಾಗಾದ್ರೆ ಚಿನ್ನ & ಬೆಳ್ಳಿ ಬೆಲೆ ಇಂದು ಬೆಂಗಳೂರು & ಕರ್ನಾಟಕದಲ್ಲಿ ಎಷ್ಟಿದೆ? ಮತ್ತಷ್ಟು ಇಳಿಕೆ ಕಾಣಲಿದೆಯಾ ಚಿನ್ನ & ಬೆಳ್ಳಿ ಬೆಲೆ? ಸಂಪೂರ್ಣ ಮಾಹಿತಿ ತಿಳಿಯೋಕೆ ಮುಂದೆ ಓದಿ.

ಭಾರತೀಯರಿಗೆ ಸಾಮಾನ್ಯವಾಗಿ ಚಿನ್ನ ಅಂದ್ರೆ ತುಂಬಾನೇ ಇಷ್ಟ, ಅದರಲ್ಲೂ ಆಭರಣಗಳನ್ನು ಮೈಮೇಲೆ ಹಾಕಲು ಭಾರತೀಯರು ತುಂಬಾ ಇಷ್ಟಪಡುತ್ತಾರೆ. ಹೀಗೆ ಭಾರತೀಯರಲ್ಲಿ ಚಿನ್ನದ ಬಗ್ಗೆ ತುಂಬಾ ಕುತೂಹಲ ಇರುತ್ತದೆ. ಇದೆಲ್ಲವನ್ನೂ ಮೀರಿ ಚಿನ್ನ ಅನ್ನೋದು ಕಷ್ಟದ ಸಮಯ ಬಂದಾಗ ಸಹಾಯಕ್ಕೆ ಬರುವ ಬಂಧು ಅಥವಾ ಸ್ನೇಹಿತ ಇದ್ದಂತೆ. ಎಲ್ಲೂ ಕಾಸು ಹೊಂದಿಸಲು ಆಗದ ಸ್ಥಿತಿ ಬಂದಾಗ, ತುರ್ತು ಸಂದರ್ಭದಲ್ಲಿ ಚಿನ್ನ ಅಡ ಇಟ್ಟು ಅಥವಾ ಚಿನ್ನ ಮಾರಟವನ್ನ ಮಾಡಿ ಹಣ ಪಡೆಯಬಹುದು. ಇಂತಿಪ್ಪ ಚಿನ್ನದ ಬೆಲೆ ಇದೀಗ ಮತ್ತೆ ಕುಸಿತ ಕಂಡಿದೆ. ಹಾಗಾದ್ರೆ ಇಂದು ಎಷ್ಟಿದೆ ಚಿನ್ನದ ಬೆಲೆ? ಬೆಳ್ಳಿ ಬೆಲೆ ಎಷ್ಟಕ್ಕೆ ಕುಸಿತ ಕಂಡಿದೆ? ಮುಂದೆ ಓದಿ.

Gold Decreased By 8 000 Rupees Per 100 Gram And Silver Price Is Decreased By 1 500 Rupees Per 1 KG

ಚಿನ್ನದ ಬೆಲೆ ಎಷ್ಟಿದೆ ತಿಳಿಯಿರಿ!

22 ಕ್ಯಾರೆಟ್ ಆಭರಣ ಚಿನ್ನದ ಬೆಲೆ ಪ್ರತಿ 100 ಗ್ರಾಂಗೆ 8000 ರೂಪಾಯಿ ಕುಸಿತ ಕಂಡಿದೆ. ಹಾಗೇ ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆಯು ಈಗ 800 ರೂ. ಕಡಿತವಾಗಿದೆ. ಆಭರಣ ಚಿನ್ನದ ಬೆಲೆ ಕುಸಿತದ ಬಳಿಕ ಪ್ರತಿ 10 ಗ್ರಾಂಗೆ 63,900 ರೂಪಾಯಿ ಇದ್ದು. 24 ಕ್ಯಾರೆಟ್ ಚಿನ್ನದ ಬೆಲೆ ಕೂಡ ಕುಸಿದು ಬಿದ್ದಿದೆ. ಹೀಗೆ ಕುಸಿತ ಕಂಡ ನಂತರ 24 ಕ್ಯಾರೆಟ್ ಚಿನ್ನದ ಬೆಲೆ 100 ಗ್ರಾಂಗೆ 8,700 ರೂಪಾಯಿ ಇಳಿಕೆಯನ್ನು ಕಂಡಿದೆ. ಹಾಗಾದರೆ, ಬೆಳ್ಳಿ ಬೆಲೆ ಇದೀಗ ಎಷ್ಟಿದೆ? ಎಷ್ಟು ಕುಸಿತ ಕಂಡಿದೆ ಬೆಳ್ಳಿ?

ಕುಸಿದು ಬೀಳುತ್ತಿದೆ ಚಿನ್ನ & ಬೆಳ್ಳಿ!

10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 8,700 ರೂಪಾಯಿ ಇಳಿಕೆ ಕಂಡು, ಇಳಿಕೆಯ ನಂತರ ಪ್ರತಿ 10 ಗ್ರಾಂಗೆ 69,710 ರೂಪಾಯಿಗೆ ಮಾರಾಟ ಆಗುತ್ತಿದೆ. ಬೆಳ್ಳಿ ಬೆಲೆ ಇಂದು ಪ್ರತಿ ಕೆಜಿಗೆ 1,500 ರೂಪಾಯಿ ಕುಸಿತ ಕಂಡಿದೆ. ಈ ಮೂಲಕ ಈಗ ರಾಜಧಾನಿ ಬೆಂಗಳೂರಿನಲ್ಲಿ, ಬೆಳ್ಳಿ ಪ್ರತಿ ಕೆಜಿಗೆ 83,500 ರೂಪಾಯಿ ಲೆಕ್ಕದಲ್ಲಿ ಮಾರಾಟ ಆಗುತ್ತಿದೆ. ಹೀಗಾಗಿ ಶೀಘ್ರದಲ್ಲೇ ಆಭರಣ ಚಿನ್ನ ಪ್ರತಿ 10 ಗ್ರಾಂಗೆ 50,000 ರೂಪಾಯಿಗೆ ಕುಸಿತ ಕಾಣುತ್ತಾ? ಎಂಬ ಕುತೂಹಲದಲ್ಲಿ ಚಿನ್ನ ಪ್ರಿಯರು ಕಾಯುತ್ತಿದ್ದಾರೆ.

5000 ವರ್ಷಗಳಿಂದ ಚಿನ್ನದ ಬಳಕೆ!

ಮನುಷ್ಯ ನಾಗರಿಕತೆ ಕಡೆಗೆ ಹೆಜ್ಜೆ ಹಾಕಿದ ನಂತರ ಚಿನ್ನವನ್ನು ಹೆಚ್ಚಾಗಿ ಬಳಸತೊಡಗಿದ. ಅದರಲ್ಲೂ ಚಿನ್ನದ ಬಳಕೆಗೆ ಸುಮಾರು 5000 ವರ್ಷಗಳ ಇತಿಹಾಸ ಇದೆ. ಹೀಗೆ ಚಿನ್ನವನ್ನ ಮನುಷ್ಯರು ಸಾವಿರಾರು ವರ್ಷಗಳಿಂದ ಬಳಕೆ ಮಾಡಿಕೊಂಡು ಬರುತ್ತಿದ್ದಾರೆ. ಹೀಗಾಗಿ ಈ ಹೊತ್ತಿಗೂ ಚಿನ್ನಕ್ಕೆ ಭಾರಿ ದೊಡ್ಡ ಗೌರವ ಮತ್ತು ಬೆಲೆ ಇದೆ. ಇತರ ಯಾವುದೇ ಲೋಹಕ್ಕೆ ಕೂಡ ಚಿನ್ನದಷ್ಟು ಮಾನ್ಯತೆ ನೀಡುವುದಿಲ್ಲ. ಆದರೆ ಚಿನ್ನಕ್ಕೆ ಮಾತ್ರ ಅತಿಹೆಚ್ಚು ಬೆಲೆ ಇದ್ದು, ಚಿನ್ನ ಮುಂದಿನ ದಿನಗಳಲ್ಲಿ ಮತ್ತಷ್ಟು ದುಬಾರಿ ಆಗುವುದು ಗ್ಯಾರಂಟಿ ಎನ್ನುತ್ತಾರೆ ತಜ್ಞರು.

ಚಿನ್ನ ಇಲ್ಲದೆ ಏನೂ ನಡೆಯಲ್ಲ!

ಆಧುನಿಕ ಕಾಲಘಟ್ಟದಲ್ಲಿ ಚಿನ್ನ ಅದೆಷ್ಟು ಮುಖ್ಯ ಎಂದರೆ, ಚಿನ್ನವು ಇಲ್ಲದೆ ಏನೂ ನಡೆಯಲ್ಲ ಎನ್ನಬಹುದು. ಯಾಕಂದ್ರೆ ಚಿನ್ನ ಆಭರಣವಾಗಿ ಮಾತ್ರವಲ್ಲ, ಹಲವು ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕೆಯಲ್ಲಿ ಕೂಡ ಬಳಕೆ ಮಾಡಲಾಗುತ್ತೆ. ಮೊಬೈಲ್ ಸೇರಿದಂತೆ, ಹಲವು ಎಲೆಕ್ಟ್ರಾನಿಕ್ ಉಪಕರಣಗಳ ತಯಾರಿಕೆಗೆ ಕೂಡ ಚಿನ್ನ ಬೇಕೆ ಬೇಕಾಗುತ್ತೆ. ಹೀಗಾಗಿಯೇ ಚಿನ್ನ ಈಗ ಆಧುನಿಕ ಕಾಲದಲ್ಲಿ ಅತ್ಯವಶ್ಯಕ ವಸ್ತು ಎನಿಸಿಕೊಂಡಿದೆ. ಎಲ್ಲಾ ಕಡೆಯಿಂದಲೂ ಕೂಡ ಚಿನ್ನಕ್ಕೆ ಬೇಡಿಕೆ ಹೆಚ್ಚಾಗುತ್ತಿರುವ ಕಾರಣಕ್ಕೆ ಬೆಲೆಯಲ್ಲಿ ಏರಿಳಿತ ಉಂಟಾಗುತ್ತಿದ್ದು. ಮುಂದೆ ಇನ್ನಷ್ಟು ಏರಿಳಿತ ಕಾಣಬಹುದು ಅಂತಾರೆ ಬಂಗಾರ ಮಾರುಕಟ್ಟೆಯ ತಜ್ಞರು.

ವರ್ಷದಿಂದ ವರ್ಷಕ್ಕೆ ಚಿನ್ನದ ಬೆಲೆ ಏರಿಕೆ!

15 ವರ್ಷಕ್ಕೆ ಹೋಲಿಕೆ ಮಾಡಿದರೆ ಚಿನ್ನದ ಬೆಲೆಯಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ದೊಡ್ಡ ಮಟ್ಟದಲ್ಲಿ ಚಿನ್ನ ಏರಿಕೆ ಕಂಡಿದೆ. ಹಾಗೇ ಮುಂದಿನ ದಿನಗಳಲ್ಲಿ ಚಿನ್ನಕ್ಕೆ ಮತ್ತೆ ಹೆಚ್ಚಿನ ಬೇಡಿಕೆ ಬರುವ ಸಾಧ್ಯತೆ ದಟ್ಟವಾಗಿದೆ. ಇದಕ್ಕೆಲ್ಲ ಕಾರಣ ಏನೆಂದರೆ ಭೂಮಿಯ ಒಳಗೆ ಸಿಗುತ್ತಿದ್ದ ಚಿನ್ನ ಭಾಗಶಃ ಕಡಿಮೆ ಆಗುತ್ತಾ ಬರುತ್ತಿದೆ. ಹೀಗೆ, ಗಣಿಗಾರಿಕೆ ನಡೆಸುವ ಸಾಧ್ಯತೆ ಕೂಡ ಕ್ಷೀಣಿಸುತ್ತಿದೆ. ಇದು ಕೂಡ ಚಿನ್ನದ ಮೇಲೆ ಸಾಕಷ್ಟು ದೊಡ್ಡ ಪ್ರಮಾಣದ ಪರಿಣಾಮ ಬೀರುವ ಸಾಧ್ಯತೆ ಇದ್ದು ಚಿನ್ನ ಬೆಲೆ ಈ ವರ್ಷದ ಅಂತ್ಯಕ್ಕೆ 1 ಲಕ್ಷ ರೂಪಾಯಿ ಆಸುಪಾಸಿಗೆ ಬರಬಹುದು ಎನ್ನಲಾಗಿತ್ತು. ಆದರೆ ಈಗ ನೋಡಿದರೆ ಚಿನ್ನದ ಬೆಲೆಯಲ್ಲಿ ಕುಸಿತ ಆರಂಭ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+