Gold Price Aug 6: ಚಿನ್ನದ ಬೆಲೆಯಲ್ಲಿ ಭಾರೀ ಹೆಚ್ಚಳ: ಬೆಳ್ಳಿ ಬೆಲೆ ಅಚ್ಚರಿಯ ಬದಲಾವಣೆ; ಮುಂದೆ ಇಳಿಕೆಯಾಗಲಿದೆ ಚಿನ್ನದ ಬೆಲೆ!
Gold Price Aug 06: ಚಿನ್ನದ ಬೆಲೆಯಲ್ಲಿ ಮತ್ತೆ ಭಾರೀ ಹೆಚ್ಚಳವಾಗಿದೆ. ಕಳೆದ ಮೂರು ದಿನಗಳಿಂದಲೂ ಚಿನ್ನದ ಬೆಲೆ ಹೆಚ್ಚಳವಾಗುತ್ತಿದ್ದು, ಚಿನ್ನ ಖರೀದಿದಾರರಲ್ಲಿ ಆತಂಕ ಎದುರಾಗಿದೆ. ಮಧ್ಯಪ್ರಾಚ್ಯದಲ್ಲಿ ಎದುರಾಗಿರುವ ಸಂಕಷ್ಟವು ಇನ್ನೂ ತಣ್ಣಗಾಗದೆ ಇರುವುದು, ಹಣ ದುಬ್ಬರ ಹಾಗೂ ವಿವಿಧ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ವಿವಿಧ ಕಾರಣಗಳಿಗೆ ಚಿನ್ನದ ಬೆಲೆಯು ನಿರಂತರವಾಗಿ ಹೆಚ್ಚಳವಾಗುತ್ತಿದೆ. ಜುಲೈ ಅಂತ್ಯದಲ್ಲಿ ಚಿನ್ನದ ಬೆಲೆ ಇಳಿಕೆಯಾಗಿತ್ತು. ಆದರೆ, ಇದೀಗ ಆಗಸ್ಟ್ ಮೊದಲ ವಾರದಲ್ಲಿಯೇ ಚಿನ್ನ ಪ್ರಿಯರಿಗೆ ಭಾರೀ ಆತಂಕ ಎದುರಾಗಿದೆ. ಕಳೆದ ಮೂರು ದಿನಗಳಿಂದ ಚಿನ್ನ ಬೆಲೆಯಲ್ಲಿ ಭಾರೀ ಏರಿಳಿತವಾಗಿದೆ. ಆಗಸ್ಟ್ 06ರಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 11,230 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,12,300 ರೂ. ಆಗಿದೆ. ಅಲ್ಲದೆ ಆಗಸ್ಟ್5ರ ಬುಧವಾರಕ್ಕೆ ಹೋಲಿಕೆ ಮಾಡಿದರೆ, 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 217 ರೂಪಾಯಿ ಹೆಚ್ಚಳವಾಗಿದೆ. ಅಲ್ಲದೆ 10 ಗ್ರಾಂ ಚಿನ್ನದ ಬೆಲೆಯು 2,170 ರೂಪಾಯಿ ಹೆಚ್ಚವಾಗಿದೆ. ವಾರದಲ್ಲಿ ಸತತ ಮೂರನೇ ಬಾರಿ 18 ಕ್ಯಾರೆಟ್ ಚಿನ್ನದ ಬೆಲೆ ಹೆಚ್ಚಳವಾಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 13,725 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,37,250 ರೂ. ಆಗಿದೆ. 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 265 ರೂಪಾಯಿ ಹೆಚ್ಚಳವಾಗಿದ್ದರೆ, 10 ಗ್ರಾಂನ ಚಿನ್ನದ ಬೆಲೆಯು 2,650 ರೂಪಾಯಿ ಹೆಚ್ಚಳವಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: 18 ಹಾಗೂ 22 ಕ್ಯಾರೆಟ್‌ನಂತೆಯೇ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭಾರೀ ಹೆಚ್ಚಳವಾಗಿದೆ. 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 14,973 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,49,730 ರೂ. ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯು ಬುಧವಾರಕ್ಕೆ ಹೋಲಿಕೆ ಮಾಡಿದರೆ, 1 ಗ್ರಾಂನ ಮೇಲೆ 289 ರೂಪಾಯಿ ಹಾಗೂ 10 ಗ್ರಾಂನ ಮೇಲೆ 2,890 ರೂಪಾಯಿ ಹೆಚ್ಚಳವಾಗಿದೆ.
Gold Price Aug 06: ಬೆಳ್ಳಿ ಬೆಲೆ ಹೇಗಿದೆ ?
ಇನ್ನು ಚಿನ್ನದ ಬೆಲೆ ಹೆಚ್ಚಾದರೂ ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 240 ರೂಪಾಯಿ ಹಾಗೂ ಒಂದು ಕೆ.ಜಿಗೆ 2,40,000 ರೂಪಾಯಿ ಆಗಿದೆ. ಬೆಳ್ಳಿ ಬೆಲೆಯು ಆಗಸ್ಟ್ 5ರ ಬುಧವಾರ ಹೆಚ್ಚಳವಾಗಿತ್ತು. ಆದರೆ ಗುರುವಾರ ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗದೆ ಯಥಾಸ್ಥಿತಿ ಮುಂದುವರಿದಿದೆ.
ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇಳಿಕೆ ಸಾಧ್ಯತೆ
ಇನ್ನು ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯು ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಹಾಗೂ ಅಮೆರಿಕದ ಪ್ರಮುಖ ಆರ್ಥಿಕ ಬೆಳವಣಿಗೆಗಳ ನಡುವೆ ಚಿನ್ನದ ಬೆಲೆಗಳ ಏರಿಳಿತ ಮುಂದುವರಿದಿದೆ. ಭವಿಷ್ಯದ ಬಡ್ಡಿದರಗಳ ಬದಲಾವಣೆಯಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಅಮೆರಿಕದ ಫೆಡರಲ್ ರಿಸರ್ವ್ ನಿರ್ಧಾರ ಬುಲಿಯನ್ ಮಾರುಕಟ್ಟೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಇದರಿಂದ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯು ಅಚ್ಚರಿ ರೀತಿಯಲ್ಲಿ ಇಳಿಕೆಯಾಗಲಿದೆ ಎಂದು ಹೇಳಲಾಗಿದೆ.


Click it and Unblock the Notifications
