Gold Rate Oct 03: ಚಿನ್ನದ ಬೆಲೆ 2 ದಿನವೂ ಭರ್ಜರಿ ಇಳಿಕೆ: ಇಂದಿನ ಚಿನ್ನ & ಬೆಳ್ಳಿ ಬೆಲೆ ಎಷ್ಟಿದೆ ?

Gold Rate Oct 03: ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ಚಿನ್ನದ ಬೆಲೆಯು ಎರಡನೇ ದಿನವೂ ಇಳಿಕೆ ಕಂಡಿದ್ದು, ಹಲವು ದಿನಗಳ ನಂತರ ಚಿನ್ನದ ಬೆಲೆಯು ಭರ್ಜರಿ ಇಳಿಕೆ ಆಗಿದೆ. ಅಕ್ಟೋಬರ್ ತಿಂಗಳ ಮೊದಲ ಎರಡು ದಿನವೂ ಚಿನ್ನದ ಬೆಲೆ ಇಳಿಕೆ ಕಂಡಿದೆ. ಕಳೆದ ತಿಂಗಳು ಪೂರ್ತಿ ಚಿನ್ನದ ಬೆಲೆಯು ಏರಿಕೆಯ ಹಾದಿಯಲ್ಲಿತ್ತು. ಇಂದಿನ (ಅಕ್ಟೋಬರ್ 03) ಚಿನ್ನ ಮತ್ತು ಬೆಳ್ಳಿಯ ನಿಖರ ಬೆಲೆ ವಿವರ ಇಲ್ಲಿದೆ.

ಆರ್ಥಿಕ ಅಸ್ಥಿರತೆ ಹಾಗೂ ಡಾಲರ್‌ನ ಮುಂದೆ ರೂಪಾಯಿ ಮೌಲ್ಯ ಕುಸಿತ ಸೇರಿದಂತೆ ಬೇರೆ ಬೇರೆ ಕಾರಣಗಳಿಗೆ ಕಳೆದ ಎರಡು ಮೂರು ತಿಂಗಳಿನಿಂದಲೂ ಚಿನ್ನದ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿತ್ತು. ಇದು ಚಿನ್ನ ಪ್ರಿಯರಲ್ಲಿ ಭಾರೀ ನಿರಾಸೆಗೆ ಕಾರಣವಾಗಿತ್ತು. ಇದೀಗ ಕೊನೆಗೂ ಚಿನ್ನದ ಬೆಲೆ ಇಳಿಕೆಯ ಹಾದಿಯಲ್ಲಿದ್ದು ಬಂಗಾರ ಪ್ರಿಯರಿಗೆ ಇದೊಂದು ಗುಡ್‌ನ್ಯೂಸ್ ಅಂತಲೇ ಹೇಳಬಹುದು. ಇಂದಿನ 18 ಕ್ಯಾರೆಟ್, 22 ಕ್ಯಾರೆಟ್ ಹಾಗೂ 24 ಕ್ಯಾರೆಟ್‌ನ ಚಿನ್ನದ ಬೆಲೆ ವಿವರ ನೋಡೋಣ.

Gold Price Falls Sharply for 2 Days Today s Gold and Silver Rates On Oct 3 Gold Prices Drope Sharply

24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂಗೆ 11,804 ರೂಪಾಯಿ ಹಾಗೂ ಹತ್ತು ಗ್ರಾಂಗೆ 1,18,040 ರೂಪಾಯಿ ಆಗಿದೆ. ಗುರುವಾರಕ್ಕೆ ಹೋಲಿಕೆ ಮಾಡಿದರೆ ಒಂದು ಗ್ರಾಂ ಚಿನ್ನದ ಬೆಲೆಯು 65 ರೂಪಾಯಿ ಹಾಗೂ ಹತ್ತು ಗ್ರಾಂ ಚಿನ್ನದ ಬೆಲೆಯು 650 ರೂಪಾಯಿ ಕಡಿಮೆಯಾಗಿದೆ. ಈ ರೀತಿ ಬಂಗಾರದ ಬೆಲೆಯಲ್ಲಿ ಭರ್ಜರಿ ಇಳಿಕೆ ಆಗಿರುವುದು ಎರಡನೇ ದಿನ.

22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆ ಕಂಡಿದೆ. 22 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 10,820 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,08,200 ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ ಒಂದು ಗ್ರಾಂನ 22 ಕ್ಯಾರೆಟ್ ಚಿನ್ನದ ಬೆಲೆಯು 60 ರೂಪಾಯಿ ಹಾಗೂ ಹತ್ತು ಗ್ರಾಂನ ಬೆಲೆಯು 600 ರೂಪಾಯಿ ಕಡಿಮೆ ಆಗಿದೆ.

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 8,853 ರೂಪಾಯಿ ಹಾಗೂ ಹತ್ತು ಗ್ರಾಂನ ಚಿನ್ನದ ಬೆಲೆಯು 88,530 ರೂಪಾಯಿ ಆಗಿದೆ. ಗುರುವಾರಕ್ಕೆ ಹೋಲಿಕೆ ಮಾಡಿದರೆ, ಒಂದು ಗ್ರಾಂ ಚಿನ್ನದ ಬೆಲೆಯು 49 ರೂಪಾಯಿ ಹಾಗೂ ಹತ್ತು ಗ್ರಾಂ ಚಿನ್ನದ ಬೆಲೆಯು 490 ರೂಪಾಯಿ ಕಡಿಮೆ ಆಗಿದೆ.

ಬೆಳ್ಳಿ ಬೆಲೆ: ಇನ್ನು ಬೆಳ್ಳಿ ಬೆಲೆ ಸಹ ಕಡಿಮೆ ಆಗಿದೆ. ಇತ್ತೀಚಿನ ದಿನಗಳಲ್ಲಿ ಬೆಳ್ಳಿ ಬೆಲೆ ಸಹ ಏರಿಕೆಯ ಹಾದಿಯಲ್ಲಿತ್ತು. ಬೆಳ್ಳಿ ಬೆಲೆಯು ಒಂದು ಗ್ರಾಂಗೆ 151 ರೂಪಾಯಿ ಆಗಿದೆ. ಒಂದು ಕೆ.ಜಿ ಬೆಳ್ಳಿ ಬೆಲೆಯು 1,51,000 ರೂಪಾಯಿ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+