Gold Price Feb 03: ಚಿನ್ನ ಪ್ರಿಯರಿಗೆ ಕೊನೆಗೂ ಗುಡ್ನ್ಯೂಸ್: ಚಿನ್ನ - ಬೆಳ್ಳಿ ಬೆಲೆ ದಾಖಲೆಯ ಇಳಿಕೆ
Gold Price Feb 03: ಬಹಳ ದಿನಗಳ ನಂತರ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ ಆಗಿದೆ. ಕಳೆದ ಒಂದು ವಾರದಿಂದಲೂ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತವಾಗುತ್ತಿದೆ. 18 ಕ್ಯಾರೆಟ್, 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. ಅಮೆರಿಕ ಮತ್ತು ಭಾರತದ ನಡುವಿನ ಆರ್ಥಿಕ ಗೊಂದಲಗಳಿಗೆ ತೆರೆ ಬಿದ್ದಿರುವುದು. ಷೇರುಮಾರುಕಟ್ಟೆ ಚೇತರಿಕೆ, ಅಮೆರಿಕದ ಬಾಂಡ್ಗಳಿಗೆ ಡಿಮ್ಯಾಂಡ್ ಹೆಚ್ಚಾಗುತ್ತಿರುವುದು ಸೇರಿದಂತೆ ಹಲವು ಕಾರಣಗಳಿಗೆ ಚಿನ್ನದ ಬೆಲೆಯು ಭರ್ಜರಿ ಇಳಿಕೆಯಾಗಿದೆ. ಫೆಬ್ರವರಿ 3ರ ಚಿನ್ನ ಮತ್ತು ಬೆಳ್ಳಿಯ ನಿಖರವಾದ ಬೆಲೆ ವಿವರ ಇಲ್ಲಿದೆ.
24 ಕ್ಯಾರೆಟ್ ಚಿನ್ನದ ಬೆಲೆ: ಫೆಬ್ರವರಿ 3ರಂದು 24 ಕ್ಯಾರೆಟ್ನ ಚಿನ್ನದ ಬೆಲೆಯು 1 ಗ್ರಾಂಗೆ 15,175 ರೂಪಾಯಿ ಆಗಿದೆ. 10 ಗ್ರಾಂಗೆ 1,51,750 ರೂ. ಆಗಿದೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂನ ಚಿನ್ನದ ಮೇಲೆ 142 ರೂಪಾಯಿ ಹಾಗೂ 10 ಗ್ರಾಂನ ಚಿನ್ನದ ಮೇಲೆ 1,420 ರೂಪಾಯಿ ಇಳಿಕೆಯಾಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್ನ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. 22 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆಯು 13,910 ರೂಪಾಯಿ ಆಗಿದೆ. 10 ಗ್ರಾಂನ ಚಿನ್ನದ ಬೆಲೆಯು 1,39,100 ರೂ. ಆಗಿದೆ. ಫೆಬ್ರವರಿ 2ಕ್ಕೆ ಹೋಲಿಕೆ ಮಾಡಿದರೆ 22 ಕ್ಯಾರೆಟ್ನ 1 ಗ್ರಾಂನ ಚಿನ್ನದ ಬೆಲೆಯು 130 ರೂ. ಹಾಗೂ 10 ಗ್ರಾಂನ ಚಿನ್ನದ ಮೇಲೆ ಭರ್ಜರಿ 1,300 ರೂಪಾಯಿ ಕಡಿಮೆಯಾಗಿದೆ.
18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ನ 1 ಗ್ರಾಂನ ಚಿನ್ನದ ಬೆಲೆಯು 11,381 ರೂಪಾಯಿ ಆಗಿದೆ. 10 ಗ್ರಾಂನ ಚಿನ್ನದ ಬೆಲೆಯು 1,13,810 ರೂ. ಆಗಿದೆ. ಮಂಗಳವಾರಕ್ಕೆ ಹೋಲಿಕೆ ಮಾಡಿದರೆ 18 ಕ್ಯಾರೆಟ್ನ ಚಿನ್ನದ ಬೆಲೆಯು 1 ಗ್ರಾಂನ ಮೇಲೆ 107 ರೂಪಾಯಿ ಹಾಗೂ 10 ಗ್ರಾಂನ ಮೇಲೆ 1,070 ರೂಪಾಯಿ ಇಳಿಕೆಯಾಗಿದೆ.
ಫೆಬ್ರವರಿ 3ರ ಬೆಳ್ಳಿ ಬೆಲೆ ಹೇಗಿದೆ ?
ಇನ್ನು ಚಿನ್ನದೊಂದಿಗೆ ಪೈಪೋಟಿಗೆ ಇಳಿದಂತೆ ಹೆಚ್ಚಳವಾಗುತ್ತಿದ್ದ ಬೆಳ್ಳಿ ಬೆಲೆಯಲ್ಲೂ ಸಹ ಭರ್ಜರಿ ಇಳಿಕೆಯಾಗಿದೆ. ಬೆಳ್ಳಿ ಬೆಲೆಯು ಒಂದು ಗ್ರಾಂಗೆ 280 ರೂಪಾಯಿ ಆಗಿದೆ. ಒಂದು ಕೆ.ಜಿ ಬೆಳ್ಳಿ ಬೆಲೆಯು 2,80,000 ರೂ. ಆಗಿದೆ. ಫೆಬ್ರವರಿ 2ಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂನ ಬೆಳ್ಳಿ ಬೆಲೆಯು 20 ರೂಪಾಯಿ ಹಾಗೂ ಒಂದು ಕೆ.ಜಿ ಬೆಳ್ಳಿ ಬೆಲೆಯ ಮೇಲೆ 20,000 ರೂ. ಇಳಿಕೆಯಾಗಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆ ಇನ್ನಷ್ಟು ಇಳಿಕೆ ಸಾಧ್ಯತೆ
ಇನ್ನು ಜಾಗತಿಕವಾಗಿ ಹಲವು ಪ್ರಮುಖ ಬದಲಾವಣೆಗಳು ಆಗುತ್ತಿರುವ ಹಿನ್ನೆಲೆಯಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯು ಭರ್ಜರಿ ಇಳಿಕೆಯಾಗುವ ನಿರೀಕ್ಷೆ ಇದೆ. ಭಾರತ ಮತ್ತು ಅಮೆರಿಕದ ನಡುವೆ ತೆರಿಗೆ ಸಮರಕ್ಕೆ ತೆರೆ ಬೀಳುತ್ತಿದೆ. ಮೊದಲ ಹಂತದಲ್ಲಿ ಭಾರತದ ವಸ್ತುಗಳ ಮೇಲಿನ ತೆರಿಗೆ ಸುಂಕವನ್ನು ಶೇ25ರಿಂದ ಶೇ18ಕ್ಕೆ ಇಳಿಕೆ ಮಾಡುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಘೋಷಣೆ ಮಾಡಿರುವುದು. ಷೇರುಮಾರುಕಟ್ಟೆ ಚೇತರಿಕೆಗೂ ಕಾರಣವಾಗಿದೆ. ಈ ಎಲ್ಲಾ ಕಾರಣಗಳಿಂದ ಚಿನ್ನ - ಬೆಳ್ಳಿ ಬೆಲೆ ಮುಂದಿನ ದಿನಗಳಲ್ಲಿ ಇನ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications