Gold Price Feb 17: ಚಿನ್ನದ ಬೆಲೆ 15,300 ರೂ., ಬೆಳ್ಳಿ ಬೆಲೆ 8,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಖುಷ್
Gold Price Feb 17: ಚಿನ್ನದ ಬೆಲೆಯು ಫೆಬ್ರವರಿ 17ರ ಮಂಗಳವಾರ ಭರ್ಜರಿ ಇಳಿಕೆಯಾಗಿದೆ. ಈ ಮೂಲಕ ಸತತ ಮೂರನೇ ದಿನ ಚಿನ್ನ ಮತ್ತು ಬೆಳ್ಳಿ ಬೆಲೆಯು ಭರ್ಜರಿ ಇಳಿಕೆಯಾದಂತೆ ಆಗಿದೆ. ಗಗನಮುಖಿಯಾಗಿದ್ದ ಚಿನ್ನದ ಬೆಲೆಯು ಇಳಿಯಲು ಪ್ರಾರಂಭಿಸಿದೆ. ಅಮೆರಿಕದ ಫೆಡರಲ್ ರಿಸರ್ವ್‌ಗೆ ಸಂಬಂಧಿಸಿದ ಬೆಳವಣಿಗೆಯ ನಂತರ ಚಿನ್ನದ ಬೆಲೆಯು ನಿರಂತರವಾಗಿ ಇಳಿಕೆಯಾಗುತ್ತಿದೆ. ಕಳೆದ 10 ದಿನಗಳಿಂದಲೂ ಚಿನ್ನದ ಬೆಲೆಯು ಇಳಿಕೆಯ ಹಾದಿಯಲ್ಲೇ ಇದೆ. ಜನವರಿಯಲ್ಲಿ ವಿಪರೀತವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯು ಫೆಬ್ರವರಿಯಲ್ಲಿ ಕುಸಿತ ಕಂಡಿದೆ. ಫೆಬ್ರವರಿ 17ರಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಾಗಿದೆ. ಫೆಬ್ರವರಿ 16ಕ್ಕೆ ಹೋಲಿಕೆ ಮಾಡಿದರೆ ಚಿನ್ನ ಮತ್ತು ಬೆಳ್ಳಿಯ ಬೆಲೆಯು ಮಂಗಳವಾರ ಎಷ್ಟು ಇಳಿಕೆಯಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಬಂಗಾರದ ಬೆಲೆಯು ನಿರಂತರವಾಗಿ ಇಳಿಕೆಯಾಗುತ್ತಿದ್ದು, ಬಂಗಾರ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ. ಭಾರತ ಹಾಗೂ ಅಮೆರಿಕದ ನಡುವೆ ವ್ಯಾಪಾರ ಒಪ್ಪಂದ, ಬೆಲೆ ಹೆಚ್ಚಳದ ಬೆನ್ನಲ್ಲೇ ಖರೀದಿ ಅಥವಾ ಬೇಡಿಕೆ ಇಳಿಕೆಯಾಗಿರುವುದು ಸೇರಿದಂತೆ ಹಲವು ಕಾರಣಗಳಿಗೆ ಚಿನ್ನದ ಬೆಲೆಯು ನಿರಂತರವಾಗಿ ಇಳಿಕೆಯಾಗುತ್ತಿದೆ. ಇದು ಚಿನ್ನ ಪ್ರಿಯರಲ್ಲಿ ನಿರಾಳತೆ ಮೂಡಿಸಿದೆ. ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನದ ಬೆಲೆಯು ಮಂಗಳವಾರ ಭರ್ಜರಿ ಇಳಿಕೆಯಾಗಿದೆ. 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 15,491 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,54,910 ರೂ. ಆಗಿದೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂ ಚಿನ್ನದ ಬೆಲೆಯು 153 ರೂಪಾಯಿ ಕಡಿಮೆಯಾಗಿದೆ. 10 ಗ್ರಾಂ ಚಿನ್ನದ ಬೆಲೆಯು 1,530 ರೂಪಾಯಿ ಕಡಿಮೆಯಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್‌ನ ಚಿನ್ನದ ಬೆಲೆಯಲ್ಲೂ ಸಹ ಭರ್ಜರಿ ಇಳಿಕೆಯಾಗಿದೆ. 1 ಗ್ರಾಂ ಚಿನ್ನದ ಬೆಲೆಯು 14,200 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,42,000 ರೂ. ಆಗಿದೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 140 ರೂಪಾಯಿ ಹಾಗೂ 10 ಗ್ರಾಂನ ಬೆಲೆಯು 1,400 ರೂಪಾಯಿ ಆಗಿದೆ.
18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್‌ನ ಚಿನ್ನದ ಬೆಲೆಯಲ್ಲಿ ಸಹ ಮಂಗಳವಾರದಂದು ಸಹ ಭರ್ಜರಿ ಇಳಿಕೆಯಾಗಿದೆ. 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 11,618 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,16,180, ರೂ. ಆಗಿದೆ. 1 ಗ್ರಾಂ ಚಿನ್ನದ ಬೆಲೆಯು ಸೋಮವಾರಕ್ಕೆ ಹೋಲಿಕೆ ಮಾಡಿದರೆ 115 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,150 ರೂಪಾಯಿ ಕಡಿಮೆಯಾಗಿದೆ.
ಚಿನ್ನದ ಬೆಲೆ 15,300 ರೂ. ಇಳಿಕೆ
ಇನ್ನು 24 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. 24 ಕ್ಯಾರೆಟ್‌ನ 100 ಗ್ರಾಂ ಚಿನ್ನದ ಬೆಲೆಯು 15,49,100 ರೂ. ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ 15,300 ರೂಪಾಯಿ ಕಡಿಮೆಯಾಗಿದೆ.
ಬೆಳ್ಳಿ ಬೆಲೆಯಲ್ಲೂ ಇಳಿಕೆ
ಇನ್ನು ಚಿನ್ನದೊಂದಿಗೆ ಬೆಳ್ಳಿಯ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. ಬೆಳ್ಳಿ ಬೆಲೆಯು ಒಂದು ಗ್ರಾಂಗೆ 260 ರೂಪಾಯಿ ಆಗಿದೆ. ಒಂದು ಕೆ.ಜಿ ಬೆಳ್ಳಿ ಬೆಲೆಯು 2,60,00 0 ರೂ. ಆಗಿದೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ ಒಂದು ಗ್ರಾಂ ಬೆಳ್ಳಿಯ ಬೆಲೆಯು 8 ರೂಪಾಯಿ ಹಾಗೂ ಒಂದು ಕೆ.ಜಿ ಬೆಳ್ಳಿ ಬೆಲೆಯು 8,000 ರೂಪಾಯಿ ಇಳಿಕೆಯಾಗಿದೆ.













Click it and Unblock the Notifications