Get Updates
Get notified of breaking news, exclusive insights, and must-see stories!

Gold Price Feb 19: ಚಿನ್ನ - ಬೆಳ್ಳಿ ಬೆಲೆಯಲ್ಲಿ ದಿಢೀರ್ ಬದಲಾವಣೆ: ಇಂದಿನ ಚಿನ್ನ - ಬೆಳ್ಳಿ ಬೆಲೆ ಎಷ್ಟಿದೆ

Gold Price Feb 19: ಚಿನ್ನ ಪ್ರಿಯರಿಗೆ ಗುರುವಾರ ಮತ್ತೆ ಶಾಕ್ ಎದುರಾಗಿದೆ. ಕಳೆದ ನಾಲ್ಕು ದಿನಗಳಿಂದಲೂ ಸತತ ಇಳಿಕೆ ಕಂಡಿದ್ದ ಚಿನ್ನದ ಬೆಲೆಯು ಗುರುವಾರ ಭಾರೀ ಹೆಚ್ಚಳವಾಗಿದೆ. ಚಿನ್ನದ ಬೆಲೆಯಲ್ಲಿ ಫೆಬ್ರವರಿ 19ರ ಗುರುವಾರದಂದು ಭಾರೀ ಹೆಚ್ಚಳವಾಗಿದೆ. ಇತ್ತೀಚೆಗೆ ಚಿನ್ನದ ಬೆಲೆಯಲ್ಲಿ ಇಳಿಕೆ ಆಗುತ್ತಿರುವುದು ಚಿನ್ನ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿತ್ತು. ಆದರೆ ಇದೀಗ ಗುರುವಾರ ಏಕಾಏಕಿ ಚಿನ್ನದ ಬೆಲೆಯು ಭಾರೀ ಹೆಚ್ಚಳವಾಗಿದೆ. ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆಯ ನಿಖರವಾದ ವಿವರ ಇಲ್ಲಿದೆ.

ಭಾರತದಲ್ಲಿ ಚಿನ್ನಕ್ಕೆ ವಿಶೇಷ ಸ್ಥಾನವಿದೆ. ಚಿನ್ನವನ್ನು ಆಭರಣವಾಗಿ ಮಾತ್ರವಲ್ಲದೆ ಹೂಡಿಕೆಯ ದೃಷ್ಟಿಯಿಂದಲೂ ಖರೀದಿ ಮಾಡಲಾಗುತ್ತದೆ. ಕಳೆದ ವಾರಾಂತ್ಯದ ನಂತರ ಇದೀಗ ಗುರುವಾರ ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಳವಾಗಿರುವುದು ಬಂಗಾರ ಪ್ರಿಯರಲ್ಲಿ ಮಿಶ್ರ ಪ್ರತಿಕ್ರಿಯೆಗೆ ಕಾರಣವಾಗಿದೆ.

Gold Price

24 ಕ್ಯಾರೆಟ್ ಚಿನ್ನದ ಬೆಲೆ: ವಿವಿಧ ಕ್ಯಾರೆಟ್‌ನ ಚಿನ್ನದ ಬೆಲೆಯು ಗುರುವಾರ ಹೆಚ್ಚಳವಾಗಿದೆ. ಕಳೆದ ಮೂರು ನಾಲ್ಕು ದಿನಗಳಿಂದಲೂ ಇಳಿಕೆಯಾಗಿದ್ದ ಚಿನ್ನದ ಬೆಲೆಯು ಇದೀಗ ಏಕಾಏಕಿ ಹೆಚ್ಚಳವಾಗಿದೆ. 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 15,649 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,56,490 ರೂಪಾಯಿ ಆಗಿದೆ. ಬುಧವಾರಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂ ಚಿನ್ನದ ಬೆಲೆಯು 229 ರೂ. ಹಾಗೂ 10 ಗ್ರಾಂಗೆ 2,290 ರೂಪಾಯಿ ಕಡಿಮೆ ಆಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್‌ನ ಚಿನ್ನದ ಬೆಲೆಯಲ್ಲೂ ಹೆಚ್ಚಳವಾಗಿದೆ. 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 14,345 ರೂಪಾಯಿ ಆಗಿದೆ. 10 ಗ್ರಾಂನ ಚಿನ್ನದ ಬೆಲೆಯು 1,43,450 ರೂ. ಆಗಿದೆ. ಬುಧವಾರಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂ ಚಿನ್ನದ ಬೆಲೆಯು 210 ರೂಪಾಯಿ ಹಾಗೂ 10 ಗ್ರಾಂಗೆ ಹೋಲಿಕೆ ಮಾಡಿದರೆ 2,100 ರೂಪಾಯಿ ಆಗಿದೆ.

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ 1 ಗ್ರಾಂ ಚಿನ್ನದ ಬೆಲೆಯು 11,737 ರೂಪಾಯಿ ಆಗಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು 1,17,370 ರೂಪಾಯಿ ಆಗಿದೆ. ಬುಧವಾರಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂ ಚಿನ್ನದ ಬೆಲೆಯು 172 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,720 ರೂಪಾಯಿ ಆಗಿದೆ.

ಬೆಳ್ಳಿ ಬೆಲೆ ಎಷ್ಟಿದೆ ?

ಕಳೆದ ಕೆಲವು ದಿನಗಳಿಂದ ಸತತವಾಗಿ ಇಳಿಕೆ ಕಂಡಿದ್ದ ಬೆಳ್ಳಿಯ ಬೆಲೆಯು ಗುರುವಾರ / ಫೆಬ್ರವರಿ 19ರಂದು ಮತ್ತೆ ಭಾರೀ ಹೆಚ್ಚಳವಾಗಿದೆ. ಫೆಬ್ರವರಿ 19ರಂದು 1 ಗ್ರಾಂ ಬೆಳ್ಳಿ ಬೆಲೆಯು 270 ರೂಪಾಯಿ ಆಗಿದೆ. ಒಂದು ಕೆ.ಜಿ ಬೆಳ್ಳಿ ಬೆಲೆಯು 2,70,000 ರೂ. ಆಗಿದೆ. ಒಂದು ಗ್ರಾಂ ಬೆಳ್ಳಿ ಬೆಲೆಯು ಫೆಬ್ರವರಿ 18ಕ್ಕೆ ಹೋಲಿಕೆ ಮಾಡಿದರೆ 15 ರೂಪಾಯಿ ಹಾಗೂ ಒಂದು ಕೆ.ಜಿ ಬೆಳ್ಳಿ ಬೆಲೆಯು ಬರೋಬ್ಬರಿ 15,000 ರೂಪಾಯಿ ಹೆಚ್ಚಳವಾಗಿದೆ.

ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಳಿತ

ಇನ್ನು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮತ್ತೆ ಏರಿಳಿತ ಕಂಡು ಬಂದಿದೆ. ಕಳೆದ 10 ದಿನಗಳಿಂದಲೂ ಚಿನ್ನ ಮತ್ತು ಬೆಳ್ಳಿ ಬೆಲೆಯು ಇಳಿಕೆಯ ಹಾದಿಯಲ್ಲಿತ್ತು. ಆದರೆ, ಇದೀಗ ಚಿನ್ನ ಮತ್ತು ಬೆಳ್ಳಿ ಬೆಲೆಯು ಭಾರೀ ಹೆಚ್ಚಳವಾಗಿದ್ದು, ನಾಳೆ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಯಾವ ಬದಲಾವಣೆ ಆಗಲಿದೆ ಎನ್ನುವ ಕುತೂಹಲ ಮೂಡಿದೆ. ಒಟ್ಟಾರೆ ಮತ್ತೆ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಹೆಚ್ಚಳವಾಗಿರುವುದು ಚಿನ್ನ ಪ್ರಿಯರಲ್ಲಿ ಆತಂಕ ಮೂಡಿಸಿದ್ದರೆ, ಚಿನ್ನ ಮತ್ತು ಬೆಳ್ಳಿಯ ಮೇಲೆ ಹೂಡಿಕೆ ಮಾಡಿರುವವರಲ್ಲಿ ತುಸು ನಿರಾಳತೆ ಮೂಡಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+