Gold Price Feb 4: ಅಮೆರಿಕ vs ಇರಾನ್ ಸಂಘರ್ಷ: ಚಿನ್ನ - ಬೆಳ್ಳಿ ಬೆಲೆ ಮತ್ತೆ ದುಬಾರಿ, ಇಂದಿನ ಚಿನ್ನದ ಬೆಲೆ ಎಷ್ಟಿದೆ ?
Gold Price Feb 4: ಚಿನ್ನ ಪ್ರಿಯರಿಗೆ ಬುಧವಾರ ಮತ್ತೆ ಶಾಕ್ ಎದುರಾಗಿದೆ. ಕಳೆದ ಮೂರು ದಿನಗಳಿಂದಲೂ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿತ್ತು. ಇದೀಗ ಚಿನ್ನದ ಬೆಲೆಯು ಏಕಾಏಕಿ ಹೆಚ್ಚಳವಾಗಿದೆ. ಮಧ್ಯಪ್ರಾಚ್ಯದಲ್ಲಿ ಮತ್ತೆ ಸಂಘರ್ಷ ಹೆಚ್ಚಾಗುತ್ತಿರುವುದು ಚಿನ್ನದ ಬೆಲೆಯು ಏಕಾಏಕಿ ಹೆಚ್ಚಳವಾಗುವುದಕ್ಕೆ ಕಾರಣವಾಗಿದೆ. ಈಚೆಗೆ ಅಮೆರಿಕ ಹಾಗೂ ಭಾರತದ ನಡುವೆ ತೆರಿಗೆ ಸಮರಕ್ಕೆ ಬ್ರೇಕ್ ಬಿದ್ದಿತ್ತು. ಇದರ ಬೆನ್ನಲ್ಲೇ ಚಿನ್ನದ ಬೆಲೆಯು ಭಾರೀ ಇಳಿಕೆಯಾಗಿತ್ತು. ಇದೀಗ ಮತ್ತೆ ಚಿನ್ನದ ಬೆಲೆ ಹೆಚ್ಚಳವಾಗಿದೆ. ಬುಧವಾರ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಎಷ್ಟು ಹೆಚ್ಚಳವಾಗಿದೆ ಎನ್ನುವ ನಿಖರವಾದ ವಿವರ ನೋಡೋಣ.
24 ಕ್ಯಾರೆಟ್ ಚಿನ್ನದ ಬೆಲೆ: ಫೆಬ್ರವರಿ 4ರಂದು 24 ಕ್ಯಾರೆಟ್‌ನ ಚಿನ್ನದ ಬೆಲೆಯು ಭರ್ಜರಿ ಹೆಚ್ಚಳವಾಗಿದೆ. 24 ಕ್ಯಾರೆಟ್‌ನ 1 ಗ್ರಾಂನ ಚಿನ್ನದ ಬೆಲೆಯು 16,053 ರೂ. ಆಗಿದೆ. 10 ಗ್ರಾಂನ 24 ಕ್ಯಾರೆಟ್‌ನ ಚಿನ್ನದ ಬೆಲೆಯು 1,60,530 ರೂ. ಆಗಿದೆ. ಮಂಗಳವಾರಕ್ಕೆ ಹೋಲಿಕೆ ಮಾಡಿದರೆ, 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆ 660 ರೂಪಾಯಿ ಹಾಗೂ 10 ಗ್ರಾಂನ ಮೇಲೆ 6,600 ರೂಪಾಯಿ ಭರ್ಜರಿ ಹೆಚ್ಚಳವಾಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್‌ನ ಚಿನ್ನದ ಬೆಲೆಯಲ್ಲೂ ಭರ್ಜರಿ ಏರಿಕೆಯಾಗಿದೆ. 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 14,715 ರೂ. ಹಾಗೂ 10 ಗ್ರಾಂನ ಚಿನ್ನದ ಬೆಲೆಯು 1,47,150 ರೂ. ಇದೆ. ಮಂಗಳವಾರಕ್ಕೆ ಹೋಲಿಕೆ ಮಾಡಿದರೆ 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 1 ಗ್ರಾಂನ ಮೇಲೆ 605 ರೂಪಾಯಿ ಹಾಗೂ 10 ಗ್ರಾಂನ ಮೇಲೆ 6,050 ರೂಪಾಯಿ ಹೆಚ್ಚಳವಾಗಿದೆ.
18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 12,040 ರೂ., 10 ಗ್ರಾಂ ಚಿನ್ನದ ಬೆಲೆಯು 1,20,400 ರೂ. ಆಗಿದೆ. ಮಂಗಳವಾರಕ್ಕೆ ಹೋಲಿಕೆ ಮಾಡಿದರೆ, 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಮೇಲೆ 495 ರೂ. ಹಾಗೂ 10 ಗ್ರಾಂನ ಮೇಲೆ 4,950 ರೂಪಾಯಿ ಜಾಸ್ತಿ ಆಗಿದೆ.
ಫೆಬ್ರವರಿ 4ರ ಬೆಳ್ಳಿ ಬೆಲೆ ಎಷ್ಟಿದೆ ?
ಇನ್ನು ಕಳೆದ ಒಂದು ವಾರದಿಂದಲೂ ಇಳಿಕೆಯಾಗಿದ್ದ ಬೆಳ್ಳಿ ಬೆಲೆಯಲ್ಲೂ ಭರ್ಜರಿ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯು ಬುಧವಾರ ಪ್ರತಿ ಗ್ರಾಂಗೆ 320 ರೂಪಾಯಿ ಆಗಿದೆ. ಇನ್ನು ಒಂದು ಕೆ.ಜಿ ಬೆಲೆಯು ಬರೋಬ್ಬರಿ 3,20,000 ರೂ. ಆಗಿದೆ. ಮಂಗಳವಾರಕ್ಕೆ ಹೋಲಿಕೆ ಮಾಡಿದರೆ ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 40 ರೂಪಾಯಿ ಹಾಗೂ ಕೆ.ಜಿ ಬೆಳ್ಳಿ ಬೆಲೆಯು ಬರೋಬ್ಬರಿ 40,000 ರೂ. ಹೆಚ್ಚಳವಾಗಿದೆ.
ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಮುಂದುವರಿದ ಏರಿಳಿತ
ಇನ್ನು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಏರಿಳಿತ ಮುಂದುವರಿದಿದೆ. ಚಿನ್ನದ ಬೆಲೆಯು ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯೂ ಇದೆ. ಕಳೆದ ಮೂರು ನಾಲ್ಕು ದಿನಗಳಿಂದ ಚಿನ್ನದ ಬೆಲೆ ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಚಿನ್ನ ಪ್ರಿಯರು ತುಸು ನಿರಾಳರಾಗಿದ್ದರು. ಆದರೆ, ಇದೀಗ ಬುಧವಾರ / ಫೆಬ್ರವರಿ 4ರಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎರಡರಲ್ಲೂ ಹೆಚ್ಚಳವಾಗಿದೆ.
ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿದೆ.












Click it and Unblock the Notifications