Gold Price February 15: ಚಿನ್ನ ಪ್ರಿಯರಿಗೆ ಗುಡ್‌ನ್ಯೂಸ್, ಚಿನ್ನದ ಬೆಲೆಯಲ್ಲಿ ಯಥಾಸ್ಥಿತಿ: ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ
Gold Price February 15: ಚಿನ್ನ ಪ್ರಿಯರಿಗೆ ವಾರಾಂತ್ಯದ ಚಿನ್ನದ ಬೆಲೆಯು ನಿರಾಳತೆ ನೀಡಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯು ವಾರಾಂತ್ಯದಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಚಿನ್ನದ ಬೆಲೆಯು ಕಳೆದ ಕೆಲವು ದಿನಗಳಿಂದ ಭಾರೀ ಏರಿಳಿತ ಕಾಣುತ್ತಿದೆ. ಭಾನುವಾರದಂದು ಚಿನ್ನದ ಬೆಲೆಯಲ್ಲಿ ಮಹತ್ವದ ಬದಲಾವಣೆ ಆಗಿಲ್ಲ. ಫೆಬ್ರವರಿ 15ರಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಎನ್ನುವ ನಿಖರವಾದ ವಿವರ ಇಲ್ಲಿದೆ.
ಕಳೆದ ಒಂದು ತಿಂಗಳಿನಿಂದಲೂ ಚಿನ್ನದ ಬೆಲೆಯಲ್ಲಿ ಭಾರೀ ಏರಿಳಿತವಾಗಿತ್ತು. ಆದರೆ ಇದೀಗ ಚಿನ್ನದ ಬೆಲೆಯು ಸ್ಥಿರತೆ ಕಾಪಾಡಿಕೊಂಡಿದೆ. ವಾರಾಂತ್ಯದಲ್ಲಿ ಚಿನ್ನದ ಬೆಲೆಯಲ್ಲಿ ದೊಡ್ಡ ಬದಲಾವಣೆ ಆಗಿಲ್ಲ. ಕಳೆದ 20 ದಿನಗಳಿಗೆ ಹೋಲಿಕೆ ಮಾಡಿದರೆ ಚಿನ್ನದ ಬೆಲೆಯಲ್ಲಿ ಅಲ್ಪ ಇಳಿಕೆಯಾಗಿದೆ. ಫೆಬ್ರವರಿ ಎರಡನೇ ವಾರದಲ್ಲಿ ಚಿನ್ನದ ಬೆಲೆ ಎಷ್ಟಾಗಿದೆ ಎನ್ನುವ ಸಂಪೂರ್ಣ ವಿವರ ನೋಡೋಣ.

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಚಿನ್ನದ ಬೆಲೆಯು ವಾರಾಂತ್ಯದಲ್ಲಿ ಭರ್ಜರಿ ಇಳಿಕೆಯಾಗಿದೆ. 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 11,831 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,18,310 ರೂ. ಆಗಿದೆ. ವಾರಾಂತ್ಯದಲ್ಲಿ 18 ಕ್ಯಾರೆಟ್‌ನ ಚಿನ್ನದ ಬೆಲೆಯು ಯಥಾಸ್ಥಿತಿ ಮುಂದುವರಿದಿದೆ.
22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್‌ನ ಚಿನ್ನದ ಬೆಲೆಯು 1 ಗ್ರಾಂಗೆ 14,460 ರೂಪಾಯಿ ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು 1,44,600 ರೂ. ಆಗಿದೆ. 18 ಕ್ಯಾರೆಟ್‌ನ ಚಿನ್ನದ ಬೆಲೆಯಂತೆಯೇ 22 ಕ್ಯಾರೆಟ್‌ನ ಚಿನ್ನದ ಬೆಲೆಯಲ್ಲೂ ಯಥಾಸ್ಥಿತಿ ಮುಂದುವರಿದಿದೆ.
24 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 15,775 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,57,750 ರೂ. ಆಗಿದೆ. 18 ಹಾಗೂ 24 ಕ್ಯಾರೆಟ್‌ನಂತೆಯೇ 24 ಕ್ಯಾರೆಟ್ ಚಿನ್ನದ ಬೆಲೆಯೂ ಸಹ ಯಥಾಸ್ಥಿತಿ ಮುಂದುವರಿದಿದೆ.
ಬೆಳ್ಳಿ ಬೆಲೆ: ಕಳೆದ ತಿಂಗಳು ಬೆಳ್ಳಿ ಬೆಲೆಯಲ್ಲಿ ಭಾರೀ ಹೆಚ್ಚಳವಾಗಿತ್ತು. ಇದೀಗ ಈ ವರ್ಷ ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. ಬೆಳ್ಳಿ ಬೆಲೆಯು ಒಂದು ಗ್ರಾಂಗೆ 275 ರೂಪಾಯಿ ಆಗಿದೆ. ಒಂದು ಕೆ.ಜಿ ಬೆಳ್ಳಿ ಬೆಲೆಯು 2,75,000 ರೂ. ಆಗಿದೆ.
Gold Price February 15: ದೀರ್ಘಕಾಲದ ಹೂಡಿಕೆ
ಚಿನ್ನ ಮತ್ತು ಬೆಳ್ಳಿಯು ದೀರ್ಘಕಾಲದ ಹೂಡಿಕೆ ಎಂದು ಪರಿಗಣಿಸಲ್ಪಟ್ಟಿವೆ. ಚಿನ್ನದ ಮೇಲಿನ ಹೂಡಿಕೆ ಮಾಡುವ ಪ್ರಮಾಣವು ಇತ್ತೀಚಿನ ವರ್ಷಗಳಲ್ಲಿ ಹೆಚ್ಚಳವಾಗಿದೆ. ಇನ್ನು ಚಿನ್ನದ ಬೆಲೆಯೂ ಸಹ ಇತ್ತೀಚಿನ ವರ್ಷಗಳಲ್ಲಿ ಭಾರೀ ಹೆಚ್ಚಳವಾಗಿದೆ. ಕಳೆದ ಮೂರು ನಾಲ್ಕು ವರ್ಷಗಳ ಹಿಂದೆ 22 ಕ್ಯಾರೆಟ್‌ನ ಚಿನ್ನದ ಬೆಲೆಯು 10 ಗ್ರಾಂಗೆ 50,000 ರಿಂದ 55,000 ಸಾವಿರ ರೂಪಾಯಿ ಇತ್ತು. ಆದರೆ ಇಂದು ಚಿನ್ನದ ಬೆಲೆಯು ದುಪ್ಪಟ್ಟು ಆಗಿದೆ.
ಇತ್ತೀಚಿನ ದಿನಗಳಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಮುಂದಿನ ದಿನಗಳಲ್ಲಿ ಚಿನ್ನದ ಮೇಲಿನ ಹೂಡಿಕೆ / ಖರೀದಿ ಎರಡೂ ಹೆಚ್ಚಾಗುವ ಸಾಧ್ಯತೆ ಇದೆ. ಚಿನ್ನದ ಬೆಲೆಯು ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದ್ದರೂ, ಒಟ್ಟಾರೆ ಚಿನ್ನ ಬೆಲೆಯಲ್ಲಿ ಮಹತ್ವದ ಬದಲಾವಣೆಗಳು ಆಗಿಲ್ಲ. ಅಮೆರಿಕ ಮತ್ತು ಭಾರತದ ನಡುವೆ ವ್ಯಾಪಾರ ಒಪ್ಪಂದವಾದ ನಂತರ ಚಿನ್ನದ ಬೆಲೆಯಲ್ಲಿ ಸ್ಥಿರತೆ ಬರುತ್ತಿದೆಯಾದರೂ ಒಟ್ಟಾರೆ ಚಿನ್ನದ ಬೆಲೆಯಲ್ಲಿ ಮಹತ್ವದ ಇಳಿಕೆ ಆಗಿಲ್ಲ. ಹೂಡಿಕೆದಾರರ ಪ್ರಿಯವಾಗಿ ಚಿನ್ನ ನಿರಂತರವಾಗಿ ಲಾಭ ತಂದುಕೊಡುತ್ತಿದೆ.












Click it and Unblock the Notifications