Gold Price: ಚಿನ್ನದ ಬೆಲೆ ಒಂದೇ ದಿನ 2,200 ರೂಪಾಯಿ ಕುಸಿತ!
ಚಿನ್ನದ ಬೆಲೆ ಕುಸಿತ ಮುಂದುವರಿದಿದ್ದು, ಭಾರಿ ಪ್ರಮಾಣದಲ್ಲಿ ಕುಸಿತ ಕಾಣುತ್ತಿದೆ ಹಳದಿ ಲೋಹ ಚಿನ್ನ. ಅದರಲ್ಲೂ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಕುಸಿತ ಕಾಣ್ತಿದ್ದು, ಇಂದು ಕೂಡ ಬರೋಬ್ಬರಿ 2,200 ರೂಪಾಯಿ ಕುಸಿತ ಕಂಡಿದೆ. ಹಾಗಾದ್ರೆ ಚಿನ್ನ ಖರೀದಿ ಮಾಡಲು ಇದು ಸರಿಯಾದ ಸಮಯ ಆಗಿದೆಯಾ? ಈಗ ಎಷ್ಟಿದೆ ಚಿನ್ನದ ಬೆಲೆ? ಮುಂದೆ ಓದಿ.
ಚಿನ್ನದ ಬೆಲೆ ಎಷ್ಟೇ ಹೆಚ್ಚಾದರೂ ಅಥವಾ ಕಡಿಮೆ ಆದ್ರೂ ಭಾರತೀಯರು ಕೊಳ್ಳುತ್ತಾರೆ. ಯಾಕಂದ್ರೆ ಭಾರತೀಯರಿಗೆ ಸಾಮಾನ್ಯವಾಗಿ ಚಿನ್ನ ತುಂಬಾ ಇಷ್ಟ, ಅದ್ರಲ್ಲೂ ಆಭರಣವನ್ನ ತಮ್ಮ ಮೈಮೇಲೆ ಹಾಕಲು ಭಾರತೀಯರು ತುಂಬಾ ಇಷ್ಟಪಡುತ್ತಾರೆ. ಹೀಗಾಗಿ ಭಾರತೀಯರಲ್ಲಿ ಚಿನ್ನದ ಬಗ್ಗೆ ತುಂಬಾ ಕುತೂಹಲ ಇರುತ್ತೆ. ಇದೆಲ್ಲವನ್ನ ಮೀರಿ ಚಿನ್ನ ಅನ್ನೋದು ಕಷ್ಟದ ಸಮಯ ಬಂದಾಗ ಸಹಾಯಕ್ಕೆ ಬರುವ ಬಂಧು ಅಥವಾ ಸ್ನೇಹಿತ. ಹಲವು ರೀತಿಯಲ್ಲಿ ಚಿನ್ನದ ಉಪಯೋಗ ಪಡೆಯಬಹುದಾಗಿದೆ. ಈ ಕಾರಣಕ್ಕೆ ಚಿನ್ನ ಅಂದ್ರೆ ಭಾರತೀಯರಿಗೆ ಇಷ್ಟ, ಈಗ ಚಿನ್ನದ ಬೆಲೆ ಸಾಕಷ್ಟು ಕುಸಿತ ಕಾಣುತ್ತಿದೆ.

ಚಿನ್ನದ ಬೆಲೆ ಎಷ್ಟಿದೆ ಈಗ?
100 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 2,200 ರೂಪಾಯಿ ಕುಸಿತ ಕಂಡಿದ್ದು, 7,23,300 ರೂಪಾಯಿ ಲೆಕ್ಕದಲ್ಲಿ ಮಾರಾಟ ಆಗುತ್ತಿದೆ. ಹಾಗೇ 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 2,000 ರೂ. ಕುಸಿತ ಕಂಡು 6,63,000 ರೂಪಾಯಿಗೆ ಮಾರಾಟ ಆಗುತ್ತಿದೆ. ಹಾಗೇ 18 ಕ್ಯಾರೆಟ್ ಬೆಲೆ ಕೂಡ ಕುಸಿದಿದೆ. ಚಿನ್ನ ಇದೀಗ ಆಧುನಿಕ ಕಾಲದಲ್ಲಿ ಅತ್ಯವಶ್ಯಕ ವಸ್ತು ಎನಿಸಿಕೊಂಡಿದ್ದು. ಹೀಗಿದ್ದಾಗ ಚಿನ್ನದ ಬೆಲೆ ಇಳಿಕೆ ಕಂಡು 24 ಕ್ಯಾರೆಟ್ ಚಿನ್ನದ ಬೆಲೆ 72,330 ರೂಪಾಯಿಗೆ 10 ಗ್ರಾಂ ರೀತಿ ಮಾರಾಟ ಆಗುತ್ತಿದೆ. ಹಾಗೇ 22 ಕ್ಯಾರೆಟ್ ಚಿನ್ನದ ಬೆಲೆಯು 66,300 ರೂಪಾಯಿಗೆ 10 ಗ್ರಾಂ ರೀತಿ ಮಾರುಕಟ್ಟೆ ಬೆಲೆಯಲ್ಲಿ ಸೇಲ್ ಆಗುತ್ತಿದೆ.
50 ಸಾವಿರ ರೂಪಾಯಿಗೆ ಚಿನ್ನ?
ಹೂಡಿಕೆ ಮಾಡುವವರಿಗೆ ಚಿನ್ನದ ಬೆಲೆಯು ಹೆಚ್ಚಾದರೆ ಖುಷಿ ಆಗುತ್ತದೆ, ಹೀಗಿದ್ರೂ ಸಾಮಾನ್ಯವಾಗಿ ಆಭರಣ ಹೆಚ್ಚಾಗಿ ಇಷ್ಟಪಡುವ ಮಹಿಳೆಯರಿಗೆ ಚಿನ್ನದ ಬೆಲೆ ಕುಸಿದರೆ ಮಾತ್ರ ಖುಷಿ. ಹೀಗೆ ಚಿನ್ನದ ಬೆಲೆ ಕಳೆದ 1 ತಿಂಗಳಿಂದ ಭಾರಿ ಏರಿಳಿತ ಕಾಣುತ್ತಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ಕುಸಿತ ಕಂಡು, ಆ ನಂತರದಲ್ಲಿ ಮತ್ತೆ ಏರಿಕೆ ಹಾದಿಗೆ ಮರಳುತ್ತದೆ ಎಂದು ಹೇಳಲಾಗುತ್ತಿತ್ತು. ಆದ್ರೆ ಈಗ ಬೇರೆಯದ್ದೇ ಸಂಗತಿ ಹೊರಬಿದ್ದಿದ್ದು, ಅದು ಏನೆಂದರೆ ಚಿನ್ನ ಮತ್ತೆ 50 ಸಾವಿರ ರೂಪಾಯಿಗೆ ಕುಸಿತ ಕಾಣಲಿದೆ ಎನ್ನಲಾಗುತ್ತಿದೆ.
ಚಿನ್ನ ಈಗ ಅಂತಾರಾಷ್ಟ್ರೀಯ ಕರೆನ್ಸಿ?
ಪ್ರಪಂಚದ ಮಟ್ಟದಲ್ಲಿ ಈಗ ಚಿನ್ನಕ್ಕೆ ಯಾಕೆ ಇಷ್ಟು ಬೆಲೆ ಬಂದಿದೆ ಎಂದರೆ, ಯುದ್ಧಗಳು ಶುರುವಾದ ನಂತರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಟ್ಟಿಯಾದ ಕರೆನ್ಸಿ ಇಲ್ಲವಾಗಿದ್ದು. ಈ ಕಾರಣಕ್ಕೆ ಈಗ ಚಿನ್ನದ ಮೇಲೆ ಜನರಿಗೆ ತುಂಬಾ ನಂಬಿಕೆ ಬಂದಿದೆ. ಹೀಗಾಗಿ ಜನರು ಕೂಡ ಚಿನ್ನ ಖರೀದಿಗೆ ಮುಗಿ ಬೀಳುತ್ತಿದ್ದಾರೆ. ಹೀಗಾಗಿ ಏಪ್ರಿಲ್ ತಿಂಗಳಲ್ಲಿ ಚಿನ್ನ ಸಾಕಷ್ಟು ಏರಿಕೆ ಕಂಡಿತ್ತು. ಆದರೆ, ಇದೀಗ ಚಿನ್ನದ ಬೆಲೆ ಇಳಿಕೆ ಕಾಣುತ್ತಿದೆ. ಇಸ್ರೇಲ್ & ಇರಾನ್ ಯುದ್ಧ ನಡೆಯಲ್ಲ ಎಂಬ ನಂಬಿಕೆ ಸಿಕ್ಕ ನಂತರ ಚಿನ್ನದ ಬೆಲೆ ಇಳಿಕೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಜನರು ಕೂಡ ಚಿನ್ನ ಖರೀದಿಯನ್ನು ಆರಾಮವಾಗಿ ಮಾಡಬಹುದು ಎಂಬ ಅಭಿಪ್ರಾಯ ಕೇಳಿಬಂದಿದೆ.












Click it and Unblock the Notifications