Gold Price: ಚಿನ್ನದ ಬೆಲೆ ಕುಸಿತ, ಮತ್ತಷ್ಟು ಕಡಿಮೆಯಾದ ಬಂಗಾರ!
ಚಿನ್ನದ ಬೆಲೆ ದಿನದಿಂದ ದಿನಕ್ಕೆ ಕುಸಿತ ಕಾಣುತ್ತಿದ್ದು, ಇದೀಗ ಭಾರಿ ಇಳಿಕೆ ಆಗುತ್ತಿದೆ. ಕಳೆದ 3 ದಿನಗಳಿಂದ ಚಿನ್ನದ ಬೆಲೆ ನಿರಂತರವಾಗಿ ಇಳಿಕೆ ಕಾಣುತ್ತಿದೆ. ಹಾಗೇ ಈಗ ಕೂಡ ಚಿನ್ನದ ರೇಟ್ ಮತ್ತೊಮ್ಮೆ ಕುಸಿದು ಬಿದ್ದಿದ್ದು, ಇಂದಿನ ಬೆಲೆ ಎಷ್ಟಿದೆ ಗೊತ್ತಾ? ಚಿನ್ನ ಖರೀದಿ ಮಾಡಲು ಈಗ ಸೂಕ್ತ ವಾತಾವರಣ ಇದೆಯಾ? ಚಿನ್ನದ ಬೆಲೆ ಮತ್ತಷ್ಟು ಕುಸಿತ ಕಾಣುತ್ತಾ? ಮಾಹಿತಿಗಾಗಿ ಮುಂದೆ ಓದಿ.
ಚಿನ್ನದ ಬೆಲೆ ಮತ್ತೊಮ್ಮೆ ಭಾರಿ ಕುಸಿತ ಕಂಡಿದ್ದು, ಈ ಮೂಲಕ ಚಿನ್ನ ಕೊಳ್ಳಲು ಸುವರ್ಣಾವಕಾಶ ಒದಗಿ ಬಂದಿದೆ. ಚಿನ್ನದ ಬೆಲೆ ಕಳೆದ ಕೆಲ ದಿನಗಳಿಂದ ಪಾತಾಳ ಸೇರುತ್ತಿದೆ ಹೀಗಿದ್ದಾಗ ಈಗ ಕೂಡ, ಚಿನ್ನದ ಬೆಲೆ ದಿಢೀರ್ ಕುಸಿತ ಕಂಡಿದೆ. ಕಳೆದ 1 ದಶಕದಲ್ಲಿ ಚಿನ್ನದ ಬೆಲೆ, ಸಾಕಷ್ಟು ಬದಲಾವಣೆ ಕಂಡಿದೆ. ಮುಂದಿನ ದಿನಗಳಲ್ಲಿ ಚಿನ್ನಕ್ಕೆ ಭಾರಿ ಬೇಡಿಕೆ ಬರುವ ಸಾಧ್ಯತೆ ಇದೆ ಎನ್ನಲಾಗಿತ್ತು. ಹೀಗೆ ಎಲ್ಲಾ ವಿಶ್ವಾಸದ ನಂತರವೂ ಚಿನ್ನದ ಬೆಲೆಯು ಕುಸಿತದ ಕಡೆಗೆ ಮುಖ ಮಾಡುತ್ತಿರುವುದು ಹೂಡಿಕೆ ಮಾಡುವವರಿಗೆ ಟೆನ್ಷನ್ ಕೂಡ ಕೊಡುತ್ತಿದೆ. ಹಾಗಾದ್ರೆ ಇಂದು ಎಷ್ಟಿದೆ ಚಿನ್ನಕ್ಕೆ ರೇಟ್?

ಚಿನ್ನದ ಬೆಲೆ ಭಾರಿ ಕುಸಿತ!
ಒಡವೆ ಚಿನ್ನದ ಬೆಲೆ ಅಂದ್ರೆ 22 ಕ್ಯಾರೆಟ್ ಚಿನ್ನದ ಬೆಲೆ ಭಾರಿ ಕುಸಿತ ಕಂಡು ಪ್ರತಿ 100 ಗ್ರಾಂ ಆಭರಣ ಚಿನ್ನದ ಬೆಲೆ 1,000 ರೂಪಾಯಿಗೆ ಕುಸಿತ ಕಂಡಿದೆ ಹಾಗೇ ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ಈಗ 100 ರೂಪಾಯಿ ಕಡಿತವಾಗಿದ್ದು, ಆಭರಣ ಚಿನ್ನದ ಬೆಲೆಯು ಕುಸಿತದ ನಂತರ 10 ಗ್ರಾಂಗೆ 66,200 ರೂಪಾಯಿ ಬೆಲೆ ಇದ್ದು. 24 ಕ್ಯಾರೆಟ್ ಚಿನ್ನದ ಬೆಲೆ ಕೂಡ ಕುಸಿದು ಬಿದ್ದಿದೆ. 24 ಕ್ಯಾರೆಟ್ ಚಿನ್ನದ ಬೆಲೆ 100 ಗ್ರಾಂಗೆ 1,100 ರೂಪಾಯಿ ಕುಸಿತವನ್ನ ಕಂಡಿದೆ.
ಚಿನ್ನದ ಬೆಲೆ ಕುಸಿತಕ್ಕೆ ಕಾರಣ?
24 ಕ್ಯಾರೆಟ್ ಚಿನ್ನದ ಬೆಲೆ 72,220 ರೂಪಾಯಿ ಆಗಿದ್ದು, 18 ಕ್ಯಾರೆಟ್ ಚಿನ್ನದ ಬೆಲೆ ಕೂಡ ಕುಸಿತ ಕಂಡು ಹಳದಿ ಲೋಹದ ಬೆಲೆ ಕುಸಿತದ ಹಾದಿ ಹಿಡಿದಿದೆ. ಬೆಳ್ಳಿ ಬೆಲೆಯಲ್ಲಿ ಏರಿಕೆ ಕಂಡು ಬಂದಿದ್ದು ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿ ಚಿನ್ನದ ಬೆಲೆ ಇಳಿಕೆ ಕಾಣುವ ನಿರೀಕ್ಷೆಯು ಇದೆ. ಕೆಲವು ತಿಂಗಳ ಹಿಂದೆ ಚಿನ್ನದ ಬೆಲೆ ಭಾರಿ ಏರಿಕೆ ಕಂಡು ಆಭರಣ ಪ್ರಿಯರಿಗೆ ಬೇಸರ ತರಿಸಿತ್ತು. ಆದ್ರೆ ಈಗ ಇಳಿಕೆಯ ಹಾದಿಯನ್ನ ಹಿಡಿದಿದೆ ಚಿನ್ನ.
5000 ವರ್ಷಗಳ ಇತಿಹಾಸ
ಮನುಷ್ಯ ನಾಗರಿಕತೆ ಕಡೆ ಹೆಜ್ಜೆ ಹಾಕಿದ ನಂತರ ಚಿನ್ನ ಹೆಚ್ಚು ಬಳಸತೊಡಗಿದ್ದು, ಈ ಪೈಕಿ ಚಿನ್ನದ ಬಳಕೆಗೆ 5000 ವರ್ಷಗಳ ಇತಿಹಾಸ ಇದೆ. ಹೀಗೆ ಚಿನ್ನವನ್ನು ಮನುಷ್ಯರು ಸಾವಿರಾರು ವರ್ಷಗಳಿಂದ ಬಳಕೆ ಮಾಡಿಕೊಂಡು ಬರುತ್ತಿದ್ದಾರೆ. ಹೀಗಾಗಿ ಈ ಹೊತ್ತಿಗೂ ಚಿನ್ನಕ್ಕೆ ಭಾರಿ ದೊಡ್ಡ ಗೌರವ ಮತ್ತು ಬೆಲೆ ಇದೆ. ಈ ರೀತಿ ಯಾವುದೇ ಲೋಹಕ್ಕೆ ಕೂಡ ಚಿನ್ನದಷ್ಟು ಮಾನ್ಯತೆ ನೀಡಲ್ಲ. ಆದರೆ ಚಿನ್ನಕ್ಕೆ ಮಾತ್ರ ಹೆಚ್ಚು ಬೆಲೆ ಇದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ದುಬಾರಿ ಆಗುವುದು ಪಕ್ಕಾ ಅಂತಿದ್ದರು ತಜ್ಞರು. ಈಗ ನೋಡಿದರೆ ಚಿನ್ನದ ಬೆಲೆ ಕುಸಿತ ಕಾಣುತ್ತಿದೆ.
ಚಿನ್ನ ಈಗ ಅಂತಾರಾಷ್ಟ್ರೀಯ ಕರೆನ್ಸಿ?
ಪ್ರಪಂಚದ ಮಟ್ಟದಲ್ಲಿ ಈಗ ಚಿನ್ನಕ್ಕೆ ಯಾಕೆ ಇಷ್ಟು ಬೆಲೆ ಬಂದಿದೆ ಎಂದರೆ, ಯುದ್ಧಗಳು ಶುರುವಾದ ನಂತರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಟ್ಟಿಯಾದ ಕರೆನ್ಸಿ ಇಲ್ಲವಾಗಿದ್ದು. ಈ ಕಾರಣಕ್ಕೆ ಈಗ ಚಿನ್ನದ ಮೇಲೆ ಜನರಿಗೆ ತುಂಬಾ ನಂಬಿಕೆ ಬಂದಿದೆ. ಹೀಗಾಗಿ ಜನರು ಕೂಡ ಚಿನ್ನ ಖರೀದಿಗೆ ಮುಗಿ ಬೀಳುತ್ತಿದ್ದಾರೆ. ಹೀಗಾಗಿ ಏಪ್ರಿಲ್ ತಿಂಗಳಲ್ಲಿ ಚಿನ್ನ ಸಾಕಷ್ಟು ಏರಿಕೆ ಕಂಡಿತ್ತು. ಆದರೆ, ಇದೀಗ ಚಿನ್ನದ ಬೆಲೆ ಇಳಿಕೆ ಕಾಣುತ್ತಿದೆ. ಇಸ್ರೇಲ್ & ಇರಾನ್ ಯುದ್ಧ ನಡೆಯಲ್ಲ ಎಂಬ ನಂಬಿಕೆ ಸಿಕ್ಕ ನಂತರ ಚಿನ್ನದ ಬೆಲೆ ಇಳಿಕೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಜನರು ಕೂಡ ಚಿನ್ನ ಖರೀದಿಯನ್ನು ಆರಾಮವಾಗಿ ಮಾಡಬಹುದು ಎಂಬ ಅಭಿಪ್ರಾಯ ಕೇಳಿಬಂದಿದೆ.
ಹಳದಿ ಲೋಹ ಎಲ್ಲರಿಗೂ ಇಷ್ಟ!
ಚಿನ್ನ ಭಾರತೀಯರ ಪಾಲಿಗೆ ತುರ್ತು ಹಣ ಇದ್ದಂತೆ, ಯಾಕಂದ್ರೆ ಯಾವುದೇ ತುರ್ತು ಸ್ಥಿತಿ ಎದುರಾಗಿ ಪರದಾಟ ಶುರುವಾದರೂ ಭಾರತೀಯರು ಮೊದಲು ತಮ್ಮ ಬಳಿ ಇರುವ ಚಿನ್ನ, ಮತ್ತು ಬೆಳ್ಳಿ ಮೊರೆ ಹೋಗುತ್ತಾರೆ. ಯಾಕಂದ್ರೆ ತುರ್ತು ಪರಿಸ್ಥಿತಿಯಲ್ಲಿ, ಎಲ್ಲಿಯೂ ಹಣ ಸಿಗದೇ ಇದ್ದರೆ ನಮ್ಮ ಬಳಿ ಇರುವ ಚಿನ್ನ & ಬೆಳ್ಳಿಗೆ ಬೇಡಿಕೆ ಬಂದೇ ಬರುತ್ತದೆ. ಹೀಗಾಗಿಯೇ ಬಹುತೇಕ ಭಾರತೀಯರು ಚಿನ್ನದ ಮೇಲೆ ಹೂಡಿಕೆ ಮಾಡುತ್ತಾ ಬಂದಿದ್ದಾರೆ. ಮತ್ತೊಂದು ಕಡೆ ಚಿನ್ನದ ಮೇಲೆ ಹೂಡಿಕೆ ಮಾಡುವ ಪ್ರತಿಯೊಬ್ಬರಿಗೂ, ಹಳದಿ ಲೋಹ ಬೆನ್ನೆಲುಬಾಗಿ ನಿಂತಿದೆ. ಮುಂದಿನ ದಿನಗಳಲ್ಲಿ ಹಳದಿ ಲೋಹ ಅಂದ್ರೆ ಚಿನ್ನ ಮತ್ತಷ್ಟು ಎತ್ತರಕ್ಕೆ ಹೋಗುವ ನಿರೀಕ್ಷೆ ದಟ್ಟವಾಗಿದೆ.
ಚಿನ್ನ ಇಲ್ಲದೆ ಏನೂ ನಡೆಯಲ್ಲ!
ಆಧುನಿಕ ಕಾಲಘಟ್ಟದಲ್ಲಿ ಚಿನ್ನ ಅದೆಷ್ಟು ಮುಖ್ಯ ಎಂದರೆ, ಚಿನ್ನವು ಇಲ್ಲದೆ ಏನೂ ನಡೆಯಲ್ಲ ಎನ್ನಬಹುದು. ಯಾಕಂದ್ರೆ ಚಿನ್ನ ಆಭರಣವಾಗಿ ಮಾತ್ರವಲ್ಲ, ಹಲವು ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕೆಯಲ್ಲಿ ಕೂಡ ಬಳಕೆ ಮಾಡಲಾಗುತ್ತೆ. ಮೊಬೈಲ್ ಸೇರಿದಂತೆ, ಹಲವು ಎಲೆಕ್ಟ್ರಾನಿಕ್ ಉಪಕರಣಗಳ ತಯಾರಿಕೆಗೆ ಕೂಡ ಚಿನ್ನ ಬೇಕೆ ಬೇಕಾಗುತ್ತೆ. ಹೀಗಾಗಿಯೇ ಚಿನ್ನ ಈಗ ಆಧುನಿಕ ಕಾಲದಲ್ಲಿ ಅತ್ಯವಶ್ಯಕ ವಸ್ತು ಎನಿಸಿಕೊಂಡಿದೆ. ಹೀಗೆಯೇ, ಎಲ್ಲಾ ಕಡೆಯಿಂದ ಕೂಡ ಚಿನ್ನಕ್ಕೆ ಬೇಡಿಕೆ ಹೆಚ್ಚಾಗುತ್ತಿರುವ ಕಾರಣ, ಬೆಲೆಯಲ್ಲಿ ಏರಿಳಿತ ಉಂಟಾಗುತ್ತಿದ್ದು. ಮುಂದೆ ಇನ್ನಷ್ಟು ಏರಿಳಿತ ಕಾಣಬಹುದು ಅಂತಾರೆ ತಜ್ಞರು.
ಹೂಡಿಕೆ ಮಾಡಿದ್ದವರಿಗೆ ಟೆನ್ಷನ್!
ಚಿನ್ನ ಮಾರುಕಟ್ಟೆಯಲ್ಲಿ ಸತತವಾಗಿ ಕುಸಿತ ಕಾಣುತ್ತಿದ್ದು, ಇದರಿಂದ ಹೂಡಿಕೆದಾರರಿಗೆ ಹೊಸ ಆತಂಕ ಶುರುವಾಗಿದೆ. ಯಾಕಂದ್ರೆ ಚಿನ್ನ ಕೂಡ ಆರ್ಥಿಕತೆಯ ಒಂದು ಭಾಗವೇ ಆಗಿದೆ. ಹೀಗಿದ್ದಾಗ ಚಿನ್ನದ ಬೆಲೆಯಲ್ಲಿ ಸತತವಾಗಿ ಕುಸಿತ ದಾಖಲಾಗುತ್ತಿದೆ ಎಂಬುದು ಚಿಂತೆಗೆ ದೂಡಿದೆ. ಅದರಲ್ಲೂ ಕಳೆದ ಒಂದೆರಡು ವಾರದಿಂದ ನಿರಂತರವಾಗಿ ಚಿನ್ನವು ತನ್ನ ಬೆಲೆ ಕಳೆದುಕೊಳ್ಳುತ್ತಿದೆ. ಹೀಗಿದ್ದಾಗ ಮೊನ್ನೆ ಬಂಪರ್ ಆಫರ್ ಸಿಕ್ಕಿತ್ತು. ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಆಗಿತ್ತು. ಹೀಗಿದ್ದಾಗಲೇ ಮತ್ತೊಮ್ಮೆ ಚಿನ್ನದ ಬೆಲೆ ಈಗ ಮತ್ತೆ ಹಿನ್ನಡೆ ಕಂಡಿದೆ. ಹಾಗಿದ್ರೆ ಚಿನ್ನದ ಬೆಲೆ ಮತ್ತೆ ಕುಸಿತ ಕಾಣುತ್ತಾ? ಮುಂದೆ ಓದಿ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications