Get Updates
Get notified of breaking news, exclusive insights, and must-see stories!

Gold Price: 2000 ರೂಪಾಯಿ ಕುಸಿತ ಕಂಡ ಚಿನ್ನದ ಬೆಲೆ, ಇವತ್ತು ಎಷ್ಟಿದೆ ರೇಟ್?

ಚಿನ್ನದ ಬೆಲೆ ಭಾರಿ ಏರಿಳಿತ ಕಾಣುತ್ತಿದೆ, ಮೊನ್ನೆ ಮೊನ್ನೆ ಲೋಕಸಭಾ ಚುನಾವಣೆ ರಿಸಲ್ಟ್ ಬಂದ ದಿನ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಆಗಿತ್ತು. ಷೇರು ಮಾರುಕಟ್ಟೆ ಕುಸಿತದ ಕಾರಣ ಈ ರೀತಿಯ ಬದಲಾವಣೆ ಆಗಿತ್ತು. ಆದರೆ ನಿನ್ನೆ ಮತ್ತೆ, ಷೇರು ಮಾರುಕಟ್ಟೆ ಏರಿಕೆ ಹಾದಿಗೆ ಮರಳಿದ್ದು ಚಿನ್ನದ ಬೆಲೆ ಸುಮಾರು 2000 ರೂಪಾಯಿ ಕುಸಿತ ಕಂಡಿದೆ! ಹಾಗಾದ್ರೆ ಈಗ ಯಾವ ಯಾವ ನಗರದಲ್ಲಿ ಎಷ್ಟಿದೆ ಚಿನ್ನದ ಬೆಲೆ? ಮುಂದೆ ಓದಿ.

ಹಳದಿ ಲೋಹ ಚಿನ್ನ ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ? ಆಭರಣದಿಂದ ಹಿಡ್ದು ಗೋಲ್ಡ್ ಬಿಸ್ಕೇಟ್ ತನಕ ಎಲ್ಲರಿಗೂ ಚಿನ್ನವು ಇಷ್ಟ. ಅತ್ತ ಚಿನ್ನಕ್ಕೆ ಭರ್ಜರಿ ಬೆಲೆ ಇದೆ ಅನ್ನೋದು ಒಂದು ಕಾರಣವಾಗಿದ್ದರೆ ಇನ್ನೊಂದ್ಕಡೆ ಚಿನ್ನ ಇತರ ಲೋಹಕ್ಕಿಂತ ಭಿನ್ನ ಚಿನ್ನ ಕಳೆದ ಕೆಲ ತಿಂಗಳಿಂದ ಭಾರಿ ಏರಿಕೆ ಕಾಣುತ್ತಿತ್ತು. ಈ ನಡುವೆ ಮತ್ತೆ ಕುಸಿತದ ಹಾದಿಗೆ ಮರಳಿದೆ. ಅದರಲ್ಲೂ ಈಗ ಭಾರತದಲ್ಲಿ ಸುಭದ್ರ ಸರ್ಕಾರ ರಚನೆಗೆ ಕಸರತ್ತು ಆರಂಭ ಆಗಿರುವ ಸಮಯದಲ್ಲೇ ಹೊಸ ಸಂಚಲನ ಸೃಷ್ಟಿ ಆಗಿದ್ದು, ಚಿನ್ನದ ಬೆಲೆಯಲ್ಲಿ ಭಾರಿ ಕುಸಿತವಾಗಿದೆ. ಹಾಗಾದ್ರೆ ಚಿನ್ನದ ಬೆಲೆ ಇಂದು ಎಷ್ಟಿದೆ?

Gold Price Has Been Decreased By 2000 Rupees On 6th June Of 2024

ಚಿನ್ನ 2000 ರೂಪಾಯಿ ಕುಸಿತ!

ಆಭರಣ ಚಿನ್ನ ಅಂದ್ರೆ 22 ಕ್ಯಾರೆಟ್ ಚಿನ್ನದ ಬೆಲೆ ಮಾರುಕಟ್ಟೆಯಲ್ಲಿ ಭಾರಿ ಕುಸಿತವನ್ನ ಕಂಡು, ಪ್ರತಿ 100 ಗ್ರಾಂ ಆಭರಣ ಚಿನ್ನದ ಬೆಲೆ ಈಗ 2000 ರೂಪಾಯಿ ಕುಸಿತ ಕಂಡಿದೆ. ಹಾಗೇ ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ಇದೀಗ 200 ರೂ. ನಷ್ಟು ಕಡಿತವಾಗಿದ್ದು. ಆಭರಣ ಚಿನ್ನದ ಬೆಲೆ ಕುಸಿತದ ನಂತರ ಪ್ರತಿ 10 ಗ್ರಾಂಗೆ 66,600 ರೂಪಾಯಿ ಬೆಲೆ ಇದ್ದು. 24 ಕ್ಯಾರೆಟ್ ಚಿನ್ನದ ಬೆಲೆ ಕೂಡ ಕುಸಿದು ಬಿದ್ದಿದೆ. ಈಗ 24 ಕ್ಯಾರೆಟ್ ಚಿನ್ನದ ಬೆಲೆ 100 ಗ್ರಾಂಗೆ 2200 ರೂಪಾಯಿ ಕುಸಿತ ಕಂಡಿದೆ.

ಬೆಳ್ಳಿ ಬೆಲೆಯಲ್ಲೂ ಕುಸಿತ

ಈ ಮೂಲಕ ಇದೀಗ 24 ಕ್ಯಾರೆಟ್ ಚಿನ್ನದ ಬೆಲೆ ಕೂಡ 72,650 ರೂಪಾಯಿ ಆಗಿದ್ದು, ಹಾಗೇ 18 ಕ್ಯಾರೆಟ್ ಚಿನ್ನದ ಬೆಲೆ ಕೂಡ ಕುಸಿತ ಕಂಡಿದೆ ಈ ಮೂಲಕ ಹಳದಿ ಲೋಹದ ಬೆಲೆಯು ಕುಸಿತದ ಹಾದಿ ಹಿಡಿದಿದೆ. ಇದರ ಜೊತೆಗೆ ಬೆಳ್ಳಿ ಬೆಲೆಯಲ್ಲಿ ಕೂಡ ಇಳಿಕೆ ಕಂಡಬರುತ್ತಿದ್ದು, ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿ ಚಿನ್ನದ ಬೆಲೆ ಇಳಿಕೆ ಕಾಣುವ ನಿರೀಕ್ಷೆ ಇದೆ. ಬೆಳ್ಳಿ ಬೆಲೆ ಇದೀಗ ಸುಮಾರು 2,300 ರೂಪಾಯಿ ಪ್ರತಿ ಕೆಜಿ ಲೆಕ್ಕದಲ್ಲಿ ಕುಸಿತ ಕಂಡು, 91,700 ರೂಪಾಯಿಗೆ, ಬೆಳ್ಳಿ ಪ್ರತಿ ಕೆಜಿಗೆ ಮಾರಾಟ ಆಗುತ್ತಿದೆ.

ಅಮೆರಿಕದ ಬಳಿ ಇದೆ ಅತಿಹೆಚ್ಚು ಚಿನ್ನ!

ಚಿನ್ನ ಜಗತ್ತಿನ ಪ್ರತಿಯೊಂದು ದೇಶಕ್ಕೂ ಬೇಕು, ಹೀಗಾಗಿ ಚಿನ್ನ ಸಂಗ್ರಹಣೆ ಬಗ್ಗೆ ಪ್ರಪಂಚ ಒತ್ತು ನೀಡುತ್ತದೆ. ಅದರಲ್ಲೂ ಜಗತ್ತಿನ ಅತ್ಯಂತ ಶ್ರೀಮಂತ ದೇಶ ಎಂಬ ಬಿರುದು ಪಡೆದ, ಅಮೆರಿಕ ಬಳಿ ಅತಿಹೆಚ್ಚು ಚಿನ್ನ ಇದೆ. ಅಮೆರಿಕ ಬಳಿ ಸುಮಾರು 8,133 ಟನ್ ಚಿನ್ನವಿದೆ. ಹಾಗಾದ್ರೆ ಭಾರತ ಈಗ ಎಷ್ಟನೇ ಸ್ಥಾನದಲ್ಲಿ ಇದೆ ಗೊತ್ತಾ? ಅತಿಹೆಚ್ಚು ಚಿನ್ನ ಹೊಂದಿರುವ ಸಂಪೂರ್ಣ ಟಾಪ್-10 ದೇಶಗಳ ಪಟ್ಟಿಗೆ ಮುಂದೆ ಓದಿ.

ಅಮೆರಿಕದ ನಂತರದ ಸ್ಥಾನದಲ್ಲಿ ಜರ್ಮನಿ ಇದ್ದು, 3,352 ಟನ್ ಚಿನ್ನವನ್ನು ಜರ್ಮನಿಯು ಹೊಂದಿದೆ. ಇಟಲಿ ಬಳಿ 2,451 ಟನ್, ಫ್ರಾನ್ಸ್ ಬಳಿ 2,436 ಟನ್, ರಷ್ಯಾ ಬಳಿ 2,332 ಟನ್, ಚೀನಾ ಬಳಿ 2,262 ಟನ್, ಸ್ವಿಜರ್ಲ್ಯಾಂಡ್ ಬಳಿ 1,040, ಜಪಾನ್ ಬಳಿ 845.97 ಟನ್ ಇದ್ದರೆ, ಭಾರತದ ಬಳಿ 822.09 ಟನ್ ಚಿನ್ನದ ಸಂಗ್ರಹ ಇದೆ. ಈ ಮೂಲಕ ಇಡೀ ಜಗತ್ತಿನಲ್ಲಿ ಅತಿಹೆಚ್ಚು ಚಿನ್ನ ಇರುವ ದೇಶಗಳ ಪೈಕಿ ಭಾರತ ಕೂಡ ಒಂದಾಗಿದೆ.

ಯಾವ ಯಾವ ನಗರದಲ್ಲಿ ಎಷ್ಟು?

ಭಾರತದಲ್ಲಿ ಮಾತ್ರವಲ್ಲ ಜಾಗತಿಕ ಮಾರುಕಟ್ಟೆಯಲ್ಲೂ ಚಿನ್ನದ ಬೆಲೆ ಏರಿಳಿತ ಕಂಡಿದ್ದು, ಈ ಮೂಲಕ ಆಭರಣ ಪ್ರಿಯರಿಗೆ ಖುಷಿ ಕೊಟ್ಟಿದೆ. ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಈಗ 72,650 ರೂಪಾಯಿ ಇದ್ದರೆ, ದೆಹಲಿಯಲ್ಲಿ ಶುದ್ಧ ಚಿನ್ನ ಪ್ರತಿ 10 ಗ್ರಾಂ ಬೆಲೆ 72,800 ರೂಪಾಯಿ ಆಗಿದೆ. ಮುಂಬೈನಲ್ಲಿ ಶುದ್ಧ ಚಿನ್ನ 10 ಗ್ರಾಂಗೆ 72,650 ರೂ. ಆಗಿದೆ. ಚೆನ್ನೈನಲ್ಲಿ ಶುದ್ಧ ಚಿನ್ನ 10 ಗ್ರಾಂ 73,360 ರೂಪಾಯಿ ಆಗಿದೆ. ಈ ಮೂಲಕ ವಿವಿಧ ನಗರಗಳಲ್ಲಿ ಈಗ ಚಿನ್ನದ ಬೆಲೆ ಕುಸಿತ ಕಂಡಿದೆ.

ಚಿನ್ನದ ಬೆಲೆ 1 ಲಕ್ಷ ರೂಪಾಯಿ ಆಗುತ್ತಾ?

ಚಿನ್ನ ಅನ್ನೋದು ಹೂಡಿಕೆ ಮಾಡುವವರಿಗೆ ಖಜಾನೆಯೇ ಎನ್ನುವಂತಾಗಿದೆ. ಯಾಕಂದ್ರೆ ಹಳದಿ ಲೋಹ ಅಂದರೆ ಚಿನ್ನದ ಮೇಲೆ ಹೂಡಿಕೆ ಮಾಡುವ ಯಾರಿಗೆ ಆದರೂ ಲಾಭ ಗ್ಯಾರಂಟಿ. ಹೀಗೆ ಚಿನ್ನ ಅನ್ನೋದು ಹೂಡಿಕೆದಾರರ ಜೇಬು ತುಂಬಿಸುವ ಅಕ್ಷಯ ಪಾತ್ರೆ ಆಗುತ್ತಿದೆ. ಆದರೆ ಚಿನ್ನ ಇಷ್ಟಪಡುವ ಮಹಿಳೆಯರಿಗೆ ಈ ವರ್ಷ ಆಘಾತ ಎದುರಾಗುವುದು ಗ್ಯಾರಂಟಿ ಅಂತಿದ್ದಾರೆ ತಜ್ಞರು. ಯಾಕಂದ್ರೆ ಚಿನ್ನದ ಬೆಲೆ ಈ ವರ್ಷ 1 ಲಕ್ಷ ರೂಪಾಯಿ ತಲುಪುವ ಸಾಧ್ಯತೆ ಹೆಚ್ಚಿದೆ. ಮತ್ತೊಂದು ಕಡೆ ಸದ್ಯದ ಸ್ಥಿತಿಯಲ್ಲಿ ಚಿನ್ನದ ಬೆಲೆ ಇಳಿಕೆ ಆಗುತ್ತಿರುವುದು ಚಿನ್ನ ಇಷ್ಟಪಡುವ ಮಹಿಳೆಯರಿಗೆ ಹಾಗೂ ಚಿನ್ನ ಪ್ರಿಯರಿಗೆ ಸಖತ್ ಸುದ್ದಿ ನೀಡಿದಂತೆ ಆಗಿದೆ.

ಚಿನ್ನದ ಬೆಲೆ 2 ಲಕ್ಷ ರೂಪಾಯಿ?

ಹೀಗಾಗಿಯೇ ಕಳೆದ ಕೆಲವು ತಿಂಗಳಿಂದಲು ಚಿನ್ನದ ಬೆಲೆಯಲ್ಲಿ ಏರಿಕೆ ಆಗುತ್ತಿದೆ. ಆದರೆ ಜೂನ್ ಆರಂಭದಲ್ಲೇ ಚಿನ್ನದ ಬೆಲೆ ಒಂದಷ್ಟು ಕಡಿಮೆ ಆಗಿತ್ತು. ಈಗ ಮತ್ತೆ ಭಾರಿ ಏರಿಕೆ ಕಾಣುತ್ತಿದೆ. ಅದರಲ್ಲೂ ಇರಾನ್ & ಇಸ್ರೇಲ್ ನಡುವೆ ಯುದ್ಧದ ಸ್ಥಿತಿ ನಿರ್ಮಾಣವಾಗಿ ಭಯ ಹುಟ್ಟಿಸಿತ್ತು. ಈ ಕಾರಣಕ್ಕೆ, ಚಿನ್ನದ ಬೆಲೆ ಮುಂದಿನ ಕೆಲವೇ ವರ್ಷದಲ್ಲಿ 2 ಲಕ್ಷ ರೂಪಾಯಿಗೆ ತಲುಪುವ ಸಾಧ್ಯತೆ ಕೂಡ ದಟ್ಟವಾಗಿದೆ.

5000 ವರ್ಷಗಳಿಂದ ಚಿನ್ನದ ಬಳಕೆ!

ಮನುಷ್ಯ ನಾಗರಿಕತೆ ಕಡೆಗೆ ಹೆಜ್ಜೆ ಹಾಕಿದ ನಂತರ ಚಿನ್ನವನ್ನು ಹೆಚ್ಚಾಗಿ ಬಳಸತೊಡಗಿದೆ. ಅದರಲ್ಲೂ ಚಿನ್ನದ ಬಳಕೆಗೆ ಸುಮಾರು 5000 ವರ್ಷಗಳ ಇತಿಹಾಸ ಇದೆ. ಹೀಗೆ ಚಿನ್ನವನ್ನ ಮನುಷ್ಯರು ಸಾವಿರಾರು ವರ್ಷಗಳಿಂದ ಬಳಕೆ ಮಾಡಿಕೊಂಡು ಬರುತ್ತಿದ್ದಾರೆ. ಹೀಗಾಗಿ ಈ ಹೊತ್ತಿಗೂ ಚಿನ್ನಕ್ಕೆ ಭಾರಿ ದೊಡ್ಡ ಗೌರವ ಮತ್ತು ಬೆಲೆ ಇದೆ. ಇತರ ಯಾವುದೇ ಲೋಹಕ್ಕೆ ಕೂಡ ಚಿನ್ನದಷ್ಟು ಮಾನ್ಯತೆ ನೀಡುವುದಿಲ್ಲ. ಆದರೆ ಚಿನ್ನಕ್ಕೆ ಮಾತ್ರ ಅತಿಹೆಚ್ಚು ಬೆಲೆಯು ಇದ್ದು, ಚಿನ್ನ ಮುಂದಿನ ದಿನಗಳಲ್ಲಿ ಮತ್ತಷ್ಟು ದುಬಾರಿ ಆಗುವುದು ಗ್ಯಾರಂಟಿ ಎನ್ನುತ್ತಾರೆ ತಜ್ಞರು. ಇದು ಆಭರಣ ಪ್ರಿಯರಿಗೆ ಬೇಸರ ತರಿಸಿದರೂ, ಚಿನ್ನದ ಮೇಲೆ ಹೂಡಿಕೆ ಮಾಡಿದ್ದ ಹೂಡಿಕೆದಾರರಿಗೆ ಚಿನ್ನದ ಬೆಲೆ ಏರಿಕೆ ಖುಷಿ ನೀಡುತ್ತಿದೆ.

ಚಿನ್ನದ ಬೆಲೆ ಕುಸಿದಿದ್ದು ಏಕೆ?

ಚರಿತ್ರೆಯಲ್ಲಿ ಯುದ್ಧಗಳು ನಡೆದಿರುವುದು ಚಿನ್ನಕ್ಕಾಗಿ ಹಾಗೂ ಅಮೂಲ್ಯ ವಸ್ತುಗಳಿಗೆ ಮಾತ್ರ. ಚಿನ್ನ ಒಂದು ಕಾಲದಲ್ಲಿ ನಾಣ್ಯ ಕೂಡ ಆಗಿತ್ತು. ಇದೀಗ ಚಿನ್ನ ಅನ್ನೋದು ಆಭರಣವಾಗಿ & ಬ್ಯಾಂಕ್ ಲಾಕರ್ ಒಳಗೆ ಮಾತ್ರ ಕಾಣಲು ಸಾಧ್ಯ. ಈ ಕಾರಣಕ್ಕೆ, ಚಿನ್ನ ಅನ್ನೋ ಹಳದಿ ಲೋಹದ ಬೆಲೆ ಆಕಾಶ ಮುಟ್ಟುತ್ತಿತ್ತು. ಆದರೆ ಈಗ ದಿಢೀರ್ ಅಂತಾ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಆಗಿದೆ. ಅದರಲ್ಲೂ ಒಂದೇ ದಿನ ಚಿನ್ನದ ಬೆಲೆ ಭರ್ಜರಿ 20,000 ರೂಪಾಯಿ ಕುಸಿತವನ್ನು ಕಂಡು ಆಭರಣ ಪ್ರಿಯರಿಗೆ ಭರ್ಜರಿ ಸುದ್ದಿ ನೀಡಿದೆ. ಮುಂದಿನ ದಿನಗಳಲ್ಲಿ, ಚಿನ್ನದ ಬೆಲೆಯ ಬಗ್ಗೆ ಚಿಂತೆ ಶುರುವಾಗಿದೆ.

ಯುದ್ಧದ ಕಾರಣಕ್ಕೆ ಬೆಲೆ ಏರಿಕೆ?

ಜಾಗತಿಕವಾಗಿ ಯುದ್ಧಗಳು ಶುರುವಾದಾಗ, ಮೊದಲು ಆ ಪರಿಣಾಮ ಬೀರುವುದು ಚಿನ್ನ ಮತ್ತು ಪೆಟ್ರೋಲ್, ಡಿಸೆಲ್ ಮೇಲೆ. ಯಾಕಂದ್ರೆ ಜಾಗತಿಕ ಆರ್ಥ ವ್ಯವಸ್ಥೆಯಲ್ಲಿ ಈ ವಸ್ತುಗಳು ದೊಡ್ಡ ಹಿಡಿತ ಹೊಂದಿವೆ. ಹೀಗಾಗಿಯೇ ಯುದ್ಧ ಶುರುವಾದ ತಕ್ಷಣ ಚಿನ್ನದ ರೂಪಕ್ಕೆ ತಮ್ಮ ಸಂಪತ್ತು ಅಂದರೆ ಹಣ ಬದಲಾಯಿಸಿ, ಸಂಗ್ರಹ ಮಾಡಲು ಜನಗಳು ಮುಂದಾಗುತ್ತಾರೆ. ಹಾಗೆ ದೇಶಗಳು ಕೂಡ ಅಪಾರ ಪ್ರಮಾಣದ ಚಿನ್ನ ಯುದ್ಧದ ವೇಳೆ ಬಂದಾಗ ಖರೀದಿ ಮಾಡುತ್ತವೆ. ಹೀಗಾಗಿಯೆ ಕಳೆದ ಕೆಲವು ತಿಂಗಳಿಂದ ಚಿನ್ನದ ಬೆಲೆಯಲ್ಲಿ ಏರಿಕೆ ಆಗುತ್ತಿದ್ದು, ಇದೀಗ ಚಿನ್ನ ಕುಸಿತವನ್ನು ಕಾಣುತ್ತಿದೆ.

ಬೆಳ್ಳಿ ಬೆಲೆಯಲ್ಲಿ ದಿಢೀರ್ ಇಳಿಕೆ!

ಚಿನ್ನ ಬಹು ಬೇಡಿಕೆಯ ವಸ್ತು, ಹೀಗಾಗಿಯೇ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗೆ ಚಿನ್ನ ಕೊಳ್ಳಲು ಜನಗಳು ಕೂಡ ಮುಗಿಬಿದ್ದು ಮುಂದೆ ಬರುತ್ತಿದ್ದಾರೆ. ಹೀಗಿದ್ದಾಗ ಚಿನ್ನದ ಜೊತೆ ಬೆಳ್ಳಿ ಬೆಲೆ ಕೂಡ ಭಾರಿ ಏರಿಕೆ ಕಾಣುತ್ತಿತ್ತು. ನೋಡ ನೋಡುತ್ತಲೇ ಬೆಳ್ಳಿ ಬೆಲೆ ಹತ್ತಿರ ಹತ್ತಿರ 1 ಲಕ್ಷ ರೂಪಾಯಿಗೆ ತಲುಪಿತ್ತು ಇಂತಹ ಸ್ಥಿತಿಯಲ್ಲಿ ಈಗ ದಿಢೀರ್ ಬೆಳ್ಳಿ ಬೆಲೆಯಲ್ಲಿ 1200 ರೂಪಾಯಿ ಕುಸಿತ ಕಂಡಿದೆ! ಮುಂದಿನ ದಿನಗಳಲ್ಲಿ ಬೆಳ್ಳಿಯ ಬೆಲೆ ಮತ್ತಷ್ಟು ಏರಿಕೆ ಕಾಣುವ ನಿರೀಕ್ಷೆಯು ಇದೆ. ಈ ನಡುವೆ ಬೆಳ್ಳಿ ಬೆಲೆ ಒಂದಷ್ಟು ಇಳಿಕೆ ಕಂಡಿರುವುದು, ಬೆಳ್ಳಿ ಇಷ್ಟಪಡುವವರಿಗೆ ಒಂದಷ್ಟು ಖುಷಿ ಕೊಟ್ಟಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+