Gold Price: 20,000 ರೂಪಾಯಿ ಕುಸಿತ ಕಂಡ ಚಿನ್ನದ ಬೆಲೆ!
ಚಿನ್ನ ಅನ್ನೋ ಹಳದಿ ಲೋಹದ ಬೆಲೆ ಆಕಾಶ ಮುಟ್ಟುತ್ತಿತ್ತು, ಆದ್ರೆ ಈಗ ದಿಢೀರ್ ಅಂತಾ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಆಗಿದೆ. ಅದರಲ್ಲೂ ಒಂದೇ ದಿನ ಚಿನ್ನದ ಬೆಲೆ ಭರ್ಜರಿ, 20,000 ರೂಪಾಯಿ ಕುಸಿತ ಕಂಡು ಆಭರಣ ಪ್ರಿಯರಿಗೆ ಭರ್ಜರಿ ಸುದ್ದಿ ನೀಡಿದೆ. ಹಾಗಾದ್ರೆ, ಇಂದು ಎಷ್ಟಿದೆ ಚಿನ್ನದ ಬೆಲೆ? ಮುಂದೆ ಓದಿ.
ಮನುಷ್ಯ ನಾಗರಿಕತೆ ಕಡೆ ಹೆಜ್ಜೆ ಹಾಕಿದ ನಂತರ ಚಿನ್ನವನ್ನ ಹೆಚ್ಚು ಬಳಸತೊಡಗಿದೆ. ಈ ಪೈಕಿ ಚಿನ್ನದ ಬಳಕೆಗೆ 5000 ವರ್ಷಗಳ ಇತಿಹಾಸ ಇದ್ದು, ಹೀಗೆ ಚಿನ್ನವನ್ನ ಮನುಷ್ಯರು ಸಾವಿರಾರು ವರ್ಷಗಳಿಂದ ಬಳಕೆ ಮಾಡಿಕೊಂಡು ಬರುತ್ತಿದ್ದಾರೆ. ಹೀಗಾಗಿಯೇ ಈ ಹೊತ್ತಿಗೂ ಚಿನ್ನಕ್ಕೆ ಭಾರಿ ದೊಡ್ಡ ಗೌರವ ಮತ್ತು ಬೆಲೆ ಇದೆ. ಈ ರೀತಿ ಯಾವುದೇ ಲೋಹಕ್ಕೆ ಕೂಡ ಚಿನ್ನದಷ್ಟು ಮಾನ್ಯತೆ ನೀಡಲ್ಲ. ಆದರೆ ಚಿನ್ನಕ್ಕೆ ಮಾತ್ರ ಹೆಚ್ಚು ಬೆಲೆ ಇದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ದುಬಾರಿ ಆಗುವುದು ಗ್ಯಾರಂಟಿ ಅಂತಿದ್ದರು ತಜ್ಞರು. ಆದರೆ ನಿನ್ನೆ ಒಂದೇ ದಿನ ಚಿನ್ನ ಭರ್ಜರಿ 20,000 ರೂಪಾಯಿ ಕುಸಿತ ಕಂಡಿದೆ.

ಚಿನ್ನ ಬೆಲೆ ಭಾರಿ ಕುಸಿತ!
ಒಡವೆ ಚಿನ್ನದ ಬೆಲೆ ಅಂದ್ರೆ 22 ಕ್ಯಾರೆಟ್ ಚಿನ್ನದ ಬೆಲೆ ಭಾರಿ ಕುಸಿತ ಕಂಡಿದ್ದು, ಪ್ರತಿ 100 ಗ್ರಾಂ ಆಭರಣ ಚಿನ್ನದ ಬೆಲೆ 19,000 ರೂಪಾಯಿಗೆ ಕುಸಿತ ಕಂಡಿದೆ. ಹಾಗೇ ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ಈಗ 1,900 ರೂ ಕಡಿತವಾಗಿದ್ದು, ಆಭರಣ ಚಿನ್ನದ ಬೆಲೆಯು ಕುಸಿತದ ನಂತರ 10 ಗ್ರಾಂಗೆ 66,700 ರೂಪಾಯಿ ಬೆಲೆ ಇದ್ದು. 24 ಕ್ಯಾರೆಟ್ ಚಿನ್ನದ ಬೆಲೆ ಕೂಡ ಕುಸಿದು ಬಿದ್ದಿದೆ. 24 ಕ್ಯಾರೆಟ್ ಚಿನ್ನದ ಬೆಲೆ 100 ಗ್ರಾಂಗೆ 20,800 ರೂಪಾಯಿ ಕುಸಿತ ಕಂಡಿದೆ.
ಬೆಳ್ಳಿ ಬೆಲೆಯಲ್ಲೂ ಕುಸಿತ
ಈಗ 24 ಕ್ಯಾರೆಟ್ ಚಿನ್ನದ ಬೆಲೆ ಕೂಡ 71,670 ರೂಪಾಯಿ ಆಗಿದ್ದು, 18 ಕ್ಯಾರೆಟ್ ಚಿನ್ನದ ಬೆಲೆ ಕೂಡ ಕುಸಿತ ಕಂಡು ಹಳದಿ ಲೋಹದ ಬೆಲೆ ಕುಸಿತದ ಹಾದಿಯನ್ನ ಹಿಡಿದಿದೆ ಇದರ ಜೊತೆ ಬೆಳ್ಳಿ ಬೆಲೆಯಲ್ಲಿ ಕೂಡ ಇಳಿಕೆ ಕಂಡಬರುತ್ತಿದ್ದು ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿ ಚಿನ್ನದ ಬೆಲೆ ಇಳಿಕೆ ಕಾಣುವ ನಿರೀಕ್ಷೆಯೂ ಇದೆ. ಬೆಳ್ಳಿ ಬೆಲೆ ಈಗ, ಸುಮಾರು 4500 ರೂಪಾಯಿ ಪ್ರತಿ ಕೆಜಿ ಲೆಕ್ಕದಲ್ಲಿ ಕುಸಿತ ಕಂಡು 91,500 ರೂಪಾಯಿಗೆ ಬೆಳ್ಳಿ ಪ್ರತಿ ಕೆಜಿಗೆ ಮಾರಾಟವಾಗುತ್ತಿದೆ.
ಅಮೆರಿಕದ ಬಳಿ ಇದೆ ಅತಿಹೆಚ್ಚು ಚಿನ್ನ!
ಚಿನ್ನ ಜಗತ್ತಿನ ಪ್ರತಿಯೊಂದು ದೇಶಕ್ಕೂ ಬೇಕು, ಹೀಗಾಗಿ ಚಿನ್ನ ಸಂಗ್ರಹಣೆ ಬಗ್ಗೆ ಪ್ರಪಂಚ ಒತ್ತು ನೀಡುತ್ತದೆ. ಅದರಲ್ಲೂ ಜಗತ್ತಿನ ಅತ್ಯಂತ ಶ್ರೀಮಂತ ದೇಶ ಎಂಬ ಬಿರುದು ಪಡೆದ, ಅಮೆರಿಕ ಬಳಿ ಅತಿಹೆಚ್ಚು ಚಿನ್ನ ಇದೆ. ಅಮೆರಿಕ ಬಳಿ ಸುಮಾರು 8,133 ಟನ್ ಚಿನ್ನವಿದೆ. ಹಾಗಾದ್ರೆ ಭಾರತ ಈಗ ಎಷ್ಟನೇ ಸ್ಥಾನದಲ್ಲಿ ಇದೆ ಗೊತ್ತಾ? ಅತಿಹೆಚ್ಚು ಚಿನ್ನ ಹೊಂದಿರುವ ಸಂಪೂರ್ಣ ಟಾಪ್-10 ದೇಶಗಳ ಪಟ್ಟಿಗೆ ಮುಂದೆ ಓದಿ.
ಅಮೆರಿಕದ ನಂತರದ ಸ್ಥಾನದಲ್ಲಿ ಜರ್ಮನಿ ಇದ್ದು, 3,352 ಟನ್ ಚಿನ್ನವನ್ನು ಜರ್ಮನಿಯು ಹೊಂದಿದೆ. ಇಟಲಿ ಬಳಿ 2,451 ಟನ್, ಫ್ರಾನ್ಸ್ ಬಳಿ 2,436 ಟನ್, ರಷ್ಯಾ ಬಳಿ 2,332 ಟನ್, ಚೀನಾ ಬಳಿ 2,262 ಟನ್, ಸ್ವಿಜರ್ಲ್ಯಾಂಡ್ ಬಳಿ 1,040, ಜಪಾನ್ ಬಳಿ 845.97 ಟನ್ ಇದ್ದರೆ, ಭಾರತದ ಬಳಿ 822.09 ಟನ್ ಚಿನ್ನದ ಸಂಗ್ರಹ ಇದೆ. ಈ ಮೂಲಕ ಇಡೀ ಜಗತ್ತಿನಲ್ಲಿ ಅತಿಹೆಚ್ಚು ಚಿನ್ನ ಇರುವ ದೇಶಗಳ ಪೈಕಿ ಭಾರತ ಕೂಡ ಒಂದಾಗಿದೆ.
ಚಿನ್ನದ ಬೆಲೆ ಕುಸಿದಿದ್ದು ಏಕೆ?
ಚರಿತ್ರೆಯಲ್ಲಿ ಯುದ್ಧಗಳು ನಡೆದಿರುವುದು ಚಿನ್ನಕ್ಕಾಗಿ ಹಾಗೂ ಅಮೂಲ್ಯ ವಸ್ತುಗಳಿಗೆ ಮಾತ್ರ. ಚಿನ್ನ ಒಂದು ಕಾಲದಲ್ಲಿ ನಾಣ್ಯ ಕೂಡ ಆಗಿತ್ತು. ಇದೀಗ ಚಿನ್ನ ಅನ್ನೋದು ಆಭರಣವಾಗಿ & ಬ್ಯಾಂಕ್ ಲಾಕರ್ ಒಳಗೆ ಮಾತ್ರ ಕಾಣಲು ಸಾಧ್ಯ. ಈ ಕಾರಣಕ್ಕೆ, ಚಿನ್ನ ಅನ್ನೋ ಹಳದಿ ಲೋಹದ ಬೆಲೆ ಆಕಾಶ ಮುಟ್ಟುತ್ತಿತ್ತು. ಆದರೆ ಈಗ ದಿಢೀರ್ ಅಂತಾ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಆಗಿದೆ. ಅದರಲ್ಲೂ ಒಂದೇ ದಿನ ಚಿನ್ನದ ಬೆಲೆ ಭರ್ಜರಿ 20,000 ರೂಪಾಯಿ ಕುಸಿತವನ್ನು ಕಂಡು ಆಭರಣ ಪ್ರಿಯರಿಗೆ ಭರ್ಜರಿ ಸುದ್ದಿ ನೀಡಿದೆ. ಮುಂದಿನ ದಿನಗಳಲ್ಲಿ, ಚಿನ್ನದ ಬೆಲೆಯ ಬಗ್ಗೆ ಚಿಂತೆ ಶುರುವಾಗಿದೆ.
ಯುದ್ಧದ ಕಾರಣಕ್ಕೆ ಬೆಲೆ ಏರಿಕೆ?
ಜಾಗತಿಕವಾಗಿ ಯುದ್ಧಗಳು ಶುರುವಾದಾಗ, ಮೊದಲು ಆ ಪರಿಣಾಮ ಬೀರುವುದು ಚಿನ್ನ ಮತ್ತು ಪೆಟ್ರೋಲ್, ಡಿಸೆಲ್ ಮೇಲೆ. ಯಾಕಂದ್ರೆ ಜಾಗತಿಕ ಆರ್ಥ ವ್ಯವಸ್ಥೆಯಲ್ಲಿ ಈ ವಸ್ತುಗಳು ದೊಡ್ಡ ಹಿಡಿತ ಹೊಂದಿವೆ. ಹೀಗಾಗಿಯೇ ಯುದ್ಧ ಶುರುವಾದ ತಕ್ಷಣ ಚಿನ್ನದ ರೂಪಕ್ಕೆ ತಮ್ಮ ಸಂಪತ್ತು ಅಂದರೆ ಹಣ ಬದಲಾಯಿಸಿ, ಸಂಗ್ರಹ ಮಾಡಲು ಜನಗಳು ಮುಂದಾಗುತ್ತಾರೆ. ಹಾಗೆ ದೇಶಗಳು ಕೂಡ ಅಪಾರ ಪ್ರಮಾಣದ ಚಿನ್ನ ಯುದ್ಧದ ವೇಳೆ ಬಂದಾಗ ಖರೀದಿ ಮಾಡುತ್ತವೆ. ಹೀಗಾಗಿಯೆ ಕಳೆದ ಕೆಲವು ತಿಂಗಳಿಂದ ಚಿನ್ನದ ಬೆಲೆಯಲ್ಲಿ ಏರಿಕೆ ಆಗುತ್ತಿದ್ದು, ಇದೀಗ ಚಿನ್ನ ಕುಸಿತವನ್ನು ಕಾಣುತ್ತಿದೆ.
ಬೆಳ್ಳಿ ಬೆಲೆಯಲ್ಲಿ ದಿಢೀರ್ ಇಳಿಕೆ!
ಚಿನ್ನ ಬಹು ಬೇಡಿಕೆಯ ವಸ್ತು, ಹೀಗಾಗಿಯೇ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗೆ ಚಿನ್ನ ಕೊಳ್ಳಲು ಜನಗಳು ಕೂಡ ಮುಗಿಬಿದ್ದು ಮುಂದೆ ಬರುತ್ತಿದ್ದಾರೆ. ಹೀಗಿದ್ದಾಗ ಚಿನ್ನದ ಜೊತೆ ಬೆಳ್ಳಿ ಬೆಲೆ ಕೂಡ ಭಾರಿ ಏರಿಕೆ ಕಾಣುತ್ತಿತ್ತು. ನೋಡ ನೋಡುತ್ತಲೇ ಬೆಳ್ಳಿ ಬೆಲೆ ಹತ್ತಿರ ಹತ್ತಿರ 1 ಲಕ್ಷ ರೂಪಾಯಿಗೆ ತಲುಪಿತ್ತು ಇಂತಹ ಸ್ಥಿತಿಯಲ್ಲಿ ಈಗ ದಿಢೀರ್ ಬೆಳ್ಳಿ ಬೆಲೆಯಲ್ಲಿ 1200 ರೂಪಾಯಿ ಕುಸಿತ ಕಂಡಿದೆ! ಮುಂದಿನ ದಿನಗಳಲ್ಲಿ ಬೆಳ್ಳಿಯ ಬೆಲೆ ಮತ್ತಷ್ಟು ಏರಿಕೆ ಕಾಣುವ ನಿರೀಕ್ಷೆಯು ಇದೆ. ಈ ನಡುವೆ ಬೆಳ್ಳಿ ಬೆಲೆ ಒಂದಷ್ಟು ಇಳಿಕೆ ಕಂಡಿರುವುದು, ಬೆಳ್ಳಿ ಇಷ್ಟಪಡುವವರಿಗೆ ಒಂದಷ್ಟು ಖುಷಿ ಕೊಟ್ಟಿದೆ.
ಹಳದಿ ಲೋಹ ಎಲ್ಲರಿಗೂ ಇಷ್ಟ!
ಚಿನ್ನ ಭಾರತೀಯರ ಪಾಲಿಗೆ ತುರ್ತು ಹಣ ಇದ್ದಂತೆ, ಯಾಕಂದ್ರೆ ಯಾವುದೇ ತುರ್ತು ಸ್ಥಿತಿ ಎದುರಾಗಿ ಪರದಾಟ ಶುರುವಾದರೂ ಭಾರತೀಯರು ಮೊದಲು ತಮ್ಮ ಬಳಿ ಇರುವ ಚಿನ್ನ, ಮತ್ತು ಬೆಳ್ಳಿ ಮೊರೆ ಹೋಗುತ್ತಾರೆ. ಯಾಕಂದ್ರೆ ತುರ್ತು ಪರಿಸ್ಥಿತಿಯಲ್ಲಿ, ಎಲ್ಲಿಯೂ ಹಣ ಸಿಗದೇ ಇದ್ದರೆ ನಮ್ಮ ಬಳಿ ಇರುವ ಚಿನ್ನ & ಬೆಳ್ಳಿಗೆ ಬೇಡಿಕೆ ಬಂದೇ ಬರುತ್ತದೆ. ಹೀಗಾಗಿಯೇ ಬಹುತೇಕ ಭಾರತೀಯರು ಚಿನ್ನದ ಮೇಲೆ ಹೂಡಿಕೆ ಮಾಡುತ್ತಾ ಬಂದಿದ್ದಾರೆ. ಮತ್ತೊಂದು ಕಡೆ ಚಿನ್ನದ ಮೇಲೆ ಹೂಡಿಕೆ ಮಾಡುವ ಪ್ರತಿಯೊಬ್ಬರಿಗೂ, ಹಳದಿ ಲೋಹ ಬೆನ್ನೆಲುಬಾಗಿ ನಿಂತಿದೆ. ಮುಂದಿನ ದಿನಗಳಲ್ಲಿ ಹಳದಿ ಲೋಹ ಅಂದ್ರೆ ಚಿನ್ನ ಮತ್ತಷ್ಟು ಎತ್ತರಕ್ಕೆ ಹೋಗುವ ನಿರೀಕ್ಷೆ ದಟ್ಟವಾಗಿದೆ.












Click it and Unblock the Notifications