Gold Price: ಚಿನ್ನದ ಬೆಲೆ 67,450 & ಬೆಳ್ಳಿ ಬೆಲೆ ಈಗ ಎಷ್ಟಿದೆ?

ಚಿನ್ನದ ಬೆಲೆ ಮತ್ತೆ ಕುಸಿತ ಕಾಣಲು ಆರಂಭ ಮಾಡಿದೆ. ಅದರಲ್ಲೂ ಇನ್ನೇನು ಶುಭಕಾರ್ಯ ಆರಂಭ ಆಗಲಿರುವ ಸಮಯದಲ್ಲೇ ಇದೀಗ ಭರ್ಜರಿ ಸುದ್ದಿ ಒಂದು ಸಿಕ್ಕಿದ್ದು, ಚಿನ್ನದ ರೇಟ್ ನಿನ್ನೆ ಮತ್ತೊಮ್ಮೆ ಕುಸಿತ ಕಂಡಿದೆ. ಹಾಗಾದ್ರೆ ಈಗ ಎಷ್ಟಿದೆ ಚಿನ್ನದ ಬೆಲೆ? ಬನ್ನಿ ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿ ತಿಳಿಯೋಣ.

ಕಳೆದ ಕೆಲವು ತಿಂಗಳಿಂದ ನಿರಂತರವಾಗಿ ಚಿನ್ನದ ಬೆಲೆಯಲ್ಲಿ ಏರಿಳಿತ ಆಗುತ್ತಿದೆ. ಅದ್ರಲ್ಲೂ ಲೋಕಸಭೆ ಚುನಾವಣೆ ನಂತರ ಬಂಗಾರದ ಬೆಲೆ ಏರಿಕೆ ಕಂಡಿದ್ದಕ್ಕಿಂತ ಹೆಚ್ಚಾಗಿ ಇಳಿಕೆಯ ಹಾದಿಗೆ ಮರಳಿದ್ದೇ ಜಾಸ್ತಿ. ಹೀಗಾಗಿ, ಚಿನ್ನದ ಬೆಲೆ ದಿನದಿಂದ ದಿನಕ್ಕೆ ಭಾರಿ ಪ್ರಮಾಣದಲ್ಲಿ ಕುಸಿತ ಕಾಣುತ್ತಿದೆ. ಹೀಗಾಗಿ ಬಂಗಾರ ಖರೀದಿ ಮಾಡಲು ಕಾಯುತ್ತಿದ್ದ ಜನರಿಗೆ ಕೂಡ ಈ ಮೂಲಕ ಗುಡ್ ನ್ಯೂಸ್ ಸಿಕ್ಕಂತಾಗಿದೆ. ಹಾಗಾದ್ರೆ ಈಗ ಎಷ್ಟಿದೆ ಚಿನ್ನ & ಬೆಳ್ಳಿ ರೇಟ್? ಆ ಬಗ್ಗೆ ಮಾಹಿತಿ ಇಲ್ಲಿದೆ ಮುಂದೆ ಓದಿ.

Gold Price Has Been Decreased This Much On 9th July Of 2024

ಬಂಗಾರದ ಬೆಲೆ ಈಗ ಇಷ್ಟಿದೆ ನೋಡಿ!

22 ಕ್ಯಾರೆಟ್ ಚಿನ್ನದ ಬೆಲೆ ಕುಸಿತ ಕಂಡಿದೆ. ನಿನ್ನೆ 22 ಕ್ಯಾರೆಟ್ ಚಿನ್ನದ ಬೆಲೆ 100 ಗ್ರಾಂಗೆ 2,000 ರೂಪಾಯಿ ಕುಸಿತ ಕಂಡು ಹೀಗೆ ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ 200 ರೂ. ಕಡಿತವಾಗಿದೆ. ಆಭರಣ ಚಿನ್ನ ಬೆಲೆ ಕುಸಿತದ ಬಳಿಕ ಪ್ರತಿ 10 ಗ್ರಾಂಗೆ 67,450 ರೂಪಾಯಿ ಇದ್ದು. 24 ಕ್ಯಾರೆಟ್ ಚಿನ್ನದ ಬೆಲೆ ಕೂಡ ಕುಸಿದು ಬಿದ್ದು, ಚಿನ್ನ ಖರೀದಿಗೆ ಕಾಯುತ್ತಿದ್ದ ಜನರಿಗೆ ಖುಷಿ ಕೊಟ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ 100 ಗ್ರಾಂಗೆ 2,200 ರೂಪಾಯಿ ಕುಸಿತ ಕಂಡಿದೆ.

ಬೆಳ್ಳಿ ಬೆಲೆ ಹೇಗಿದೆ ಈಗ?

24 ಕ್ಯಾರೆಟ್ ಚಿನ್ನದ ಬೆಲೆ ಇದೀಗ 73,580 ರೂಪಾಯಿ ಆಗಿದ್ದು, 18 ಕ್ಯಾರೆಟ್‌ನ ಚಿನ್ನದ ಬೆಲೆ ಕೂಡ ಕುಸಿತ ಕಂಡಿದೆ. ಹೀಗೆ ಹಳದಿ ಲೋಹದ ಬೆಲೆ ಕುಸಿತದ ಹಾದಿ ಹಿಡಿದಿದೆ. ಇದರ ಜೊತೆಗೆ ಬೆಳ್ಳಿ ಬೆಲೆ ಏರಿಕೆ ಕಂಡಿದ್ದು, ಆದರೆ ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿ ಚಿನ್ನದ ಬೆಲೆ ಇಳಿಕೆ ಕಾಣುವ ನಿರೀಕ್ಷೆ ಇದೆ. ಬೆಳ್ಳಿ ಬೆಲೆ ಸುಮಾರು 100 ರೂಪಾಯಿ ಪ್ರತಿ ಕೆಜಿಗೆ ಏರಿಕೆ ಕಂಡು 94,600 ರೂಪಾಯಿಗೆ ಬೆಳ್ಳಿ ಪ್ರತಿ ಕೆಜಿಗೆ ಮಾರಾಟ ಆಗುತ್ತಿದೆ.

ಚಿನ್ನ ಇದ್ದರೆ ಕಷ್ಟಕಾಲದ ಬಂಧು!

ಭಾರತೀಯರಿಗೆ ಸಾಮಾನ್ಯವಾಗಿ ಚಿನ್ನ ಅಂದ್ರೆ ತುಂಬಾ ಇಷ್ಟ, ಅದರಲ್ಲೂ ಆಭರಣಗಳನ್ನು ತಮ್ಮ ಮೈಮೇಲೆ ಹಾಕಲು ಭಾರತೀಯರು ತುಂಬಾ ಇಷ್ಟಪಡುತ್ತಾರೆ. ಹೀಗೆ ಭಾರತೀಯರಲ್ಲಿ ಚಿನ್ನದ ಬಗ್ಗೆ ತುಂಬಾ ಕುತೂಹಲ ಇರುತ್ತದೆ. ಇದೆಲ್ಲವನ್ನೂ ಮೀರಿ ಚಿನ್ನ ಅನ್ನೋದು ಕಷ್ಟದ ಸಮಯ ಬಂದಾಗ ಸಹಾಯಕ್ಕೆ ಬರುವ ಬಂಧು ಅಥವಾ ಸ್ನೇಹಿತ ಇದ್ದಂತೆ. ಎಲ್ಲೂ ಹಣವನ್ನು ಹೊಂದಿಸಲು ಆಗದ ಸ್ಥಿತಿ ಬಂದಾಗ, ತುರ್ತು ಸಂದರ್ಭದಲ್ಲಿ ಚಿನ್ನವನ್ನು ಅಡ ಇಟ್ಟು ಅಥವಾ ಚಿನ್ನ ಮಾರಿ ಹಣ ಪಡೆಯಬಹುದು. ಈ ಮೂಲಕ ತುರ್ತು ಸಮಯದಲ್ಲಿ ಜೀವ ಉಳಿಸೋದಕ್ಕೆ ಚಿನ್ನ ಸಹಾಯಕ. ಈ ಎಲ್ಲಾ ಕಾರಣಕ್ಕೆ ಚಿನ್ನ ಖರೀದಿ ಅಥವಾ ಚಿನ್ನದ ಮೇಲೆಯೇ ಈ ರೀತಿ ಹೆಚ್ಚಾಗಿ ಹೂಡಿಕೆ ಮಾಡಲು ಪ್ರಮುಖ ಕಾರಣ ಎನ್ನಲಾಗುತ್ತದೆ.

5000 ವರ್ಷಗಳಿಂದ ಚಿನ್ನದ ಬಳಕೆ!

ಮನುಷ್ಯ ನಾಗರಿಕತೆ ಕಡೆಗೆ ಹೆಜ್ಜೆ ಹಾಕಿದ ನಂತರ ಚಿನ್ನವನ್ನು ಹೆಚ್ಚಾಗಿ ಬಳಸತೊಡಗಿದೆ. ಅದರಲ್ಲೂ ಚಿನ್ನದ ಬಳಕೆಗೆ ಸುಮಾರು 5000 ವರ್ಷಗಳ ಇತಿಹಾಸ ಇದೆ. ಹೀಗೆ ಚಿನ್ನವನ್ನ ಮನುಷ್ಯರು ಸಾವಿರಾರು ವರ್ಷಗಳಿಂದ ಬಳಕೆ ಮಾಡಿಕೊಂಡು ಬರುತ್ತಿದ್ದಾರೆ. ಹೀಗಾಗಿ ಈ ಹೊತ್ತಿಗೂ ಚಿನ್ನಕ್ಕೆ ಭಾರಿ ದೊಡ್ಡ ಗೌರವ ಮತ್ತು ಬೆಲೆ ಇದೆ. ಇತರ ಯಾವುದೇ ಲೋಹಕ್ಕೆ ಕೂಡ ಚಿನ್ನದಷ್ಟು ಮಾನ್ಯತೆ ನೀಡುವುದಿಲ್ಲ. ಆದರೆ ಚಿನ್ನಕ್ಕೆ ಮಾತ್ರ ಅತಿಹೆಚ್ಚು ಬೆಲೆಯು ಇದ್ದು, ಚಿನ್ನ ಮುಂದಿನ ದಿನಗಳಲ್ಲಿ ಮತ್ತಷ್ಟು ದುಬಾರಿ ಆಗುವುದು ಗ್ಯಾರಂಟಿ ಎನ್ನುತ್ತಾರೆ ತಜ್ಞರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+