Gold Price: ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ, ಈಗ ಎಷ್ಟಿದೆ ಬೆಲೆ?
ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ ಕಂಡುಬಂದಿದೆ, ಈ ಮೂಲಕ ಚಿನ್ನದ ಬೆಲೆಯಲ್ಲಿ ನಿರಂತರ ಕುಸಿತ ಎದುರಾಗಿದೆ. ಕಳೆದ ಕೆಲವು ದಿನಗಳಿಂದ ಹಳದಿ ಲೋಹ ಎಂದು ಕರೆಸಿಕೊಳ್ಳುವ ಚಿನ್ನ ಬೆಲೆ ಭಾರಿ ಕುಸಿತ ಕಾಣುತ್ತಿದೆ. ಹಾಗಾದ್ರೆ ಇದೀಗ ಎಷ್ಟಿದೆ ಚಿನ್ನದ ಬೆಲೆ? ಪೂರ್ಣ ಮಾಹಿತಿಗಾಗಿ ಮುಂದೆ ಓದಿ.
ಚಿನ್ನದ ಬೆಲೆ ಮತ್ತೊಮ್ಮೆ ಭಾರಿ ಕುಸಿತ ಕಂಡಿದ್ದು, ಈ ಮೂಲಕ ಚಿನ್ನ ಕೊಳ್ಳಲು ಸುವರ್ಣಾವಕಾಶ ಒದಗಿ ಬಂದಿದೆ. ಚಿನ್ನದ ಬೆಲೆ ಕಳೆದ ಕೆಲ ದಿನಗಳಿಂದ ಪಾತಾಳ ಸೇರುತ್ತಿದೆ ಹೀಗಿದ್ದಾಗ ಈಗ ಕೂಡ, ಚಿನ್ನದ ಬೆಲೆ ದಿಢೀರ್ ಕುಸಿತ ಕಂಡಿದೆ. ಕಳೆದ 1 ದಶಕದಲ್ಲಿ ಚಿನ್ನದ ಬೆಲೆ, ಸಾಕಷ್ಟು ಬದಲಾವಣೆ ಕಂಡಿದೆ. ಮುಂದಿನ ದಿನಗಳಲ್ಲಿ ಚಿನ್ನಕ್ಕೆ ಭಾರಿ ಬೇಡಿಕೆ ಬರುವ ಸಾಧ್ಯತೆ ಇದೆ ಎನ್ನಲಾಗಿತ್ತು. ಹೀಗೆ ಎಲ್ಲಾ ವಿಶ್ವಾಸದ ನಂತರವೂ ಚಿನ್ನದ ಬೆಲೆಯು ಕುಸಿತದ ಕಡೆಗೆ ಮುಖ ಮಾಡುತ್ತಿರುವುದು ಹೂಡಿಕೆ ಮಾಡುವವರಿಗೆ ಟೆನ್ಷನ್ ಕೂಡ ಕೊಡುತ್ತಿದೆ. ಹಾಗಾದ್ರೆ ಇಂದು ಎಷ್ಟಿದೆ ಚಿನ್ನಕ್ಕೆ ಬೆಲೆ?

ಚಿನ್ನದ ಬೆಲೆ ಎಷ್ಟಿದೆ ಈಗ?
100 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 2,200 ರೂಪಾಯಿ ಕುಸಿತ ಕಂಡಿದ್ದು, 7,23,300 ರೂಪಾಯಿ ಲೆಕ್ಕದಲ್ಲಿ ಮಾರಾಟ ಆಗುತ್ತಿದೆ. ಹಾಗೇ 100 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 2,000 ರೂ. ಕುಸಿತ ಕಂಡು 6,63,000 ರೂಪಾಯಿಗೆ ಮಾರಾಟ ಆಗುತ್ತಿದೆ. ಹಾಗೇ 18 ಕ್ಯಾರೆಟ್ ಬೆಲೆ ಕೂಡ ಕುಸಿದಿದೆ. ಚಿನ್ನ ಇದೀಗ ಆಧುನಿಕ ಕಾಲದಲ್ಲಿ ಅತ್ಯವಶ್ಯಕ ವಸ್ತು ಎನಿಸಿಕೊಂಡಿದ್ದು. ಹೀಗಿದ್ದಾಗ ಚಿನ್ನದ ಬೆಲೆ ಇಳಿಕೆ ಕಂಡು 24 ಕ್ಯಾರೆಟ್ ಚಿನ್ನದ ಬೆಲೆ 72,330 ರೂಪಾಯಿಗೆ 10 ಗ್ರಾಂ ರೀತಿ ಮಾರಾಟ ಆಗುತ್ತಿದೆ. ಹಾಗೇ 22 ಕ್ಯಾರೆಟ್ ಚಿನ್ನದ ಬೆಲೆಯು 66,300 ರೂಪಾಯಿಗೆ 10 ಗ್ರಾಂ ರೀತಿ ಮಾರುಕಟ್ಟೆ ಬೆಲೆಯಲ್ಲಿ ಸೇಲ್ ಆಗುತ್ತಿದೆ.
ಬೆಳ್ಳಿ ಬೆಲೆಯಲ್ಲಿ ದಿಢೀರ್ ಇಳಿಕೆ!
ಚಿನ್ನ ಬಹು ಬೇಡಿಕೆಯ ವಸ್ತು, ಹೀಗಾಗಿ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗೆ ಚಿನ್ನ ಖರೀದಿಗೆ ಜನ ಕೂಡ ಮುಗಿಬಿದ್ದು ಮುಂದೆ ಬರುತ್ತಿದ್ದಾರೆ. ಹೀಗಿದ್ದಾಗ ಚಿನ್ನದ ಜೊತೆ ಬೆಳ್ಳಿ ಬೆಲೆ ಕೂಡ ಭಾರಿ ಏರಿಕೆ ಕಾಣುತ್ತಿತ್ತು. ನೋಡ ನೋಡುತ್ತಲೇ ಬೆಳ್ಳಿ ಬೆಲೆ ಹತ್ತಿರ ಹತ್ತಿರ 1 ಲಕ್ಷ ರೂಪಾಯಿಗೆ ತಲುಪಿತ್ತು ಇಂತಹ ಸ್ಥಿತಿಯಲ್ಲಿ ಈಗ ದಿಢೀರ್ ಬೆಳ್ಳಿ ಬೆಲೆಯಲ್ಲಿ ಕುಸಿತ ಕಂಡಿದೆ! ಮುಂದಿನ ದಿನಗಳಲ್ಲಿ ಬೆಳ್ಳಿಯ ಬೆಲೆ ಮತ್ತಷ್ಟು ಇಳಿಕೆ ಕಾಣುವ ನಿರೀಕ್ಷೆ ಇದೆ. ಈ ಮಧ್ಯೆ ಬೆಳ್ಳಿ ಬೆಲೆ ಒಂದಷ್ಟು ಇಳಿಕೆ ಕಂಡಿರುವುದು ಬೆಳ್ಳಿ ಇಷ್ಟಪಡುವವರಿಗೆ ಸಖತ್ ಖುಷಿ ಕೊಟ್ಟಿದೆ.
ಒಟ್ನಲ್ಲಿ ಚಿನ್ನದ ಬೆಲೆ ಕುಸಿತದ ಹಾದಿಯಲ್ಲಿದ್ದು, ದಿನದಿಂದ ದಿನಕ್ಕೆ ಭಾರಿ ಕುಸಿತ ಕಾಣುತ್ತಿದೆ ಚಿನ್ನ. ಚಿನ್ನಕ್ಕೆ ಬೇಡಿಕೆ ಹೆಚ್ಚಾಗಿದ್ದರೂ ಚಿನ್ನ ಮಾತ್ರ ಈಗ ಮಾರುಕಟ್ಟೆ ದರದಲ್ಲಿ ಕುಸಿತ ಕಾಣುತ್ತಿದೆ. ಹೀಗೆ ಚಿನ್ನದ ಬೆಲೆ ಕುಸಿತ ಕಾಣುತ್ತಿರುವುದು ಆಭರಣ ಖರೀದಿಗೆ ಕಾದು ಕೂತಿದ್ದವರಿಗೆ ಫುಲ್ ಖುಷಿ ಕೊಟ್ಟು ಆಭರಣದ ಅಂಗಡಿಗೆ ಕೈಬೀಸಿ ಕರೆದಂತಿದೆ.
ಚಿನ್ನ ಈಗ ಅಂತಾರಾಷ್ಟ್ರೀಯ ಕರೆನ್ಸಿ?
ಪ್ರಪಂಚದ ಮಟ್ಟದಲ್ಲಿ ಈಗ ಚಿನ್ನಕ್ಕೆ ಯಾಕೆ ಇಷ್ಟು ಬೆಲೆ ಬಂದಿದೆ ಎಂದರೆ, ಯುದ್ಧಗಳು ಶುರುವಾದ ನಂತರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಟ್ಟಿಯಾದ ಕರೆನ್ಸಿ ಇಲ್ಲವಾಗಿದ್ದು. ಈ ಕಾರಣಕ್ಕೆ ಈಗ ಚಿನ್ನದ ಮೇಲೆ ಜನರಿಗೆ ತುಂಬಾ ನಂಬಿಕೆ ಬಂದಿದೆ. ಹೀಗಾಗಿ ಜನರು ಕೂಡ ಚಿನ್ನ ಖರೀದಿಗೆ ಮುಗಿ ಬೀಳುತ್ತಿದ್ದಾರೆ. ಹೀಗಾಗಿ ಏಪ್ರಿಲ್ ತಿಂಗಳಲ್ಲಿ ಚಿನ್ನ ಸಾಕಷ್ಟು ಏರಿಕೆ ಕಂಡಿತ್ತು. ಆದರೆ, ಇದೀಗ ಚಿನ್ನದ ಬೆಲೆ ಇಳಿಕೆ ಕಾಣುತ್ತಿದೆ. ಇಸ್ರೇಲ್ & ಇರಾನ್ ಯುದ್ಧ ನಡೆಯಲ್ಲ ಎಂಬ ನಂಬಿಕೆ ಸಿಕ್ಕ ನಂತರ ಚಿನ್ನದ ಬೆಲೆ ಇಳಿಕೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಜನರು ಕೂಡ ಚಿನ್ನ ಖರೀದಿಯನ್ನು ಆರಾಮವಾಗಿ ಮಾಡಬಹುದು ಎಂಬ ಅಭಿಪ್ರಾಯ ಕೇಳಿಬಂದಿದೆ.
ಹಳದಿ ಲೋಹ ಎಲ್ಲರಿಗೂ ಇಷ್ಟ!
ಚಿನ್ನ ಭಾರತೀಯರ ಪಾಲಿಗೆ ತುರ್ತು ಹಣ ಇದ್ದಂತೆ, ಯಾಕಂದ್ರೆ ಯಾವುದೇ ತುರ್ತು ಸ್ಥಿತಿ ಎದುರಾಗಿ ಪರದಾಟ ಶುರುವಾದರೂ ಭಾರತೀಯರು ಮೊದಲು ತಮ್ಮ ಬಳಿ ಇರುವ ಚಿನ್ನ, ಮತ್ತು ಬೆಳ್ಳಿ ಮೊರೆ ಹೋಗುತ್ತಾರೆ. ಯಾಕಂದ್ರೆ ತುರ್ತು ಪರಿಸ್ಥಿತಿಯಲ್ಲಿ, ಎಲ್ಲಿಯೂ ಹಣ ಸಿಗದೇ ಇದ್ದರೆ ನಮ್ಮ ಬಳಿ ಇರುವ ಚಿನ್ನ & ಬೆಳ್ಳಿಗೆ ಬೇಡಿಕೆ ಬಂದೇ ಬರುತ್ತದೆ. ಹೀಗಾಗಿಯೇ ಬಹುತೇಕ ಭಾರತೀಯರು ಚಿನ್ನದ ಮೇಲೆ ಹೂಡಿಕೆ ಮಾಡುತ್ತಾ ಬಂದಿದ್ದಾರೆ. ಮತ್ತೊಂದು ಕಡೆ ಚಿನ್ನದ ಮೇಲೆ ಹೂಡಿಕೆ ಮಾಡುವ ಪ್ರತಿಯೊಬ್ಬರಿಗೂ, ಹಳದಿ ಲೋಹ ಬೆನ್ನೆಲುಬಾಗಿ ನಿಂತಿದೆ. ಮುಂದಿನ ದಿನಗಳಲ್ಲಿ ಹಳದಿ ಲೋಹ ಅಂದ್ರೆ ಚಿನ್ನ ಮತ್ತಷ್ಟು ಎತ್ತರಕ್ಕೆ ಹೋಗುವ ನಿರೀಕ್ಷೆ ದಟ್ಟವಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ












Click it and Unblock the Notifications