Gold Price: ಚಿನ್ನದ ಬೆಲೆಯಲ್ಲಿ 3,800 ರೂಪಾಯಿ ಕುಸಿತ: ಬೆಳ್ಳಿ ಬೆಲೆ ಎಷ್ಟು?

ಚಿನ್ನದ ಬೆಲೆಯು ಮತ್ತೆ ಪಾತಾಳ ಸೇರುತ್ತಿದ್ದು, ದಿನದಿಂದ ದಿನಕ್ಕೆ ಬಂಗಾರದ ಬೆಲೆ ಇದೀಗ ಭರ್ಜರಿ ಕುಸಿತ ಕಾಣುತ್ತಿದೆ. ಅದರಲ್ಲೂ ಸತತವಾಗಿ ಬಂಗಾರದ ಬೆಲೆ ಕುಸಿತ ಕಾಣುತ್ತಿರುವ ಕಾರಣಕ್ಕೆ, ಹೂಡಿಕೆ ಮಾಡಿದವರು ಚಿಂತೆ ಮಾಡುವಂತಾಗಿದೆ. ಹೀಗಿದ್ದಾಗಲೂ ಬಂಗಾರದ ಖರೀದಿಗೆ ಕಾದು ಕುಳಿತವರಿಗೆ ಭರ್ಜರಿ ಲಾಟರಿ ಹೊಡೆದಂತಾಗಿದೆ. ಹಾಗಾದ್ರೆ ಈಗ ಎಷ್ಟಿದೆ ಚಿನ್ನ & ಬೆಳ್ಳಿ ಬೆಲೆ? ಸಂಪೂರ್ಣ ಮಾಹಿತಿ ತಿಳಿಯಲು ಮುಂದೆ ಓದಿ.

ಆಧುನಿಕ ಕಾಲಘಟ್ಟದಲ್ಲಿ ಚಿನ್ನ ಅದೆಷ್ಟು ಮುಖ್ಯ ಅಂದ್ರೆ ಚಿನ್ನ ಇಲ್ಲದೆ ಏನೂ ನಡೆಯೋದಿಲ್ಲ ಎನ್ನಬಹುದು. ಯಾಕಂದ್ರೆ ಚಿನ್ನ ಆಭರಣವಾಗಿ ಮಾತ್ರವಲ್ಲ ಹಲವು ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕೆಯಲ್ಲಿ ಕೂಡ ಬಳಕೆ ಮಾಡಲಾಗುತ್ತೆ. ಮೊಬೈಲ್ ಸೇರಿದಂತೆ, ಹಲವು ಎಲೆಕ್ಟ್ರಾನಿಕ್ ಉಪಕರಣಗಳ ತಯಾರಿಕೆಗೆ ಕೂಡ ಚಿನ್ನ ಬೇಕೆ ಬೇಕಾಗುತ್ತೆ. ಹೀಗಾಗಿಯೇ ಚಿನ್ನ ಈಗ ಆಧುನಿಕ ಕಾಲದಲ್ಲಿ ಅತ್ಯವಶ್ಯಕ ವಸ್ತು ಎನಿಸಿಕೊಂಡಿದೆ. ಹೀಗೆಯೇ, ಎಲ್ಲಾ ಕಡೆಯಿಂದ ಕೂಡ ಚಿನ್ನಕ್ಕೆ ಬೇಡಿಕೆ ಹೆಚ್ಚಾಗುತ್ತಿರುವ ಕಾರಣ, ಬೆಲೆಯಲ್ಲಿ ಏರಿಳಿತ ಉಂಟಾಗುತ್ತಿದ್ದು. ಇದೀಗ ಚಿನ್ನದ ಬೆಲೆ ಕುಸಿತ ಕಂಡಿದೆ, ಸದ್ಯಕ್ಕೆ ಬಂಗಾರ & ಬೆಳ್ಳಿ ಬೆಲೆ ಎಷ್ಟಿದೆ ತಿಳಿಯೋಣ ಬನ್ನಿ.

Gold Price Has Been Decreased This Much Rupees On 9th July Of 2024

ಬಂಗಾರದ ಬೆಲೆ ಈಗ ಇಷ್ಟಿದೆ ನೋಡಿ!

22 ಕ್ಯಾರೆಟ್ ಚಿನ್ನದ ಬೆಲೆ ಕುಸಿತ ಕಂಡಿದೆ ಇಂದು 22 ಕ್ಯಾರೆಟ್ ಚಿನ್ನದ ಬೆಲೆ 100 ಗ್ರಾಂಗೆ 3,500 ರೂಪಾಯಿ ಕುಸಿತ ಕಂಡು ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆಯಲ್ಲಿ 350 ರೂ. ಕಡಿತವಾಗಿದೆ ಆಭರಣ ಚಿನ್ನ ಬೆಲೆ ಕುಸಿತದ ಬಳಿಕ ಪ್ರತಿ 10 ಗ್ರಾಂಗೆ 67,100 ರೂಪಾಯಿ ಇದ್ದು. 24 ಕ್ಯಾರೆಟ್ ಚಿನ್ನದ ಬೆಲೆ ಕೂಡ ಕುಸಿದು ಬಿದ್ದು, ಚಿನ್ನ ಖರೀದಿಗೆ ಕಾಯುತ್ತಿದ್ದ ಜನರಿಗೆ ಖುಷಿ ಕೊಟ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆ 100 ಗ್ರಾಂಗೆ 3,800 ರೂಪಾಯಿ ಕುಸಿತ ಕಂಡಿದೆ.

ಬೆಳ್ಳಿ ಬೆಲೆ ಹೇಗಿದೆ ಈಗ?

24 ಕ್ಯಾರೆಟ್ ಚಿನ್ನದ ಬೆಲೆ ಇದೀಗ 73,200 ರೂಪಾಯಿ ಆಗಿದ್ದು, 18 ಕ್ಯಾರೆಟ್‌ನ ಚಿನ್ನದ ಬೆಲೆ ಕೂಡ ಪ್ರತಿ 100 ಗ್ರಾಂಗೆ 2,900 ರೂಪಾಯಿ ಕುಸಿತ ಕಂಡಿದೆ. ಹೀಗೆ ಹಳದಿ ಲೋಹದ ಬೆಲೆ ಕುಸಿತದ ಹಾದಿ ಹಿಡಿದಿದೆ. ಇದರ ಜೊತೆಗೆ ಬೆಳ್ಳಿ ಬೆಲೆ ಇಳಿಕೆ ಕಂಡಿದ್ದು, ಮುಂದಿನ ಕೆಲ ದಿನಗಳ ಕಾಲ ಹೀಗೆ ಚಿನ್ನದ ಬೆಲೆ ಇಳಿಕೆ ಕಾಣುವ ನಿರೀಕ್ಷೆ ಇದೆ. ಬೆಳ್ಳಿ ಬೆಲೆ ಸುಮಾರು, 100 ರೂಪಾಯಿ ಪ್ರತಿ ಕೆಜಿಗೆ ಇಳಿಕೆ ಕಂಡು 93,900 ರೂಪಾಯಿ ಪ್ರತಿ ಕೆಜಿಗೆ ಬೆಳ್ಳಿ ಮಾರಾಟ ಆಗ್ತಿದೆ.

ಚಿನ್ನ ಇದ್ದರೆ ಕಷ್ಟಕಾಲದ ಬಂಧು!

ಭಾರತೀಯರಿಗೆ ಸಾಮಾನ್ಯವಾಗಿ ಚಿನ್ನ ಅಂದ್ರೆ ತುಂಬಾ ಇಷ್ಟ, ಅದರಲ್ಲೂ ಆಭರಣಗಳನ್ನು ತಮ್ಮ ಮೈಮೇಲೆ ಹಾಕಲು ಭಾರತೀಯರು ತುಂಬಾ ಇಷ್ಟಪಡುತ್ತಾರೆ. ಹೀಗೆ ಭಾರತೀಯರಲ್ಲಿ ಚಿನ್ನದ ಬಗ್ಗೆ ತುಂಬಾ ಕುತೂಹಲ ಇರುತ್ತದೆ. ಇದೆಲ್ಲವನ್ನೂ ಮೀರಿ ಚಿನ್ನ ಅನ್ನೋದು ಕಷ್ಟದ ಸಮಯ ಬಂದಾಗ ಸಹಾಯಕ್ಕೆ ಬರುವ ಬಂಧು ಅಥವಾ ಸ್ನೇಹಿತ ಇದ್ದಂತೆ. ಎಲ್ಲೂ ಹಣವನ್ನು ಹೊಂದಿಸಲು ಆಗದ ಸ್ಥಿತಿ ಬಂದಾಗ, ತುರ್ತು ಸಂದರ್ಭದಲ್ಲಿ ಚಿನ್ನವನ್ನು ಅಡ ಇಟ್ಟು ಅಥವಾ ಚಿನ್ನ ಮಾರಿ ಹಣ ಪಡೆಯಬಹುದು. ಈ ಮೂಲಕ ತುರ್ತು ಸಮಯದಲ್ಲಿ ಜೀವ ಉಳಿಸೋದಕ್ಕೆ ಚಿನ್ನ ಸಹಾಯಕ. ಈ ಎಲ್ಲಾ ಕಾರಣಕ್ಕೆ ಚಿನ್ನ ಖರೀದಿ ಅಥವಾ ಚಿನ್ನದ ಮೇಲೆಯೇ ಈ ರೀತಿ ಹೆಚ್ಚಾಗಿ ಹೂಡಿಕೆ ಮಾಡಲು ಪ್ರಮುಖ ಕಾರಣ ಎನ್ನಲಾಗುತ್ತದೆ.

ಆಭರಣ ಪ್ರಿಯರಿಗೆ ಚಿನ್ನವೇ ಚನ್ನ!

ಒಂದು ಕಡೆ ಹೂಡಿಕೆ ಮಾಡುವವರಿಗೆ ಚಿನ್ನದ ಬೆಲೆ ಹೆಚ್ಚಾದರೆ ಖುಷಿ ಆಗುತ್ತದೆ, ಆದರೂ ಸಾಮಾನ್ಯವಾಗಿ ಆಭರಣಗಳನ್ನ ಹೆಚ್ಚಾಗಿ ಇಷ್ಟಪಡುವ ಮಹಿಳೆಯರಿಗೆ ಚಿನ್ನದ ಬೆಲೆ ಕುಸಿದರೆ ಮಾತ್ರ ಸಂತಸವಾಗುತ್ತದೆ. ಹೀಗೆ ಚಿನ್ನದ ಬೆಲೆಯು ಕಳೆದ 1 ತಿಂಗಳಿಂದ ಭಾರಿ ಏರಿಳಿತವನ್ನು ಕಾಣುತ್ತಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ಕುಸಿತ ಕಂಡು, ಆ ನಂತರದಲ್ಲಿ ಮತ್ತೆ ಏರಿಕೆಯ ಹಾದಿಗೆ ಮರಳುತ್ತದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಆಭರಣವನ್ನ ಕೊಳ್ಳುವವರಿಗೆ ಈ ತಿಂಗಳು ಮತ್ತಷ್ಟು ಸಿಹಿಸುದ್ದಿ ಸಿಗುವ ಸಾಧ್ಯತೆ ದಟ್ಟವಾಗಿದೆ. ಅಲ್ಲದೆ ಈ ರೀತಿ ಚಿನ್ನದ ಏರುಪೇರು ಪಾಶ್ಚಿಮಾತ್ಯ ರಾಷ್ಟ್ರಗಳ ಆರ್ಥಿಕತೆಯನ್ನೇ ಅಲುಗಾಡಿಸುತ್ತಿದೆ.

5000 ವರ್ಷಗಳಿಂದ ಚಿನ್ನದ ಬಳಕೆ!

ಮನುಷ್ಯ ನಾಗರಿಕತೆ ಕಡೆಗೆ ಹೆಜ್ಜೆ ಹಾಕಿದ ನಂತರ ಚಿನ್ನವನ್ನು ಹೆಚ್ಚಾಗಿ ಬಳಸತೊಡಗಿದೆ. ಅದರಲ್ಲೂ ಚಿನ್ನದ ಬಳಕೆಗೆ ಸುಮಾರು 5000 ವರ್ಷಗಳ ಇತಿಹಾಸ ಇದೆ. ಹೀಗೆ ಚಿನ್ನವನ್ನ ಮನುಷ್ಯರು ಸಾವಿರಾರು ವರ್ಷಗಳಿಂದ ಬಳಕೆ ಮಾಡಿಕೊಂಡು ಬರುತ್ತಿದ್ದಾರೆ. ಹೀಗಾಗಿ ಈ ಹೊತ್ತಿಗೂ ಚಿನ್ನಕ್ಕೆ ಭಾರಿ ದೊಡ್ಡ ಗೌರವ ಮತ್ತು ಬೆಲೆ ಇದೆ. ಇತರ ಯಾವುದೇ ಲೋಹಕ್ಕೆ ಕೂಡ ಚಿನ್ನದಷ್ಟು ಮಾನ್ಯತೆ ನೀಡುವುದಿಲ್ಲ. ಆದರೆ ಚಿನ್ನಕ್ಕೆ ಮಾತ್ರ ಅತಿಹೆಚ್ಚು ಬೆಲೆಯು ಇದ್ದು, ಚಿನ್ನ ಮುಂದಿನ ದಿನಗಳಲ್ಲಿ ಮತ್ತಷ್ಟು ದುಬಾರಿ ಆಗುವುದು ಗ್ಯಾರಂಟಿ ಎನ್ನುತ್ತಾರೆ ತಜ್ಞರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+