Gold Price: ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ? ಇಂದು ಎಷ್ಟಿದೆ ಚಿನ್ನದ ಬೆಲೆ?
ಚಿನ್ನ & ಬೆಳ್ಳಿ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬರುತ್ತಿದೆ. ಹೀಗೆ ಚಿನ್ನ & ಬೆಳ್ಳಿ ಮತ್ತೆ ಮತ್ತೆ ಏರಿಕೆ ಕಾಣುತ್ತಿರುವ ವಿಚಾರ ಇದೀಗ ಭಾರಿ ಸಂಚಲನ ಸೃಷ್ಟಿ ಮಾಡಿತ್ತು. ಆದರೆ ಈಗ ಮತ್ತೆ ಚಿನ್ನ & ಬೆಳ್ಳಿ ಬೆಲೆಯಲ್ಲಿ, ಕುಸಿತ ಕಾಣುವ ಸಾಧ್ಯತೆ ಇದೆ ಎನ್ನಲಾಗಿದೆ. ಹಾಗಾದ್ರೆ ಇಂದು ಚಿನ್ನದ ಬೆಲೆ ಕುಸಿತ ಕಾಣುತ್ತಾ? ಬೆಂಗಳೂರು & ಕರ್ನಾಟಕದಲ್ಲಿ ಈಗ ಎಷ್ಟಿದೆ ಚಿನ್ನದ ಬೆಲೆ? ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.
ಒಂದು ಕಡೆ ಹೂಡಿಕೆ ಮಾಡುವವರಿಗೆ ಚಿನ್ನದ ಬೆಲೆ ಹೆಚ್ಚಾದರೆ ಖುಷಿ. ಆದರೆ ಸಾಮಾನ್ಯವಾಗಿ ಆಭರಣ ಹೆಚ್ಚಾಗಿ ಇಷ್ಟಪಡುವ ಮಹಿಳೆಯರಿಗೆ ಚಿನ್ನದ ಬೆಲೆ ಕುಸಿದರೆ ಮಾತ್ರ ಸಂತಸ. ಹೀಗಾಗಿ ಚಿನ್ನದ ಬೆಲೆ ಕಳೆದ ಕೆಲವು ತಿಂಗಳಿಂದ ಭಾರಿ ಏರಿಳಿತವನ್ನು ಕಾಣುತ್ತಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ಕುಸಿತ ಕಂಡು, ಆ ನಂತರದಲ್ಲಿ ಮತ್ತೆ ಏರಿಕೆ ಹಾದಿಗೆ ಮರಳುತ್ತೆ ಎಂದು ಹೇಳಲಾಗಿತ್ತು. ಈ ಮೂಲಕ ಆಭರಣವನ್ನು ಕೊಳ್ಳುವವರಿಗೆ ಈ ತಿಂಗಳು ಮತ್ತಷ್ಟು ಸಿಹಿ ಸುದ್ದಿ ಸಿಗುವ ಸಾಧ್ಯತೆ ದಟ್ಟವಾಗಿತ್ತು. ಆದರೆ ಚಿನ್ನದ ಬೆಲೆ ಕಳೆದ ಮೂರು ದಿನಗಳಿಂದ ಸತತವಾಗಿ ಏರಿಕೆ ಕಾಣುತ್ತಿದೆ. ಹಾಗಾದ್ರೆ ಇವತ್ತು ಕುಸಿತ ಕಾಣುತ್ತಾ ಚಿನ್ನ? ಇಂದು ಎಷ್ಟಿದೆ ಚಿನ್ನ & ಬೆಳ್ಳಿ ಬೆಲೆ?

ಬಂಗಾರದ ಬೆಲೆಯಲ್ಲಿ ಏರಿಕೆ
ಕರ್ನಾಟಕ ಹಾಗೂ ಬೆಂಗಳೂರಿನಲ್ಲಿ ನಿನ್ನೆ ಚಿನ್ನದ ಬೆಲೆ ಏರಿಕೆಯನ್ನು ಕಂಡಿದ್ದು. 24 ಕ್ಯಾರೆಟ್ ಶುದ್ಧ ಚಿನ್ನ ಬೆಲೆ ಏರಿಕೆ ಬಳಿಕ ಮತ್ತಷ್ಟು ಮೇಲೆ ಹೋಗಿ ಪ್ರತಿ 100 ಗ್ರಾಂಗೆ 10,400 ರೂಪಾಯಿ ಜಾಸ್ತಿ ಆಗಿದೆ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ. ಹೀಗಾಗಿ ಶುದ್ಧ ಚಿನ್ನದ ಬೆಲೆ ಪ್ರತಿ 100 ಗ್ರಾಂಗೆ 7,16,200 ರೂಪಾಯಿ ಆಗಿದೆ. ಜತೆಗೆ ಶುದ್ಧ ಚಿನ್ನ ಬೆಲೆ ಪ್ರತಿ 10 ಗ್ರಾಂ 71,620 ರೂಪಾಯಿಗೆ ಏರಿಕೆ ಆಗಿದೆ. ಹಾಗೇ 22 ಕ್ಯಾರೆಟ್ ಆಭರಣ ಚಿನ್ನದ ಬೆಲೆಯಲ್ಲಿ ಕೂಡ ಏರಿಕೆ ಕಂಡುಬಂದಿದೆ.
ಬೆಳ್ಳಿಯ ಬೆಲೆ ಕೆಜಿಗೆ ಎಷ್ಟಿದೆ?
ಪ್ರತಿ 100 ಗ್ರಾಂಗೆ 9,500 ರೂಪಾಯಿ ಏರಿಕೆ ಕಂಡಿದೆ 22 ಕ್ಯಾರೆಟ್ ಚಿನ್ನ. ಹೀಗೆ ಆಭರಣ ಚಿನ್ನದ ಬೆಲೆ ಪ್ರತಿ 100 ಗ್ರಾಂಗೆ 6,56,500 ರೂಪಾಯಿ ಆಗಿದೆ ಇದರ ಜೊತೆ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 65,650 ರೂಪಾಯಿ ತಲುಪಿದೆ. ಆದರೆ ಮತ್ತೊಂದ್ಕಡೆ ಬೆಳ್ಳಿ ಬೆಲೆಯಲ್ಲಿ ಮಾತ್ರ ಇಳಿಕೆ ಕಂಡುಬಂದಿದೆ. ಈಗ ಬೆಳ್ಳಿ ಬೆಲೆ ಪ್ರತಿ ಕೆಜಿಗೆ 78,900 ರೂಪಾಯಿ ಇದ್ದು, ಇಂದು ಮತ್ತೆ ಚಿನ್ನದ ಬೆಲೆ ಕುಸಿತದ ನಿರೀಕ್ಷೆಯಲ್ಲಿ ಇದ್ದಾರೆ ಜನರು.












Click it and Unblock the Notifications