Gold Price: ಚಿನ್ನದ ಬೆಲೆ 66,250 ರೂಪಾಯಿ! ಬೆಳ್ಳಿ ಬೆಲೆ ಎಷ್ಟಿದೆ?
ಚಿನ್ನದ ಮೇಲೆ ಹಲವು ರೀತಿಯಲ್ಲಿ ಜನರು ಹೂಡಿಕೆ ಮಾಡುತ್ತಾರೆ. ಯಾಕಂದ್ರೆ ಹೀಗೆ ಚಿನ್ನದ ಮೇಲೆ ಹೂಡಿಕೆಯ ಮಾಡುವುದು ಲಾಭದಾಯಕ ಎಂಬ ನಂಬಿಕೆ ಭಾರತೀಯರಲ್ಲಿ ಹಲವು ವರ್ಷದಿಂದ ಮೂಡಿದೆ. ಇದೇ ಕಾರಣಕ್ಕೆ ಜನರು ಕೂಡ ಚಿನ್ನದ ಮೇಲೆ ಭಾರಿ ನಂಬಿಕೆ ಇಟ್ಟು ಹೂಡಿಕೆ ಮಾಡುತ್ತಾರೆ. ಹೀಗಿದ್ದಾಗ ಕುಸಿಯುತ್ತಾ ಬಂದಿದ್ದ ಚಿನ್ನ ಈಗ ಎಷ್ಟರ ಬೆಲೆಯಲ್ಲಿ ಸಿಗುತ್ತಿದೆ ಗೊತ್ತೆ? ಮುಂದೆ ಓದಿ.
ಚಿನ್ನದ ಬೆಲೆ ಸತತವಾಗಿ ಕುಸಿತ ಕಾಣುತ್ತಿದೆ, ಕೆಲವೇ ದಿನಗಳಲ್ಲಿ 1 ಲಕ್ಷ ರೂಪಾಯಿಗೆ ಚಿನ್ನ ತಲುಪುತ್ತೆ ಎಂಬ ನಿರೀಕ್ಷೆ ನಡುವೆ ಮತ್ತೊಮ್ಮೆ ಹಿನ್ನಡೆ ಕಾಣುತ್ತಿದೆ ಚಿನ್ನ. ಹೀಗೆ ಚಿನ್ನದ ಬೆಲೆಯಲ್ಲಿ ಏರುಪೇರು ನಡುವೆ ಇದೀಗ ಚಿನ್ನದ ಬೆಲೆ 66,250 ರೂಪಾಯಿ ಆಗಿದೆ. ಹಾಗಾದ್ರೆ ಬೆಳ್ಳಿ ಬೆಲೆ ಎಷ್ಟು? ನಿಮ್ಮ ನಗರದಲ್ಲಿ ಚಿನ್ನದ ಬೆಲೆ ಎಷ್ಟಿದೆ? ಮುಂದೆ ಓದಿ.

ಚಿನ್ನದ ಬೆಲೆ ಇಷ್ಟಿದೆ ನೋಡಿ!
ಚಿನ್ನ ಬೆಲೆ ಮುಗಿಲು ಮುಟ್ಟುತ್ತಿದ್ದ ಸಮಯದಲ್ಲೇ ದಿಢೀರ್ ಕುಸಿಯಲು ಶುರು ಮಾಡಿದ್ದು, ಕಳೆದ ಕೆಲ ತಿಂಗಳ ಕಾಲ ನಿರಂತರ ಏರಿಕೆ ಕಂಡು ಚಿನ್ನದ ಬೆಲೆ ಇನ್ನೇನು 10 ಗ್ರಾಂಗೆ 1 ಲಕ್ಷ ರೂಪಾಯಿ ಆಗಲಿದೆ ಎಂಬ ಮಾತು ಕೇಳಿಬಂದಿತ್ತು. ಆದರೆ ಈಗ 1 ಲಕ್ಷ ತಲುಪುವ ಮಾತು ಬಿಡಿ 70,000 ರೂಪಾಯಿ ತಲುಪಿದ್ರೆ ಸಾಕಪ್ಪ ಎಂಬ ಸ್ಥಿತಿ ನಿರ್ಮಾಣ ಆಗಿದೆ. ಇದೀಗ ಚಿನ್ನ 66,250 ರೂಪಾಯಿ ಆಗಿದೆ.
ಆಭರಣ ಚಿನ್ನದ ಬೆಲೆ 10 ಗ್ರಾಂಗೆ 66,250 ರೂಪಾಯಿ ಇದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 72,280 ರೂಪಾಯಿ ಆಗಿದೆ. 18 ಕ್ಯಾರೆಟ್ ಚಿನ್ನದ ಬೆಲೆ 54,210 ರೂಪಾಯಿಗೆ ಬಂದು ನಿಂತಿದೆ. ಇನ್ನುಳಿದಂತೆ ಬೆಳ್ಳಿ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದ್ದು, ಈಗ ಬೆಳ್ಳಿ ಬೆಲೆ ಪ್ರತಿ 100 ಗ್ರಾಂಗೆ 9,000 ರೂಪಾಯಿ ಇದೆ. ಹಾಗೇ ಪ್ರತಿ ಕೆಜಿ ಬೆಳ್ಳಿ ಬೆಲೆ ಇದೀಗ 90,000 ರೂಪಾಯಿ ಆಗಿದೆ.
ಬಂಗಾರ ಅಂದ್ರೆ ಭಾರತೀಯರಿಗೆ ಇಷ್ಟ!
ಚಿನ್ನ ಭಾರತೀಯರ ಪಾಲಿಗೆ ತುರ್ತು ಹಣ ಇದ್ದಂತೆ. ಯಾಕಂದ್ರೆ ಯಾವುದೇ ತುರ್ತು ಸ್ಥಿತಿ ಎದುರಾಗಿ ಪರದಾಟ ಶುರುವಾದಾಗ ಭಾರತೀಯರು ಮೊದಲು ತಮ್ಮ ಬಳಿ ಇರುವ ಚಿನ್ನ ಅಥವಾ ಬೆಳ್ಳಿ ಮೊರೆ ಹೋಗುತ್ತಾರೆ. ಯಾಕಂದ್ರೆ ತುರ್ತು ಸ್ಥಿತಿಯಲ್ಲಿ ಎಲ್ಲೂ ಹಣ ಸಿಗದೇ ಇದ್ದರೆ ನಮ್ಮ ಬಳಿ ಇರುವ ಚಿನ್ನ & ಬೆಳ್ಳಿಯೇ ಸಹಾಯ ಮಾಡುತ್ತವೆ. ಹೀಗಾಗಿ ಬಹುತೇಕ ಭಾರತೀಯರು ಚಿನ್ನದ ಮೇಲೆ ಹೂಡಿಕೆ ಮಾಡುತ್ತಾ ಬಂದಿದ್ದಾರೆ. ಮತ್ತೊಂದ್ಕಡೆ ಚಿನ್ನದ ಮೇಲೆ ಹೂಡಿಕೆ ಮಾಡುವ ಪ್ರತಿಯೊಬ್ಬರು ಲಾಭ ಪಡೆಯಲು ಹವಣಿಸುತ್ತಿದ್ದಾರೆ.
ವರ್ಷದಿಂದ ವರ್ಷಕ್ಕೆ ಚಿನ್ನದ ಬೆಲೆ ಏರಿಕೆ!
ಕಳೆದ 15 ವರ್ಷಕ್ಕೆ ಹೋಲಿಕೆ ಮಾಡಿದರೆ ಚಿನ್ನದ ಬೆಲೆಯಲ್ಲಿ ಸಾಕಷ್ಟು ಬದಲಾವಣೆ ಆಗಿ ದೊಡ್ಡ ಮಟ್ಟದಲ್ಲಿ ಚಿನ್ನ ಏರಿಕೆ ಕಂಡಿದೆ. ಹಾಗೇ ಮುಂದಿನ ದಿನಗಳಲ್ಲಿ ಚಿನ್ನಕ್ಕೆ ಇನ್ನೂ ಹೆಚ್ಚಿನ ಬೇಡಿಕೆ ಬರುವ ಸಾಧ್ಯತೆ ದಟ್ಟವಾಗಿದೆ. ಇದಕ್ಕೆಲ್ಲಾ ಕಾರಣ ಏನೆಂದರೆ ಭೂಮಿಯ ಒಳಗೆ ಸಿಗುತ್ತಿದ್ದ ಚಿನ್ನ ಭಾಗಶಃ ಕಡಿಮೆ ಆಗುತ್ತಾ ಬರುತ್ತಿದೆ. ಹೀಗಾಗಿ ಗಣಿಗಾರಿಕೆ ನಡೆಸುವ ಸಾಧ್ಯತೆ ಕೂಡ ಕ್ಷೀಣಿಸುತ್ತಿದೆ. ಇದು ಕೂಡ ಚಿನ್ನದ ಮೇಲೆ ಸಾಕಷ್ಟು ದೊಡ್ಡ ಪ್ರಮಾಣದ ಪರಿಣಾಮ ಬೀರುವ ಸಾಧ್ಯತೆ ಇದೆ.
ಚಿನ್ನ ಈಗ ಅಂತಾರಾಷ್ಟ್ರೀಯ ಕರೆನ್ಸಿ?
ಪ್ರಪಂಚದ ಮಟ್ಟದಲ್ಲಿ ಈಗ ಚಿನ್ನಕ್ಕೆ ಯಾಕೆ ಇಷ್ಟು ಬೆಲೆ ಬಂದಿದೆ ಎಂದರೆ, ಯುದ್ಧಗಳು ಶುರುವಾದ ನಂತರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಟ್ಟಿಯಾದ ಕರೆನ್ಸಿ ಇಲ್ಲವಾಗಿದ್ದು. ಈ ಕಾರಣಕ್ಕೆ ಈಗ ಚಿನ್ನದ ಮೇಲೆ ಜನರಿಗೆ ತುಂಬಾ ನಂಬಿಕೆ ಬಂದಿದೆ. ಹೀಗಾಗಿ ಜನರು ಕೂಡ ಚಿನ್ನ ಖರೀದಿಗೆ ಮುಗಿ ಬೀಳುತ್ತಿದ್ದಾರೆ. ಹೀಗಾಗಿ ಏಪ್ರಿಲ್ ತಿಂಗಳಲ್ಲಿ ಚಿನ್ನ ಸಾಕಷ್ಟು ಏರಿಕೆ ಕಂಡಿತ್ತು. ಆದರೆ, ಇದೀಗ ಚಿನ್ನದ ಬೆಲೆ ಇಳಿಕೆ ಕಾಣುತ್ತಿದೆ. ಇಸ್ರೇಲ್ & ಇರಾನ್ ಯುದ್ಧ ನಡೆಯಲ್ಲ ಎಂಬ ನಂಬಿಕೆ ಸಿಕ್ಕ ನಂತರ ಚಿನ್ನದ ಬೆಲೆ ಇಳಿಕೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಜನರು ಕೂಡ ಚಿನ್ನ ಖರೀದಿಯನ್ನು ಆರಾಮವಾಗಿ ಮಾಡಬಹುದು ಎಂಬ ಅಭಿಪ್ರಾಯ ಕೇಳಿಬಂದಿದೆ.
ಯುದ್ಧದ ಕಾರಣಕ್ಕೆ ಬೆಲೆ ಏರಿಕೆ?
ಜಾಗತಿಕವಾಗಿ ಯುದ್ಧಗಳು ಶುರುವಾದಾಗ, ಮೊದಲು ಆ ಪರಿಣಾಮ ಬೀರುವುದು ಚಿನ್ನ ಮತ್ತು ಪೆಟ್ರೋಲ್, ಡಿಸೆಲ್ ಮೇಲೆ. ಯಾಕಂದ್ರೆ ಜಾಗತಿಕ ಆರ್ಥ ವ್ಯವಸ್ಥೆಯಲ್ಲಿ ಈ ವಸ್ತುಗಳು ದೊಡ್ಡ ಹಿಡಿತ ಹೊಂದಿವೆ. ಹೀಗಾಗಿಯೇ ಯುದ್ಧ ಶುರುವಾದ ತಕ್ಷಣ ಚಿನ್ನದ ರೂಪಕ್ಕೆ ತಮ್ಮ ಸಂಪತ್ತು ಅಂದರೆ ಹಣ ಬದಲಾಯಿಸಿ, ಸಂಗ್ರಹ ಮಾಡಲು ಜನಗಳು ಮುಂದಾಗುತ್ತಾರೆ. ಹಾಗೆ ದೇಶಗಳು ಕೂಡ ಅಪಾರ ಪ್ರಮಾಣದ ಚಿನ್ನ ಯುದ್ಧದ ವೇಳೆ ಬಂದಾಗ ಖರೀದಿ ಮಾಡುತ್ತವೆ. ಹೀಗಾಗಿಯೆ ಕಳೆದ ಕೆಲವು ತಿಂಗಳಿಂದ ಚಿನ್ನದ ಬೆಲೆಯಲ್ಲಿ ಏರಿಕೆ ಆಗುತ್ತಿತ್ತು. ಆದರೆ ಇದೀಗ ಚಿನ್ನದ ಬೆಲೆ ಭಾರಿ ಕುಸಿತ ಕಾಣುತ್ತಿದೆ.
ಚಿನ್ನ 50 ಸಾವಿರ ರೂಪಾಯಿಗೆ ಕುಸಿತ?
ಚಿನ್ನ ಖರೀದಿಗೆ ಜನರು ಕಾಯುತ್ತಿದ್ದಾರೆ, ಯಾಕಂದ್ರೆ ಇನ್ನುಮುಂದೆ ಶುಭ ಕಾರ್ಯಗಳನ್ನು ಆರಂಭ ಮಾಡಲಿದ್ದಾರೆ. ಆಷಾಢ ಮಾಸ ಶುರುವಾಗಿದ್ದು, ಜುಲೈ ತಿಂಗಳ ಅಂತ್ಯಕ್ಕೆ ಆಷಾಢ ಮಾಸ ಕೂಡ ಮುಗಿದು ಹೋಗಲಿದೆ. ಜುಲೈ 21ಕ್ಕೆ 2024ರ ಆಷಾಢ ಮಾಸ ಅಂತ್ಯವಾಗಲಿದೆ. ಆ ನಂತರ ಮದುವೆ, ನಿಶ್ಚಿತಾರ್ಥ, ನಾಮಕರಣ ಹೀಗೆ ಹತ್ತು ಹಲವು ಕಾರ್ಯಕ್ರಮಗಳು ಶುರು ಆಗಲಿವೆ. ಹೀಗಾಗಿ ಆಷಾಢ ಮಾಸ ಮುಗಿದ ತಕ್ಷಣ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಬರಲಿದೆ. ಚಿನ್ನದ ಮೇಲೆ ಹೂಡಿಕೆಯ ಮಾಡಿದರೆ ಯಾವತ್ತಿಗಾದರೂ ಅದರಿಂದ ಲಾಭ ಬಂದೇ ಬರುತ್ತೆ. ಹೀಗಿದ್ರೂ 2024 ಆರಂಭದಲ್ಲಿ ಭರ್ಜರಿ ಲಾಭ ನೀಡಿದ್ದ ಚಿನ್ನದ ಬೆಲೆ ಇತ್ತೀಚೆಗೆ ಕುಸಿಯುತ್ತಾ ಸಾಗಿದೆ.
ಬೆಳ್ಳಿ ಬೆಲೆಯಲ್ಲಿ ದಿಢೀರ್ ಇಳಿಕೆ!
ಚಿನ್ನ ಬಹು ಬೇಡಿಕೆಯ ವಸ್ತು, ಹೀಗಾಗಿಯೇ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗೆ ಚಿನ್ನ ಕೊಳ್ಳಲು ಜನಗಳು ಕೂಡ ಮುಗಿಬಿದ್ದು ಮುಂದೆ ಬರುತ್ತಿದ್ದಾರೆ. ಹೀಗಿದ್ದಾಗ ಚಿನ್ನದ ಜೊತೆ ಬೆಳ್ಳಿ ಬೆಲೆ ಕೂಡ ಭಾರಿ ಏರಿಕೆ ಕಾಣುತ್ತಿತ್ತು. ನೋಡ ನೋಡುತ್ತಲೇ ಬೆಳ್ಳಿ ಬೆಲೆ ಹತ್ತಿರ ಹತ್ತಿರ 1 ಲಕ್ಷ ರೂಪಾಯಿಗೆ ತಲುಪಿತ್ತು ಇಂತಹ ಸ್ಥಿತಿಯಲ್ಲಿ ಈಗ ದಿಢೀರ್ ಬೆಳ್ಳಿ ಬೆಲೆ ಕುಸಿತ ಕಂಡಿದೆ! ಮುಂದಿನ ದಿನಗಳಲ್ಲಿ ಬೆಳ್ಳಿಯ ಬೆಲೆ ಮತ್ತಷ್ಟು ಏರಿಕೆ ಕಾಣುವ ನಿರೀಕ್ಷೆಯು ಇದೆ. ಈ ನಡುವೆ ಬೆಳ್ಳಿ ಬೆಲೆ ಒಂದಷ್ಟು ಇಳಿಕೆ ಕಂಡಿರುವುದು, ಬೆಳ್ಳಿ ಇಷ್ಟಪಡುವವರಿಗೆ ಖುಷಿ ಕೊಟ್ಟಿದೆ.
ಹಳದಿ ಲೋಹ ಎಲ್ಲರಿಗೂ ಇಷ್ಟ!
ಚಿನ್ನ ಭಾರತೀಯರ ಪಾಲಿಗೆ ತುರ್ತು ಹಣ ಇದ್ದಂತೆ, ಯಾಕಂದ್ರೆ ಯಾವುದೇ ತುರ್ತು ಸ್ಥಿತಿ ಎದುರಾಗಿ ಪರದಾಟ ಶುರುವಾದರೂ ಭಾರತೀಯರು ಮೊದಲು ತಮ್ಮ ಬಳಿ ಇರುವ ಚಿನ್ನ, ಮತ್ತು ಬೆಳ್ಳಿ ಮೊರೆ ಹೋಗುತ್ತಾರೆ. ಯಾಕಂದ್ರೆ ತುರ್ತು ಪರಿಸ್ಥಿತಿಯಲ್ಲಿ, ಎಲ್ಲಿಯೂ ಹಣ ಸಿಗದೇ ಇದ್ದರೆ ನಮ್ಮ ಬಳಿ ಇರುವ ಚಿನ್ನ & ಬೆಳ್ಳಿಗೆ ಬೇಡಿಕೆ ಬಂದೇ ಬರುತ್ತದೆ. ಹೀಗಾಗಿಯೇ ಬಹುತೇಕ ಭಾರತೀಯರು ಚಿನ್ನದ ಮೇಲೆ ಹೂಡಿಕೆ ಮಾಡುತ್ತಾ ಬಂದಿದ್ದಾರೆ. ಮತ್ತೊಂದು ಕಡೆ ಚಿನ್ನದ ಮೇಲೆ ಹೂಡಿಕೆ ಮಾಡುವ ಪ್ರತಿಯೊಬ್ಬರಿಗೂ, ಹಳದಿ ಲೋಹ ಬೆನ್ನೆಲುಬಾಗಿ ನಿಂತಿದೆ. ಮುಂದಿನ ದಿನಗಳಲ್ಲಿ ಹಳದಿ ಲೋಹ ಅಂದ್ರೆ ಚಿನ್ನ ಮತ್ತಷ್ಟು ಎತ್ತರಕ್ಕೆ ಹೋಗುವ ನಿರೀಕ್ಷೆ ದಟ್ಟವಾಗಿದೆ.
ಚಿನ್ನ ಅಮೂಲ್ಯ ವಸ್ತು, ಇದೇ ಕಾರಣಕ್ಕೆ ಚಿನ್ನಕ್ಕೆ ಅತ್ಯುನ್ನತ ಸ್ಥಾನ ನೀಡಿದ್ದ ನಮ್ಮ ಪೂರ್ವಿಕರು ಅದನ್ನು ಜೋಪಾನ ಮಾಡಿಕೊಂಡು ಬಂದರು. ಹೀಗಿದ್ದಾಗ ಈ ಆಧುನಿಕ ಕಾಲಘಟ್ಟದಲ್ಲಿ ಚಿನ್ನ & ಬೆಳ್ಳಿಗೆ ಮತ್ತಷ್ಟು ಮಹತ್ವ ಬಂದಿದೆ. ಅದರಲ್ಲೂ ಆಧುನಿಕ ಕಾಲದಲ್ಲಿ ಅತ್ಯಗತ್ಯ ಆಗಿರುವ ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕೆಗೂ ಚಿನ್ನ ಅತ್ಯಗತ್ಯ. ಆಭರಣ ಪ್ರಿಯರಿಗೂ ಚಿನ್ನದ ಮೇಲೆ ಪ್ರೀತಿ, ಇನ್ನು ಹೂಡಿಕೆ ಮಾಡುವವರಿಗೆ ಕೂಡ ಚಿನ್ನವೇ ಬೆಸ್ಟ್ & ಮೊದಲ ಆಯ್ಕೆ ಹೀಗೆ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಇರುವಾಗಲೇ ಈ ಹಳದಿ ಲೋಹ ಕುಸಿದು ಬೀಳುತ್ತಿದೆ.
ಆಭರಣ ಪ್ರಿಯರಿಗೆ ಚಿನ್ನವೇ ಚನ್ನ!
ಒಂದು ಕಡೆ ಹೂಡಿಕೆ ಮಾಡುವವರಿಗೆ ಚಿನ್ನದ ಬೆಲೆ ಹೆಚ್ಚಾದರೆ ಖುಷಿ ಆಗುತ್ತದೆ, ಆದರೂ ಸಾಮಾನ್ಯವಾಗಿ ಆಭರಣಗಳನ್ನ ಹೆಚ್ಚಾಗಿ ಇಷ್ಟಪಡುವ ಮಹಿಳೆಯರಿಗೆ ಚಿನ್ನದ ಬೆಲೆ ಕುಸಿದರೆ ಮಾತ್ರ ಸಂತಸವಾಗುತ್ತದೆ. ಹೀಗೆ ಚಿನ್ನದ ಬೆಲೆಯು ಕಳೆದ 1 ತಿಂಗಳಿಂದ ಭಾರಿ ಏರಿಳಿತವನ್ನು ಕಾಣುತ್ತಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ಕುಸಿತ ಕಂಡು, ಆ ನಂತರದಲ್ಲಿ ಮತ್ತೆ ಏರಿಕೆಯ ಹಾದಿಗೆ ಮರಳುತ್ತದೆ ಎಂದು ಹೇಳಲಾಗುತ್ತಿದೆ. ಈ ಮೂಲಕ ಆಭರಣವನ್ನ ಕೊಳ್ಳುವವರಿಗೆ ಈ ತಿಂಗಳು ಮತ್ತಷ್ಟು ಸಿಹಿಸುದ್ದಿ ಸಿಗುವ ಸಾಧ್ಯತೆ ದಟ್ಟವಾಗಿದೆ.
5000 ವರ್ಷಗಳಿಂದ ಚಿನ್ನದ ಬಳಕೆ!
ಮನುಷ್ಯ ನಾಗರಿಕತೆ ಕಡೆಗೆ ಹೆಜ್ಜೆ ಹಾಕಿದ ನಂತರ ಚಿನ್ನವನ್ನು ಹೆಚ್ಚಾಗಿ ಬಳಸತೊಡಗಿದೆ. ಅದರಲ್ಲೂ ಚಿನ್ನದ ಬಳಕೆಗೆ ಸುಮಾರು 5000 ವರ್ಷಗಳ ಇತಿಹಾಸ ಇದೆ. ಹೀಗೆ ಚಿನ್ನವನ್ನ ಮನುಷ್ಯರು ಸಾವಿರಾರು ವರ್ಷಗಳಿಂದ ಬಳಕೆ ಮಾಡಿಕೊಂಡು ಬರುತ್ತಿದ್ದಾರೆ. ಹೀಗಾಗಿ ಈ ಹೊತ್ತಿಗೂ ಚಿನ್ನಕ್ಕೆ ಭಾರಿ ದೊಡ್ಡ ಗೌರವ ಮತ್ತು ಬೆಲೆ ಇದೆ. ಇತರ ಯಾವುದೇ ಲೋಹಕ್ಕೆ ಕೂಡ ಚಿನ್ನದಷ್ಟು ಮಾನ್ಯತೆ ನೀಡುವುದಿಲ್ಲ. ಆದರೆ ಚಿನ್ನಕ್ಕೆ ಮಾತ್ರ ಅತಿಹೆಚ್ಚು ಬೆಲೆಯು ಇದ್ದು, ಚಿನ್ನ ಮುಂದಿನ ದಿನಗಳಲ್ಲಿ ಮತ್ತಷ್ಟು ದುಬಾರಿ ಆಗುವುದು ಗ್ಯಾರಂಟಿ ಎನ್ನುತ್ತಾರೆ ತಜ್ಞರು.
-
Akshaya Tritiya Special: ಅಕ್ಷಯ ತೃತೀಯ ಸ್ಪೆಷಲ್: ಪುರುಷರ ಚಿನ್ನದ ಆಭರಣಗಳಲ್ಲಿ ಹೊಸ ಟ್ರೆಂಡ್ಸ್ ವಿವರ -
Akshaya Tritiya 2026: ಅಕ್ಷಯ ತೃತೀಯ ವಿಶೇಷ: ಪುರುಷರು ಮತ್ತು ಮಹಿಳೆಯರಿಬ್ಬರಿಗೂ ಒಪ್ಪುವ ಟಾಪ್ 5 ಆಭರಣಗಳ ಬಗ್ಗೆ ತಿಳಿಯಿರಿ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications