Gold Price: ಚಿನ್ನದ ಬೆಲೆ ಏರಲೂ ಇಲ್ಲ, ಇಳಿಯಲೂ ಇಲ್ಲ! ಈಗ ಎಷ್ಟಿದೆ ರೇಟ್?
ಚಿನ್ನದ ಬೆಲೆ ಸತತವಾಗಿ ಕಳೆದ 3 ದಿನಗಳಿಂದ ಇಳಿಕೆ ಕಂಡ ನಂತರ ಮತ್ತೊಂದು ಸರ್ಪ್ರೈಸ್ ಕೊಟ್ಟಿದೆ. ಚಿನ್ನಕ್ಕೆ ಸಾಕಷ್ಟು ಬೇಡಿಕೆ ಬಂದ ಹಿನ್ನೆಲೆ ಇನ್ನೇನು 10 ಗ್ರಾಂ ಚಿನ್ನದ ಬೆಲೆಯು ಭರ್ಜರಿ 1 ಲಕ್ಷ ರೂಪಾಯಿ ಆಗಲಿದೆ ಎನ್ನಲಾಗಿತ್ತು. ಹೀಗಿದ್ದಾಗಲೇ ಚಿನ್ನದ ಬೆಲೆ ಕುಸಿತದ ಕಡೆಗೆ ಮುಖ ಮಾಡಿದ್ದು, ಇದೀಗ ಎಷ್ಟಿದೆ ಗೊತ್ತಾ ಬಂಗಾರದ ಬೆಲೆ? ಬನ್ನಿ ತಿಳಿಯೋಣ.
ಚಿನ್ನ ಬೆಲೆ ಮುಗಿಲು ಮುಟ್ಟುತ್ತಿದ್ದ ಸಮಯದಲ್ಲೇ ದಿಢೀರ್ ಕುಸಿಯಲು ಶುರು ಮಾಡಿದೆ. ಕಳೆದ ಕೆಲ ತಿಂಗಳ ಕಾಲ ನಿರಂತರ ಏರಿಕೆ ಕಂಡು ಚಿನ್ನದ ಬೆಲೆ ಇನ್ನೇನು 10 ಗ್ರಾಂಗೆ 1 ಲಕ್ಷ ರೂಪಾಯಿ ಆಗಲಿದೆ ಎಂಬ ಮಾತು ಕೇಳಿಬಂದಿತ್ತು. ಆದರೆ ಈಗ 1 ಲಕ್ಷ ತಲುಪುವ ಮಾತು ಬಿಡಿ, 70,000 ರೂಪಾಯಿ ತಲುಪಿದ್ರೆ ಸಾಕಪ್ಪಾ ಎಂಬ ಸ್ಥಿತಿ ನಿರ್ಮಾಣ ಆಗಿದೆ. ಇದು ಚಿನ್ನದ ಮೇಲೆ ಹೂಡಿಕೆ ಮಾಡಿದ್ದವರಿಗೆ ಚಿಂತೆ ತರಿಸಿದ್ದರೆ, ಆಭರಣ & ಒಡವೆ ಇಷ್ಟುಪಡುವ ಮಹಿಳೆಯರಿಗೆ ಸಿಕ್ಕಾಪಟ್ಟೆ ಖುಷಿ ನೀಡಿದೆ. ಹಾಗಾದ್ರೆ ಇಂದಿನ ಚಿನ್ನದ ಬೆಲೆ ಎಷ್ಟಿದೆ? ಮುಂದೆ ಓದಿ.

ಚಿನ್ನದ ಬೆಲೆ ಭಾರಿ ಕುಸಿತ!
ಒಡವೆ ಚಿನ್ನದ ಬೆಲೆ ಅಂದ್ರೆ 22 ಕ್ಯಾರೆಟ್ ಚಿನ್ನದ ಬೆಲೆ ನಿನ್ನೆ ಭಾರಿ ಕುಸಿತ ಕಂಡಿತ್ತು, ಆಭರಣ ಚಿನ್ನದ ಬೆಲೆಯು ಕುಸಿತದ ನಂತರ 10 ಗ್ರಾಂಗೆ 66,200 ರೂಪಾಯಿ ಬೆಲೆ ಇತ್ತು. ಹಾಗೆಯೇ 24 ಕ್ಯಾರೆಟ್ ಚಿನ್ನದ ಬೆಲೆ ಕೂಡ ಕುಸಿದು ಬಿದ್ದಿತ್ತು. 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 72,220 ರೂಪಾಯಿ ಆಗಿತ್ತು. 18 ಕ್ಯಾರೆಟ್ ಚಿನ್ನದ ಬೆಲೆ ಕೂಡ ಕುಸಿತ ಕಂಡಿತ್ತು. ಆದರೆ ಈಗ ಚಿನ್ನ ಬೆಲೆಯಲ್ಲಿ ಯಾವುದೇ ಏರಿಳಿತ ಆಗಿಲ್ಲ. ಹೀಗಾಗಿ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 66,200 ರೂಪಾಯಿ ಇದ್ದರೆ, 24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 72,220 ರೂಪಾಯಿ ಇದೆ.
5000 ವರ್ಷಗಳ ಭರ್ಜರಿ ಇತಿಹಾಸ
ಮನುಷ್ಯ ನಾಗರಿಕತೆ ಕಡೆಗೆ ಹೆಜ್ಜೆ ಹಾಕಿದ ನಂತರ ಚಿನ್ನ ಹೆಚ್ಚು ಬಳಸತೊಡಗಿದ ಹೀಗೆ ಚಿನ್ನದ ಬಳಕೆಗೆ 5000 ವರ್ಷ ಇತಿಹಾಸ ಇದೆ. ಹೀಗೆ ಚಿನ್ನವನ್ನ ಮನುಷ್ಯರು ಸಾವಿರಾರು ವರ್ಷಗಳಿಂದ ಬಳಕೆ ಮಾಡಿಕೊಂಡು ಬರುತ್ತಿದ್ದಾರೆ. ಹೀಗಾಗಿಯೇ ಇಂದಿಗು ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಮತ್ತು ಬೆಲೆ ಇದೆ. ಈ ರೀತಿ ಯಾವುದೇ ಲೋಹಕ್ಕೆ ಕೂಡ ಚಿನ್ನದಷ್ಟು ಮಾನ್ಯತೆ ನೀಡಲ್ಲ ಆದ್ರೆ ಚಿನ್ನಕ್ಕೆ ಮಾತ್ರ ಹೆಚ್ಚು ಬೆಲೆ ಇದ್ದು ಮುಂದಿನ ದಿನಗಳಲ್ಲಿ ಮತ್ತಷ್ಟು ದುಬಾರಿ ಆಗುವುದು ಪಕ್ಕಾ, ಎಂಬ ಮಾತುಗಳು ಕೇಳಿಬರುತ್ತಿವೆ.
ಹಳದಿ ಲೋಹ ಎಲ್ಲರಿಗೂ ಇಷ್ಟ!
ಚಿನ್ನ ಭಾರತೀಯರ ಪಾಲಿಗೆ ತುರ್ತು ಹಣ ಇದ್ದಂತೆ, ಯಾಕಂದ್ರೆ ಯಾವುದೇ ತುರ್ತು ಸ್ಥಿತಿ ಎದುರಾಗಿ ಪರದಾಟ ಶುರುವಾದರೂ ಭಾರತೀಯರು ಮೊದಲು ತಮ್ಮ ಬಳಿ ಇರುವ ಚಿನ್ನ, ಮತ್ತು ಬೆಳ್ಳಿ ಮೊರೆ ಹೋಗುತ್ತಾರೆ. ಯಾಕಂದ್ರೆ ತುರ್ತು ಪರಿಸ್ಥಿತಿಯಲ್ಲಿ, ಎಲ್ಲಿಯೂ ಹಣ ಸಿಗದೇ ಇದ್ದರೆ ನಮ್ಮ ಬಳಿ ಇರುವ ಚಿನ್ನ & ಬೆಳ್ಳಿಗೆ ಬೇಡಿಕೆ ಬಂದೇ ಬರುತ್ತದೆ. ಹೀಗಾಗಿಯೇ ಬಹುತೇಕ ಭಾರತೀಯರು ಚಿನ್ನದ ಮೇಲೆ ಹೂಡಿಕೆ ಮಾಡುತ್ತಾ ಬಂದಿದ್ದಾರೆ. ಮತ್ತೊಂದು ಕಡೆ ಚಿನ್ನದ ಮೇಲೆ ಹೂಡಿಕೆ ಮಾಡುವ ಪ್ರತಿಯೊಬ್ಬರಿಗೂ, ಹಳದಿ ಲೋಹ ಬೆನ್ನೆಲುಬಾಗಿ ನಿಂತಿದೆ. ಮುಂದಿನ ದಿನಗಳಲ್ಲಿ ಹಳದಿ ಲೋಹ ಅಂದ್ರೆ ಚಿನ್ನ ಮತ್ತಷ್ಟು ಎತ್ತರಕ್ಕೆ ಹೋಗುವ ನಿರೀಕ್ಷೆ ದಟ್ಟವಾಗಿದೆ.
ಚಿನ್ನ ಇಲ್ಲದೆ ಏನೂ ನಡೆಯಲ್ಲ!
ಆಧುನಿಕ ಕಾಲಘಟ್ಟದಲ್ಲಿ ಚಿನ್ನ ಅದೆಷ್ಟು ಮುಖ್ಯ ಎಂದರೆ, ಚಿನ್ನವು ಇಲ್ಲದೆ ಏನೂ ನಡೆಯಲ್ಲ ಎನ್ನಬಹುದು. ಯಾಕಂದ್ರೆ ಚಿನ್ನ ಆಭರಣವಾಗಿ ಮಾತ್ರವಲ್ಲ, ಹಲವು ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕೆಯಲ್ಲಿ ಕೂಡ ಬಳಕೆ ಮಾಡಲಾಗುತ್ತೆ. ಮೊಬೈಲ್ ಸೇರಿದಂತೆ, ಹಲವು ಎಲೆಕ್ಟ್ರಾನಿಕ್ ಉಪಕರಣಗಳ ತಯಾರಿಕೆಗೆ ಕೂಡ ಚಿನ್ನ ಬೇಕೆ ಬೇಕಾಗುತ್ತೆ. ಹೀಗಾಗಿಯೇ ಚಿನ್ನ ಈಗ ಆಧುನಿಕ ಕಾಲದಲ್ಲಿ ಅತ್ಯವಶ್ಯಕ ವಸ್ತು ಎನಿಸಿಕೊಂಡಿದೆ. ಹೀಗೆಯೇ, ಎಲ್ಲಾ ಕಡೆಯಿಂದ ಕೂಡ ಚಿನ್ನಕ್ಕೆ ಬೇಡಿಕೆ ಹೆಚ್ಚಾಗುತ್ತಿರುವ ಕಾರಣ, ಬೆಲೆಯಲ್ಲಿ ಏರಿಳಿತ ಉಂಟಾಗುತ್ತಿದ್ದು. ಮುಂದೆ ಇನ್ನಷ್ಟು ಏರಿಳಿತ ಕಾಣಬಹುದು ಅಂತಾರೆ ತಜ್ಞರು.
ಹೂಡಿಕೆ ಮಾಡಿದ್ದವರಿಗೆ ಟೆನ್ಷನ್!
ಚಿನ್ನ ಮಾರುಕಟ್ಟೆಯಲ್ಲಿ ಸತತವಾಗಿ ಕುಸಿತ ಕಾಣುತ್ತಿದ್ದು, ಇದರಿಂದ ಹೂಡಿಕೆದಾರರಿಗೆ ಹೊಸ ಆತಂಕ ಶುರುವಾಗಿದೆ. ಯಾಕಂದ್ರೆ ಚಿನ್ನ ಕೂಡ ಆರ್ಥಿಕತೆಯ ಒಂದು ಭಾಗವೇ ಆಗಿದೆ. ಹೀಗಿದ್ದಾಗ ಚಿನ್ನದ ಬೆಲೆಯಲ್ಲಿ ಸತತವಾಗಿ ಕುಸಿತ ದಾಖಲಾಗುತ್ತಿದೆ ಎಂಬುದು ಚಿಂತೆಗೆ ದೂಡಿದೆ. ಅದರಲ್ಲೂ ಕಳೆದ ಒಂದೆರಡು ವಾರದಿಂದ ನಿರಂತರವಾಗಿ ಚಿನ್ನವು ತನ್ನ ಬೆಲೆ ಕಳೆದುಕೊಳ್ಳುತ್ತಿದೆ. ಹೀಗಿದ್ದಾಗ ಮೊನ್ನೆ ಬಂಪರ್ ಆಫರ್ ಸಿಕ್ಕಿತ್ತು. ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಆಗಿತ್ತು. ಹೀಗಿದ್ದಾಗಲೇ ಮತ್ತೊಮ್ಮೆ ಚಿನ್ನದ ಬೆಲೆ ಈಗ ಮತ್ತೆ ಹಿನ್ನಡೆ ಕಂಡಿದೆ. ಹಾಗಿದ್ರೆ ಚಿನ್ನದ ಬೆಲೆ ಮತ್ತೆ ಕುಸಿತ ಕಾಣುತ್ತಾ? ಮುಂದೆ ಓದಿ.
ದೇಶದ ಆರ್ಥಿಕತೆ ನಿರ್ಧರಿಸುತ್ತದೆ!
ಚಿನ್ನ ಕೇವಲ ಒಂದು ಲೋಹವಲ್ಲ, ಚಿನ್ನ ಎಂಬುದು ಒಂದು ಅಪರೂಪದ ವಸ್ತು ಕೂಡ. ಚಿನ್ನ ಆಭರಣಕ್ಕೆ ಮಾತ್ರವಲ್ಲ, ಹಲವು ವಿಚಾರದಲ್ಲೂ ಬಳಕೆ ಆಗುತ್ತದೆ. ಈ ಅಮೂಲ್ಯ & ಅಪರೂಪದ ಲೋಹವನ್ನು ಪ್ರತಿಯೊಂದು ದೇಶವೂ ರಕ್ಷಣೆ ಮಾಡುತ್ತದೆ. ಅದ್ರಲ್ಲೂ ಚಿನ್ನ ಖರೀದಿ ಮಾಡಿ ಸಂಗ್ರಹ ಮಾಡುವುದು ಕೂಡ ಪ್ರತಿಯೊಂದು ದೇಶದ ಆರ್ಥಿಕತೆ ರಕ್ಷಿಸುವಲ್ಲಿ ಪ್ರಮುಖ ಪಾತ್ರ ಬೀರುತ್ತದೆ. ಶ್ರೀಮಂತ ದೇಶಗಳು ಚಿನ್ನ ಖರೀದಿ ಮಾಡಿ ಅದನ್ನ ರಕ್ಷಿಸುತ್ತವೆ.












Click it and Unblock the Notifications