Gold Price: ಚಿನ್ನದ ಬೆಲೆ ಕುಸಿತ, ಬಂಗಾರದ ಬೆಲೆ ಇಂದು ಎಷ್ಟಿದೆ?
ಚಿನ್ನದ ಬೆಲೆ ಸ್ಥಿರತೆ ಕಳೆದುಕೊಂಡಿದ್ದು, ಸತತವಾಗಿ ಕುಸಿತದ ಹಾದಿಗೆ ಬಂದಿದೆ. ಹೀಗೆ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಚಿನ್ನದ ಬೆಲೆ ಕುಸಿತ ಕಂಡಿತ್ತು. ಹೀಗಿದ್ದಾಗ ಮೊನ್ನೆ ದಿಢೀರ್ ಚಿನ್ನದ ಬೆಲೆ ಒಂದಷ್ಟು ಏರಿಕೆ ಕಂಡಿತ್ತು. ಆದರೆ ಇದೀಗ ಮತ್ತೊಮ್ಮೆ ಚಿನ್ನದ ಬೆಲೆ ಕುಸಿತ ಕಂಡಿದೆ. ಹಾಗಾದ್ರೆ ಇದೀಗ ಎಷ್ಟಿದೆ ಚಿನ್ನದ ಬೆಲೆ?
ಚಿನ್ನ ಮಾರುಕಟ್ಟೆಯಲ್ಲಿ ಸತತವಾಗಿ ಕುಸಿತ ಕಾಣುತ್ತಿದ್ದು, ಇದರಿಂದ ಹೂಡಿಕೆದಾರರಿಗೆ ಹೊಸ ಆತಂಕ ಶುರುವಾಗಿದೆ. ಯಾಕಂದ್ರೆ ಚಿನ್ನ ಕೂಡ ಆರ್ಥಿಕತೆಯ ಒಂದು ಭಾಗವೇ ಆಗಿದೆ. ಹೀಗಿದ್ದಾಗ ಚಿನ್ನದ ಬೆಲೆಯಲ್ಲಿ ಸತತವಾಗಿ ಕುಸಿತ ದಾಖಲಾಗುತ್ತಿದೆ ಎಂಬುದು ಚಿಂತೆಗೆ ದೂಡಿದೆ. ಅದರಲ್ಲೂ ಕಳೆದ ಒಂದೆರಡು ವಾರದಿಂದ ನಿರಂತರವಾಗಿ ಚಿನ್ನವು ತನ್ನ ಬೆಲೆ ಕಳೆದುಕೊಳ್ಳುತ್ತಿದೆ. ಹೀಗಿದ್ದಾಗ ಮೊನ್ನೆ ಬಂಪರ್ ಆಫರ್ ಸಿಕ್ಕಿತ್ತು. ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಆಗಿತ್ತು. ಹೀಗಿದ್ದಾಗಲೇ ಮತ್ತೊಮ್ಮೆ ಚಿನ್ನದ ಬೆಲೆ ಈಗ ಮತ್ತೆ ಹಿನ್ನಡೆ ಕಂಡಿದೆ. ಹಾಗಿದ್ರೆ ಚಿನ್ನದ ಬೆಲೆ ಮತ್ತೆ ಕುಸಿತ ಕಾಣುತ್ತಾ? ಮುಂದೆ ಓದಿ.

ಚಿನ್ನದ ಬೆಲೆ ಭಾರಿ ಕುಸಿತ!
ಒಡವೆ ಚಿನ್ನ ಅಂದ್ರೆ 22 ಕ್ಯಾರೆಟ್ ಚಿನ್ನದ ಬೆಲೆಯು ಭಾರಿ ಕುಸಿತ ಕಂಡು, ಪ್ರತಿ 100 ಗ್ರಾಂ ಆಭರಣ ಚಿನ್ನದ ಬೆಲೆ 8,000 ರೂಪಾಯಿ ಕುಸಿತ ಕಂಡಿದೆ ಹೀಗಾಗಿ ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ಈಗ 800 ರೂ. ಕಡಿತವಾಗಿದೆ. ಆಭರಣ ಚಿನ್ನದ ಬೆಲೆ ಕುಸಿತದ ನಂತರ ಪ್ರತಿ 10 ಗ್ರಾಂಗೆ 66,350 ರೂಪಾಯಿ ಇದ್ದು. 24 ಕ್ಯಾರೆಟ್ ಚಿನ್ನದ ಬೆಲೆ ಕೂಡ ಕುಸಿದು ಬಿದ್ದಿದ್ದು 24 ಕ್ಯಾರೆಟ್ ಚಿನ್ನದ ಬೆಲೆ 100 ಗ್ರಾಂಗೆ 8,700 ರೂಪಾಯಿ ಕುಸಿತ ಕಂಡಿದೆ.
ಬೆಳ್ಳಿ ಬೆಲೆಯಲ್ಲೂ ಕುಸಿತ
24 ಕ್ಯಾರೆಟ್ ಚಿನ್ನದ ಬೆಲೆ ಇದೀಗ 72,380 ರೂಪಾಯಿ ಆಗಿದ್ದು, 18 ಕ್ಯಾರೆಟ್ ಚಿನ್ನದ ಬೆಲೆ ಕೂಡ ಕುಸಿತ ಕಂಡು ಹಳದಿ ಲೋಹದ ಬೆಲೆ ಕುಸಿತದ ಹಾದಿ ಹಿಡಿದಿದೆ. ಇದರ ಜೊತೆ ಬೆಳ್ಳಿ ಬೆಲೆ ಕೂಡ ಇಳಿಕೆ ಕಂಡು ಬರುತ್ತಿದ್ದು ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿ ಚಿನ್ನದ ಬೆಲೆ ಇಳಿಕೆ ಕಾಣುವ ನಿರೀಕ್ಷೆ ಇದೆ. ಬೆಳ್ಳಿಯ ಬೆಲೆ ಸುಮಾರು 2000 ರೂಪಾಯಿ ಪ್ರತಿ ಕೆಜಿಗೆ ಕುಸಿತ ಕಂಡು 92,000 ರೂಪಾಯಿಗೆ ಬೆಳ್ಳಿ ಪ್ರತಿ ಕೆಜಿಗೆ ಮಾರಾಟ ಆಗುತ್ತಿದೆ. ಒಟ್ನಲ್ಲಿ ಈ ಮೂಲಕ ಚಿನ್ನದ ಬೆಲೆ ಕುಸಿತ ಕಾಣುತ್ತಿರುವುದು ಸಂಚಲನ ಸೃಷ್ಟಿಸಿದೆ.
ದೇಶದ ಆರ್ಥಿಕತೆ ನಿರ್ಧರಿಸುತ್ತದೆ!
ಚಿನ್ನ ಕೇವಲ ಒಂದು ಲೋಹವಲ್ಲ, ಚಿನ್ನ ಎಂಬುದು ಒಂದು ಅಪರೂಪದ ವಸ್ತು ಕೂಡ. ಚಿನ್ನ ಆಭರಣಕ್ಕೆ ಮಾತ್ರವಲ್ಲ, ಹಲವು ವಿಚಾರದಲ್ಲೂ ಬಳಕೆ ಆಗುತ್ತದೆ. ಈ ಅಮೂಲ್ಯ & ಅಪರೂಪದ ಲೋಹವನ್ನು ಪ್ರತಿಯೊಂದು ದೇಶವೂ ರಕ್ಷಣೆ ಮಾಡುತ್ತದೆ. ಅದ್ರಲ್ಲೂ ಚಿನ್ನ ಖರೀದಿ ಮಾಡಿ ಸಂಗ್ರಹ ಮಾಡುವುದು ಕೂಡ ಪ್ರತಿಯೊಂದು ದೇಶದ ಆರ್ಥಿಕತೆ ರಕ್ಷಿಸುವಲ್ಲಿ ಪ್ರಮುಖ ಪಾತ್ರ ಬೀರುತ್ತದೆ. ಶ್ರೀಮಂತ ದೇಶಗಳು ಚಿನ್ನ ಖರೀದಿ ಮಾಡಿ ಅದನ್ನ ರಕ್ಷಿಸುತ್ತವೆ.












Click it and Unblock the Notifications