Gold Price: ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ, ಬಂಗಾರದ ಬೆಲೆ ಮತ್ತಷ್ಟು ಕುಸಿತ ಕಾಣುವುದು ಪಕ್ಕಾ?

ಚಿನ್ನ ಖರೀದಿ ಮಾಡಬೇಕು ಅಂತಾ ಕಾಯುತ್ತಿದ್ದೀರಾ? ಹಾಗಾದ್ರೆ ನಿಮಗೆ ಇಲ್ಲಿದೆ ಭರ್ಜರಿಯಾದ ಸುದ್ದಿ. ಕಳೆದ ಕೆಲವು ತಿಂಗಳಿಂದ ನಿರಂತರವಾಗಿ ಏರಿಕೆ ಕಾಣುತ್ತಿದ್ದ ಚಿನ್ನದ ಬೆಲೆ ಇದೀಗ ಭಾರಿ ಕುಸಿತ ಕಾಣುತ್ತಿದೆ. ಅದರಲ್ಲೂ ಚಿನ್ನದ ಬೆಲೆ ಇಳಿಕೆ ಆಗುತ್ತಿರುವುದನ್ನ ನೋಡಿದರೆ, ಮುಂದಿನ ದಿನಗಳಲ್ಲಿ ಚಿನ್ನ ಮತ್ತಷ್ಟು ಕಡಿಮೆ ಆಗುತ್ತೆ ಎನ್ನಲಾಗಿದೆ. ಇನ್ನೊಂದು ಅಂದಾಜಿನ ಪ್ರಕಾರ ಚಿನ್ನದ ಬೆಲೆ ಶೀಘ್ರದಲ್ಲೇ ಮತ್ತೊಮ್ಮೆ 10 ಗ್ರಾಂಗೆ 50,000 ರೂಪಾಯಿಗೆ ತಲುಪಲಿದೆ ಎನ್ನಲಾಗುತ್ತಿದೆ. ಹಾಗಾದ್ರೆ ಇಂದು ಎಷ್ಟಿದೆ ಚಿನ್ನದ ಬೆಲೆ? ಮುಂದೆ ಓದಿ.

ಚಿನ್ನ ಬಹು ಬೇಡಿಕೆಯ ವಸ್ತುವಾಗಿದೆ ಹೀಗಾಗಿಯೇ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗೆ ಚಿನ್ನ ಕೊಳ್ಳಲು ಜನ ಕೂಡ ಮುಗಿಬಿದ್ದು ಮುಂದೆ ಬರುತ್ತಿದ್ದಾರೆ. ಹೀಗಿದ್ದಾಗಲೇ ಚಿನ್ನದ ಜೊತೆ ಬೆಳ್ಳಿ ಬೆಲೆ ಕೂಡ ಭಾರಿ ಏರಿಕೆ ಕಾಣುತ್ತಿತ್ತು. ನೋಡ ನೋಡುತ್ತಲೇ ಬೆಳ್ಳಿ ಬೆಲೆ, ಹತ್ತಿರ ಹತ್ತಿರ 1 ಲಕ್ಷ ರೂಪಾಯಿ ತಲುಪಿತ್ತು. ಇಂತಹ ಸ್ಥಿತಿಯಲ್ಲಿ ದಿಢೀರ್ ಬೆಳ್ಳಿ ಬೆಲೆಯಲ್ಲಿ ನಿನ್ನೆಯು ದೊಡ್ಡ ಕುಸಿತವಾಗಿದೆ. ಮುಂದಿನ ದಿನಗಳಲ್ಲಿ ಬೆಳ್ಳಿ ಬೆಲೆ ಮತ್ತಷ್ಟು ಕುಸಿತ ಕಾಣುವ ನಿರೀಕ್ಷೆ ಇದೆ. ಬೆಳ್ಳಿ ಬಿಡಿ ಚಿನ್ನ ಕೂಡ ಭಾರಿ ದೊಡ್ಡ ಪ್ರಮಾಣದಲ್ಲಿ ಕುಸಿತ ಕಾಣುತ್ತಿದೆ. ಹಾಗಾದ್ರೆ, ಈಗ ಚಿನ್ನ & ಬೆಳ್ಳಿ ಬೆಲೆ ಎಷ್ಟಿದೆ? ಮಾಹಿತಿ ಮುಂದೆ ಇದೆ ಓದಿ.

Gold Price In Karnataka And Bengaluru On 8Th Of August 2024

ಚಿನ್ನದ ಬೆಲೆ ಭಾರಿ ಕುಸಿತ!

ಬಂಗಾರದ ಬೆಲೆಯಲ್ಲಿ ಕಳೆದ ಕೆಲವು ದಿನಗಳಿಂದ, ನಿರಂತರವಾಗಿ ಕುಸಿತ ದಾಖಲಾಗುತ್ತಿದೆ. ಆಭರಣ ಚಿನ್ನ ಅಂದ್ರೆ 22 ಕ್ಯಾರೆಟ್ ಚಿನ್ನದ ಬೆಲೆ ಭಾರಿ ಕುಸಿತ ಕಂಡು ಪ್ರತಿ 100 ಗ್ರಾಂ ಆಭರಣ ಚಿನ್ನದ ಬೆಲೆ 4,000 ರೂಪಾಯಿ ಇಳಿಕೆ ಕಂಡಿದೆ. ಹೀಗಾಗಿ ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ಈಗ 400 ರೂ. ಕಡಿತವಾಗಿದೆ. ಆಭರಣ ಚಿನ್ನ ಬೆಲೆ ಕುಸಿತದ ನಂತರ, ಪ್ರತಿ 10 ಗ್ರಾಂಗೆ 63,500 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯು ಕೂಡ ನಿನ್ನೆ ಕುಸಿದು ಬಿದ್ದಿದ್ದು 24 ಕ್ಯಾರೆಟ್ ಚಿನ್ನದ ಬೆಲೆ 100 ಗ್ರಾಂಗೆ 4,400 ರೂಪಾಯಿ ಇಳಿಕೆ ಕಂಡಿದೆ.

ಬೆಳ್ಳಿ ಬೆಲೆಯಲ್ಲೂ ಭಾರಿ ಇಳಿಕೆ!

24 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 69,270 ರೂಪಾಯಿ ಆಗಿದ್ದು, 18 ಕ್ಯಾರೆಟ್ ಚಿನ್ನದ ಬೆಲೆ ಕೂಡ ಕುಸಿತ ಕಂಡು ಹಳದಿ ಲೋಹದ ಬೆಲೆ ಕುಸಿತದ ಹಾದಿ ಹಿಡಿದಿದೆ. 18 ಕ್ಯಾರೆಟ್ ಚಿನ್ನದಲ್ಲಿ ಇದೀಗ ಪ್ರತಿ 100 ಗ್ರಾಂಗೆ 3,200 ಕುಸಿತ ಆಗಿದೆ. ಹೀಗಾಗಿ 18 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 100 ಗ್ರಾಂಗೆ 51,960 ರೂಪಾಯಿ ಆಗಿದೆ. ಇದರ ಜೊತೆ ಬೆಳ್ಳಿ ಬೆಲೆ ಕೂಡ ಇಳಿಕೆ ಕಂಡು ಬರುತ್ತಿದ್ದು ಮುಂದಿನ ಕೆಲವು ದಿನಗಳ ಕಾಲ ಇದೆ ರೀತಿ ಚಿನ್ನದ ಬೆಲೆ ಇಳಿಕೆ ಕಾಣುವ ನಿರೀಕ್ಷೆ ಇದೆ. ಬೆಳ್ಳಿಯ ಬೆಲೆ 6,500 ರೂಪಾಯಿ ಪ್ರತಿ ಕೆಜಿಗೆ ಕುಸಿತ ಕಂಡಿದ್ದು, 81,000 ರೂಪಾಯಿಗೆ ಬೆಳ್ಳಿ ಪ್ರತಿ ಕೆಜಿಗೆ ಮಾರಾಟ ಆಗ್ತಿದೆ. ಒಟ್ಟಿನಲ್ಲಿ ಚಿನ್ನ & ಬೆಳ್ಳಿ ಬೆಲೆ ಇಳಿಕೆ ಆಭರಣ ಪ್ರಿಯರಿಗೆ ಖುಷಿಯನ್ನು ಕೊಡುತ್ತಿದೆ, ಆದರೆ ಹೂಡಿಕೆ ಮಾಡಿದವರಿಗೆ ಟೆನ್ಷನ್ ಶುರುವಾಗಿದೆ!

ವರ್ಷದಿಂದ ವರ್ಷಕ್ಕೆ ಚಿನ್ನದ ಬೆಲೆ ಏರಿಕೆ!

15 ವರ್ಷಕ್ಕೆ ಹೋಲಿಕೆ ಮಾಡಿದರೆ ಚಿನ್ನದ ಬೆಲೆಯಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ದೊಡ್ಡ ಮಟ್ಟದಲ್ಲಿ ಚಿನ್ನ ಏರಿಕೆ ಕಂಡಿದೆ. ಹಾಗೇ ಮುಂದಿನ ದಿನಗಳಲ್ಲಿ ಚಿನ್ನಕ್ಕೆ ಮತ್ತೆ ಹೆಚ್ಚಿನ ಬೇಡಿಕೆ ಬರುವ ಸಾಧ್ಯತೆ ದಟ್ಟವಾಗಿದೆ. ಇದಕ್ಕೆಲ್ಲ ಕಾರಣ ಏನೆಂದರೆ ಭೂಮಿಯ ಒಳಗೆ ಸಿಗುತ್ತಿದ್ದ ಚಿನ್ನ ಭಾಗಶಃ ಕಡಿಮೆ ಆಗುತ್ತಾ ಬರುತ್ತಿದೆ. ಹೀಗೆ, ಗಣಿಗಾರಿಕೆ ನಡೆಸುವ ಸಾಧ್ಯತೆ ಕೂಡ ಕ್ಷೀಣಿಸುತ್ತಿದೆ. ಇದು ಕೂಡ ಚಿನ್ನದ ಮೇಲೆ ಸಾಕಷ್ಟು ದೊಡ್ಡ ಪ್ರಮಾಣದ ಪರಿಣಾಮ ಬೀರುವ ಸಾಧ್ಯತೆ ಇದ್ದು ಚಿನ್ನ ಬೆಲೆ ಈ ವರ್ಷದ ಅಂತ್ಯಕ್ಕೆ 1 ಲಕ್ಷ ರೂಪಾಯಿ ಆಸುಪಾಸಿಗೆ ಬರಬಹುದು ಎನ್ನಲಾಗಿತ್ತು. ಆದರೆ ಈಗ ನೋಡಿದರೆ ಚಿನ್ನದ ಬೆಲೆಯಲ್ಲಿ ಕುಸಿತ ಆರಂಭ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+