Gold Price: ಚಿನ್ನದ ಬೆಲೆಯಲ್ಲಿ 4,400 ರೂಪಾಯಿ ಕುಸಿತ!

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಕುಸಿತವಾಗಿದ್ದು, ಒಂದೇ ದಿನ ಸುಮಾರು 4,400 ರೂಪಾಯಿ ಕುಸಿತ ಕಂಡಿದೆ ಚಿನ್ನ. ಏಪ್ರಿಲ್ ತಿಂಗಳಲ್ಲಿ, ಹತ್ತಾರು ಸಾವಿರ ರೂಪಾಯಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ಮೇ ತಿಂಗಳ 2ನೇ ವಾರದಿಂದ ಕುಸಿತದ ಹಾದಿ ಹಿಡಿದಿತ್ತು. ಈ ನಡುವೆ ಲೋಕಸಭೆ ಚುನಾವಣೆ 2024ರ ಫಲಿತಾಂಶದ ಹಿಂದಿನ ದಿನ ಚಿನ್ನ ಮತ್ತಷ್ಟು ಕುಸಿತ ಕಂಡಿದ್ದು, ಚಿನ್ನ ಖರೀದಿ ಮಾಡಬೇಕು ಎಂದು ಕಾಯುತ್ತಿದ್ದ ಆಭರಣ ಪ್ರಿಯ ಮಹಿಳೆಯರಿಗೆ ಖುಷಿ ಕೊಟ್ಟಿದೆ.

ಚಿನ್ನ ಕೇವಲ ಒಂದು ಲೋಹವಲ್ಲ, ಚಿನ್ನ ಎಂಬುದು ಒಂದು ಅಪರೂಪದ ವಸ್ತು ಕೂಡ. ಚಿನ್ನ ಆಭರಣಕ್ಕೆ ಮಾತ್ರವಲ್ಲ, ಹಲವು ವಿಚಾರದಲ್ಲೂ ಬಳಕೆ ಆಗುತ್ತದೆ. ಈ ಅಮೂಲ್ಯ & ಅಪರೂಪದ ಲೋಹವನ್ನು ಪ್ರತಿಯೊಂದು ದೇಶವೂ ರಕ್ಷಣೆ ಮಾಡುತ್ತದೆ. ಅದ್ರಲ್ಲೂ ಚಿನ್ನ ಖರೀದಿ ಮಾಡಿ ಸಂಗ್ರಹ ಮಾಡುವುದು ಕೂಡ ಪ್ರತಿಯೊಂದು ದೇಶದ ಆರ್ಥಿಕತೆ ರಕ್ಷಿಸುವಲ್ಲಿ ಪ್ರಮುಖ ಪಾತ್ರ ಬೀರುತ್ತದೆ. ಶ್ರೀಮಂತ ದೇಶಗಳು ಚಿನ್ನ ಖರೀದಿ ಮಾಡಿ ಅದನ್ನ ರಕ್ಷಿಸುತ್ತವೆ.

Gold Price Is Decreased By 4 400 Per 100 Gram On June 3rd Of 2024

ಚಿನ್ನದ ಮೇಲೆ ಹೂಡಿಕೆ ಮಾಡುವುದು ಕೂಡ ಶ್ರೀಮಂತ ದೇಶಗಳ ಆರ್ಥಿಕ ಚಟುವಟಿಯೇ ಆಗಿದೆ. ಅದರಲ್ಲೂ ಯುದ್ಧ ಸಮಯ ಬಂದಾಗೆಲ್ಲಾ ಚಿನ್ನದ ಮೇಲೆ ನಂಬಿಕೆ ಹೆಚ್ಚಾಗುತ್ತದೆ. ಇದೇ ಕಾರಣಕ್ಕೆ ಏಪ್ರಿಲ್ ತಿಂಗಳಲ್ಲಿ ಚಿನ್ನದ ಬೆಲೆ ಭಾರಿ ಏರಿಕೆ ಕಾಣುತ್ತಿತ್ತು. ಆದರೆ ಇದೀಗ ಚಿನ್ನ ಕುಸಿತ ಕಾಣುತ್ತಿದ್ದು, ಚಿನ್ನದ ಬೆಲೆಯಲ್ಲಿ ಈಗ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಹಾಗಾದರೆ ಇಂದು ಎಷ್ಟಿದೆ ಗೊತ್ತಾ ಚಿನ್ನದ ಬೆಲೆ? ಮುಂದೆ ಓದಿ.

ಚಿನ್ನ 4,400 ರೂಪಾಯಿ ಕುಸಿತ

ಶುದ್ಧ ಚಿನ್ನ ಅಂದರೆ 24 ಕ್ಯಾರೆಟ್ ಚಿನ್ನದ ಬೆಲೆ ಕುಸಿದು ಬಿದ್ದಿದ್ದು, ಈಗ 24 ಕ್ಯಾರೆಟ್ ಚಿನ್ನದ ಬೆಲೆ 100 ಗ್ರಾಂಗೆ 4,400 ರೂಪಾಯಿ ಕುಸಿತ ಕಂಡಿದೆ ಈ ಮೂಲಕ ಶುದ್ಧ ಚಿನ್ನ ಬೆಲೆ ಪ್ರತಿ 100 ಗ್ರಾಂಗೆ 7,21,100 ರೂಪಾಯಿ ಬೆಲೆಗೆ ತಲುಪಿದೆ. ಶುದ್ಧ ಚಿನ್ನ ಬೆಲೆ ಪ್ರತಿ 10 ಗ್ರಾಂಗೆ 72,110ಗೆ ಕುಸಿತ ಕಂಡಿದೆ. ಇನ್ನು ಆಭರಣ ಚಿನ್ನ ಅಂದ್ರೆ 22 ಕ್ಯಾರೆಟ್ ಚಿನ್ನ ಬೆಲೆಯು ಮಾರುಕಟ್ಟೆಯಲ್ಲಿ ಭಾರಿ ಕುಸಿತ ಕಂಡಿದೆ. 100 ಗ್ರಾಂ ಆಭರಣ ಚಿನ್ನದ ಬೆಲೆಯು 4000 ರೂಪಾಯಿ ಕುಸಿತ ಕಂಡಿದೆ. ಹಾಗೇ ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ಈಗ 400 ರೂ. ಕಡಿತವಾಗಿದೆ. ಆಭರಣ ಚಿನ್ನದ ಬೆಲೆ ಕುಸಿತದ ನಂತರ ಇದೀಗ ಪ್ರತಿ 10 ಗ್ರಾಂಗೆ 66,100 ರೂಪಾಯಿಗೆ ಮಾರಾಟ ಆಗುತ್ತಿದೆ.

ಅಮೆರಿಕದ ಬಳಿ ಇದೆ ಅತಿಹೆಚ್ಚು ಚಿನ್ನ!

ಚಿನ್ನ ಜಗತ್ತಿನ ಪ್ರತಿಯೊಂದು ದೇಶಕ್ಕೂ ಬೇಕು, ಹೀಗಾಗಿ ಚಿನ್ನ ಸಂಗ್ರಹಣೆ ಬಗ್ಗೆ ಪ್ರಪಂಚ ಒತ್ತು ನೀಡುತ್ತದೆ. ಅದರಲ್ಲೂ ಜಗತ್ತಿನ ಅತ್ಯಂತ ಶ್ರೀಮಂತ ದೇಶ ಎಂಬ ಬಿರುದು ಪಡೆದ, ಅಮೆರಿಕ ಬಳಿ ಅತಿಹೆಚ್ಚು ಚಿನ್ನ ಇದೆ. ಅಮೆರಿಕ ಬಳಿ ಸುಮಾರು 8,133 ಟನ್ ಚಿನ್ನವಿದೆ. ಹಾಗಾದ್ರೆ ಭಾರತ ಈಗ ಎಷ್ಟನೇ ಸ್ಥಾನದಲ್ಲಿ ಇದೆ ಗೊತ್ತಾ? ಅತಿಹೆಚ್ಚು ಚಿನ್ನ ಹೊಂದಿರುವ ಸಂಪೂರ್ಣ ಟಾಪ್-10 ದೇಶಗಳ ಪಟ್ಟಿಗೆ ಮುಂದೆ ಓದಿ.

ಅಮೆರಿಕದ ನಂತರದ ಸ್ಥಾನದಲ್ಲಿ ಜರ್ಮನಿ ಇದ್ದು, 3,352 ಟನ್ ಚಿನ್ನವನ್ನು ಜರ್ಮನಿಯು ಹೊಂದಿದೆ. ಇಟಲಿ ಬಳಿ 2,451 ಟನ್, ಫ್ರಾನ್ಸ್ ಬಳಿ 2,436 ಟನ್, ರಷ್ಯಾ ಬಳಿ 2,332 ಟನ್, ಚೀನಾ ಬಳಿ 2,262 ಟನ್, ಸ್ವಿಜರ್ಲ್ಯಾಂಡ್ ಬಳಿ 1,040, ಜಪಾನ್ ಬಳಿ 845.97 ಟನ್ ಇದ್ದರೆ, ಭಾರತದ ಬಳಿ 822.09 ಟನ್ ಚಿನ್ನದ ಸಂಗ್ರಹ ಇದೆ. ಈ ಮೂಲಕ ಇಡೀ ಜಗತ್ತಿನಲ್ಲಿ ಅತಿಹೆಚ್ಚು ಚಿನ್ನ ಇರುವ ದೇಶಗಳ ಪೈಕಿ ಭಾರತ ಕೂಡ ಒಂದಾಗಿದೆ.

ಬೆಲೆ ಏರಿಕೆಗೆ ಕಾರಣ ಏನು?

ಚಿನ್ನಕ್ಕೆ ಸಖತ್ ಡಿಮ್ಯಾಂಡ್ ಬಂದಿದ್ದಕ್ಕೆ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಭಾರಿ ಏರಿಕೆ ಕಂಡಿತ್ತು ಭಾರತೀಯರು ಚಿನ್ನದ ಮೇಲೆ ಹೂಡಿಕೆ ಮಾಡಲು ಮುಗಿಬಿದ್ದಿದ್ದಕ್ಕೆ, ಏಪ್ರಿಲ್ ತಿಂಗಳಲ್ಲಿ ಹೊಸ ಇತಿಹಾಸ ಬರೆದಿತ್ತು ಚಿನ್ನದ ಬೆಲೆ. ಆದರೆ ಚಿನ್ನದ ಬೆಲೆ ಇಳಿಕೆ ಹಾದಿಗೆ ಮರಳಿದ್ದು, ಅದರಲ್ಲೂ ತನ್ನ ಗರಿಷ್ಠ ಬೆಲೆಯಿಂದ ಈಗ ಚಿನ್ನದ ಬೆಲೆ ಮತ್ತೆ ಕೆಳಗೆ ಇಳಿಯುತ್ತಿದ್ದು. ಇದೇ ರೀತಿ ಮುಂದಿನ ಕೆಲ ದಿನಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ಕಡಿಮೆ ಆಗುವ ನಿರೀಕ್ಷೆ ಇದೆ ಅಂತಿದ್ದಾರೆ ತಜ್ಞರು. ಈ ಮಾತು ನಿಜವಾಗಲು ಮತ್ತಷ್ಟು ದಿನ ಕಾದು ನೋಡಬೇಕಿದೆ.

ಭಾರತಕ್ಕೂ ಇದೆ ದೊಡ್ಡ ಇತಿಹಾಸ!

ಜಾಗತಿಕ ಮಟ್ಟದಲ್ಲಿ ಚಿನ್ನ ಬಳಕೆಯ ವಿಚಾರದಲ್ಲಿ ಭಾರತೀಯರೇ ಮುಂದೆ ಇದ್ದಾರೆ. ಈ ಹೆಮ್ಮೆ ಇಂದು ಅಥವಾ ನಿನ್ನೆಯದ್ದಲ್ಲ. ಸಾವಿರಾರು ವರ್ಷಗಳಿಂದ ಕೂಡ ಭಾರತದಲ್ಲಿ ಹೀಗೆ ಚಿನ್ನವನ್ನು ಬಳಕೆ ಮಾಡಲಾಗುತ್ತಿದೆ. ಅದರಲ್ಲೂ ಚಿನ್ನವನ್ನ ವ್ಯಾಪಾರದ ಉದ್ದೇಶಕ್ಕಾಗಿ, ಭಾರತದಲ್ಲಿ ಈ ಹಿಂದಿನಿಂದ ಕೂಡ ಬಳಕೆ ಮಾಡಿಕೊಂಡು ಬರಲಾಗುತ್ತಿತ್ತು. ಆಗಿನ ಕರೆನ್ಸಿ ಅಂದ್ರೆ ನಾಣ್ಯಗಳ ಮುದ್ರಣಕ್ಕೆ ಕೂಡ ಚಿನ್ನವನ್ನು ಬಳಕೆ ಮಾಡಲಾಗುತ್ತಿತ್ತು. ಹೀಗೆ ನಮ್ಮ ನೆಲದ ಜೊತೆಯಲ್ಲೇ ಚಿನ್ನವು ಕೂಡ ಬೆರೆತು ಹೋಗಿದೆ. ಹೀಗಾಗಿಯೇ ಇಂದಿಗು ಕೂಡ ಈ ವಿಚಾರದಲ್ಲಿ ಭಾರತ ಮುಂದೆ ಇದ್ದು, ಅಪಾರ ಪ್ರಮಾಣದ ಚಿನ್ನವನ್ನು ಭಾರತ ಪ್ರತಿವರ್ಷ ಆಮದು ಮಾಡಿಕೊಳ್ಳುತ್ತದೆ.

ಚಿನ್ನ ಇದ್ದರೆ ಕಷ್ಟಕಾಲದ ಬಂಧು!

ಭಾರತೀಯರಿಗೆ ಸಾಮಾನ್ಯವಾಗಿ ಚಿನ್ನ ಅಂದ್ರೆ ತುಂಬಾ ಇಷ್ಟ, ಅದರಲ್ಲೂ ಆಭರಣಗಳನ್ನು ತಮ್ಮ ಮೈಮೇಲೆ ಹಾಕಲು ಭಾರತೀಯರು ತುಂಬಾ ಇಷ್ಟಪಡುತ್ತಾರೆ. ಹೀಗೆ ಭಾರತೀಯರಲ್ಲಿ ಚಿನ್ನದ ಬಗ್ಗೆ ತುಂಬಾ ಕುತೂಹಲ ಇರುತ್ತದೆ. ಇದೆಲ್ಲವನ್ನೂ ಮೀರಿ ಚಿನ್ನ ಅನ್ನೋದು ಕಷ್ಟದ ಸಮಯ ಬಂದಾಗ ಸಹಾಯಕ್ಕೆ ಬರುವ ಬಂಧು ಅಥವಾ ಸ್ನೇಹಿತ ಇದ್ದಂತೆ. ಎಲ್ಲೂ ಹಣವನ್ನು ಹೊಂದಿಸಲು ಆಗದ ಸ್ಥಿತಿ ಬಂದಾಗ, ತುರ್ತು ಸಂದರ್ಭದಲ್ಲಿ ಚಿನ್ನವನ್ನು ಅಡ ಇಟ್ಟು ಅಥವಾ ಚಿನ್ನ ಮಾರಿ ಹಣ ಪಡೆಯಬಹುದು. ಈ ಮೂಲಕ ತುರ್ತು ಸಮಯದಲ್ಲಿ ಜೀವ ಉಳಿಸೋದಕ್ಕೆ ಚಿನ್ನ ಸಹಾಯಕ. ಈ ಎಲ್ಲಾ ಕಾರಣಕ್ಕೆ ಚಿನ್ನ ಖರೀದಿ ಅಥವಾ ಚಿನ್ನದ ಮೇಲೆಯೇ ಈ ರೀತಿ ಹೆಚ್ಚಾಗಿ ಹೂಡಿಕೆ ಮಾಡಲು ಪ್ರಮುಖ ಕಾರಣ ಎನ್ನಲಾಗುತ್ತದೆ.

ಬೆಳ್ಳಿ ಬೆಲೆಯಲ್ಲಿ ದಿಢೀರ್ ಇಳಿಕೆ!

ಚಿನ್ನ ಬಹು ಬೇಡಿಕೆಯ ವಸ್ತು, ಹೀಗಾಗಿಯೇ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗೆ ಚಿನ್ನ ಕೊಳ್ಳಲು ಜನಗಳು ಕೂಡ ಮುಗಿಬಿದ್ದು ಮುಂದೆ ಬರುತ್ತಿದ್ದಾರೆ. ಹೀಗಿದ್ದಾಗ ಚಿನ್ನದ ಜೊತೆ ಬೆಳ್ಳಿ ಬೆಲೆ ಕೂಡ ಭಾರಿ ಏರಿಕೆ ಕಾಣುತ್ತಿತ್ತು. ನೋಡ ನೋಡುತ್ತಲೇ ಬೆಳ್ಳಿ ಬೆಲೆ ಹತ್ತಿರ ಹತ್ತಿರ 1 ಲಕ್ಷ ರೂಪಾಯಿಗೆ ತಲುಪಿತ್ತು ಇಂತಹ ಸ್ಥಿತಿಯಲ್ಲಿ ಈಗ ದಿಢೀರ್ ಬೆಳ್ಳಿ ಬೆಲೆಯಲ್ಲಿ 1200 ರೂಪಾಯಿ ಕುಸಿತ ಕಂಡಿದೆ! ಮುಂದಿನ ದಿನಗಳಲ್ಲಿ ಬೆಳ್ಳಿಯ ಬೆಲೆ ಮತ್ತಷ್ಟು ಏರಿಕೆ ಕಾಣುವ ನಿರೀಕ್ಷೆಯು ಇದೆ. ಈ ನಡುವೆ ಬೆಳ್ಳಿ ಬೆಲೆ ಒಂದಷ್ಟು ಇಳಿಕೆ ಕಂಡಿರುವುದು, ಬೆಳ್ಳಿ ಇಷ್ಟಪಡುವವರಿಗೆ ಒಂದಷ್ಟು ಖುಷಿ ಕೊಟ್ಟಿದೆ.

ಚಿನ್ನದ ಬೆಲೆಯಲ್ಲಿ ಏರಿಳಿತ?

ಚಿನ್ನ.. ಚಿನ್ನ.. ಚಿನ್ನ.. ಮಹಿಳೆಯರಿಗೆ ಚಿನ್ನದ ಮೇಲೆ ಬೆಟ್ಟದಷ್ಟು ಪ್ರೀತಿ ಇರುತ್ತೆ. ಹೀಗೆ ಕೆಜಿ ಕೆಜಿ ಚಿನ್ನ ಇದ್ದರೂ ಮತ್ತಷ್ಟು ಚಿನ್ನ ಬೇಕು ಎಂಬ ಆಸೆ ಪ್ರತಿಯೊಬ್ಬ ಮಹಿಳೆಯರಲ್ಲಿ ಕೂಡ ಇರುತ್ತದೆ. ಜೊತೆಗೆ ಹೂಡಿಕೆ ಮಾಡುವವರಿಗೆ ಕೂಡ ಚಿನ್ನ ಬೆಸ್ಟ್ ಆಯ್ಕೆ. ಹೀಗೆ ಚಿನ್ನ ಎಲ್ಲೆಲ್ಲೂ ಸದ್ದು ಮಾಡುತ್ತಿರುವ ಸಮಯದಲ್ಲೇ ದಿಢೀರ್ ಏರಿಳಿತ ಕಾಣುತ್ತಿದೆ. ಈ ಮೂಲಕ ಚಿನ್ನ ಭಾರಿ ಗಮನ ಸೆಳೆಯುತ್ತಿದೆ. ಹಾಗೇ ಇದೇ ರೀತಿ ಇನ್ನೂ ಹಲವು ತಿಂಗಳ ಕಾಲ ಚಿನ್ನದ ಬೆಲೆಯಲ್ಲಿ ಇದೇ ರೀತಿ ಏರಿಳಿತ ಕಾಣುವ ನಿರೀಕ್ಷೆ ಕೂಡ ಇದೆ.

ಲಕ್ಷ.. ಲಕ್ಷ.. ರೂಪಾಯಿ ಬೆಲೆ!

ಚಿನ್ನ ಬಹು ಬೇಡಿಕೆಯ ವಸ್ತು, ಹೀಗಾಗಿಯೇ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗೆ ಚಿನ್ನ ಕೊಳ್ಳಲು ಜನಗಳು ಕೂಡ ಮುಗಿಬಿದ್ದು ಮುಂದೆ ಬರುತ್ತಿದ್ದಾರೆ. ಹೀಗಿದ್ದಾಗ ಚಿನ್ನದ ಜೊತೆ ಬೆಳ್ಳಿ ಬೆಲೆ ಕೂಡ ಭಾರಿ ಏರಿಕೆ ಕಾಣುತ್ತಿತ್ತು. ನೋಡ ನೋಡುತ್ತಲೇ ಬೆಳ್ಳಿ ಬೆಲೆ, ಹತ್ತಿರ ಹತ್ತಿರ 1 ಲಕ್ಷ ರೂಪಾಯಿಗೆ ತಲುಪಿತ್ತು. ಆದರೆ ಕಳೆದ ವಾರ ಒಂದಷ್ಟು ಕುಸಿತ ಕಂಡ ಬೆಳ್ಳಿ ಬೆಲೆ ಇದೀಗ ಮತ್ತೆ ಏರಿಕೆಯ ಹಾದಿ ಹಿಡಿದಿದೆ. ಒಂದೇ ದಿನ ಭಾರಿ ಏರಿಕೆ ಕಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಇದೇ ರೀತಿ ಬೆಳ್ಳಿ ಬೆಲೆ ಏರಿಕೆ ಕಾಣುವ ಸಾಧ್ಯತೆ ಇದೆ.

ಭಾರತಕ್ಕೂ ಇದೆ ದೊಡ್ಡ ಇತಿಹಾಸ!

ಜಾಗತಿಕ ಮಟ್ಟದಲ್ಲಿ ಚಿನ್ನ ಬಳಕೆಯ ವಿಚಾರದಲ್ಲಿ ಭಾರತೀಯರೇ ಮುಂದೆ ಇದ್ದಾರೆ. ಈ ಹೆಮ್ಮೆ ಇಂದು ಅಥವಾ ನಿನ್ನೆಯದ್ದಲ್ಲ. ಸಾವಿರಾರು ವರ್ಷಗಳಿಂದ ಕೂಡ ಭಾರತದಲ್ಲಿ ಹೀಗೆ ಚಿನ್ನವನ್ನು ಬಳಕೆ ಮಾಡಲಾಗುತ್ತಿದೆ. ಅದರಲ್ಲೂ ಚಿನ್ನವನ್ನ ವ್ಯಾಪಾರದ ಉದ್ದೇಶಕ್ಕಾಗಿ, ಭಾರತದಲ್ಲಿ ಈ ಹಿಂದಿನಿಂದ ಕೂಡ ಬಳಕೆ ಮಾಡಿಕೊಂಡು ಬರಲಾಗುತ್ತಿತ್ತು. ಆಗಿನ ಕರೆನ್ಸಿ ಅಂದ್ರೆ ನಾಣ್ಯಗಳ ಮುದ್ರಣಕ್ಕೆ ಕೂಡ ಚಿನ್ನವನ್ನು ಬಳಕೆ ಮಾಡಲಾಗುತ್ತಿತ್ತು. ಹೀಗೆ ನಮ್ಮ ನೆಲದ ಜೊತೆಯಲ್ಲೇ ಚಿನ್ನವು ಕೂಡ ಬೆರೆತು ಹೋಗಿದೆ. ಹೀಗಾಗಿಯೇ ಇಂದಿಗು ಕೂಡ ಈ ವಿಚಾರದಲ್ಲಿ ಭಾರತ ಮುಂದೆ ಇದ್ದು, ಅಪಾರ ಪ್ರಮಾಣದ ಚಿನ್ನವನ್ನು ಭಾರತ ಪ್ರತಿವರ್ಷ ಆಮದು ಮಾಡಿಕೊಳ್ಳುತ್ತದೆ.

ಚಿನ್ನದ ಬೆಲೆ 1 ಲಕ್ಷ ರೂಪಾಯಿ ಆಗುತ್ತಾ?

ಚಿನ್ನ ಅನ್ನೋದು ಹೂಡಿಕೆ ಮಾಡುವವರಿಗೆ ಖಜಾನೆಯೇ ಎನ್ನುವಂತಾಗಿದೆ. ಯಾಕಂದ್ರೆ ಹಳದಿ ಲೋಹ ಅಂದರೆ ಚಿನ್ನದ ಮೇಲೆ ಹೂಡಿಕೆ ಮಾಡುವ ಯಾರಿಗೆ ಆದರೂ ಲಾಭ ಗ್ಯಾರಂಟಿ. ಹೀಗೆ ಚಿನ್ನ ಅನ್ನೋದು ಹೂಡಿಕೆದಾರರ ಜೇಬು ತುಂಬಿಸುವ ಅಕ್ಷಯ ಪಾತ್ರೆ ಆಗುತ್ತಿದೆ. ಆದರೆ ಚಿನ್ನ ಇಷ್ಟಪಡುವ ಮಹಿಳೆಯರಿಗೆ ಈ ವರ್ಷ ಆಘಾತ ಎದುರಾಗುವುದು ಗ್ಯಾರಂಟಿ ಅಂತಿದ್ದಾರೆ ತಜ್ಞರು. ಯಾಕಂದ್ರೆ ಚಿನ್ನದ ಬೆಲೆ ಈ ವರ್ಷ 1 ಲಕ್ಷ ರೂಪಾಯಿ ತಲುಪುವ ಸಾಧ್ಯತೆ ಹೆಚ್ಚಿದೆ. ಮತ್ತೊಂದು ಕಡೆ ಸದ್ಯದ ಸ್ಥಿತಿಯಲ್ಲಿ ಚಿನ್ನದ ಬೆಲೆ ಇಳಿಕೆ ಆಗುತ್ತಿರುವುದು ಚಿನ್ನ ಇಷ್ಟಪಡುವ ಮಹಿಳೆಯರಿಗೆ ಹಾಗೂ ಚಿನ್ನ ಪ್ರಿಯರಿಗೆ ಸಖತ್ ಸುದ್ದಿ ನೀಡಿದಂತೆ ಆಗಿದೆ.

ಚಿನ್ನದ ಬೆಲೆ 2 ಲಕ್ಷ ರೂಪಾಯಿ?

ಹೀಗಾಗಿಯೇ ಕಳೆದ ಕೆಲವು ತಿಂಗಳಿಂದಲು ಚಿನ್ನದ ಬೆಲೆಯಲ್ಲಿ ಏರಿಕೆ ಆಗುತ್ತಿದೆ. ಆದರೆ ಜೂನ್ ಆರಂಭದಲ್ಲೇ ಚಿನ್ನದ ಬೆಲೆ ಒಂದಷ್ಟು ಕಡಿಮೆ ಆಗಿತ್ತು. ಈಗ ಮತ್ತೆ ಭಾರಿ ಏರಿಕೆ ಕಾಣುತ್ತಿದೆ. ಅದರಲ್ಲೂ ಇರಾನ್ & ಇಸ್ರೇಲ್ ನಡುವೆ ಯುದ್ಧದ ಸ್ಥಿತಿ ನಿರ್ಮಾಣವಾಗಿ ಭಯ ಹುಟ್ಟಿಸಿತ್ತು. ಈ ಕಾರಣಕ್ಕೆ, ಚಿನ್ನದ ಬೆಲೆ ಮುಂದಿನ ಕೆಲವೇ ವರ್ಷದಲ್ಲಿ 2 ಲಕ್ಷ ರೂಪಾಯಿಗೆ ತಲುಪುವ ಸಾಧ್ಯತೆ ಕೂಡ ದಟ್ಟವಾಗಿದೆ.

5000 ವರ್ಷಗಳಿಂದ ಚಿನ್ನದ ಬಳಕೆ!

ಮನುಷ್ಯ ನಾಗರಿಕತೆ ಕಡೆಗೆ ಹೆಜ್ಜೆ ಹಾಕಿದ ನಂತರ ಚಿನ್ನವನ್ನು ಹೆಚ್ಚಾಗಿ ಬಳಸತೊಡಗಿದೆ. ಅದರಲ್ಲೂ ಚಿನ್ನದ ಬಳಕೆಗೆ ಸುಮಾರು 5000 ವರ್ಷಗಳ ಇತಿಹಾಸ ಇದೆ. ಹೀಗೆ ಚಿನ್ನವನ್ನ ಮನುಷ್ಯರು ಸಾವಿರಾರು ವರ್ಷಗಳಿಂದ ಬಳಕೆ ಮಾಡಿಕೊಂಡು ಬರುತ್ತಿದ್ದಾರೆ. ಹೀಗಾಗಿ ಈ ಹೊತ್ತಿಗೂ ಚಿನ್ನಕ್ಕೆ ಭಾರಿ ದೊಡ್ಡ ಗೌರವ ಮತ್ತು ಬೆಲೆ ಇದೆ. ಇತರ ಯಾವುದೇ ಲೋಹಕ್ಕೆ ಕೂಡ ಚಿನ್ನದಷ್ಟು ಮಾನ್ಯತೆ ನೀಡುವುದಿಲ್ಲ. ಆದರೆ ಚಿನ್ನಕ್ಕೆ ಮಾತ್ರ ಅತಿಹೆಚ್ಚು ಬೆಲೆಯು ಇದ್ದು, ಚಿನ್ನ ಮುಂದಿನ ದಿನಗಳಲ್ಲಿ ಮತ್ತಷ್ಟು ದುಬಾರಿ ಆಗುವುದು ಗ್ಯಾರಂಟಿ ಎನ್ನುತ್ತಾರೆ ತಜ್ಞರು. ಇದು ಆಭರಣ ಪ್ರಿಯರಿಗೆ ಬೇಸರ ತರಿಸಿದರೂ, ಚಿನ್ನದ ಮೇಲೆ ಹೂಡಿಕೆ ಮಾಡಿದ್ದ ಹೂಡಿಕೆದಾರರಿಗೆ ಚಿನ್ನದ ಬೆಲೆ ಏರಿಕೆ ಖುಷಿ ನೀಡುತ್ತಿದೆ.

ಚಿನ್ನದ ಬೆಲೆ ಕುಸಿದಿದ್ದು ಏಕೆ?

ಚರಿತ್ರೆಯಲ್ಲಿ ಯುದ್ಧಗಳು ನಡೆದಿರುವುದು ಚಿನ್ನಕ್ಕಾಗಿ ಹಾಗೂ ಅಮೂಲ್ಯ ವಸ್ತುಗಳಿಗೆ ಮಾತ್ರ. ಚಿನ್ನ ಒಂದು ಕಾಲದಲ್ಲಿ ನಾಣ್ಯ ಕೂಡ ಆಗಿತ್ತು. ಇದೀಗ ಚಿನ್ನ ಅನ್ನೋದು ಆಭರಣವಾಗಿ & ಬ್ಯಾಂಕ್ ಲಾಕರ್ ಒಳಗೆ ಮಾತ್ರ ಕಾಣಲು ಸಾಧ್ಯ. ಈ ಕಾರಣಕ್ಕೆ, ಚಿನ್ನ ಅನ್ನೋ ಹಳದಿ ಲೋಹದ ಬೆಲೆ ಆಕಾಶ ಮುಟ್ಟುತ್ತಿತ್ತು. ಆದರೆ ಈಗ ದಿಢೀರ್ ಅಂತಾ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಆಗಿದೆ. ಅದರಲ್ಲೂ ಒಂದೇ ದಿನ ಚಿನ್ನದ ಬೆಲೆ ಭರ್ಜರಿ 20,000 ರೂಪಾಯಿ ಕುಸಿತವನ್ನು ಕಂಡು ಆಭರಣ ಪ್ರಿಯರಿಗೆ ಭರ್ಜರಿ ಸುದ್ದಿ ನೀಡಿದೆ. ಮುಂದಿನ ದಿನಗಳಲ್ಲಿ, ಚಿನ್ನದ ಬೆಲೆಯ ಬಗ್ಗೆ ಚಿಂತೆ ಶುರುವಾಗಿದೆ.

ಯುದ್ಧದ ಕಾರಣಕ್ಕೆ ಬೆಲೆ ಏರಿಕೆ?

ಜಾಗತಿಕವಾಗಿ ಯುದ್ಧಗಳು ಶುರುವಾದಾಗ, ಮೊದಲು ಆ ಪರಿಣಾಮ ಬೀರುವುದು ಚಿನ್ನ ಮತ್ತು ಪೆಟ್ರೋಲ್, ಡಿಸೆಲ್ ಮೇಲೆ. ಯಾಕಂದ್ರೆ ಜಾಗತಿಕ ಆರ್ಥ ವ್ಯವಸ್ಥೆಯಲ್ಲಿ ಈ ವಸ್ತುಗಳು ದೊಡ್ಡ ಹಿಡಿತ ಹೊಂದಿವೆ. ಹೀಗಾಗಿಯೇ ಯುದ್ಧ ಶುರುವಾದ ತಕ್ಷಣ ಚಿನ್ನದ ರೂಪಕ್ಕೆ ತಮ್ಮ ಸಂಪತ್ತು ಅಂದರೆ ಹಣ ಬದಲಾಯಿಸಿ, ಸಂಗ್ರಹ ಮಾಡಲು ಜನಗಳು ಮುಂದಾಗುತ್ತಾರೆ. ಹಾಗೆ ದೇಶಗಳು ಕೂಡ ಅಪಾರ ಪ್ರಮಾಣದ ಚಿನ್ನ ಯುದ್ಧದ ವೇಳೆ ಬಂದಾಗ ಖರೀದಿ ಮಾಡುತ್ತವೆ. ಹೀಗಾಗಿಯೆ ಕಳೆದ ಕೆಲವು ತಿಂಗಳಿಂದ ಚಿನ್ನದ ಬೆಲೆಯಲ್ಲಿ ಏರಿಕೆ ಆಗುತ್ತಿದ್ದು, ಇದೀಗ ಚಿನ್ನ ಕುಸಿತವನ್ನು ಕಾಣುತ್ತಿದೆ.

ಬೆಳ್ಳಿ ಬೆಲೆಯಲ್ಲಿ ದಿಢೀರ್ ಇಳಿಕೆ!

ಚಿನ್ನ ಬಹು ಬೇಡಿಕೆಯ ವಸ್ತು, ಹೀಗಾಗಿಯೇ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗೆ ಚಿನ್ನ ಕೊಳ್ಳಲು ಜನಗಳು ಕೂಡ ಮುಗಿಬಿದ್ದು ಮುಂದೆ ಬರುತ್ತಿದ್ದಾರೆ. ಹೀಗಿದ್ದಾಗ ಚಿನ್ನದ ಜೊತೆ ಬೆಳ್ಳಿ ಬೆಲೆ ಕೂಡ ಭಾರಿ ಏರಿಕೆ ಕಾಣುತ್ತಿತ್ತು. ನೋಡ ನೋಡುತ್ತಲೇ ಬೆಳ್ಳಿ ಬೆಲೆ ಹತ್ತಿರ ಹತ್ತಿರ 1 ಲಕ್ಷ ರೂಪಾಯಿಗೆ ತಲುಪಿತ್ತು ಇಂತಹ ಸ್ಥಿತಿಯಲ್ಲಿ ಈಗ ದಿಢೀರ್ ಬೆಳ್ಳಿ ಬೆಲೆಯಲ್ಲಿ 1200 ರೂಪಾಯಿ ಕುಸಿತ ಕಂಡಿದೆ! ಮುಂದಿನ ದಿನಗಳಲ್ಲಿ ಬೆಳ್ಳಿಯ ಬೆಲೆ ಮತ್ತಷ್ಟು ಏರಿಕೆ ಕಾಣುವ ನಿರೀಕ್ಷೆಯು ಇದೆ. ಈ ನಡುವೆ ಬೆಳ್ಳಿ ಬೆಲೆ ಒಂದಷ್ಟು ಇಳಿಕೆ ಕಂಡಿರುವುದು, ಬೆಳ್ಳಿ ಇಷ್ಟಪಡುವವರಿಗೆ ಒಂದಷ್ಟು ಖುಷಿ ಕೊಟ್ಟಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+