Gold Price: ಚಿನ್ನದ ಬೆಲೆ ಭಾರಿ ಇಳಿಕೆ, ಇಲ್ಲಿದೆ ರೇಟ್!
ಚಿನ್ನದ ಬೆಲೆ ದಿನದಿಂದ ದಿನಕ್ಕೆ ಭಾರಿ ಕಡಿಮೆ ಆಗುತ್ತಿದ್ದು, ಮತ್ತೆ ಮತ್ತೆ ಕುಸಿತ ಕಾಣ್ತಿದೆ. ಅದೇ ರೀತಿ ಇಂದು ಕೂಡ ಚಿನ್ನದ ಬೆಲೆ ಬರೋಬ್ಬರಿ 1,100 ರೂಪಾಯಿಗೂ ಹೆಚ್ಚು ಕುಸಿತ ಕಂಡಿದೆ. ಹಾಗಾದ್ರೆ ಇಂದು ಎಷ್ಟಿದೆ ಗೊತ್ತಾ ಚಿನ್ನದ ಬೆಲೆ, ಬನ್ನಿ ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ.
ಚಿನ್ನದ ಬೆಲೆ ದಿಢೀರ್ ಇಳಿಕೆಯ ಹಾದಿಗೆ ಸಾಗಿದೆ. ಅದರಲ್ಲೂ ಕಳೆದ ಕೆಲವು ದಿನ ಹಿಂದೆ ಚಿನ್ನದ ಬೆಲೆ ಮುಗಿಲು ಮುಟ್ಟಿತ್ತು. ಹೀಗಾಗಿ ಜನರು ಕೂಡ ಚಿನ್ನ ಖರೀದಿ ಮಾಡಲು ಹಿಂದೆ ಮುಂದೆ ನೋಡುತ್ತಿದ್ದರು. ಆದರೆ ಇದೀಗ ಚಿನ್ನದ ಬೆಲೆ ದಿಢೀರ್ ಕುಸಿತದ ಹಾದಿ ತುಳಿದು, ಆಭರಣ ಪ್ರಿಯರಿಗೆ ಕೂಡ ಖುಷಿ ಕೊಟ್ಟಿದೆ. ಹಾಗಾದ್ರೆ ಇಂದು ಎಷ್ಟಿದೆ ಚಿನ್ನದ ಬೆಲೆ. ಆ ಬಗ್ಗೆ ಮಾಹಿತಿಗೆ ಮುಂದೆ ಓದಿ.

ಚಿನ್ನದ ಬೆಲೆ ಇಷ್ಟಿದೆಸ ನೋಡಿ!
ಆಧುನಿಕ ಕಾಲಘಟ್ಟದಲ್ಲಿ ಚಿನ್ನ ಅದೆಷ್ಟು ಮುಖ್ಯ ಎಂದರೆ ಚಿನ್ನವು ಇಲ್ಲದೆ ಏನೂ ನಡೆಯಲ್ಲ. ಯಾಕಂದ್ರೆ ಚಿನ್ನ ಆಭರಣವಾಗಿ ಮಾತ್ರವಲ್ಲ ಹಲವು ಎಲೆಕ್ಟ್ರಾನಿಕ್ ವಸ್ತು ತಯಾರಿಕೆಗೂ ಕೂಡ ಬಳಕೆ ಮಾಡಲಾಗುತ್ತೆ. ಮೊಬೈಲ್ ಸೇರಿದಂತೆ ಹಲವು ಎಲೆಕ್ಟ್ರಾನಿಕ್ ಉಪಕರಣ ತಯಾರಿಕೆಗೂ ಕೂಡ ಚಿನ್ನ ಬೇಕೆ ಬೇಕಾಗುತ್ತೆ. ಹೀಗಾಗಿ, ಚಿನ್ನ ಇದೀಗ ಆಧುನಿಕ ಕಾಲದಲ್ಲಿ ಅತ್ಯವಶ್ಯಕ ವಸ್ತು ಎನಿಸಿಕೊಂಡಿದೆ. ಹೀಗಿದ್ದಾಗ ಚಿನ್ನದ ಬೆಲೆ ಇಳಿಕೆ ಕಂಡು, 24 ಕ್ಯಾರೆಟ್ ಚಿನ್ನದ ಬೆಲೆ 71,240 ರೂಪಾಯಿಗೆ 10 ಗ್ರಾಂ ರೀತಿ ಮಾರಾಟ ಆಗುತ್ತಿದೆ. ಹಾಗೇ 22 ಕ್ಯಾರೆಟ್ ಚಿನ್ನದ ಬೆಲೆ 65,303 ರೂಪಾಯಿಗೆ 10 ಗ್ರಾಂ ರೀತಿ ಮಾರುಕಟ್ಟೆ ಬೆಲೆಯಲ್ಲಿ ಮಾರಾಟ ಆಗುತ್ತಿದೆ.
ಕುಸಿತ ಕಾಣುತ್ತಿರುವ ಚಿನ್ನದ ಬೆಲೆ
ಒಟ್ನಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಕುಸಿತ ಕಾಣುತ್ತಿರುವುದು ಕೆಲವರಿಗೆ ಖುಷಿ ನೀಡಿ, ಮತ್ತೆ ಕೆಲವರಿಗೆ ಆತಂಕ ಸೃಷ್ಟಿ ಮಾಡಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಏನಾಗಲಿದೆ & ಚಿನ್ನದ ಬೆಲೆ ಎಷ್ಟು ರೂಪಾಯಿಗೆ ಬಂದು ತಲುಪಲಿದೆ ಅನ್ನೋದನ್ನ ಕಾದು ನೋಡಬೇಕಿದೆ. ಹೀಗಾಗಿ ಚಿನ್ನ ಇಷ್ಟಪಡುವ ಜನರು ಕೂಡ ಇದೇ ಕಾರಣಕ್ಕೆ ಚಿನ್ನದ ಬೆಲೆ ಇನ್ನಷ್ಟು ಕಡಿಮೆ ಆಗಲಿ ಅಂತಾ ಕಾಯುತ್ತಿದ್ದಾರೆ.
ಅಮೆರಿಕದ ಬಳಿ ಇದೆ ಅತಿಹೆಚ್ಚು ಚಿನ್ನ!
ಚಿನ್ನ ಜಗತ್ತಿನ ಪ್ರತಿಯೊಂದು ದೇಶಕ್ಕೂ ಬೇಕು, ಹೀಗಾಗಿ ಚಿನ್ನ ಸಂಗ್ರಹಣೆ ಬಗ್ಗೆ ಪ್ರಪಂಚ ಒತ್ತು ನೀಡುತ್ತದೆ. ಅದರಲ್ಲೂ ಜಗತ್ತಿನ ಅತ್ಯಂತ ಶ್ರೀಮಂತ ದೇಶ ಎಂಬ ಬಿರುದು ಪಡೆದ, ಅಮೆರಿಕ ಬಳಿ ಅತಿಹೆಚ್ಚು ಚಿನ್ನ ಇದೆ. ಅಮೆರಿಕ ಬಳಿ ಸುಮಾರು 8,133 ಟನ್ ಚಿನ್ನವಿದೆ. ಹಾಗಾದ್ರೆ ಭಾರತ ಈಗ ಎಷ್ಟನೇ ಸ್ಥಾನದಲ್ಲಿ ಇದೆ ಗೊತ್ತಾ? ಅತಿಹೆಚ್ಚು ಚಿನ್ನ ಹೊಂದಿರುವ ಸಂಪೂರ್ಣ ಟಾಪ್-10 ದೇಶಗಳ ಪಟ್ಟಿಗೆ ಮುಂದೆ ಓದಿ.
ಅಮೆರಿಕದ ನಂತರದ ಸ್ಥಾನದಲ್ಲಿ ಜರ್ಮನಿ ಇದ್ದು, 3,352 ಟನ್ ಚಿನ್ನವನ್ನು ಜರ್ಮನಿಯು ಹೊಂದಿದೆ. ಇಟಲಿ ಬಳಿ 2,451 ಟನ್, ಫ್ರಾನ್ಸ್ ಬಳಿ 2,436 ಟನ್, ರಷ್ಯಾ ಬಳಿ 2,332 ಟನ್, ಚೀನಾ ಬಳಿ 2,262 ಟನ್, ಸ್ವಿಜರ್ಲ್ಯಾಂಡ್ ಬಳಿ 1,040, ಜಪಾನ್ ಬಳಿ 845.97 ಟನ್ ಇದ್ದರೆ, ಭಾರತದ ಬಳಿ 822.09 ಟನ್ ಚಿನ್ನದ ಸಂಗ್ರಹ ಇದೆ. ಈ ಮೂಲಕ ಇಡೀ ಜಗತ್ತಿನಲ್ಲಿ ಅತಿಹೆಚ್ಚು ಚಿನ್ನ ಇರುವ ದೇಶಗಳ ಪೈಕಿ ಭಾರತ ಕೂಡ ಒಂದಾಗಿದೆ.
ವರ್ಷದಿಂದ ವರ್ಷಕ್ಕೆ ಚಿನ್ನದ ಬೆಲೆ ಏರಿಕೆ!
ಕಳೆದ 15 ವರ್ಷಕ್ಕೆ ಹೋಲಿಕೆ ಮಾಡಿದರೆ ಚಿನ್ನದ ಬೆಲೆಯಲ್ಲಿ ಸಾಕಷ್ಟು ಬದಲಾವಣೆ ಆಗಿ ದೊಡ್ಡ ಮಟ್ಟದಲ್ಲಿ ಚಿನ್ನ ಏರಿಕೆ ಕಂಡಿದೆ. ಹಾಗೇ ಮುಂದಿನ ದಿನಗಳಲ್ಲಿ ಚಿನ್ನಕ್ಕೆ ಇನ್ನೂ ಹೆಚ್ಚಿನ ಬೇಡಿಕೆ ಬರುವ ಸಾಧ್ಯತೆ ದಟ್ಟವಾಗಿದೆ. ಇದಕ್ಕೆಲ್ಲಾ ಕಾರಣ ಏನೆಂದರೆ ಭೂಮಿಯ ಒಳಗೆ ಸಿಗುತ್ತಿದ್ದ ಚಿನ್ನ ಭಾಗಶಃ ಕಡಿಮೆ ಆಗುತ್ತಾ ಬರುತ್ತಿದೆ. ಹೀಗಾಗಿ ಗಣಿಗಾರಿಕೆ ನಡೆಸುವ ಸಾಧ್ಯತೆ ಕೂಡ ಕ್ಷೀಣಿಸುತ್ತಿದೆ. ಇದು ಕೂಡ ಚಿನ್ನದ ಮೇಲೆ ಸಾಕಷ್ಟು ದೊಡ್ಡ ಪ್ರಮಾಣದ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಚಿನ್ನದ ಬೆಲೆ ಈ ವರ್ಷದ ಅಂತ್ಯಕ್ಕೆ, 2 ಲಕ್ಷ ರೂಪಾಯಿ ಆಸುಪಾಸಿಗೆ ಬಂದರೂ ಅಚ್ಚರಿ ಪಡಬೇಕಿಲ್ಲ ಎನ್ನುತ್ತಾರೆ ತಜ್ಞರು.
ಹಳದಿ ಲೋಹ ಎಲ್ಲರಿಗೂ ಇಷ್ಟ!
ಚಿನ್ನ ಭಾರತೀಯರ ಪಾಲಿಗೆ ತುರ್ತು ಹಣ ಇದ್ದಂತೆ, ಯಾಕಂದ್ರೆ ಯಾವುದೇ ತುರ್ತು ಸ್ಥಿತಿ ಎದುರಾಗಿ ಪರದಾಟ ಶುರುವಾದರೂ ಭಾರತೀಯರು ಮೊದಲು ತಮ್ಮ ಬಳಿ ಇರುವ ಚಿನ್ನ, ಮತ್ತು ಬೆಳ್ಳಿ ಮೊರೆ ಹೋಗುತ್ತಾರೆ. ಯಾಕಂದ್ರೆ ತುರ್ತು ಪರಿಸ್ಥಿತಿಯಲ್ಲಿ, ಎಲ್ಲಿಯೂ ಹಣ ಸಿಗದೇ ಇದ್ದರೆ ನಮ್ಮ ಬಳಿ ಇರುವ ಚಿನ್ನ & ಬೆಳ್ಳಿಗೆ ಬೇಡಿಕೆ ಬಂದೇ ಬರುತ್ತದೆ. ಹೀಗಾಗಿಯೇ ಬಹುತೇಕ ಭಾರತೀಯರು ಚಿನ್ನದ ಮೇಲೆ ಹೂಡಿಕೆ ಮಾಡುತ್ತಾ ಬಂದಿದ್ದಾರೆ. ಮತ್ತೊಂದು ಕಡೆ ಚಿನ್ನದ ಮೇಲೆ ಹೂಡಿಕೆ ಮಾಡುವ ಪ್ರತಿಯೊಬ್ಬರಿಗೂ, ಹಳದಿ ಲೋಹ ಬೆನ್ನೆಲುಬಾಗಿ ನಿಂತಿದೆ. ಮುಂದಿನ ದಿನಗಳಲ್ಲಿ ಹಳದಿ ಲೋಹ ಅಂದ್ರೆ ಚಿನ್ನ ಮತ್ತಷ್ಟು ಎತ್ತರಕ್ಕೆ ಹೋಗುವ ನಿರೀಕ್ಷೆ ದಟ್ಟವಾಗಿದೆ.
ಚಿನ್ನ ಈಗ ಅಂತಾರಾಷ್ಟ್ರೀಯ ಕರೆನ್ಸಿ?
ಪ್ರಪಂಚದ ಮಟ್ಟದಲ್ಲಿ ಈಗ ಚಿನ್ನಕ್ಕೆ ಯಾಕೆ ಇಷ್ಟು ಬೆಲೆ ಬಂದಿದೆ ಎಂದರೆ, ಯುದ್ಧಗಳು ಶುರುವಾದ ನಂತರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಟ್ಟಿಯಾದ ಕರೆನ್ಸಿ ಇಲ್ಲವಾಗಿದ್ದು. ಈ ಕಾರಣಕ್ಕೆ ಈಗ ಚಿನ್ನದ ಮೇಲೆ ಜನರಿಗೆ ತುಂಬಾ ನಂಬಿಕೆ ಬಂದಿದೆ. ಹೀಗಾಗಿ ಜನರು ಕೂಡ ಚಿನ್ನ ಖರೀದಿಗೆ ಮುಗಿ ಬೀಳುತ್ತಿದ್ದಾರೆ. ಹೀಗಾಗಿ ಏಪ್ರಿಲ್ ತಿಂಗಳಲ್ಲಿ ಚಿನ್ನ ಸಾಕಷ್ಟು ಏರಿಕೆ ಕಂಡಿತ್ತು. ಆದರೆ, ಇದೀಗ ಚಿನ್ನದ ಬೆಲೆ ಇಳಿಕೆ ಕಾಣುತ್ತಿದೆ. ಇಸ್ರೇಲ್ & ಇರಾನ್ ಯುದ್ಧ ನಡೆಯಲ್ಲ ಎಂಬ ನಂಬಿಕೆ ಸಿಕ್ಕ ನಂತರ ಚಿನ್ನದ ಬೆಲೆ ಇಳಿಕೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಜನರು ಕೂಡ ಚಿನ್ನ ಖರೀದಿಯನ್ನು ಆರಾಮವಾಗಿ ಮಾಡಬಹುದು.
ಹೂಡಿಕೆ ಮಾಡುವವರಿಗೆ ಟೆನ್ಷನ್?
ಚಿನ್ನದ ಬೆಲೆ ಮತ್ತೊಮ್ಮೆ ಭಾರಿ ಕುಸಿತ ಕಂಡಿದ್ದು, ಈ ಮೂಲಕ ಚಿನ್ನ ಕೊಳ್ಳಲು ಸುವರ್ಣಾವಕಾಶ ಒದಗಿ ಬಂದಿದೆ. ಚಿನ್ನದ ಬೆಲೆ ಕಳೆದ ಕೆಲ ದಿನಗಳಿಂದ ಪಾತಾಳ ಸೇರುತ್ತಿದೆ ಹೀಗಿದ್ದಾಗ ನಿನ್ನೆ ಕೂಡ ಚಿನ್ನದ ಬೆಲೆ ದಿಢೀರ್ ಕುಸಿತ ಕಂಡಿದ್ದು, ಒಂದೇ ದಿನ ಚಿನ್ನದ ಬೆಲೆ ಬರೋಬ್ಬರಿ 2,700 ರೂಪಾಯಿ ಕುಸಿತ ಕಂಡಿದೆ. 15 ವರ್ಷಗಳಿಗೆ ಹೋಲಿಕೆ ಮಾಡಿದರೆ ಚಿನ್ನದ ಬೆಲೆ ಸಾಕಷ್ಟು ಬದಲಾವಣೆ ಕಂಡಿದೆ. ಮುಂದಿನ ದಿನಗಳಲ್ಲಿ, ಚಿನ್ನಕ್ಕೆ ಹೆಚ್ಚಿನ ಬೇಡಿಕೆ ಬರುವ ಸಾಧ್ಯತೆ ಇದೆ ಎನ್ನಲಾಗಿತ್ತು. ಹೀಗಿದ್ದರೂ, ಚಿನ್ನದ ಬೆಲೆ ಕುಸಿತದ ಕಡೆಗೆ ಮುಖ ಮಾಡುತ್ತಿರುವುದು ಹೂಡಿಕೆ ಮಾಡುವವರಿಗೆ ಟೆನ್ಷನ್ ಕೂಡ ಕೊಡುತ್ತಿದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ












Click it and Unblock the Notifications