Gold Price: ಆಭರಣ ಪ್ರಿಯರೇ ಗಮನಿಸಿ, ಚಿನ್ನದ ಬೆಲೆ ವರಮಹಾಲಕ್ಷ್ಮಿ ಹಬ್ಬದ ದಿನವೇ ಏರಿಕೆ!

ಬಂಗಾರ ಖರೀದಿ ಮಾಡಬೇಕು, ಹಬ್ಬದ ದಿನ ಚಿನ್ನವನ್ನು ಕೊಳ್ಳಬೇಕು ಅಂತಾ ಕಾಯುತ್ತಿದ್ದ ಜನರಿಗೆ ನಿನ್ನೆ ವರಮಹಾಲಕ್ಷ್ಮಿ ಹಬ್ಬದ ದಿನವೇ ಚಿನ್ನದ ಬೆಲೆ ಏರಿಕೆ ಶಾಕ್ ಕೊಟ್ಟಿದೆ. ಈ ಮೂಲಕ ಚಿನ್ನದ ಬೆಲೆ ಮತ್ತಷ್ಟು ಹೆಚ್ಚಾಗಿದೆ. ಚಿನ್ನ ಮಾತ್ರವಲ್ಲ ಬೆಳ್ಳಿ ಬೆಲೆ ಹೆಚ್ಚಾಗಿರುವ ರೀತಿ ನೋಡಿದರೆ ಎಲ್ಲರೂ ಶಾಕ್ ಆಗಿದ್ದಾರೆ. ಒಂದೇ ದಿನ ಬೆಳ್ಳಿ ಬರೋಬ್ಬರಿ 4,000 ರೂ. ಏರಿಕೆ ಆಗಿದೆ. ಹಾಗಾದ್ರೆ ಇದೀಗ ಎಷ್ಟಿದೆ ಚಿನ್ನ & ಬೆಳ್ಳಿ ಬೆಲೆ? ಬನ್ನಿ ತಿಳಿಯೋಣ.

ನಿನ್ನೆ ಕನ್ನಡ ನಾಡಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನು ಅತ್ಯಂತ ಅದ್ಧೂರಿಯಾಗಿ ಮಾಡಿದ್ದಾರೆ. ಚಿನ್ನ ಬಹು ಬೇಡಿಕೆಯ ವಸ್ತು, ಹೀಗಾಗಿಯೇ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗೆ ಚಿನ್ನ ಕೊಳ್ಳಲು ಜನಗಳು ಕೂಡ ಮುಗಿಬಿದ್ದು ಮುಂದೆ ಬರುತ್ತಿದ್ದಾರೆ. ಹೀಗಿದ್ದಾಗ ಚಿನ್ನದ ಜೊತೆ ಬೆಳ್ಳಿ ಬೆಲೆ ಕೂಡ ಭಾರಿ ಏರಿಕೆ ಕಾಣುತ್ತಿತ್ತು. ನೋಡ ನೋಡುತ್ತಲೇ ಬೆಳ್ಳಿ ಬೆಲೆ, ಹತ್ತಿರ ಹತ್ತಿರ 1 ಲಕ್ಷ ರೂಪಾಯಿ ತಲುಪಿತ್ತು. ಇಂತಹ ಸ್ಥಿತಿಯಲ್ಲಿ ದಿಢೀರ್ ಬೆಳ್ಳಿ ಬೆಲೆ ಭಾರಿ ಕುಸಿದಿತ್ತು. ಆದ್ರೆ ಇದೀಗ ಒಂದೇ ದಿನ ಬರೋಬ್ಬರಿ 4,000 ರೂಪಾಯಿ ಏರಿಕೆ ಕಂಡಿದೆ ಬೆಳ್ಳಿ. ಹಾಗೇ ಚಿನ್ನದ ಬೆಲೆಯಲ್ಲಿ ಕೂಡ ಭರ್ಜರಿ ಏರಿಕೆ ಆಗಿದೆ.

Gold Price Is Increased Once Again On 16th Of August 2024

ಚಿನ್ನ & ಬೆಳ್ಳಿ ಬೆಲೆ ದಿಢೀರ್ ಏರಿಕೆ!

ಕರ್ನಾಟಕ & ಬೆಂಗಳೂರಲ್ಲಿ ನಿನ್ನೆ ಚಿನ್ನದ ಬೆಲೆ ಏರಿಕೆ ಕಂಡಿದೆ. 24 ಕ್ಯಾರೆಟ್ ಶುದ್ಧ ಚಿನ್ನ ಬೆಲೆ ಏರಿಕೆ ಬಳಿಕ ಮತ್ತಷ್ಟು ಹೆಚ್ಚಾಗಿದೆ. ಪ್ರತಿ 100 ಗ್ರಾಂಗೆ 1,100 ರೂಪಾಯಿ ಏರಿಕೆಯನ್ನ ಕಂಡಿದೆ 24 ಕ್ಯಾರೆಟ್ ಶುದ್ಧ ಚಿನ್ನ ಬೆಲೆ ಹೀಗೆ ಶುದ್ಧ ಚಿನ್ನ ಬೆಲೆ ಪ್ರತಿ 100 ಗ್ರಾಂಗೆ 7,16,200 ರೂಪಾಯಿ ಆಗಿದೆ. ಇದರ ಜೊತೆಗೆ ಶುದ್ಧ ಚಿನ್ನ ಬೆಲೆ ಪ್ರತಿ 10 ಗ್ರಾಂಗೆ 71,620 ರೂಪಾಯಿಗೆ ಏರಿಕೆ ಆಗಿದೆ. ಹಾಗಾದ್ರೆ ಆಭರಣ ಚಿನ್ನ ಅಂದರೆ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಬೆಳ್ಳಿ ಬೆಲೆ ಎಷ್ಟು ಇದೆ ಈಗ? ಮುಂದೆ ಓದಿ.

ಬೆಳ್ಳಿ ಬೆಲೆ 84,000 ರೂಪಾಯಿ!

ಆಭರಣ ಚಿನ್ನ ಅಂದ್ರೆ 22 ಕ್ಯಾರೆಟ್ ಚಿನ್ನದ ಬೆಲೆ ಏರಿಕೆಯನ್ನ ಕಂಡು ಪ್ರತಿ 100 ಗ್ರಾಂ ಆಭರಣ ಚಿನ್ನದ ಬೆಲೆ ಈಗ 1,000 ರೂಪಾಯಿ ಏರಿಕೆ ಆಗಿದೆ. ಈ ಮೂಲಕ ಪ್ರತಿ 10 ಗ್ರಾಂ ಆಭರಣ ಚಿನ್ನ ಬೆಲೆ ಈಗ 100 ರೂಪಾಯಿ ಏರಿಕೆ ಆಗಿದೆ. ಆಭರಣ ಚಿನ್ನ ಬೆಲೆ ಏರಿಕೆ ಬಳಿಕ ಪ್ರತಿ 10 ಗ್ರಾಂ ಈಗ 63,400 ರೂಪಾಯಿಗೆ ಮಾರಾಟ ಆಗ್ತಿದೆ. ಮತ್ತೊಂದು ಕಡೆ ಬೆಳ್ಳಿ ಬೆಲೆಯಲ್ಲಿ 4000 ರೂಪಾಯಿ ಏರಿಕೆ ಕಂಡು 84,000 ರೂಪಾಯಿಗೆ ಮಾರಾಟ ಆಗುತ್ತಿದೆ. ಆಷಾಢ ಮುಗಿದು ಇದೀಗ ಶ್ರಾವಣ ಆರಂಭ ಆಗಿದೆ, ಹೀಗಾಗಿ ಚಿನ್ನದ ಬೆಲೆ ಮತ್ತಷ್ಟು ಏರಿಕೆ ಕಾಣುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+