Gold Price: 10,500 ರೂಪಾಯಿ ಏರಿಕೆ ಕಂಡ ಚಿನ್ನದ ಬೆಲೆ, ಬೆಳ್ಳಿ ಬೆಲೆಯಲ್ಲೂ ಭಾರಿ ಶಾಕ್!
ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಕಾಣುತ್ತಿದ್ದು, ಕಳೆದ ಎರಡು ದಿನಗಳಿಂದ ನಿರಂತರ ಏರಿಕೆ ಕಂಡಿದೆ ಚಿನ್ನದ ಬೆಲೆ. ಅದ್ರಲ್ಲೂ ಇಂದು ಊಹೆಗೆ ಮೀರಿ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದ್ದು ಬೆಳ್ಳಿ ಬೆಲೆಯಲ್ಲಿ ಕೂಡ ಏರಿಕೆ ಕಂಡುಬಂದಿದೆ. ಈ ಮೂಲಕ ಚಿನ್ನ & ಬೆಳ್ಳಿ ಖರೀದಿಗಾಗಿ ಕಾಯುತ್ತಿದ್ದ ಜನರಿಗೆ ಶಾಕ್ ಸಿಕ್ಕಂತಾಗಿದೆ. ಹಾಗಾದ್ರೆ ಇದೀಗ ಎಷ್ಟಿದೆ ಚಿನ್ನ & ಬೆಳ್ಳಿ ರೇಟ್? ಚಿನ್ನದ ಬೆಲೆಯಲ್ಲಿ ಮತ್ತಷ್ಟು ಏರಿಕೆ ಆಗುತ್ತಾ? ಬನ್ನಿ ತಿಳಿಯೋಣ.
ಚಿನ್ನ ಮದುವೆ & ಶುಭ ಕಾರ್ಯಗಳಿಗೆ ಅನಿವಾರ್ಯ ವಸ್ತು. ಇದೀಗ ಆಷಾಢವು ಕಳೆದಿದ್ದು ಶ್ರಾವಣ ಶುರುವಾಗಿದೆ. ಹೀಗಾಗಿ ಮದುವೆ ಸೇರಿದಂತೆ ಹಲವು ಶುಭ ಕಾರ್ಯಗಳು, ಆರಂಭ ಆಗಿವೆ. ಹೀಗಿದ್ದಾಗಲೇ ಚಿನ್ನ & ಬೆಳ್ಳಿ ಬೆಲೆ ಕೂಡ ಭರ್ಜರಿ ಏರಿಕೆ ಕಾಣುತ್ತಿದೆ. ಮತ್ತೊಂದು ಕಡೆ ಹೀಗೆ ಚಿನ್ನ & ಬೆಳ್ಳಿ ಬೆಲೆಯಲ್ಲಿ ಭಾರಿ ಏರಿಕೆ ಕಂಡುಬರುತ್ತಿರುವ ಕಾರಣಕ್ಕೆ ಜನ ಕೂಡ ಚಿಂತೆ ಮಾಡುವ ಪರಿಸ್ಥಿತಿ ಬಂದಿದೆ. ಇಂದು ಒಂದೇ ದಿನ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 10,500 ರೂಪಾಯಿ ಏರಿಕೆ ಆಗಿದೆ. ಹಾಗಾದ್ರೆ ಇಂದು ಎಷ್ಟಿದೆ ಚಿನ್ನ & ಬೆಳ್ಳಿ ಬೆಲೆ? ಮುಂದೆ ಓದಿ.

ಚಿನ್ನ & ಬೆಳ್ಳಿ ಬೆಲೆ ಭಾರಿ ಏರಿಕೆ!
ಕರ್ನಾಟಕ & ಬೆಂಗಳೂರಲ್ಲಿ ಇಂದು ಚಿನ್ನದ ಬೆಲೆ ಏರಿಕೆ ಕಂಡು, 24 ಕ್ಯಾರೆಟ್ ಶುದ್ಧ ಚಿನ್ನ ಬೆಲೆ ಏರಿಕೆ ಬಳಿಕ ಮತ್ತಷ್ಟು ಹೆಚ್ಚಾಗಿದೆ. 100 ಗ್ರಾಂಗೆ 11,500 ರೂಪಾಯಿ ಏರಿಕೆಯನ್ನ ಕಂಡಿದೆ 24 ಕ್ಯಾರೆಟ್ ಶುದ್ಧ ಚಿನ್ನ ಬೆಲೆ. ಹೀಗಾಗಿ ಶುದ್ಧ ಬಂಗಾರದ ಬೆಲೆಯು, ಪ್ರತಿ 100 ಗ್ರಾಂಗೆ 7,27,700 ರೂಪಾಯಿ ಆಗಿದೆ. ಶುದ್ಧ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 72,770 ರೂಪಾಯಿಗೆ ಏರಿಕೆ ಆಗಿದ್ದು, ಹಾಗಾದ್ರೆ ಆಭರಣ ಚಿನ್ನ ಅಂದರೆ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಬೆಳ್ಳಿ ಬೆಲೆ ಎಷ್ಟಾಗಿದೆ? ಆ ಬಗ್ಗೆ ಮಾಹಿತಿಗಾಗಿ ಮುಂದೆ ಇದೆ ಓದಿ.
ಬೆಳ್ಳಿ ಬೆಲೆ 86,000 ರೂಪಾಯಿ!
ಆಭರಣ ಚಿನ್ನ ಅಂದರೆ 22 ಕ್ಯಾರೆಟ್ ಚಿನ್ನದ ಬೆಲೆ ಏರಿಕೆ ಕಂಡು 100 ಗ್ರಾಂ ಆಭರಣ ಚಿನ್ನ ಬೆಲೆ ಈಗ 10,500 ರೂಪಾಯಿ ಏರಿಕೆ ಆಗಿದೆ. ಈ ಮೂಲಕ 10 ಗ್ರಾಂ ಆಭರಣ ಚಿನ್ನ ಬೆಲೆ ಈಗ 1050 ರೂಪಾಯಿ ಏರಿಕೆ ಆಗಿದೆ. ಆಭರಣ ಚಿನ್ನದ ಬೆಲೆ ಏರಿಕೆ ಬಳಿಕ, 10 ಗ್ರಾಂ 66,700 ರೂಪಾಯಿಗೆ ಮಾರಾಟ ಆಗ್ತಿದೆ. ಮತ್ತೊಂದು ಕಡೆ ಬೆಳ್ಳಿ ಬೆಲೆಯಲ್ಲಿ 2000 ರೂಪಾಯಿ ಏರಿಕೆ ಕಂಡು 86,000 ರೂಪಾಯಿಗೆ ಮಾರಾಟ ಆಗುತ್ತಿದೆ. ಆಷಾಢ ಮುಗಿದು ಈಗ ಶ್ರಾವಣ ಆರಂಭ ಆಗಿದ್ದು, ಚಿನ್ನದ ಬೆಲೆ ಮಾತ್ರವಲ್ಲ ಬೆಳ್ಳಿ ಬೆಲೆ ಕೂಡ ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆ ಕಾಣುವ ಬಗ್ಗೆ ತಜ್ಞರು ಮುನ್ಸೂಚನೆ ನೀಡುತ್ತಿದ್ದಾರೆ.












Click it and Unblock the Notifications