Gold Price May 27: ಬಂಗಾರ ಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ದರದಲ್ಲಿ ಭರ್ಜರಿ ಕುಸಿತ, ಬೆಳ್ಳಿ ಬೆಲೆ ಸ್ಥಿರ
Gold Price May 27: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಬುಧವಾರ ಭರ್ಜರಿ ಇಳಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಹೆಚ್ಚಳವಾಗುತ್ತಿತ್ತು. ಇದೀಗ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿರುವುದು ಬಂಗಾರ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ. 18, 22 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಮೇ 27ರ ಬುಧವಾರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಎಷ್ಟು ಇಳಿಕೆಯಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 11,872 ರೂಪಾಯಿ ಆಗಿದೆ. 18 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆಯು 1,18,720 ರೂ. ಆಗಿದೆ. ಮಂಗಳವಾರಕ್ಕೆ ಹೋಲಿಕೆ ಮಾಡಿದರೆ 18 ಕ್ಯಾರೆಟ್ ಚಿನ್ನದ 1 ಗ್ರಾಂ ಬೆಲೆಯು 45 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಮೇಲಿನ ಬೆಲೆಯು 450 ರೂಪಾಯಿ ಭರ್ಜರಿ ಇಳಿಕೆಯಾಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭಾರೀ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ 1 ಗ್ರಾಂನ ಬೆಲೆಯು 14,510 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,45,100 ರೂಪಾಯಿ ಆಗಿದೆ. ಮೇ 26ರ ಮಂಗಳವಾರಕ್ಕೆ ಹೋಲಿಕೆ ಮಾಡಿದರೆ 22 ಕ್ಯಾರೆಟ್ನ 1 ಗ್ರಾಂ ಚಿನ್ನದ ಮೇಲೆ 55 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಮೇಲೆ 550 ರೂಪಾಯಿ ಭರ್ಜರಿ ಕಡಿಮೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 18 ಹಾಗೂ 22 ಕ್ಯಾರೆಟ್ನಂತೆಯೇ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭಾರೀ ಇಳಿಕೆಯಾಗಿದೆ. 24 ಕ್ಯಾರೆಟ್ನ 1 ಗ್ರಾಂ ಚಿನ್ನದ ಬೆಲೆಯು 15,829 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,58,290 ರೂ. ಆಗಿದೆ. ಒಂದು ಗ್ರಾಂ ಚಿನ್ನದ ಬೆಲೆಯು 60 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 600 ರೂಪಾಯಿ ಭರ್ಜರಿ ಇಳಿಕೆಯಾಗಿದೆ.
ಬೆಳ್ಳಿ ಬೆಲೆ ಹೇಗಿದೆ ?
ಚಿನ್ನದ ಬೆಲೆಯಲ್ಲಿ ಏರಿಳಿತವಾದರೂ ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಇದೆ. ಬೆಳ್ಳಿ ಬೆಲೆಯು ಕಳೆದ ಒಂದು ವಾರದಿಂದಲೂ ಯಥಾಸ್ಥಿತಿ ಮುಂದುವರಿದಿದೆ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 285 ರೂಪಾಯಿ ಹಾಗೂ ಒಂದು ಕೆ.ಜಿಗೆ 2.85 ಲಕ್ಷ ರೂ. ಇದೆ.
Gold Price May 27: ಚಿನ್ನ ಖರೀದಿ ಪ್ರಮಾಣ ಇಳಿಕೆ
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರು ಈಚೆಗೆ ದೇಶವು ಸಂಕಷ್ಟದಲ್ಲಿದೆ. ಈ ಸಂದರ್ಭದಲ್ಲಿ ಚಿನ್ನವನ್ನು ಖರೀದಿ ಮಾಡಬೇಡಿ. ಕನಿಷ್ಠ ಒಂದು ವರ್ಷದ ಅವಧಿಗೆ ಚಿನ್ನ ಖರೀದಿ ಮಾಡಬೇಡಿ ಎಂದು ದೇಶದ ಜನರಲ್ಲಿ ಮನವಿ ಮಾಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರ ಮನವಿಯ ಬೆನ್ನಲ್ಲೇ ಚಿನ್ನದ ಖರೀದಿ ಪ್ರಮಾಣ ಬೆಂಗಳೂರು ಸೇರಿದಂತೆ ವಿವಿಧ ಭಾಗದಲ್ಲಿ ಕಡಿಮೆಯಾಗಿದೆ. ಹೂಡಿಕೆ ಮೇಲಿನ ಚಿನ್ನ ಖರೀದಿ ಮಾಡುವುದನ್ನು ಹಲವರು ನಿಲ್ಲಿಸಿದ್ದಾರೆ. ಇದರ ನಡುವೆಯೇ ಮೇ 27ರ ಬುಧವಾರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ.












Click it and Unblock the Notifications