Gold Price: ಚಿನ್ನದ ಬೆಲೆ 50,000 ರೂಪಾಯಿಗೆ ಕುಸಿತ? ಮೋದಿ ಸರ್ಕಾರದ ಮಹತ್ವದ ಘೋಷಣೆ!

ಚಿನ್ನ & ಬೆಳ್ಳಿ ಬೆಲೆ ಭಾರಿ ಕುಸಿತ ಕಾಣುತ್ತಿದೆ, ಅದರಲ್ಲೂ ನಿನ್ನೆ ಕೇಂದ್ರ ಸರ್ಕಾರ ಬಜೆಟ್ ವೇಳೆ ಘೋಷಣೆ ಮಾಡಿದ ಹೊಸ ಯೋಜನೆ ಪರಿಣಾಮ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಕಾಣುತ್ತಿದ್ದು, ಶೀಘ್ರದಲ್ಲೇ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 50,000 ರೂಪಾಯಿಗೆ ಕುಸಿತವನ್ನ ಕಾಣುವ ಸಾಧ್ಯತೆ ದಟ್ಟವಾಗಿದೆ. ಹಾಗಾದ್ರೆ ಚಿನ್ನದ ಬೆಲೆ ಇನ್ನೂ ಎಷ್ಟು ಕುಸಿತ ಕಾಣುತ್ತೆ? ಈಗ ಎಷ್ಟಿದೆ ಚಿನ್ನದ ಬೆಲೆ? ಸಂಪೂರ್ಣ ಮಾಹಿತಿಗೆ ಮುಂದೆ ಓದಿ.

ನರೇಂದ್ರ ಮೋದಿ ಅವರ ಸರ್ಕಾರದಲ್ಲಿ ಮತ್ತೆ ಹಣಕಾಸು ಖಾತೆ ಪಡೆದಿರುವ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ನಿನ್ನೆ ಬಜೆಟ್ ಮಂಡಿಸಿದರು. ಹೀಗೆ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಮಹಿಳೆಯರ ಮೇಲೆ ಸಾಕಷ್ಟು ನಿರೀಕ್ಷೆಗಳು ಇದ್ದವು. ಯಾಕಂದ್ರೆ ಚಿನ್ನ & ಬೆಳ್ಳಿ ಬೆಲೆ ಕಳೆದ 1 ವರ್ಷದಲ್ಲಿ ಭಾರಿ ಏರಿಕೆ ಕಂಡಿದೆ. ಹೀಗಾಗಿ ಚಿನ್ನ & ಬೆಳ್ಳಿ ಬೆಲೆ ಇಳಿಕೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್-2024ರ ವೇಳೆ ಮಹತ್ವದ ಘೋಷಣೆ ಮಾಡಲಿದ್ದಾರೆ ಎಂಬ ಆಸೆ ಇತ್ತು. ಆ ಕನಸು ಈಗ ಈಡೇರಿದ್ದು ಚಿನ್ನ & ಬೆಳ್ಳಿ ಮೇಲೆ ಇದ್ದ ಕಸ್ಟಮ್ಸ್‌ಗೆ ಮುಕ್ತಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ, ಹೀಗಾಗಿ ಚಿನ್ನ & ಬೆಳ್ಳಿ ಬೆಲೆ ಕುಸಿತ ಕಾಣುತ್ತಿದೆ.

Gold Price May Reach 50000 Rupees In Few Months After Budget 2024 Announcement

ಚಿನ್ನದ ಬೆಲೆ 50 ಸಾವಿರ ರೂಪಾಯಿ?

ಅಂದಹಾಗೆ ಚಿನ್ನದ ಬೆಲೆ ಹೆಚ್ಚಾದರೆ ಹೂಡಿಕೆ ಮಾಡುವವರಿಗೆ ಖುಷಿ, ಆದರೂ ಆಭರಣವನ್ನ ಹೆಚ್ಚಾಗಿ ಇಷ್ಟಪಡುವ ಮಹಿಳೆಯರಿಗೆ ಚಿನ್ನ ಬೆಲೆ ಕುಸಿದರೆ ಮಾತ್ರ ಸಂತಸ. ಹೀಗಿದ್ದಾಗ ಕೇಂದ್ರ ಸರ್ಕಾರ ಬಜೆಟ್-2024ರ ಮೂಲಕ ಘೋಷಣೆ ಮಾಡಿರುವಂತೆ ಚಿನ್ನದ ಬೆಲೆ ಮತ್ತು ಬೆಳ್ಳಿ ಬೆಲೆ ಭಾರಿ ಕುಸಿತ ಕಾಣುವ ನಿರೀಕ್ಷೆ ಇದೆ. ನಿನ್ನೆ ಬಜೆಟ್ ಮುಗಿದ ನಂತರ ಒಂದೇ ದಿನಕ್ಕೆ ಚಿನ್ನದ ಬೆಲೆ ಪ್ರತಿ 100 ಗ್ರಾಂಗೆ 29,900 ರೂಪಾಯಿ ಕುಸಿತ ಕಂಡಿದ್ದು 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಬಜೆಟ್ ಹಿನ್ನೆಲೆ ಕುಸಿತ ಕಂಡು ಪ್ರತಿ 100 ಗ್ರಾಂ 7,08,600 ರೂಪಾಯಿ ತಲುಪಿದೆ. ಹಾಗೇ ಆಭರಣ ಚಿನ್ನ ಅಂದ್ರೆ 22 ಕ್ಯಾರೆಟ್ ಚಿನ್ನದ ಬೆಲೆ ಭರ್ಜರಿ ಕುಸಿತ ಕಂಡಿದ್ದು 100 ಗ್ರಾಂ ಆಭರಣ ಚಿನ್ನದ ಬೆಲೆ ಈಗ 27,500 ರೂಪಾಯಿ ಇಳಿಕೆ ಆಗಿದೆ.

ಚಿನ್ನದ ಜೊತೆ ಬೆಳ್ಳಿ ಬೆಲೆಯೂ ಕುಸಿತ

ಇದೀಗ 10 ಗ್ರಾಂ ಆಭರಣ ಚಿನ್ನದ ಬೆಲೆ 2,750 ರೂಪಾಯಿ ಇಳಿಕೆ ಕಂಡು, ಆಭರಣ ಚಿನ್ನದ ಬೆಲೆ ಇಳಿಕೆ ನಂತರ ಪ್ರತಿ 10 ಗ್ರಾಂಗೆ 64,950 ರೂಪಾಯಿಗೆ ಮಾರಾಟ ಆಗುತ್ತಿದೆ. ಬೆಳ್ಳಿಯ ಬೆಲೆ ಇದೀಗ ಕೆಜಿಗೆ 3,500 ರೂಪಾಯಿ ಕುಸಿತ ಕಂಡಿದೆ. ಈ ಮೂಲಕ ಈಗ ಬೆಂಗಳೂರಲ್ಲಿ ಬೆಳ್ಳಿ ಪ್ರತಿ ಕೆಜಿಗೆ 88,000 ರೂಪಾಯಿ ಲೆಕ್ಕದಲ್ಲಿ ಮಾರಾಟ ಆಗುತ್ತಿದೆ. ಹೀಗಾಗಿ ಶೀಘ್ರದಲ್ಲೇ ಆಭರಣ ಚಿನ್ನ ಪ್ರತಿ 10 ಗ್ರಾಂಗೆ 50,000 ರೂಪಾಯಿಗೆ ತಲುಪುವ ನಿರೀಕ್ಷೆ ದಟ್ಟವಾಗಿದೆ.

ಬೆಳ್ಳಿ ಬೆಲೆಯಲ್ಲಿ ದಿಢೀರ್ ಇಳಿಕೆ!

ಚಿನ್ನ ಬಹು ಬೇಡಿಕೆಯ ವಸ್ತು, ಹೀಗಾಗಿಯೇ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗೆ ಚಿನ್ನ ಕೊಳ್ಳಲು ಜನಗಳು ಕೂಡ ಮುಗಿಬಿದ್ದು ಮುಂದೆ ಬರುತ್ತಿದ್ದಾರೆ. ಹೀಗಿದ್ದಾಗ ಚಿನ್ನದ ಜೊತೆ ಬೆಳ್ಳಿ ಬೆಲೆ ಕೂಡ ಭಾರಿ ಏರಿಕೆ ಕಾಣುತ್ತಿತ್ತು. ನೋಡ ನೋಡುತ್ತಲೇ ಬೆಳ್ಳಿ ಬೆಲೆ, ಹತ್ತಿರ ಹತ್ತಿರ 1 ಲಕ್ಷ ರೂಪಾಯಿ ತಲುಪಿತ್ತು, ಇಂತಹ ಸ್ಥಿತಿಯಲ್ಲಿ ದಿಢೀರ್ ಬೆಳ್ಳಿ ಬೆಲೆಯಲ್ಲಿ ದೊಡ್ಡ ಕುಸಿತವಾಗಿದೆ. ಮುಂದಿನ ದಿನಗಳಲ್ಲಿ ಬೆಳ್ಳಿ ಬೆಲೆ ಮತ್ತಷ್ಟು ಕುಸಿತ ಕಾಣುವ ನಿರೀಕ್ಷೆ ಇದೆ. ಈ ನಡುವೆ ಚಿನ್ನದ ಜೊತೆ ಬೆಳ್ಳಿ ಬೆಲೆ ಕೂಡ ಭಾರಿ ಇಳಿಕೆ ಕಂಡಿರುವುದು ಬೆಳ್ಳಿ ಇಷ್ಟಪಡುವವರಿಗೆ ಖುಷಿ ಕೊಟ್ಟಿದೆ.

ಹಳದಿ ಲೋಹ ಎಲ್ಲರಿಗೂ ಇಷ್ಟ!

ಚಿನ್ನ ಭಾರತೀಯರ ಪಾಲಿಗೆ ತುರ್ತು ಹಣ ಇದ್ದಂತೆ, ಯಾಕಂದ್ರೆ ಯಾವುದೇ ತುರ್ತು ಸ್ಥಿತಿ ಎದುರಾಗಿ ಪರದಾಟ ಶುರುವಾದರೂ ಭಾರತೀಯರು ಮೊದಲು ತಮ್ಮ ಬಳಿ ಇರುವ ಚಿನ್ನ, ಮತ್ತು ಬೆಳ್ಳಿ ಮೊರೆ ಹೋಗುತ್ತಾರೆ. ಯಾಕಂದ್ರೆ ತುರ್ತು ಪರಿಸ್ಥಿತಿಯಲ್ಲಿ, ಎಲ್ಲಿಯೂ ಹಣ ಸಿಗದೇ ಇದ್ದರೆ ನಮ್ಮ ಬಳಿ ಇರುವ ಚಿನ್ನ & ಬೆಳ್ಳಿಗೆ ಬೇಡಿಕೆ ಬಂದೇ ಬರುತ್ತದೆ. ಹೀಗಾಗಿಯೇ ಬಹುತೇಕ ಭಾರತೀಯರು ಚಿನ್ನದ ಮೇಲೆ ಹೂಡಿಕೆ ಮಾಡುತ್ತಾ ಬಂದಿದ್ದಾರೆ. ಮತ್ತೊಂದು ಕಡೆ ಚಿನ್ನದ ಮೇಲೆ ಹೂಡಿಕೆ ಮಾಡುವ ಪ್ರತಿಯೊಬ್ಬರಿಗೂ, ಹಳದಿ ಲೋಹ ಬೆನ್ನೆಲುಬಾಗಿ ನಿಂತಿದೆ. ಮುಂದಿನ ದಿನಗಳಲ್ಲಿ ಹಳದಿ ಲೋಹ ಅಂದ್ರೆ ಚಿನ್ನ ಮತ್ತಷ್ಟು ಎತ್ತರಕ್ಕೆ ಹೋಗುವ ನಿರೀಕ್ಷೆ ದಟ್ಟವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+