Gold Price: ಚಿನ್ನದ ಬೆಲೆ ಕೆಲವೇ ದಿನಗಳಲ್ಲಿ 70,000 ರೂಪಾಯಿಗೆ ತಲುಪುತ್ತಾ?

ಚಿನ್ನ & ಬೆಳ್ಳಿ ಬೆಲೆ ಮುಗಿಲು ಮುಟ್ಟುತ್ತಿದ್ದು, ಭಾರಿ ಬೆಲೆ ಏರಿಕೆ ಆಗುತ್ತಿದೆ. ಅದರಲ್ಲೂ ಕೆಲವು ದಿನಗಳಿಂದ ನಿರಂತರ ಏರಿಕೆ ಕಂಡಿರುವ ಚಿನ್ನ & ಬೆಳ್ಳಿ ಬೆಲೆ ಇದೀಗ ಹೊಸ ಎತ್ತರಕ್ಕೆ ತಲುಪುವ ಸಾಧ್ಯತೆ ದಟ್ಟವಾಗಿದೆ. ಹಾಗಾದ್ರೆ ಇದೀಗ ಬಂಗಾರದ ಬೆಲೆ 70,000 ರೂಪಾಯಿಗೆ ತಲುಪುತ್ತಾ? ಆ ಮೂಲಕ ಹೊಸ ದಾಖಲೆ ಸೃಷ್ಟಿ ಮಾಡುತ್ತಾ ಚಿನ್ನ? ಬೆಳ್ಳಿ ಬೆಲೆ ಈಗ ಎಷ್ಟಿದೆ? ಸಂಪೂರ್ಣವಾಗಿ ಮಾಹಿತಿ ತಿಳಿಯಲು ಮುಂದೆ ಓದಿ.

ಮನುಷ್ಯ ನಾಗರಿಕತೆ ಕಡೆ ಹೆಜ್ಜೆ ಹಾಕಿದ ನಂತರ ಚಿನ್ನವನ್ನ ಹೆಚ್ಚಾಗಿ ಬಳಸತೊಡಗಿದೆ. ಅದರಲ್ಲೂ ಚಿನ್ನದ ಬಳಕೆಗೆ ಸುಮಾರು 5000 ವರ್ಷ ಇತಿಹಾಸ ಇದೆ. ಹೀಗೆ ಚಿನ್ನವನ್ನ ಮನುಷ್ಯರು ಸಾವಿರಾರು ವರ್ಷಗಳಿಂದ ಬಳಕೆ ಮಾಡಿಕೊಂಡು ಬರುತ್ತಿದ್ದಾರೆ. ಹೀಗಾಗಿ ಈ ಹೊತ್ತಿಗೂ ಚಿನ್ನಕ್ಕೆ ಭಾರಿ ದೊಡ್ಡ ಗೌರವ ಮತ್ತು ಬೆಲೆ ಇದೆ. ಇತರ ಯಾವ ಲೋಹಕ್ಕೆ ಕೂಡ ಚಿನ್ನದಷ್ಟು ಮಾನ್ಯತೆ ನೀಡಲ್ಲ. ಆದರೆ, ಚಿನ್ನಕ್ಕೆ ಮಾತ್ರ ಅತಿಹೆಚ್ಚು ಬೆಲೆಯು ಇದೆ. ಹೀಗಾಗಿ ಚಿನ್ನದ ಬೆಲೆ ಇದೀಗ ಮುಗಿಲು ಮುಟ್ಟುತ್ತಿದೆ. ಇದೀಗ ಚಿನ್ನದ ಬೆಲೆ 70,000 ರೂಪಾಯಿಗೆ ತಲುಪುವ ನಿರೀಕ್ಷೆ ದಟ್ಟವಾಗಿದೆ. ಹಾಗಾದ್ರೆ ಇದೀಗ ಬಂಗಾರದ ಬೆಲೆ ಎಷ್ಟಿದೆ?

Gold Price May Reach To 70000 Rupees Very Soon

ಚಿನ್ನದ ಬೆಲೆ ಎಷ್ಟಿದೆ ತಿಳಿಯಿರಿ

24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ನಿನ್ನೆ ಏರಿಕೆ ಬಳಿಕ ಹೊಸ ದಾಖಲೆ ಸೃಷ್ಟಿ ಮಾಡಿದೆ. 100 ಗ್ರಾಂಗೆ 3,300 ರೂಪಾಯಿ ಏರಿಕೆ ಕಂಡಿದೆ 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ. ಹೀಗೆ ಶುದ್ಧ ಚಿನ್ನದ ಬೆಲೆ ಪ್ರತಿ 100 ಗ್ರಾಂಗೆ 7,37,500 ರೂಪಾಯಿ ಆಗಿದೆ. ಇದರ ಜೊತೆ ಶುದ್ಧ ಚಿನ್ನ ಬೆಲೆ ಪ್ರತಿ 10 ಗ್ರಾಂಗೆ 73,750 ರೂಪಾಯಿಗೆ ಏರಿಕೆ ಆಗಿದೆ.

ಆಭರಣ ಚಿನ್ನ ಅಂದ್ರೆ 22 ಕ್ಯಾರೆಟ್ ಚಿನ್ನ ಬೆಲೆ ಭಾರಿ ಏರಿಕೆ ಕಂಡು, ಪ್ರತಿ 100 ಗ್ರಾಂ ಆಭರಣ ಚಿನ್ನ ಬೆಲೆ ಈಗ 3,000 ರೂಪಾಯಿ ಏರಿಕೆ ಆಗಿಬಿಟ್ಟಿದೆ. ಈ ಮೂಲಕ ಪ್ರತಿ 10 ಗ್ರಾಂ ಆಭರಣ ಚಿನ್ನ ಬೆಲೆ 300 ರೂಪಾಯಿ ಏರಿಕೆ ಆಗಿದೆ. ಆಭರಣ ಚಿನ್ನ ಬೆಲೆ ಏರಿಕೆ ನಂತರ ಇದೀಗ ಪ್ರತಿ 10 ಗ್ರಾಂಗೆ 67,600 ರೂಪಾಯಿಗೆ ಮಾರಾಟ ಆಗುತ್ತಿದೆ. ಒಟ್ನಲ್ಲಿ ಇದೇ ರೀತಿ ಬೆಳ್ಳಿ ಬೆಲೆ ಕೂಡ ಭಾರಿ ಏರಿಕೆ ಕಾಣ್ತಿದೆ ಎನ್ನಬಹುದು. ಬೆಳ್ಳಿ ಬೆಲೆ ಇದೀಗ ಕೆಜಿಗೆ 95,000 ರೂಪಾಯಿ ಆಗಿದೆ.

ಬೆಲೆ ಏರಿಕೆಗೆ ಕಾರಣ ಏನು?

ಚಿನ್ನಕ್ಕೆ ಸಖತ್ ಡಿಮ್ಯಾಂಡ್ ಬಂದಿದ್ದಕ್ಕೆ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಭಾರಿ ಏರಿಕೆ ಕಾಣುತ್ತಿದ್ದು. ಭಾರತೀಯರು ಚಿನ್ನದ ಮೇಲೆ ಹೂಡಿಕೆ ಮಾಡಲು ಇಷ್ಟಪಡುತ್ತಿದ್ದಾರೆ ಕೂಡ. ಏಪ್ರಿಲ್ ತಿಂಗಳಲ್ಲಿ, ಇತಿಹಾಸ ಬರೆದಿತ್ತು ಚಿನ್ನದ ಬೆಲೆ. ಹೀಗಿದ್ದಾಗ ಚಿನ್ನದ ಬೆಲೆ ನಂತರ ಹಾದಿಗೆ ಮರಳಿತ್ತು, ಅದರಲ್ಲೂ ತನ್ನ ಗರಿಷ್ಠ ಬೆಲೆಯಿಂದ ಚಿನ್ನದ ಬೆಲೆ ಮತ್ತೆ ಕೆಳಗೆ ಇಳಿಯುತ್ತಿತ್ತು. ಆದ್ರೆ ಈಗ ಶುಭ ಕಾರ್ಯಗಳು ಮತ್ತೆ ಆರಂಭ ಆಗಲಿರುವ ಕಾರಣಕ್ಕೆ ಚಿನ್ನದ ಬೆಲೆಯಲ್ಲಿ ಏರಿಕೆ ಕಂಡು ಬರುತ್ತಿದೆ ಎನ್ನಲಾಗಿದೆ. ಯಾಕಂದ್ರೆ ಮದುವೆ ಮತ್ತಿತರ ಕಾರ್ಯಕ್ರಮಗಳಿಗೆ ಚಿನ್ನವೇ ಮೊದಲ ಆಯ್ಕೆ. ಹೀಗಾಗಿ ಚಿನ್ನದ ಬೆಲೆ ಭಾರಿ ಏರಿಕೆ ಕಾಣುವ ಸಾಧ್ಯತೆ ದಟ್ಟವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+