Gold Price November 12: ಚಿನ್ನದ ಬೆಲೆ ಭರ್ಜರಿ ಇಳಿಕೆ: ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್

Gold Price November 10: ಸತತ ಕಳೆದ ಮೂರು ದಿನಗಳಿಂದ ಏರಿಕೆಯ ಹಾದಿಯಲ್ಲಿದ್ದ ಚಿನ್ನದ ಬೆಲೆಯು ಇಂದು (ನವೆಂಬರ್‌ 12)ರಂದು ಕಡಿಮೆಯಾಗಿದೆ. ಕಳೆದ ಒಂದು ವಾರದಿಂದಲೂ ಚಿನ್ನದ ಬೆಲೆಯು ಅಲ್ಪ ಪ್ರಮಾಣದಲ್ಲಿ ಹೇರಿಕೆಯಾಗುತ್ತಿತ್ತು. ಚಿನ್ನ ಪ್ರಿಯರಿಗೆ ಇಂದಿನ ಬೆಲೆ ಸಂತೋಷವನ್ನುಂಟು ಮಾಡಿದ್ದರೂ, ಒಟ್ಟಾರೆ ಚಿನ್ನದ ಬೆಲೆಯನ್ನು ನೋಡುವುದಾದರೆ ಭಾರೀ ಏರಿಕೆಯ ಹಾದಿಯಲ್ಲೇ ಇದೇ. ನವೆಂಬರ್ 12ರಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎನ್ನುವ ನಿಖರವಾದ ವಿವರ ಇಲ್ಲಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗದಲ್ಲಿ ಚಿನ್ನದ ಬೆಲೆಯು ಭರ್ಜರಿ ಇಳಿಕೆ ಕಂಡಿದೆ. 18, 22 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯು ಭರ್ಜರಿ ಇಳಿಕೆಯಾಗಿದೆ. ದೇಶದಲ್ಲಿ ನಡೆದ ಅಹಿತಕರ ಘಟನೆ ಹಾಗೂ ಷೇರುಮಾರುಕಟ್ಟೆ ಏರುಪೇರು ಸೇರಿದಂತೆ ವಿವಿಧ ಕಾರಣಗಳಿಗೆ ಚಿನ್ನದ ಬೆಲೆಯು ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿತ್ತು. ಇದೀಗ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆಯಾಗಿದೆ.

Gold Price November 10 Sharp Fall in Gold Rates Check Today s Gold and Silver Prices

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 9,413 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 94,130 ರೂಪಾಯಿ ಆಗಿದೆ. ಒಂದು ಗ್ರಾಂ ಚಿನ್ನದ ಬೆಲೆಯು 25 ರೂಪಾಯಿ ಹಾಗೂ 10 ಗ್ರಾಂನ 18 ಕ್ಯಾರೆಟ್ ಚಿನ್ನದ ಮೇಲೆ 250 ರೂಪಾಯಿ ಇಳಿಕೆ ಆಗಿದೆ. ಇದು ಚಿನ್ನ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ.

22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 11,505 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,15,050 ರೂಪಾಯಿ ಆಗಿದೆ. ಮಂಗಳವಾರಕ್ಕೆ ಹೋಲಿಕೆ ಮಾಡಿದರೆ ಒಂದು ಗ್ರಾಂ ಚಿನ್ನದ ಬೆಲೆಯು 30 ರೂಪಾಯಿ ಹಾಗೂ ಹತ್ತು ಗ್ರಾಂ ಚಿನ್ನದ ಬೆಲೆಯು 300 ರೂಪಾಯಿ ಭರ್ಜರಿ ಇಳಿಕೆಯಾಗಿದೆ.

24 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 12,551 ರೂಪಾಯಿ ಹಾಗೂ 10 ಗ್ರಾಂಗೆ 1,25,510 ರೂಪಾಯಿ ಆಗಿದೆ. ನವೆಂಬರ್‌ 11ಕ್ಕೆ ಹೋಲಿಕೆ ಮಾಡಿದರೆ ಒಂದು ಗ್ರಾಂ ಚಿನ್ನದ ಬೆಲೆಯು 33 ರೂಪಾಯಿ ಹಾಗೂ 10 ಗ್ರಾಂಗೆ 330 ರೂಪಾಯಿ ಕಡಿಮೆಯಾಗಿದೆ.

ಬೆಳ್ಳಿ ಬೆಲೆ: ಚಿನ್ನದ ಬೆಲೆ ಇಳಿಕೆಯಾದರೂ ಬೆಳ್ಳಿ ಬೆಲೆ ಏರಿಕೆಯ ಹಾದಿಯಲ್ಲೇ ಇದೆ. ಬೆಳ್ಳಿ ಬೆಲೆಯು ಒಂದು ಗ್ರಾಂಗೆ 162 ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ ಗ್ರಾಂ ಬೆಳ್ಳಿಯ ಬೆಲೆಯ ಮೇಲೆ 2 ರೂಪಾಯಿ ಹೆಚ್ಚಳವಾಗಿದೆ. ಒಂದು ಕೆ.ಜಿ ಬೆಳ್ಳಿ ಬೆಲೆಯು 1,62,000 ಸಾವಿರ ರೂಪಾಯಿ ಹೆಚ್ಚಳವಾಗಿದೆ. ಕೆ.ಜಿ ಬೆಳ್ಳಿಯ ಬೆಲೆಯು 2000 ಸಾವಿರ ರೂಪಾಯಿ ಹೆಚ್ಚಳವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+