Gold Price November 14: ಚಿನ್ನದ ಬೆಲೆ ಭರ್ಜರಿ ಇಳಿಕೆ: ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್
Gold Price November 14: ಚಿನ್ನ ಪ್ರಿಯರಿಗೆ ಶುಕ್ರವಾರವು ಶುಭ ಶುಕ್ರವಾರವಾಗಿ ಬದಲಾಗಿದೆ. ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. ಕಳೆದ ಎರಡು ದಿನಗಳಿಂದಲೂ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿತ್ತು. ಇದೀಗ ಕೊನೆಗೂ ಚಿನ್ನದ ಬೆಲೆಯು ಭರ್ಜರಿ ಇಳಿಕೆಯಾಗಿದೆ. ನವೆಂಬರ್ 14ರ ಶುಕ್ರವಾರದಂದು 18 ಕ್ಯಾರೆಟ್, 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ. ನೆನ್ನೆಗೆ ಹೋಲಿಕೆ ಮಾಡಿದರೆ ಎಷ್ಟು ಇಳಿಕೆಯಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಚಿನ್ನದ ಬೆಲೆಯು ಭರ್ಜರಿ ಇಳಿಕೆಯಾಗಿದೆ. 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 9,589 ರೂಪಾಯಿ ಆಗಿದೆ. ಇನ್ನು 10 ಗ್ರಾಂನ 18 ಕ್ಯಾರೆಟ್‌ನ ಚಿನ್ನದ ಬೆಲೆಯು 95,890 ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ ಒಂದು ಗ್ರಾಂನ ಮೇಲೆ 58 ರೂಪಾಯಿ ಹಾಗೂ ಹತ್ತು ಗ್ರಾಂನ ಮೇಲೆ 580 ರೂಪಾಯಿ ಕಡಿಮೆಯಾಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 11,720 ರೂಪಾಯಿ ಆಗಿದೆ. 10 ಗ್ರಾಂನ ಬೆಲೆಯು 1,17,200 ರೂಪಾಯಿ ಆಗಿದೆ. ಗುರುವಾರಕ್ಕೆ ಹೋಲಿಕೆ ಮಾಡಿದರೆ, 22 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂನ ಮೇಲೆ 70 ರೂಪಾಯಿ ಹಾಗೂ ಹತ್ತು ಗ್ರಾಂನ ಮೇಲೆ 700 ರೂಪಾಯಿ ಇಳಿಕೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 12,785 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,27,850 ರೂಪಾಯಿ ಆಗಿದೆ. ನವೆಂಬರ್ 13ಕ್ಕೆ ಹೋಲಿಕೆ ಮಾಡಿದರೆ, ಒಂದು ಗ್ರಾಂನ ಮೇಲೆ 77 ರೂಪಾಯಿ ಹಾಗೂ ಹತ್ತು ಗ್ರಾಂನ ಮೇಲೆ 770 ರೂಪಾಯಿ ಕಡಿಮೆಯಾಗಿದೆ.
ಬೆಳ್ಳಿ ಬೆಲೆ: ಇನ್ನು ಚಿನ್ನದ ಬೆಲೆಯು ಏರಿಕೆ ಹಾಗೂ ಇಳಿಕೆಯ ಹಾದಿಯಲ್ಲಿದ್ದರೂ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಅಲ್ಲದೇ ಬೆಳ್ಳಿ ಬೆಲೆಯು ಏರಿಕೆಯ ಹಾದಿಯಲ್ಲಿದೆ. ಬೆಳ್ಳಿ ಬೆಲೆ 1 ಗ್ರಾಂಗೆ 173.10 ರೂಪಾಯಿ ಆಗಿದೆ. ಇನ್ನು ಒಂದು ಕೆ.ಜಿ ಬೆಳ್ಳಿ ಬೆಲೆಯು 1,73,100 ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ ಒಂದು ಕೆ.ಜಿ ಬೆಳ್ಳಿ ಬೆಲೆಯು 100 ರೂಪಾಯಿ ಹೆಚ್ಚಳವಾಗಿದೆ.
ಚಿನ್ನದ ಮೇಲೆ ಹೂಡಿಕೆ ಹೆಚ್ಚಳ: ಇನ್ನು ಇತ್ತೀಚಿನ ದಿನಗಳಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡುವ ಪ್ರಮಾಣ ಹೆಚ್ಚಳವಾಗಿದೆ. ಇದೇ ಕಾರಣಕ್ಕೆ ಚಿನ್ನದ ಬೆಲೆ ಹೆಚ್ಚಳವಾಗುತ್ತಿದೆ. ಇನ್ನು ಮೂರು ದಿನಗಳಿಂದ ಚಿನ್ನದ ಬೆಲೆ ಹೆಚ್ಚಳವಾಗಿತ್ತು. ಇದೀಗ ನವೆಂಬರ್ 14ರಂದು ಚಿನ್ನದ ಬೆಲೆ ಭರ್ಜರಿ ಇಳಿಕೆ ಕಂಡಿದೆ.
ಚಿನ್ನದ ಬೆಲೆ ಇನ್ನಷ್ಟು ಇಳಿಕೆ ಸಾಧ್ಯತೆ: ಚಿನ್ನದ ಬೆಲೆಯು ಪ್ರತಿ ಎರಡು ದಿನಗಳಿಗೊಮ್ಮೆ ಏಕಾಏಕಿ ಇಳಿಕೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ12 ಇದೆ. ಚಿನ್ನದ ಬೆಲೆಯು ನವೆಂಬರ್ 12 ಹಾಗೂ ನವೆಂಬರ್ 14 ರಂದು ಭರ್ಜರಿ ಇಳಿಕೆ ಆಗಿದೆ.












Click it and Unblock the Notifications