Gold Price November 15: ಚಿನ್ನದ ಬೆಲೆ ಬಂಪರ್ ಇಳಿಕೆ, ಬೆಳ್ಳಿ ಬೆಲೆಯೂ ಕುಸಿತ: ಚಿನ್ನ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್
Gold Price November 15: ಚಿನ್ನ ಪ್ರಿಯರಿಗೆ ಭರ್ಜರಿ ಮತ್ತೆ ಭರ್ಜರಿ ಇಳಿಕೆ ಕಂಡಿದೆ. ನೆನ್ನೆಯೂ ಚಿನ್ನದ ಬೆಲೆಯು ಭರ್ಜರಿ ಇಳಿಕೆ ಕಂಡಿತ್ತು. ಕಳೆದ ವಾರವೆಲ್ಲವೂ ಚಿನ್ನದ ಬೆಲೆಯಲ್ಲಿ ಅಲ್ಪ ಪ್ರಮಾಣದ ಹೆಚ್ಚಳವಾಗಿತ್ತು. ಆದರೆ ಈ ವಾರದಲ್ಲಿ ಮೂರು ಬಾರಿ ಭರ್ಜರಿಯಾಗಿ ಚಿನ್ನದ ಬೆಲೆ ಕಡಿಮೆಯಾಗಿದೆ. 18 ಕ್ಯಾರೆಟ್, 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ದೇಶದಲ್ಲಿ ಸಂಭವಿಸುತ್ತಿರುವ ಸರಣಿ ಸ್ಫೋಟಗಳು, ರಾಜಕೀಯ ಬೆಳವಣಿಗೆ ಸೇರಿದಂತೆ ವಿವಿಧ ಕಾರಣಗಳಿಗೆ ಕಳೆದ ಎರಡು ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಹೆಚ್ಚಳವಾಗಿತ್ತು. ಇನ್ನು ವರ್ಷದ ಪ್ರಾರಂಭದಿಂದಲೂ ಚಿನ್ನದ ಬೆಲೆ ಏರಿಕೆಯ ಹಾದಿಯಲ್ಲೇ ಇದೆ. ಇದೀಗ ಚಿನ್ನದ ಬೆಲೆಯು ನವೆಂಬರ್ 15ರಂದು ಭರ್ಜರಿ ಇಳಿಕೆ ಕಂಡಿದೆ. ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಇಂದಿನ ಚಿನ್ನದ ವಿವಿಧ ಕ್ಯಾರೆಟ್ ಬೆಲೆ ಹಾಗೂ ಬೆಳ್ಳಿ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ವಿವರ ನೋಡೋಣ.

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂ 9,381 ರೂಪಾಯಿ ಆಗಿದೆ. ಇನ್ನು 10 ಗ್ರಾಂ ಚಿನ್ನದ ಬೆಲೆಯು 93,810 ರೂಪಾಯಿ ಆಗಿದೆ. ಇನ್ನು ಶುಕ್ರವಾರಕ್ಕೆ ಹೋಲಿಕೆ ಮಾಡಿದರೆ ಒಂದು ಗ್ರಾಂ ಚಿನ್ನದ ಬೆಲೆಯಲ್ಲಿ 147 ರೂಪಾಯಿ ಇಳಿಕೆಯಾಗಿದೆ. ಇನ್ನು 10 ಗ್ರಾಂ ಚಿನ್ನದ ಬೆಲೆಯು 1,470 ರೂಪಾಯಿ ಕಡಿಮೆಯಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂಗೆ 11,465 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,14,650 ರೂಪಾಯಿ ಆಗಿದೆ. 18 ಕ್ಯಾರೆಟ್‌ನ ಚಿನ್ನದ ಬೆಲೆಯು ನವೆಂಬರ್ 14ಕ್ಕೆ ಹೋಲಿಕೆ ಮಾಡಿದರೆ, ಒಂದು ಗ್ರಾಂ ಚಿನ್ನದ ಬೆಲೆಯು 180 ರೂಪಾಯಿ ಹಾಗೂ 10 ಗ್ರಾಂಗೆ 1,800 ರೂಪಾಯಿ ಇಳಿಕೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆ ಕಂಡಿದೆ. 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 12,508 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,25,080 ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ ನೆನ್ನೆಗೆ ಹೋಲಿಕೆ ಮಾಡಿದರೆ ಒಂದು ಗ್ರಾಂ ಚಿನ್ನದ ಬೆಲೆಯು 196 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,960 ರೂಪಾಯಿ ಕಡಿಮೆಯಾಗಿದೆ.
ಬೆಳ್ಳಿ ಬೆಲೆ: ಇನ್ನು ಬೆಳ್ಳಿ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. ಈಚೆಗೆ ಚಿನ್ನದ ಬೆಲೆ ಇಳಿಕೆಯಾಗುತ್ತಿದ್ದರೂ ಬೆಳ್ಳಿ ಬೆಲೆಯಲ್ಲಿ ಇಳಿಕೆಯಾಗಿರಲಿಲ್ಲ. ಇದೀಗ ನವೆಂಬರ್ 15 ರಂದು ಬೆಳ್ಳಿ ಬೆಲೆಯಲ್ಲೂ ಭರ್ಜರಿ ಇಳಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯು ಒಂದು ಗ್ರಾಂ 169 ರೂಪಾಯಿ ಆಗಿದೆ. ಒಂದು ಕೆ.ಜಿ ಬೆಳ್ಳಿ ಬೆಲೆಯು 1,69,000 ರೂಪಾಯಿ ಆಗಿದೆ.












Click it and Unblock the Notifications