Gold Price on April 29: ಅಕ್ಷಯ ತೃತೀಯ ಮತ್ತೆ ಚಿನ್ನದ ಬೆಲೆ ಏರಿಳಿತ: ಎಷ್ಟಿದೆ ಇಂದಿನ ಚಿನ್ನ & ಬೆಳ್ಳಿ ಬೆಲೆ !

Gold Price on April 29: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ ಸೃಷ್ಟಿಯಾಗಿದೆ. ನಾಳೆ (ಏಪ್ರಿಲ್‌ 30) ಅಕ್ಷಯ ತೃತೀಯ ಇದೆ. ಹೀಗಾಗಿ, ಇಂದು ಚಿನ್ನ ಪ್ರಿಯರು ಚಿನ್ನದ ಬೆಲೆ ಎಷ್ಟಿದೆ ಎಂದು ನೋಡುತ್ತಿದ್ದಾರೆ. ಚಿನ್ನದ ಬೆಲೆಯು ಹೊಸ ದಾಖಲೆ ಬರೆದಿದೆ. ಏಪ್ರಿಲ್‌ 29ರ ಚಿನ್ನ ಹಾಗೂ ಬೆಳ್ಳಿ ಬೆಲೆ ಎಷ್ಟಿದೆ ಎನ್ನುವ ವಿವರವು ಇಲ್ಲಿದೆ.

ದೇಶದಲ್ಲಿ ಚಿನ್ನದ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯು ಮತ್ತೆ ಏರಿಕೆ ಕಂಡಿದೆ. ಸಮಾಧಾನಕರ ವಿಷಯ ಎಂದರೆ, ಚಿನ್ನದ ಬೆಲೆಯು ಅಲ್ಪ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯು 1 ಲಕ್ಷ ರೂಪಾಯಿ ಹಾಗೂ ಅದರ ಆಸುಪಾಸಿನಲ್ಲೇ ಇದೆ. ಆದರೆ, ದೇಶದಲ್ಲಿ ಹಾಗೂ ವಿಶ್ವದಲ್ಲಿ ಆರ್ಥಿಕ ಪರಿಸ್ಥಿತಿ , ಯುದ್ಧ ಭೀತಿ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಇನ್ನಷ್ಟು ಹೆಚ್ಚಳವಾಗಬಹುದು ಎನ್ನುವ ಆತಂಕ ಜನರಲ್ಲಿ ಇದೆ. ಏಪ್ರಿಲ್‌ 29ರ ಚಿನ್ನದ ಬೆಲೆ ಹಾಗೂ ಬೆಳ್ಳಿ ಬೆಲೆ ಎಷ್ಟಿದೆ ಎನ್ನುವ ವಿವರ ಇಲ್ಲಿದೆ.

Gold Price on April 29 Gold Price Fluctuates on Akshaya Tritiya Gold and Silver Price

18 ಕ್ಯಾರೆಟ್‌ ಚಿನ್ನದ ಬೆಲೆ: ಏಪ್ರಿಲ್‌ 29ಕ್ಕೆ 18 ಕ್ಯಾರೆಟ್‌ ಚಿನ್ನದ ಬೆಲೆಯು ಪ್ರತಿ ಗ್ರಾಂಗೆ 7,348 ರೂಪಾಯಿ ಇದೆ. 10 ಗ್ರಾಂಗೆ 73,480 ರೂಪಾಯಿ ಇದೆ.

22 ಕ್ಯಾರೆಟ್‌ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್‌ ಚಿನ್ನದ ಬೆಲೆಯು ಮಂಗಳವಾರ ಪ್ರತಿ ಗ್ರಾಂಗೆ 8,980 ರೂಪಾಯಿ ಆಗಿದೆ. 10 ಗ್ರಾಂಗೆ 89,800 ರೂಪಾಯಿ ಆಗಿದೆ.

24 ಕ್ಯಾರೆಟ್‌ ಚಿನ್ನದ ಬೆಲೆ: ಇನ್ನು 24 ಕ್ಯಾರೆಟ್‌ ಚಿನ್ನದ ಬೆಲೆಯಲ್ಲೂ ಭರ್ಜರಿ ಏರಿಕೆ ಕಂಡಿದೆ. 24 ಕ್ಯಾರೆಟ್‌ ಚಿನ್ನದ ಬೆಲೆಯು ಪ್ರತಿ 1 ಗ್ರಾಂಗೆ 9,797 ರೂಪಾಯಿ ಆಗಿದೆ. 10 ಗ್ರಾಂಗೆ 97,970 ರೂಪಾಯಿ ಆಗಿದೆ.

ಬೆಳ್ಳಿ ಬೆಲೆ: ಇನ್ನು ದೇಶದಲ್ಲಿ ಬೆಳ್ಳಿ ಬೆಲೆಯು ಯಥಾಸ್ಥಿತಿಯಲ್ಲಿ ಮುಂದುವರಿಯುತ್ತಿದೆ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 100.50 ರೂಪಾಯಿ ಆಗಿದೆ. ಬೆಳ್ಳಿ ಬೆಲೆ ಕೆಜಿ 1,00,500 ರೂಪಾಯಿ ಆಗಿದೆ.

ಅಕ್ಷಯ ತೃತೀಯ ಗೋಲ್ಡ್‌ಗೆ ಡಿಮ್ಯಾಂಡ್: ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯು ನಿರಂತರವಾಗಿ ಏರಿಕೆ ಕಂಡಿದೆ. ಚಿನ್ನದ ಬೆಲೆಯು ಈ ವಾರ ಪ್ರಾರಂಭದಿಂದಲೂ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿತ್ತು. ಇದೀಗ ನಾಳೆ ಅಕ್ಷಯ ತೃತೀಯ ಇರುವಾಗಲೇ ಚಿನ್ನದ ಬೆಲೆಯಲ್ಲಿ ಏರಿಕೆಯಾಗಿದೆ. ಅಕ್ಷಯ ತೃತೀಯದ ದಿನ ಚಿನ್ನ ಖರೀದಿ ಮಾಡುವುದು ಲಾಭ ಎಂದೇ ಪರಿಗಣಿಸಲಾಗುತ್ತದೆ. ಚಿನ್ನ ಮತ್ತು ಬೆಳ್ಳಿಯನ್ನು ಅಕ್ಷಯ ತೃತೀಯದ ದಿನ ಖರೀದಿ ಮಾಡಿದರೆ ಲಾಭ ಎಂದು ಪರಿಗಣಿಸಲಾಗುತ್ತದೆ. ಈ ಕಾರಣಕ್ಕೆ ಜನ ಈ ದಿನ ಚಿನ್ನ & ಬೆಳ್ಳಿ ಸೇರಿದಂತೆ ಅಮೂಲ್ಯ ವಸ್ತುಗಳನ್ನು ಖರೀದಿ ಮಾಡುತ್ತಾರೆ. ಇನ್ನು ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ನಾಳೆ ಚಿನ್ನದ ಬೆಲೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆಯೂ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+