Gold Price on May 21: ಬಂಗಾರ ಪ್ರಿಯರಿಗೆ ಹೊಸ ಶಾಕ್: ಮೇ 21ರ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ನೋಡಿ!
Gold Price on May 21: ಚಿನ್ನದ ಬೆಲೆಯಲ್ಲಿ ಮತ್ತೆ ಹೊಸ ದಾಖಲೆ ಸೃಷ್ಟಿಯಾಗಿದೆ. ಕಳೆದ ಒಂದು ವಾರದಿಂದಲೂ ಇಳಿಕೆಯ ಹಾದಿಯಲ್ಲಿದ್ದ ಚಿನ್ನದ ಬೆಲೆಯು ಇದೀಗ ಏಕಾಏಕಿ ಬದಲಾಗಿದೆ. ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ ಸೃಷ್ಟಿಯಾಗಿದ್ದು. ಒಂದೇ ದಿನದಲ್ಲಿ ಚಿನ್ನದ ಬೆಲೆಯು ಏರಿಕೆ ಕಂಡಿದೆ. ಚಿನ್ನದ ಬೆಲೆಯು ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ. ಬುಧವಾರ (ಮೇ 21ರಂದು) ಚಿನ್ನ ಹಾಗೂ ಬೆಳ್ಳಿಯ ಬೆಲೆ ಎಷ್ಟಿದೆ. ನೆನ್ನೆಗಿಂತ ಚಿನ್ನದ ಬೆಲೆಯಲ್ಲಿ ಎಷ್ಟು ವ್ಯತ್ಯಾಸವಾಗಿದೆ ಹಾಗೂ ಬೆಳ್ಳಿ ಬೆಲೆ ಏನಿದೆ ಎನ್ನುವ ನಿಖರವಾದ ಮಾಹಿತಿ ಇಲ್ಲಿದೆ.
ವಿವಿಧ ಕಾರಣಗಳಿಗೆ ಚಿನ್ನದ ಬೆಲೆಯು ಬುಧವಾರ ಮತ್ತೆ ಭರ್ಜರಿ ಏರಿಕೆ ಕಂಡಿದೆ. ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ಇಳಿಕೆಯಾಗುತ್ತಿತ್ತು. ಆದರೆ ಇದೀಗ ಏಕಾಏಕಿ ಚಿನ್ನದ ಬೆಲೆಯು ಹೆಚ್ಚಳವಾಗುವುದಕ್ಕೆ ಕಾರಣವಾಗಿದೆ. ಭಾರತದಲ್ಲಿ ಈಗ ಮದುವೆ ಹಾಗೂ ವಿಶೇಷ ಕಾರ್ಯಕ್ರಮಗಳ ಸೀಸನ್ ಇದೆ. ಈ ಅವಧಿಯಲ್ಲಿ ಚಿನ್ನ ಹಾಗೂ ಬೆಳ್ಳಿಯನ್ನು ಜನ ಹೆಚ್ಚಾಗಿ ಖರೀದಿ ಮಾಡುತ್ತಾರೆ. ಕರ್ನಾಟಕ ಸೇರಿದಂತೆ ಭಾರತದಲ್ಲಿ ಚಿನ್ನ ಖರೀದಿ ಜೋರಾಗಿದೆ. ಇದರ ಬೆನ್ನಲ್ಲೇ ಚಿನ್ನದ ಬೆಲೆ ಹೆಚ್ಚಳವಾಗುತ್ತಿರುವುದು ಚಿನ್ನ ಪ್ರಿಯರಲ್ಲಿ ಆತಂಕವನ್ನುಂಟು ಮಾಡಿದೆ.

ಕಳೆದ ಕೆಲವೇ ದಿನಗಳ ಹಿಂದೆ ಚಿನ್ನದ ಬೆಲೆಯು ಬರೋಬ್ಬರಿ 1,00,000 ಲಕ್ಷ ರೂಪಾಯಿ ಸಮೀಪಕ್ಕೆ ಬಂದಿತ್ತು. ಇದರ ಬೆನ್ನಲ್ಲೇ ಇದೀಗ ಚಿನ್ನದ ಬೆಲೆಯು ಭರ್ಜರಿ ಇಳಿಕೆ ಕಾಣುತ್ತಿತ್ತು. ಆದರೆ, ಮೇ 21ರಂದು ಚಿನ್ನದ ಬೆಲೆಯು 18 ಕ್ಯಾರೆಟ್, 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಹೆಚ್ಚಳವಾಗಿದೆ.
18 ಕ್ಯಾರೆಟ್ ಚಿನ್ನದ ಬೆಲೆ: ಮೇ 21ರಂದು 18 ಕ್ಯಾರೆಟ್ ಚಿನ್ನದ ಬೆಲೆಯು ಪ್ರತಿ ಗ್ರಾಂಗೆ 7,307 ರೂಪಾಯಿ ಆಗಿದೆ. ಇನ್ನು 10 ಗ್ರಾಂನ 18 ಕ್ಯಾರೆಟ್ ಚಿನ್ನದ ಬೆಲೆಯು 73,070 ರೂಪಾಯಿ ಆಗಿದೆ. ನೆನ್ನೆಗಿಂತ ಬರೋಬ್ಬರಿ 1,800 ರೂಪಾಯಿ ಹೆಚ್ಚಳವಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭಾರೀ ಏರಿಕೆ ಕಂಡಿದೆ. 22 ಕ್ಯಾರೆಟ್ ಚಿನ್ನದ ಬೆಲೆಯು ಪ್ರತಿ ಗ್ರಾಂಗೆ 8,930 ರೂಪಾಯಿ ಆಗಿದ್ದರೆ. 10 ಗ್ರಾಂನ ಚಿನ್ನದ ಬೆಲೆಯು 89,300 ರೂಪಾಯಿ ಆಗಿದೆ. ಮಂಗಳವಾರಕ್ಕೆ ಹೋಲಿಕೆ ಮಾಡಿದರೆ ಬರೋಬ್ಬರಿ 2,200 ರೂಪಾಯಿ ಹೆಚ್ಚಳವಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: ಮೇ 21ರಂದು 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭಾರೀ ಏರಿಕೆ ಕಂಡಿದೆ. 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 9,742 ರೂಪಾಯಿ ಆಗಿದೆ. 10 ಗ್ರಾಂಗೆ 97,420 ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ 10 ಗ್ರಾಂ ಚಿನ್ನದ ಬೆಲೆಯು 2,400 ರೂಪಾಯಿ ಹೆಚ್ಚಳವಾಗಿದೆ.
ಬೆಳ್ಳಿ ಬೆಲೆ ಹೇಗಿದೆ ?
ಇನ್ನು ಬೆಳ್ಳಿ ಬೆಲೆಯಲ್ಲಿ ಅಲ್ಪ ಏರಿಕೆ ಕಂಡು ಬಂದಿದೆ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 100 ರೂಪಾಯಿ ತಲುಪಿದ್ದಾರೆ. ಪ್ರತಿ ಕೆ.ಜಿ ಬೆಳ್ಳಿ ಬೆಲೆಯು ಬರೋಬ್ಬರಿ 3,000 ಸಾವಿರ ರೂಪಾಯಿ ಹೆಚ್ಚಳವಾಗುವ ಮೂಲಕ 1,00,000 ಲಕ್ಷ ರೂಪಾಯಿ ತಲುಪಿದೆ.












Click it and Unblock the Notifications