Gold Price on May 8: ಚಿನ್ನ ಪ್ರಿಯರಿಗೆ ಅಚ್ಚರಿ: ಚಿನ್ನದ ಬೆಲೆಯಲ್ಲಿ ಹೊಸ ಬದಲಾವಣೆ!

Gold Price on May 8: ಭಾರತ ಹಾಗೂ ಪಾಕಿಸ್ತಾನದ ನಡುವೆ ಪರಿಸ್ಥಿತಿ ಬಿಗಡಾಯಿಸುತ್ತಿರುವಾಗಲೇ ಚಿನ್ನದ ಬೆಲೆಯು ಮೇ 08ರಂದು ಮತ್ತೆ ಹೆಚ್ಚಳವಾಗಿದೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ಯುದ್ಧ ಭೀತಿ ಇರುವ ಹಿನ್ನೆಲೆಯಲ್ಲಿ ಚಿನ್ನದ ಬೆಲೆ ಮತ್ತೆ ಹೆಚ್ಚಳವಾಗಿದೆ. ಕಳೆದ ತಿಂಗಳು ಪ್ರಾರಂಭದಲ್ಲಿದ್ದ ಬೆಲೆಗೇ ಚಿನ್ನ ಬಂದು ನಿಂತಿದೆ. ಬರೋಬ್ಬರಿ 1 ಲಕ್ಷ ರೂಪಾಯಿ ಸಮೀಪಕ್ಕೆ ಚಿನ್ನ ಬಂದು ನಿಂತಿದೆ. ಮೇ 08ರಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆಯೇ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ದೇಶದಲ್ಲಿ ಚಿನ್ನದ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಇದೀಗ ಚಿನ್ನದ ಬೆಲೆಯು ಭರ್ಜರಿ ಹೆಚ್ಚಳವಾಗಿದೆ. ಆಪರೇಷನ್‌ ಸಿಂಧೂರದ ನಂತರ ಭಾರತ ಹಾಗೂ ಪಾಕಿಸ್ತಾನದ ನಡುವೆ ಪರಿಸ್ಥಿತಿ ವಿಷಮಮಯವಾಗುತ್ತಿದೆ. ಈ ಎರಡೂ ನ್ಯೂಕ್ಲಿಯರ್ ಬಾಂಬ್ ದೇಶಗಳ ನಡುವೆ ಯಾವುದೇ ಕ್ಷಣದಲ್ಲಾದರೂ ಯುದ್ಧ ನಡೆಯಬಹುದು ಎನ್ನುವ ಭೀತಿ ಶುರುವಾಗಿದ್ದು. ಚಿನ್ನದ ಮೇಲೆ ಹೂಡಿಕೆ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಸಾಮಾನ್ಯವಾಗಿ ಷೇರು ಮಾರುಕಟ್ಟೆ ಕುಸಿತ ಹಾಗೂ ಭೌಗೋಳಿಕವಾಗಿ ಸಮಸ್ಯೆಗಳು ಎದುರಾದ ಸಂದರ್ಭದಲ್ಲಿ ಸಹಜವಾಗಿಯೇ ಚಿನ್ನದ ಬೆಲೆಯು ಹೆಚ್ಚಳವಾಗುತ್ತದೆ. ಅದೇ ರೀತಿ ಈಗಲೂ ಆಗಿದೆ. ಚಿನ್ನದ ಬೆಲೆಯು 1,00,000 ಲಕ್ಷ ರೂಪಾಯಿ ಗಡಿ ದಾಟುತ್ತಿದೆ.

Gold Price on May 8 Surprise for gold lovers New change in gold price

ಇದೀಗ ಮದುವೆ ಸೇರಿದಂತೆ ಶುಭ ಸಮಾರಂಭಗಳ ಸೀಸನ್ ಇದೆ. ಈ ರೀತಿ ಇರುವಾಗಲೇ ಚಿನ್ನದ ಬೆಲೆ ಹೆಚ್ಚಳವಾಗುತ್ತಿರುವುದು ಹಲವರಿಗೆ ಆಘಾತವನ್ನುಂಟು ಮಾಡಿದೆ. ಮೇ 08ರಂದು ವಿವಿಧ ಕ್ಯಾರೆಟ್‌ ಚಿನ್ನದ ಬೆಲೆ ಎಷ್ಟಿದೆ ಎನ್ನುವುದನ್ನು ನೋಡೋಣ..

18 ಕ್ಯಾರೆಟ್‌ ಚಿನ್ನದ ಬೆಲೆ: ಮೇ 08ರಂದು 18 ಕ್ಯಾರೆಟ್‌ ಚಿನ್ನದ ಬೆಲೆಯು 1 ಗ್ರಾಂಗೆ 7,470 ರೂಪಾಯಿ ಆಗಿದೆ. ಇನ್ನು 10 ಗ್ರಾಂ ಚಿನ್ನದ ಬೆಲೆಯು 74,700 ರೂಪಾಯಿ ಆಗಿದೆ. ಚಿನ್ನದ ಬೆಲೆಯು ನೆನ್ನೆಗೆ ಹೋಲಿಕೆ ಮಾಡಿದರೆ 10 ಗ್ರಾಂಗೆ ಬರೋಬ್ಬರಿ 450 ರೂಪಾಯಿ ಹೆಚ್ಚಳವಾಗಿದೆ.

22 ಕ್ಯಾರೆಟ್‌ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್‌ ಚಿನ್ನದ ಬೆಲೆಯು 1 ಗ್ರಾಂಗೆ 9,130 ರೂಪಾಯಿ ಆಗಿದೆ. 22 ಕ್ಯಾರೆಟ್‌ನ 10 ಗ್ರಾಂ ಚಿನ್ನವು 91,300 ರೂಪಾಯಿ ಆಗಿದೆ. ಬುಧವಾರಕ್ಕೆ ಹೋಲಿಕೆ ಮಾಡಿದರೆ ಚಿನ್ನದ ಬೆಲೆಯು ಬರೋಬ್ಬರಿ 5,500 ರೂಪಾಯಿ ಹೆಚ್ಚಳವಾಗಿದೆ.

24 ಕ್ಯಾರೆಟ್‌ ಚಿನ್ನದ ಬೆಲೆ: 24 ಕ್ಯಾರೆಟ್‌ ಚಿನ್ನದ ಬೆಲೆಯು ಪ್ರತಿ 1 ಗ್ರಾಂಗೆ 9,960 ರೂಪಾಯಿ ಹಾಗೂ 10 ಗ್ರಾಂ 24 ಕ್ಯಾರೆಟ್‌ ಚಿನ್ನದ ಬೆಲೆಯು 99,600 ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ, ಚಿನ್ನದ ಬೆಲೆಯು 600 ರೂಪಾಯಿ ಹೆಚ್ಚಳವಾಗಿದೆ.

ಬೆಳ್ಳಿ ಬೆಲೆಯಲ್ಲೂ ಹೆಚ್ಚಳ

ಇನ್ನು ಇತ್ತೀಚಿನ ದಿನಗಳಲ್ಲಿ ಬೆಳ್ಳಿ ಬೆಲೆ ಹೆಚ್ಚಳವಾಗಿರಲಿಲ್ಲ. ಇದೀಗ ಬೆಳ್ಳಿ ಬೆಲೆಯೂ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 99.10 ರೂಪಾಯಿ ಆಗಿದೆ. ಪ್ರತಿ ಕೆಜಿ ಬೆಳ್ಳಿ ಬೆಲೆಯು 99,100 ರೂಪಾಯಿ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+