Gold Price: ಚಿನ್ನದ ಬೆಲೆ ಒಂದೇ ದಿನ 2,200 ರೂಪಾಯಿ ಏರಿಕೆ!
ಚಿನ್ನದ ಬೆಲೆ ಸತತ 3 ದಿನಗಳ ಕಾಲ ಕುಸಿತ ಕಂಡು ಇದೀಗ ಮತ್ತೆ ಏರಿಕೆ ಕಂಡಿದೆ. ಹಳದಿ ಲೋಹ ಎಂದು ಕರೆಯುವ ಬಂಗಾರದ ಬೆಲೆ ಕುಸಿತ ಕಾಣುತ್ತಿದೆ ಎಂಬುದು ಹೂಡಿಕೆದಾರರ ಆತಂಕ ಹೆಚ್ಚುವಂತೆ ಮಾಡಿತ್ತು. ಆದರೆ ಬಂಗಾರದ ಬೆಲೆ ಕುಸಿತ ಕಾಣುತ್ತಿದೆ ಅಂತಾ ಒಡವೆ ಅಥವಾ ಆಭರಣ ಇಷ್ಟಪಡುವ ಮಹಿಳೆಯರು ಖುಷಿ ಖುಷಿ ಆಗಿದ್ದರು. ಆದರೆ ಇಂದು ದಿಢೀರ್ ಚಿನ್ನದ ಬೆಲೆ ಭಾರಿ ಏರಿಕೆ ಕಂಡಿದೆ!
ಚಿನ್ನ.. ಚಿನ್ನ.. ಚಿನ್ನ.. ಹೀಗೆ ಎಲ್ಲ ಕಡೆ ಈಗ ಬರೀ ಚಿನ್ನದ ಮಾತುಕತೆ ನಡೆದಿದೆ. ಚಿನ್ನದ ಬೆಲೆಯು ಭಾರಿ ಏರಿಕೆ ಕಂಡು ಊಹೆಗು ಮೀರಿ ಚಿನ್ನ ಬೆಲೆ ಮೇಲಕ್ಕೆ ಏರುತ್ತಿದೆ. ಇಷ್ಟು ದಿನ ಕೈಗೆ ಸಿಗುವಂತೆ ಇದ್ದ ಚಿನ್ನದ ಬೆಲೆ ಇದೀಗ ಭಾರಿ ಏರಿಕೆ ಕಾಣುತ್ತಿದೆ. ಹಾಗಾದರೆ ಇಂದು ಎಷ್ಟು ಏರಿಕೆ ಆಗಿದೆ ಚಿನ್ನದ ಬೆಲೆ? ಚಿನ್ನದ ಬೆಲೆ ಏರಿಕೆಗೆ ಕಾರಣ ಏನು? ಯಾವ ಯಾವ ನಗರದಲ್ಲಿ ಚಿನ್ನದ ಬೆಲೆ ಎಷ್ಟಿದೆ? ಸಂಪೂರ್ಣ ಮಾಹಿತಿಗೆ ಮುಂದೆ ಓದಿ.

ಚಿನ್ನ ಎಂಬುದು ಹೂಡಿಕೆ ಮಾಡುವವರಿಗೆ ಖಜಾನೆ ಆಗಿದೆ ಯಾಕಂದ್ರೆ ಹಳದಿ ಲೋಹ ಅಂದರೆ ಚಿನ್ನದ ಮೇಲೆ ಹೂಡಿಕೆ ಮಾಡುವ ಯಾರಿಗೆ ಆದ್ರೂ ಲಾಭ ಗ್ಯಾರಂಟಿ. ಹೀಗೆ ಚಿನ್ನ ಅನ್ನೋದು ಹೂಡಿಕೆದಾರರ ಜೇಬು ತುಂಬಿಸುವ ಅಕ್ಷಯ ಪಾತ್ರೆ ಆಗುತ್ತಿದೆ. ಚಿನ್ನ ಇಷ್ಟಪಡುವಂಥ ಹೆಣ್ಣು ಮಕ್ಕಳಿಗೆ ಈ ವರ್ಷ ಆಘಾತ ಎದುರಾಗುವುದು ಗ್ಯಾರಂಟಿ ಅಂತಿದ್ದಾರೆ ತಜ್ಞರು. ಯಾಕಂದ್ರೆ ಚಿನ್ನ ಬೆಲೆ ಈ ವರ್ಷ 1 ಲಕ್ಷ ರೂಪಾಯಿ ತಲುಪುವ ಸಾಧ್ಯತೆ ಹೆಚ್ಚಿದೆ. ಹಾಗಾದ್ರೆ ಇದೀಗ ಏರಿಕೆ ಬಳಿಕ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ? ಮುಂದೆ ಓದಿ.
ಚಿನ್ನದ ಬೆಲೆ ಎಲ್ಲಿ ಎಷ್ಟಿದೆ?
ಶುದ್ಧ ಚಿನ್ನ ಅಥವಾ 24 ಕ್ಯಾರೆಟ್ ಚಿನ್ನದ ಬೆಲೆ ಏರಿಕೆ ಆಗಿದ್ದು ಈಗ 24 ಕ್ಯಾರೆಟ್ ಚಿನ್ನದ ಬೆಲೆ 100 ಗ್ರಾಂಗೆ 2,200 ರೂಪಾಯಿ ಏರಿಕೆ ಕಂಡಿದೆ. ಹೀಗಾಗಿ ಶುದ್ಧ ಚಿನ್ನ ಬೆಲೆ ಪ್ರತಿ 100 ಗ್ರಾಂಗೆ 7,24,400 ರೂಪಾಯಿ ಆಗಿದೆ. ಇದರ ಜೊತೆ ಶುದ್ಧ ಚಿನ್ನ ಬೆಲೆ 10 ಗ್ರಾಂಗೆ 72,440 ರೂಪಾಯಿ ಆಗಿದೆ. ಆಭರಣ ಚಿನ್ನ ಅಂದ್ರೆ 22 ಕ್ಯಾರೆಟ್ ಚಿನ್ನದ ಬೆಲೆ ಈಗ ಮಾರುಕಟ್ಟೆಯಲ್ಲಿ ಭಾರಿ ಏರಿಕೆ ಕಂಡಿದೆ ಪ್ರತಿ 100 ಗ್ರಾಂ ಆಭರಣ ಚಿನ್ನದ ಬೆಲೆ ಈಗ 2200 ರೂಪಾಯಿ ಏರಿಕೆಯ ಕಂಡಿದೆ. ಈ ಮೂಲಕ ಪ್ರತಿ 10 ಗ್ರಾಂ ಆಭರಣ ಚಿನ್ನದ ಬೆಲೆ ಈಗ 220 ರೂಪಾಯಿ ಏರಿಕೆ ಆಗಿದ್ದು. ಆಭರಣ ಚಿನ್ನದ ಬೆಲೆ ಏರಿಕೆ ನಂತರ ಇದೀಗ ಪ್ರತಿ 10 ಗ್ರಾಂಗೆ 66,400 ರೂಪಾಯಿಗೆ ಮಾರಾಟ ಆಗುತ್ತಿದೆ.
ಚಿನ್ನ ಇಲ್ಲದೆ ಏನೂ ನಡೆಯಲ್ಲ!
ಆಧುನಿಕ ಕಾಲಘಟ್ಟದಲ್ಲಿ ಚಿನ್ನ ಅದೆಷ್ಟು ಮುಖ್ಯ ಎಂದರೆ, ಚಿನ್ನವು ಇಲ್ಲದೆ ಏನೂ ನಡೆಯಲ್ಲ ಎನ್ನಬಹುದು. ಯಾಕಂದ್ರೆ ಚಿನ್ನ ಆಭರಣವಾಗಿ ಮಾತ್ರವಲ್ಲ, ಹಲವು ಎಲೆಕ್ಟ್ರಾನಿಕ್ ವಸ್ತುಗಳ ತಯಾರಿಕೆಯಲ್ಲಿ ಕೂಡ ಬಳಕೆ ಮಾಡಲಾಗುತ್ತೆ. ಮೊಬೈಲ್ ಸೇರಿದಂತೆ, ಹಲವು ಎಲೆಕ್ಟ್ರಾನಿಕ್ ಉಪಕರಣಗಳ ತಯಾರಿಕೆಗೆ ಕೂಡ ಚಿನ್ನ ಬೇಕೆ ಬೇಕಾಗುತ್ತೆ. ಹೀಗಾಗಿಯೇ ಚಿನ್ನ ಈಗ ಆಧುನಿಕ ಕಾಲದಲ್ಲಿ ಅತ್ಯವಶ್ಯಕ ವಸ್ತು ಎನಿಸಿಕೊಂಡಿದೆ. ಹೀಗೆಯೇ, ಎಲ್ಲಾ ಕಡೆಯಿಂದ ಕೂಡ ಚಿನ್ನಕ್ಕೆ ಬೇಡಿಕೆ ಹೆಚ್ಚಾಗುತ್ತಿರುವ ಕಾರಣ, ಬೆಲೆಯಲ್ಲಿ ಏರಿಳಿತ ಉಂಟಾಗುತ್ತಿದ್ದು. ಮುಂದೆ ಇನ್ನಷ್ಟು ಏರಿಳಿತ ಕಾಣಬಹುದು ಅಂತಾರೆ ತಜ್ಞರು.
ಹೂಡಿಕೆ ಮಾಡಿದ್ದವರಿಗೆ ಟೆನ್ಷನ್!
ಚಿನ್ನ ಮಾರುಕಟ್ಟೆಯಲ್ಲಿ ಸತತವಾಗಿ ಕುಸಿತ ಕಾಣುತ್ತಿದ್ದು, ಇದರಿಂದ ಹೂಡಿಕೆದಾರರಿಗೆ ಹೊಸ ಆತಂಕ ಶುರುವಾಗಿದೆ. ಯಾಕಂದ್ರೆ ಚಿನ್ನ ಕೂಡ ಆರ್ಥಿಕತೆಯ ಒಂದು ಭಾಗವೇ ಆಗಿದೆ. ಹೀಗಿದ್ದಾಗ ಚಿನ್ನದ ಬೆಲೆಯಲ್ಲಿ ಸತತವಾಗಿ ಕುಸಿತ ದಾಖಲಾಗುತ್ತಿದೆ ಎಂಬುದು ಚಿಂತೆಗೆ ದೂಡಿದೆ. ಅದರಲ್ಲೂ ಕಳೆದ ಒಂದೆರಡು ವಾರದಿಂದ ನಿರಂತರವಾಗಿ ಚಿನ್ನವು ತನ್ನ ಬೆಲೆ ಕಳೆದುಕೊಳ್ಳುತ್ತಿದೆ. ಹೀಗಿದ್ದಾಗ ಮೊನ್ನೆ ಬಂಪರ್ ಆಫರ್ ಸಿಕ್ಕಿತ್ತು. ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಆಗಿತ್ತು. ಹೀಗಿದ್ದಾಗಲೇ ಮತ್ತೊಮ್ಮೆ ಚಿನ್ನದ ಬೆಲೆ ಈಗ ಮತ್ತೆ ಹಿನ್ನಡೆ ಕಂಡಿದೆ. ಹಾಗಿದ್ರೆ ಚಿನ್ನದ ಬೆಲೆ ಮತ್ತೆ ಕುಸಿತ ಕಾಣುತ್ತಾ? ಮುಂದೆ ಓದಿ.
ದೇಶದ ಆರ್ಥಿಕತೆ ನಿರ್ಧರಿಸುತ್ತದೆ!
ಚಿನ್ನ ಕೇವಲ ಒಂದು ಲೋಹವಲ್ಲ, ಚಿನ್ನ ಎಂಬುದು ಒಂದು ಅಪರೂಪದ ವಸ್ತು ಕೂಡ. ಚಿನ್ನ ಆಭರಣಕ್ಕೆ ಮಾತ್ರವಲ್ಲ, ಹಲವು ವಿಚಾರದಲ್ಲೂ ಬಳಕೆ ಆಗುತ್ತದೆ. ಈ ಅಮೂಲ್ಯ & ಅಪರೂಪದ ಲೋಹವನ್ನು ಪ್ರತಿಯೊಂದು ದೇಶವೂ ರಕ್ಷಣೆ ಮಾಡುತ್ತದೆ. ಅದ್ರಲ್ಲೂ ಚಿನ್ನ ಖರೀದಿ ಮಾಡಿ ಸಂಗ್ರಹ ಮಾಡುವುದು ಕೂಡ ಪ್ರತಿಯೊಂದು ದೇಶದ ಆರ್ಥಿಕತೆ ರಕ್ಷಿಸುವಲ್ಲಿ ಪ್ರಮುಖ ಪಾತ್ರ ಬೀರುತ್ತದೆ. ಶ್ರೀಮಂತ ದೇಶಗಳು ಚಿನ್ನ ಖರೀದಿ ಮಾಡಿ ಅದನ್ನ ರಕ್ಷಿಸುತ್ತವೆ.












Click it and Unblock the Notifications