Gold Rate: ಚಿನ್ನದ ಬೆಲೆ ಕುಸಿತ; ಬೆಳ್ಳಿ ಬೆಲೆ ಹೆಚ್ಚಳ

ಕಳೆದ ಎರಡು ದಿನಗಳಿಂದ ಭರ್ಜರಿ ಏರಿಕೆಯಾಗಿದ್ದ ಚಿನ್ನದ ದರ, ಗುರುವಾರ ಅಲ್ಪ ಕುಸಿತ ಕಂಡಿದೆ. ಆದರೆ ಕಳೆದ ಎರಡು ದಿನದಿಂದ ಇಳಿಕೆಯಾಗಿದ್ದ ಬೆಳ್ಳಿ ಬೆಲೆ ಇಂದು ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ.

ಆಭರಣ ಚಿನ್ನ (22 ಕ್ಯಾರೆಟ್) ದ ಬೆಲೆ ಪ್ರತಿ ಗ್ರಾಂಗೆ 15 ರೂಪಾಯಿ ಕಡಿಮೆಯಾಗಿದ್ದರೆ, 24 ಕ್ಯಾರೆಟ್ ಶುದ್ಧ ಚಿನ್ನದ ಬೆಲೆ ಪ್ರತಿ ಗ್ರಾಂಗೆ 16 ರೂಪಾಯಿ ಕಡಿಮೆಯಾಗಿದೆ.

Gold Price Reduced by 1600 Silver Price on the Rise

ಬುಧವಾರ 6,87,500 ರೂಪಾಯಿ ಇದ್ದ 100 ಗ್ರಾಂ ಆಭರಣ ಚಿನ್ನದ ಬೆಲೆ ಇಂದು 6,86,000 ರೂಪಾಯಿಗೆ ಕುಸಿತವಾಗಿದೆ. ಗುರುವಾರ ಬೆಂಗಳೂರಿನಲ್ಲಿ 1 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 6860 ರೂಪಾಯಿ ಆಗಿದೆ.

ಬುಧವಾರ 7,50,000 ರೂಪಾಯಿ ಇದ್ದ 100 ಗ್ರಾಂ ಶುದ್ಧ ಚಿನ್ನದ ಬೆಲೆ ಗುರುವಾರ 7,48,400 ರೂಪಾಯಿಗೆ ಕಡಿಮೆಯಾಗಿದೆ. ಇಂದು 1 ಗ್ರಾಂ ಶುದ್ಧ ಚಿನ್ನದ ಬೆಲೆ 7484 ರೂಪಾಯಿಯಂತೆ ಮಾರಾಟವಾಗುತ್ತಿದೆ.

ಬೆಳ್ಳಿ ಬೆಲೆ ಹೆಚ್ಚಳ

ಚಿನ್ನದ ಬೆಲೆ ಇಳಿಕೆಯಾಗಿದ್ದರೆ ಮತ್ತೊಂದೆಡೆ ಬೆಳ್ಳಿ ಬೆಲೆ ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದೆ. ಒಂದು ಕೆಜಿ ಬೆಳ್ಳಿ ಬೆಲೆ 100 ರೂಪಾಯಿ ಹೆಚ್ಚಾಗಿದ್ದು, ಬೆಂಗಳೂರಿನಲ್ಲಿ ಸದ್ಯ ಒಂದು ಕೆಜಿ ಬೆಳ್ಳಿ ಬೆಲೆ 94,850 ರೂಪಾಯಿ ಆಗಿದೆ.

ಚಿನ್ನದ ಬೆಲೆ ಮತ್ತಷ್ಟು ಕುಸಿತ?

ಕೇಂದ್ರ ಸರ್ಕಾರದಿಂದ ಮಧ್ಯಂತರ ಬಜೆಟ್ ಮಂಡನೆ ಮಾಡಲು ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಚಿನ್ನದ ಬೆಲೆಯಲ್ಲಿ ಕಡಿಮೆಯಾಗುತ್ತದೆ ಎಂದು ನಿರೀಕ್ಷೆ ಮಾಡಲಾಗಿದೆ.

ಕೇಂದ್ರ ಸರ್ಕಾರ 'ಒಂದು ರಾಷ್ಟ್ರ ಒಂದು ಚಿನ್ನದ ಬೆಲೆ' ನೀತಿಯನ್ನು ಜಾರಿ ಮಾಡಲು ಮುಂದಾಗಿದ್ದು, ಚಿನ್ನದ ಬೆಲೆಯ ಮೇಲೆ ಪರಿಣಾಮ ಬೀರುಲಿದೆ. ಪ್ರಸ್ತುತ ದೇಶದ ಹಲವು ನಗರಗಳಲ್ಲಿ ಚಿನ್ನದ ಬೆಲೆ ವಿಭಿನ್ನವಾಗಿರುತ್ತದೆ. ಆದರೆ ಈ ನೀತಿ ಜಾರಿಯಾದ ಬಳಿಕ ದೇಶಾದ್ಯಂತ ಚಿನ್ನಕ್ಕೆ ಒಂದೇ ಬೆಲೆ ನಿಗದಿಯಾಗಲಿದೆ. ಇದು ಚಿನ್ನದ ಬೆಲೆಯಲ್ಲಿ ಪಾರದರ್ಶಕತೆ ತರಲು ಸಹಾಕಯವಾಗಲಿದೆ.

ವಿಭಿನ್ನ ತೆರಿಗೆ ಪದ್ಧತಿ, ಬೇಡಿಕೆ ಪೂರೈಕೆಯನ್ನು ಪರಿಗಣಿಸಿ ರಾಜ್ಯದಿಂದ ರಾಜ್ಯಕ್ಕೆ ಚಿನ್ನದ ಬೆಲೆಯಲ್ಲಿ ವ್ಯತ್ಯಾಸವಾಗುತ್ತಿದ್ದು, ಹೊಸ ನೀತಿ ಜಾರಿಯಾದ ಬಳಿಕ ಚಿನ್ನದ ಬೆಲೆ ಕುಸಿಯುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+