Gold Price Today: ಇಂದಿನ ಚಿನ್ನದ ಬೆಲೆ: 18, 22, 24 ಕ್ಯಾರೆಟ್ ಚಿನ್ನ ಬೆಲೆ ಹೊಸ ದಾಖಲೆ; ಬೆಳ್ಳಿ ಬೆಲೆ ಹೇಗಿದೆ
Gold Price Today: ಚಿನ್ನ ಪ್ರಿಯರಿಗೆ ಜುಲೈ 20ರ ಸೋಮವಾರದ ಚಿನ್ನದ ಬೆಲೆಯು ಸ್ವಲ್ಪ ನಿರಾಳತೆ ಮೂಡಿಸಿದೆ. ಸೋಮವಾರ ಚಿನ್ನದ ಬೆಲೆಯು ಅಲ್ಪ ಹೆಚ್ಚಳವಾದರೂ ಕಳೆದ ವಾರಕ್ಕೆ ಹೋಲಿಕೆ ಮಾಡಿದರೆ, ಚಿನ್ನದ ಬೆಲೆಯು ಸಮಾಧಾನ ತಂದಿದೆ. ಚಿನ್ನದ ಬೆಲೆ ಅಲ್ಪ ಹೆಚ್ಚಳವಾದರೂ ಬೆಳ್ಳಿ ಬೆಲೆಯು ಗ್ರಾಹಕರಲ್ಲಿ ಸಮಾಧಾನ ತಂದಿದೆ. ಸೋಮವಾರ ಚಿನ್ನ ಮತ್ತು ಬೆಳ್ಳಿ ಬೆಲೆಯು ಎಷ್ಟಿದೆ ಎನ್ನುವ ನಿಖರ ವಿವರ ಈ ಲೇಖನದಲ್ಲಿದೆ.
ಚಿನ್ನದ ಬೆಲೆಯು ಕಳೆದ ಕೆಲವು ದಿನಗಳಿಂದ ಭಾರೀ ಏರಿಳಿತವಾಗುತ್ತಿದೆ. ಚಿನ್ನದ ಬೆಲೆಯು ಇದೀಗ ಅಲ್ಪ ಹೆಚ್ಚಳವಾಗಿದೆ. ಇದು ಹೂಡಿಕೆದಾರರಲ್ಲಿ ಸಂತೋಷವನ್ನುಂಟು ಮಾಡಿದರೂ ಚಿನ್ನ ಖರೀದಿ ಮಾಡಬೇಕು ಎಂದು ಕೊಂಡಿರುವವರಲ್ಲಿ ಆತಂಕ್ಕೆ ಕಾರಣವಾಗಿದೆ. ಕಳೆದ ಆರು ತಿಂಗಳ ಅವಧಿಯಲ್ಲಿ ಚಿನ್ನದ ಬೆಲೆಯು ಹಲವು ಬಾರಿ ಹೆಚ್ಚಳವಾಗಿದೆ. ಇದೀಗ ಆಷಾಢ ಮಾಸವಿದ್ದರೂ ಚಿನ್ನದ ಬೆಲೆ ಹೆಚ್ಚಳವಾಗಿರುವುದು ಹಲವರಲ್ಲಿ ಅಚ್ಚರಿಯನ್ನುಂಟು ಮಾಡಿದೆ. ಚಿನ್ನದ ಬೆಲೆಯು ಅಂತರರಾಷ್ಟ್ರೀಯ ಮಟ್ಟದಲ್ಲಿ ನಿರ್ಧಾರವಾದರೂ ಸಹ ಮದುವೆ - ಶುಭ ಸಮಾರಂಭಗಳು ಹೆಚ್ಚಾಗಿರುವ ಸಂದರ್ಭದಲ್ಲಿ ಚಿನ್ನಕ್ಕೆ ಹೆಚ್ಚು ಬೇಡಿಕೆ ಇರುತ್ತದೆ. ಆದರೆ ಇದೀಗ ಚಿನ್ನದ ಬೆಲೆಯು ಸತತವಾಗಿ ಹೆಚ್ಚಳವಾಗುತ್ತಿದೆ. ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ವಿವರ ಇಲ್ಲಿದೆ. ಮೊದಲಿಗೆ 18, 22 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ ಎನ್ನುವ ವಿವರ ನೋಡೋಣ.

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ನ ಚಿನ್ನದ ಬೆಲೆಯು ಪ್ರತಿ ಗ್ರಾಂಗೆ 10,759 ರೂಪಾಯಿ ಆಗಿದೆ. ವಾರಾಂತ್ಯಕ್ಕೆ ಹೋಲಿಕೆ ಮಾಡಿದರೆ 18 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂಗೆ 12 ರೂಪಾಯಿ ಹೆಚ್ಚಳವಾಗಿದೆ. ಇನ್ನು 18 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆಯು 1,07,590 ರೂಪಾಯಿ ಆಗಿದೆ. ಶುಕ್ರವಾರಕ್ಕೆ ಹೋಲಿಕೆ ಮಾಡಿದರೆ 120 ರೂಪಾಯಿ ಹೆಚ್ಚಳವಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಸಹ ಹೆಚ್ಚಳವಾಗಿದೆ. 22 ಕ್ಯಾರೆಟ್ನ ಒಂದು ಗ್ರಾಂ ಚಿನ್ನದ ಬೆಲೆಯು 13,150 ರೂಪಾಯಿ ಆಗಿದೆ. ವಾರಾಂತ್ಯಕ್ಕೆ ಹೋಲಿಕೆ ಮಾಡಿದರೆ 22 ಕ್ಯಾರೆಟ್ ಚಿನ್ನದ ಬೆಲೆಯು 15 ರೂಪಾಯಿ ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ಬೆಲೆಯು 1,31,500 ರೂಪಾಯಿ ಆಗಿದೆ. ವಾರಾಂತ್ಯಕ್ಕೆ ಹೋಲಿಕೆ ಮಾಡಿದರೆ 150 ರೂಪಾಯಿ ಹೆಚ್ಚಳವಾದಂತೆ ಆಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: 18 ಹಾಗೂ 22 ಕ್ಯಾರೆಟ್ನಂತೆಯೇ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಹೆಚ್ಚಳವಾಗಿದೆ. 24 ಕ್ಯಾರೆಟ್ನ ಚಿನ್ನದ ಬೆಲೆಯು 1 ಗ್ರಾಂಗೆ 14,346 ರೂಪಾಯಿ ಆಗಿದೆ. ವಾರಾಂತ್ಯಕ್ಕೆ ಹೋಲಿಕೆ ಮಾಡಿದರೆ 1 ಗ್ರಾಂ ಚಿನ್ನದ ಬೆಲೆಯು 17 ರೂಪಾಯಿ ಹೆಚ್ಚಳವಾಗಿದೆ. 10 ಗ್ರಾಂ ಚಿನ್ನದ ಬೆಲೆಯು 1,43,460 ರೂಪಾಯಿ ಆಗಿದೆ. ಶುಕ್ರವಾರಕ್ಕೆ ಹೋಲಿಕೆ ಮಾಡಿದರೆ 10 ಗ್ರಾಂ ಚಿನ್ನದ ಬೆಲೆಯಲ್ಲಿ 170 ರೂಪಾಯಿ ಹೆಚ್ಚಳವಾಗಿದೆ.
ಬೆಳ್ಳಿ ಬೆಲೆ ಹೇಗಿದೆ
ಚಿನ್ನದ ಬೆಲೆ ಹೆಚ್ಚಳವಾಗಿದೆಯಾದರೂ ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಇದೆ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 235 ರೂಪಾಯಿ ಆಗಿದೆ. ಬೆಳ್ಳಿ ಬೆಲೆಯು ಪ್ರತಿ ಕೆ.ಜಿಗೆ 2,35,000 ರೂ. ಆಗಿದೆ. ವಾರಾಂತ್ಯಕ್ಕೆ ಹೋಲಿಕೆ ಮಾಡಿದರೆ ಬೆಳ್ಳಿ ಬೆಲೆಯು ಒಂದು ಗ್ರಾಂಗೆ 5 ರೂಪಾಯಿ ಹಾಗೂ ಒಂದು ಕೆ.ಜಿಗೆ 5,000 ಸಾವಿರ ರೂಪಾಯಿ ಹೆಚ್ಚಳವಾಗಿದೆ.


Click it and Unblock the Notifications
