Gold Price Agu 3: ಚಿನ್ನ - ಬೆಳ್ಳಿ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್: 4ನೇ ದಿನವೂ ಚಿನ್ನದ ಬೆಲೆ ಭರ್ಜರಿ ಇಳಿಕೆ!
Gold Price Agu 3: ಚಿನ್ನ ಪ್ರಿಯರಿಗೆ ಸೋಮವಾರದ ಚಿನ್ನ ಮತ್ತು ಬೆಳ್ಳಿ ಬೆಲೆಯು ಭರ್ಜರಿ ಸಂತೋಷವನ್ನುಂಟು ಮಾಡಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯು ನಿರಂತರವಾಗಿ ಇಳಿಕೆಯಾಗುತ್ತಿದೆ. ಈ ತಿಂಗಳಾಂತ್ಯದಲ್ಲಿ ವರಮಹಾಲಕ್ಷ್ಮಿ ಹಬ್ಬವೂ ಸಹ ಇರುವುದರಿಂದ ಚಿನ್ನ ಮತ್ತು ಬೆಳ್ಳಿ ಖರೀದಿ ಮಾಡಬೇಕು ಎನ್ನುವ ಲೆಕ್ಕಾಚಾರದಲ್ಲಿ ಚಿನ್ನ ಪ್ರಿಯರು ಇದ್ದಾರೆ. ಚಿನ್ನದ ಬೆಲೆಯು ನಿರಂತರವಾಗಿ ಇಳಿಯುತ್ತಿದ್ದು, ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಇಳಿಯಬಹುದು ಎನ್ನುವ ಲೆಕ್ಕಾಚಾರದಲ್ಲಿ ಚಿನ್ನ ಪ್ರಿಯರು ಇದ್ದಾರೆ.
ಇರಾನ್ Vs ಅಮೆರಿಕ, ಇಸ್ರೇಲ್‌ನ ನಡುವೆ ಯುದ್ಧ ಮುಂದುವರಿದಿರುವುದರ ಹೊರತಾಗಿಯೂ ಕಚ್ಚಾ ತೈಲ ಬೆಲೆ ಹಾಗೂ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ದೊಡ್ಡ ಮಟ್ಟದ ವ್ಯತ್ಯಾಸ ಕಂಡುಬಂದಿಲ್ಲ. ಈ ದೇಶಗಳ ನಡುವೆ ಪೂರ್ಣ ಪ್ರಮಾಣದ ಯುದ್ಧ ನಿಂತಿದೆಯಾದರೂ ಸಂಘರ್ಷ ಮುಂದುವರಿದಿದೆ. ಹೀಗಾಗಿ, ಚಿನ್ನ ಸೇರಿದಂತೆ ವಿವಿಧ ಅಮೂಲ್ಯ ವಸ್ತುಗಳ ಬೆಲೆಯು ಹೆಚ್ಚಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಕಳೆದ ಮೂರು ದಿನಗಳಿಂದಲೂ ಚಿನ್ನದ ಬೆಲೆ ಏರಿಕೆಯಾಗದೆ ಯಥಾಸ್ಥಿತಿ ಮುಂದುವರಿದಿದೆ. ಆಗಸ್ಟ್ 3ರಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಎನ್ನುವ ಸಂಪೂರ್ಣ ವಿವರ ನೋಡೋಣ.

24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 14,422 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,44,220 ರೂ. ಆಗಿದೆ. ಶುಕ್ರವಾರಕ್ಕೆ ಹೋಲಿಕೆ ಮಾಡಿದರೆ ಚಿನ್ನದ ಬೆಲೆಯು ಯಥಾಸ್ಥಿತಿ ಮುಂದುವರಿದಿದೆ. ಆಗಸ್ಟ್ 1ರಂದು ಚಿನ್ನದ ಬೆಲೆಯು ಇಳಿಕೆಯಾಗಿತ್ತು. ಅಂದಿನಿಂದ ಚಿನ್ನದ ಬೆಲೆಯು ಇಳಿಕೆಯ ಹಾದಿಯಲ್ಲಿಯೇ ಇದೆ.
22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 13,220 ರೂಪಾಯಿ ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,32,200 ರೂಪಾಯಿ ಆಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಂತೆಯೇ 22 ಕ್ಯಾರೆಟ್ ಚಿನ್ನದ ಬೆಲೆಯೂ ಸಹ ಯಥಾಸ್ಥಿತಿಯಲ್ಲಿ ಮುಂದುವರಿದಿದೆ.
18 ಕ್ಯಾರೆಟ್ ಚಿನ್ನದ ಬೆಲೆ: 22 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಯಥಾಸ್ಥಿತಿ ಮುಂದುವರಿದಿದೆ. 18 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 10,816 ರೂಪಾಯಿ ಆಗಿದೆ. 10 ಗ್ರಾಂನ ಚಿನ್ನದ ಬೆಲೆಯು 1,08,160 ರೂ. ಆಗಿದೆ. ಈ ರೀತಿ ಚಿನ್ನದ ಬೆಲೆಯು ಕಡಿಮೆ ಹಾಗೂ ಯಥಾಸ್ಥಿತಿಯಲ್ಲಿ ಮುಂದುವರಿದಿರುವುದು ಚಿನ್ನ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ.
Gold Price Agu 3: ಆಗಸ್ಟ್ 3ರ ಬೆಳ್ಳಿ ಬೆಲೆ ಹೇಗಿದೆ ?
ಚಿನ್ನದ ಬೆಲೆಯಂತೆ ಬೆಳ್ಳಿ ಬೆಲೆಯಲ್ಲೂ ಬಹುತೇಕ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ಬೆಳ್ಳಿ ಬೆಲೆಯು 1 ಗ್ರಾಂಗೆ 235 ರೂಪಾಯಿ ಆಗಿದೆ. ಒಂದು ಕೆ.ಜಿ ಬೆಳ್ಳಿ ಬೆಲೆಯು 2,35,000 ರೂ. ಆಗಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯು ನಿರಂತರವಾಗಿ ಕಡಿಮೆ ಆಗುತ್ತಿರುವುದು ಸಮಾಧಾನ ತಂದಿದೆ.


Click it and Unblock the Notifications
