Gold Price on August 19: ಚಿನ್ನದ ಬೆಲೆ 4,300 ರೂಪಾಯಿ ಇಳಿಕೆ: ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ?
Gold Price on August 19: ಚಿನ್ನದ ಬೆಲೆಯು ಏಕಾಏಕಿ ಇಳಿಕೆಯಾಗುತ್ತಿದ್ದು, ಮಂಗಳವಾರವೂ ಬಂಗಾರದ ಬೆಲೆ ಭಾರಿ ಇಳಿಕೆ ಕಂಡಿದೆ. ಇಂದು ಒಟ್ಟಾರೆ ಬಂಗಾರದ ಬೆಲೆಯಲ್ಲಿ ಬರೋಬ್ಬರಿ 4,300 ರೂಪಾಯಿ ಇಳಿಕೆಯಾಗಿದೆ. ಮುಂದಿನ ತಿಂಗಳಿನಲ್ಲಿ ಚಿನ್ನದ ಬೆಲೆಯು ಭಾರೀ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ನಿರೀಕ್ಷೆ ಮಾಡಲಾಗಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಚಿನ್ನದ ಬೆಲೆಯು ಭರ್ಜರಿ ಇಳಿಕೆ ಕಂಡಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯು ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಆಗಸ್ಟ್19ರ ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಿದೆ ಎನ್ನುವ ನಿಖರ ವಿವರ ಇಲ್ಲಿದೆ.
ಡಾಲರ್ ಮುಂದೆ ರೂಪಾಯಿ ಮೌಲ್ಯವು ಸ್ಥಿರವಾಗಿದೆ. ಅಲ್ಲದೇ ಭೌಗೋಳಿಕವಾಗಿಯೂ ಶಾಂತಿ ಒಪ್ಪಂದಗಳು ನಡೆಯುತ್ತಿವೆ. ರಷ್ಯಾ ಹಾಗೂ ಉಕ್ರೇನ್‌ನ ನಡುವೆ ಅಮೆರಿಕಾ ಕದನ ವಿರಾಮಕ್ಕೆ ಪ್ರಯತ್ನಿಸುತ್ತಿದೆ. ಮೂರು ರಾಷ್ಟ್ರಗಳು ಒಂದಾಗಿ ಕದನ ವಿರಾಮ ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ. ಅಲ್ಲದೇ ಆರ್ಥಿಕವಾಗಿ ವಿವಿಧ ರಾಷ್ಟ್ರಗಳ ನಡುವೆ ಭಾರತದ ಸಂಬಂಧ ಸುಧಾರಿಸುತ್ತಿದೆ. ಈ ಎಲ್ಲಾ ಕಾರಣಗಳಿಗೆ ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಆದರೆ ಚಿನ್ನದ ಬೆಲೆಯು ಸದಾ ಅನಿಶ್ಚಿತತೆಯಿಂದ ಕೂಡಿರುತ್ತದೆ. ಯಾವ ಸಂದರ್ಭದಲ್ಲಿ ಏನು ಬದಲಾವಣೆ ಬೇಕಾದರೂ ಆಗುವ ಸಾಧ್ಯತೆ ಇದ್ದೇ ಇದೆ. ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆಯು ಭರ್ಜರಿ ಇಳಿಕೆ ಕಂಡಿದೆ.

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಚಿನ್ನದ ಬೆಲೆಯು ನಿರಂತರವಾಗಿ ಇಳಿಕೆಯಾಗುತ್ತಿದೆ. ಇಂದಿನ 18 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 7,556 ರೂಪಾಯಿ ಹಾಗೂ 10 ಗ್ರಾಂಗೆ 75,560 ರೂಪಾಯಿ ಆಗಿದೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ ಪ್ರತಿ ಗ್ರಾಂನ ಮೇಲೆ 33 ರೂಪಾಯಿ ಹಾಗೂ 330 ರೂಪಾಯಿ ಕಡಿಮೆಯಾಗಿದೆ. ಕಳೆದ ಒಂದು ವಾರದಿಂದ ಬೆಲೆ ಇಳಿಕೆಯ ಹಾದಿಯಲ್ಲಿದೆ.
22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 9,235 ರೂಪಾಯಿ ಹಾಗೂ 10 ಗ್ರಾಂಗೆ 92,350 ರೂಪಾಯಿ ಆಗಿದೆ. ಸೋಮವಾರದ ಬಂಗಾರದ ಬೆಲೆಗೆ ಹೋಲಿಕೆ ಮಾಡಿದರೆ ಒಂದು ಗ್ರಾಂನ ಮೇಲೆ 40 ರೂಪಾಯಿ ಹಾಗೂ ಹತ್ತು ಗ್ರಾಂಗೆ 400 ರೂಪಾಯಿ ಕಡಿಮೆಯಾಗಿದೆ. ಇದು ಇತ್ತೀಚಿನ ದಿನಗಳಲ್ಲಿ ಬಂಗಾರದ ಬೆಲೆಯಲ್ಲಿ ಕಡಿಮೆಯಾಗಿರುವ ಗರಿಷ್ಠ ಮೊತ್ತವಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: ಚಿನ್ನ ಪ್ರಿಯರು ಸಂತೋಷಪಡುವಂತೆ ಚಿನ್ನದ ಬೆಲೆಯು ಇಳಿಕೆಯಾಗುತ್ತಿದೆ. 24 ಕ್ಯಾರೆಟ್‌ನ ಚಿನ್ನದ ಬೆಲೆಯು 1ಗ್ರಾಂಗೆ 10,075 ರೂಪಾಯಿ ಹಾಗೂ 10 ಗ್ರಾಂಗೆ 1,00,750 ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ ಒಂದು ಗ್ರಾಂನ ಮೇಲೆ 43 ರೂಪಾಯಿ ಹಾಗೂ 10 ಗ್ರಾಂನ ಮೇಲೆ 430 ರೂಪಾಯಿ ಆಗಿದೆ. ಇನ್ನು 24 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಕೆ.ಜಿಗೆ 4,300 ರೂಪಾಯಿ ಕಡಿಮೆಯಾಗಿದೆ.
ಬೆಳ್ಳಿ ಬೆಲೆ: ಇನ್ನು ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 116 ರೂಪಾಯಿ ಹಾಗೂ ಒಂದು ಕೆ.ಜಿಗೆ 1,16,000 ಸಾವಿರ ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ ಒಂದು ಗ್ರಾಂನ ಮೇಲೆ ಒಂದು ರೂಪಾಯಿ ಹಾಗೂ ಒಂದು ಕೆ.ಜಿಯ ಮೇಲೆ 1,000 ಸಾವಿರ ರೂಪಾಯಿ ಕಡಿಮೆಯಾಗಿದೆ.












Click it and Unblock the Notifications