Gold Price Today: ವಾರಾಂತ್ಯದಲ್ಲಿ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಇಳಿಕೆ: ಬಂಗಾರ ಪ್ರಿಯರಿಗೆ ಡಬಲ್ ಭರ್ಜರಿ ಗುಡ್‌ನ್ಯೂಸ್!
Gold Price Today: ಬಂಗಾರ ಪ್ರಿಯರಿಗೆ ಅಕ್ಟೋಬರ್ ಮೊದಲ ವಾರ, ವಾರಾಂತ್ಯದಲ್ಲಿ ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ಚಿನ್ನದ ಬೆಲೆಯಲ್ಲಿ ಇಳಿಕೆ ಮುಂದುವರಿದಿದ್ದು, ಬಂಗಾರ ಪ್ರಿಯರಿಗೆ ಸಂತೋಷವನ್ನುಂಟು ಮಾಡಿದೆ. ಕಳೆದ ಮೂರು ದಿನಗಳಿಂದಲೂ ಚಿನ್ನದ ಬೆಲೆ ನಿರಂತರವಾಗಿ ಇಳಿಕೆಯಾಗುತ್ತಿದೆ. ಬೆಳ್ಳಿ ಬೆಲೆಯಲ್ಲಿ ಯಥಾಸ್ಥಿತಿ ಮುಂದುವರಿದಿದೆ. ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ. ಕಳೆದ ಹತ್ತು ದಿನಗಳಲ್ಲಿ ಚಿನ್ನದ ಬೆಲೆಯು ಹಲವು ಬಾರಿ ಇಳಿಕೆಯಾಗಿದೆ.
2026ರ ವರ್ಷದ ಪ್ರಾರಂಭದಲ್ಲಿ ಚಿನ್ನದ ಬೆಲೆಯು ಭಾರೀ ಹೆಚ್ಚಳವಾಗಿತ್ತು. ಆದರೆ, ಇದೀಗ ವರ್ಷಾಂತ್ಯದಲ್ಲಿ ಚಿನ್ನದ ಬೆಲೆಯು ಭಾರೀ ಇಳಿಕೆಯಾಗಿದೆ. ವರ್ಷದ ಪ್ರಾರಂಭಕ್ಕೆ ಹೋಲಿಕೆ ಮಾಡಿದರೆ ಚಿನ್ನದ ಬೆಲೆಯು ವರ್ಷಾಂತ್ಯದ ವೇಳೆಗೆ ಶೇ. 20ರಷ್ಟು ಚಿನ್ನದ ಬೆಲೆ ಭರ್ಜರಿ ಇಳಿಕೆಯಾಗಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ.

ಈ ವರ್ಷದ ಪ್ರಾರಂಭದಲ್ಲಿ ಮಧ್ಯಪ್ರಾಚ್ಯದಲ್ಲಿ ಭಾರೀ ಸಂಘರ್ಷ ಏರ್ಪಟ್ಟಿತ್ತು. ಇದರಿಂದ ಚಿನ್ನ ಮತ್ತು ಬೆಳ್ಳಿ ಬೆಲೆಯೂ ಸಹ ಗಗನಮುಖಿಯಾಗಿತ್ತು. ಆದರೆ, ಯುದ್ಧದ ತೀವ್ರತೆ ಕಡಿಮೆಯಾಗುತ್ತಿದ್ದಂತೆಯೇ ಚಿನ್ನದ ಬೆಲೆಯಲ್ಲೂ ಸಹ ಗಣನೀಯವಾಗಿ ಇಳಿಕೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲೂ ಸಹ ಇನ್ನಷ್ಟು ಇಳಿಕೆಯಾಗಬಹುದು ಎಂದು ಅಂದಾಜಿಸಲಾಗಿದೆ. ಈ ವರ್ಷ ಬೆಳ್ಳಿ ಬೆಲೆಯು ಒಂದು ಕೆ.ಜಿಗೆ 4 ಲಕ್ಷಕ್ಕೂ ಹೆಚ್ಚಾಗಿತ್ತು. ಆದರೆ ಇದೀಗ ಬೆಳ್ಳಿ ಬೆಲೆಯು ನಿರಂತರವಾಗಿ ಇಳಿಕೆಯ ಹಾದಿಯಲ್ಲಿದೆ. ಅಕ್ಟೋಬರ್ 04ರಂದು 18, 22 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆ ಮತ್ತು ಬೆಳ್ಳಿ ಬೆಲೆ ಎಷ್ಟಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂಗೆ 11,189 ರೂಪಾಯಿ, ಹತ್ತು ಗ್ರಾಂ ಚಿನ್ನದ ಬೆಲೆಯು 1,11,890 ರೂ. ಆಗಿದೆ. ಅಕ್ಟೋಬರ್ 03ರ ಶನಿವಾರಕ್ಕೆ ಹೋಲಿಕೆ ಮಾಡಿದರೆ 18 ಕ್ಯಾರೆಟ್‌ನ ಒಂದು ಗ್ರಾಂ ಹಾಗೂ ಹತ್ತು ಗ್ರಾಂ ಚಿನ್ನದ ಬೆಲೆಯು ಯಥಾಸ್ಥಿತಿ ಮುಂದುವರಿದಿದೆ. 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಯಾವುದೇ ಹೆಚ್ಚಳ ಅಥವಾ ಇಳಿಕೆಯಾಗಿಲ್ಲ.
22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂಗೆ 13,675 ರೂಪಾಯಿ ಆಗಿದೆ. ಹತ್ತು ಗ್ರಾಂ ಚಿನ್ನದ ಬೆಲೆಯು 1,36,750 ರೂ. ಆಗಿದೆ. ಶನಿವಾರಕ್ಕೆ ಹೋಲಿಕೆ ಮಾಡಿದರೆ 22 ಕ್ಯಾರೆಟ್ ಚಿನ್ನದ ಬೆಲೆಯು ಯಥಾಸ್ಥಿತಿ ಮುಂದುವರಿದಿದೆ.
24 ಕ್ಯಾರೆಟ್ ಚಿನ್ನದ ಬೆಲೆ: 18 ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿಯೂ ಯಥಾಸ್ಥಿತಿ ಮುಂದುವರಿದಿದೆ. 24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 14,918 ರೂಪಾಯಿ ಆಗಿದೆ. ಇನ್ನು ಹತ್ತು ಗ್ರಾಂ ಚಿನ್ನದ ಬೆಲೆಯು 1,49,180 ರೂ. ಆಗಿದೆ. ಶನಿವಾರಕ್ಕೆ ಹೋಲಿಕೆ ಮಾಡಿದರೆ, 24 ಕ್ಯಾರೆಟ್ ಚಿನ್ನದ ಬೆಲೆಯು ಯಥಾಸ್ಥಿತಿಯಲ್ಲಿ ಮುಂದುವರಿದಿದೆ.
Gold Price Today: ಬೆಳ್ಳಿ ಬೆಲೆ ಎಷ್ಟಾಗಿದೆ ?
ಇನ್ನು ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಬೆಳ್ಳಿ ಬೆಲೆಯು ಒಂದು ಗ್ರಾಂಗೆ 235 ರೂಪಾಯಿ ಹಾಗೂ ಒಂದು ಕೆ.ಜಿ ಬೆಳ್ಳಿ ಬೆಲೆಯು 2.35 ಲಕ್ಷ ರೂ. ಆಗಿದೆ. ಶನಿವಾರಕ್ಕೆ ಹೋಲಿಕೆ ಮಾಡಿದರೆ ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ.


Click it and Unblock the Notifications
