Gold Price Today: ಕೆಲವೇ ದಿನಗಳಲ್ಲಿ ಚಿನ್ನದ ಬೆಲೆ ₹3.08 ಲಕ್ಷ ದಾಟುವ ಸಾಧ್ಯತೆ, ಇಂದಿನ ಚಿನ್ನ - ಬೆಳ್ಳಿ ಬೆಲೆ ಎಷ್ಟಿದೆ ?
Gold Price Today: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಸೆಪ್ಟೆಂಬರ್ 23ರ ಬುಧವಾರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ವ್ಯತ್ಯಾಸವಾಗಿದೆ. ಕಳೆದ ಒಂದು ವಾರದಿಂದಲೂ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತವಾಗುತ್ತಿದೆ. ಸೆಪ್ಟೆಂಬರ್ 22ರ ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರೀ ಇಳಿಕೆಯಾಗಿತ್ತು. ಆದರೆ ಬುಧವಾರ ಮತ್ತೆ ಬಂಗಾರ ಪ್ರಿಯರಿಗೆ ಶಾಕ್ ಎದುರಾಗಿದೆ. ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಚಿನ್ನದ ಬೆಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ವ್ಯತ್ಯಾಸ ಕಂಡು ಬರುತ್ತಿದೆಯಾದರೂ, ಮುಂದಿನ ವರ್ಷಗಳಲ್ಲಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ. ಚಿನ್ನದ ಬೆಲೆಯು ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಹೆಚ್ಚಳವಾಗಲಿದೆ ಎಂದು ಜೆಫರೀಸ್ ಗ್ಲೋಬಲ್ ಈಕ್ವಿಟಿ ಸ್ಟ್ರಾಟಜಿ ಮುಖ್ಯಸ್ಥ ಕ್ರಿಸ್ ವುಡ್ ಶಾಕಿಂಗ್ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಭವಿಷ್ಯದಲ್ಲಿ ಚಿನ್ನದ ಬೆಲೆಯು ಭಾರೀ ದುಬಾರಿ ಆಗುವ ಸಾಧ್ಯತೆ ಇದೆ.

Gold Price Today: ಚಿನ್ನದ ಬೆಲೆ ಕೆಲವೇ ದಿನಗಳಲ್ಲಿ ₹3.08 ಲಕ್ಷ ದಾಟುವ ಸಾಧ್ಯತೆ
ಮುಂದಿನ ದಿನಗಳಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಪ್ರತಿ ಔನ್ಸ್ ಗೆ 10,000 ರೂ. ತಲುಪುವ ಸಾಧ್ಯತೆ ಇದೆ. ಅಲ್ಲದೆ ಭಾರತದಲ್ಲಿ 10 ಗ್ರಾಂ ಚಿನ್ನದ ಬೆಲೆಯು ಬರೋಬ್ಬರಿ 3.08 ಲಕ್ಷ ರೂ.ಗಿಂತಲೂ ಹೆಚ್ಚಾಗಬಹುದು ಅಂತ ಅವರು ಭವಿಷ್ಯ ನುಡಿದಿದ್ದಾರೆ. ಮುಂದಿನ 5 ವರ್ಷದ ಅವಧಿಯಲ್ಲಿ ಚಿನ್ನ ಬೆಲೆಯಲ್ಲಿ ಭಾರೀ ಏರಿಕೆ ಆಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಈ ಹಿಂದಿನಿಂದಲೂ ಚಿನ್ನದ ಬೆಲೆ ಏರಿಳಿತದ ಬಗ್ಗೆ ಗೊಂದಲ ಇದೆ.
ಕೆಲವರು ಚಿನ್ನದ ಬೆಲೆ ಭಾರೀ ಇಳಿಕೆಯಾಗಲಿದೆ ಎಂದು ಎಚ್ಚರಿಸಿದರೆ, ಇನ್ನೂ ಕೆಲವರು ಹೆಚ್ಚಾಗುವ ಸಾಧ್ಯತೆ ಇದೆ ಎನ್ನುತ್ತಾರೆ. ಆದರೆ ಚಿನ್ನದ ಬೆಲೆ ಒಮ್ಮೆಲೆ ಹೆಚ್ಚಳವಾಗಿ ಕುಸಿತಕಂಡರೂ ಸಹ ದೊಡ್ಡ ಮಟ್ಟದ ವ್ಯತ್ಯಾಸ ಆಗಿಲ್ಲ. ಚಿನ್ನದ ಬೆಲೆಯು ಮಧ್ಯಮ ಹಂತವನ್ನು ಕಾಪಾಡಿಕೊಂಡಿದೆ. ಚಿನ್ನದ ಬೆಲೆಯು ಏಕಾಏಕಿ ಐದಾರು ಸಾವಿರ ಹೆಚ್ಚಾದರೂ ಕ್ರಮೇಣ ಮೂರು - ನಾಲ್ಕು ಸಾವಿರ ಇಳಿಕೆ ಆಗಿದೆ. ಆದರೆ ಈಗಾಗಲೇ ಆಗಿರುವ ಬೆಲೆ ಹೆಚ್ಚಳಕ್ಕಿಂತಲೂ ಕಡಿಮೆ ಆಗಿಲ್ಲ. ಇಂದಿನ ಚಿನ್ನ - ಬೆಳ್ಳಿ ಬೆಲೆ ವಿವರ ನೋಡೋಣ.
18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಚಿನ್ನದ ಬೆಲೆಯು ಸೆಪ್ಟೆಂಬರ್ 23ರ ಬುಧವಾರ 1 ಗ್ರಾಂಗೆ 11,565 ರೂ. ಆಗಿದೆ. 10 ಗ್ರಾಂ ಚಿನ್ನದ ಬೆಲೆಯು 1,15,650 ರೂಪಾಯಿ ಆಗಿದೆ. ಮಂಗಳವಾರಕ್ಕೆ ಹೋಲಿಕೆ ಮಾಡಿದರೆ, 18 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂನ ಮೇಲೆ 65 ರೂಪಾಯಿ ಹಾಗೂ 10 ಗ್ರಾಂನ ಮೇಲೆ 650 ರೂಪಾಯಿ ಹೆಚ್ಚಳವಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಹೆಚ್ಚಳವಾಗಿದೆ. 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 14,135 ರೂಪಾಯಿ, 10 ಗ್ರಾಂ ಚಿನ್ನದ ಬೆಲೆಯು 1,41,350 ರೂಪಾಯಿ ಆಗಿದೆ. ಮಂಗಳವಾರಕ್ಕೆ ಹೋಲಿಕೆ ಮಾಡಿದರೆ, 22 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 80 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 800 ರೂಪಾಯಿ ಹೆಚ್ಚಳವಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: 18 ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆಯಂತೆಯೇ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಹೆಚ್ಚಳವಾಗಿದೆ. 24 ಕ್ಯಾರೆಟ್‌ನ 1 ಗ್ರಾಂ ಚಿನ್ನದ ಬೆಲೆಯು 15,420 ರೂಪಾಯಿ ಹಾಗೂ 10 ಗ್ರಾಂ ಬೆಲೆಯು 1,54,200 ರೂ. ಆಗಿದೆ. ಮಂಗಳವಾರಕ್ಕೆ ಹೋಲಿಕೆ ಮಾಡಿದರೆ 24 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂನ ಬೆಲೆಯು 87 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 870 ರೂಪಾಯಿ ಹೆಚ್ಚಳವಾಗಿದೆ.
ಬೆಳ್ಳಿ ಬೆಲೆ ಎಷ್ಟಾಗಿದೆ ?
ಇನ್ನು ಚಿನ್ನದ ಬೆಲೆ ಹೆಚ್ಚಾದರೂ ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ. ಬೆಳ್ಳಿ ಬೆಲೆಯು 250 ರೂಪಾಯಿ ಹಾಗೂ ಒಂದು ಕೆ.ಜಿ ಬೆಳ್ಳಿ ಬೆಲೆಯು 2.50 ಲಕ್ಷ ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ, ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ.


Click it and Unblock the Notifications
