Gold Price Today: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ; 10 ತಿಂಗಳ ಕನಿಷ್ಠ ಮಟ್ಟಕ್ಕೆ ಬಂಗಾರ, ಬೆಳ್ಳಿ ಬೆಲೆಯೂ ಇಳಿಕೆ
ಚಿನ್ನದ ಬೆಲೆಯು ನವೆಂಬರ್ 1ರಂದು ಭರ್ಜರಿ ಇಳಿಕೆಯಾಗಿದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆಯು ಏರಿಕೆಯಾಗಿತ್ತು. ಇದೀಗ ಕಳೆದ ನಾಲ್ಕು ದಿನಗಳಿಂದ ಚಿನ್ನದ ಬೆಲೆಯು ನಿರಂತರವಾಗಿ ಇಳಿಕೆಯಾಗಿದೆ. ಚಿನ್ನದೊಂದಿಗೆ ಬೆಳ್ಳಿ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. ಕಳೆದ 10 ತಿಂಗಳಲ್ಲಿಯೇ ಚಿನ್ನದ ಬೆಲೆ ಕನಿಷ್ಠಕ್ಕೆ ಇಳಿಕೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಮಾರಾಟದ ಬೆಲೆಯಲ್ಲಿ ಭಾರೀ ವ್ಯತ್ಯಾಸವಾಗಿದೆ. ಬೆಳ್ಳಿ ಬೆಲೆಯು ಸಹ ವರ್ಷದ ಪ್ರಾರಂಭಕ್ಕೆ ಹೋಲಿಕೆ ಮಾಡಿದರೆ ಅರ್ಧಕ್ಕೆ ಅರ್ಧದಷ್ಟು ಇಳಿಕೆಯಾಗಿದೆ.
ದೀಪಾವಳಿ ಸಂದರ್ಭದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಹೆಚ್ಚಳವಾಗಬಹುದು ಎಂದು ಅಂದಾಜಿಸಲಾಗಿತ್ತು. ಇದೀಗ ಚಿನ್ನದ ಬೆಲೆಯು ನಿರಂತರವಾಗಿ ಇಳಿಕೆಯಾಗಿದೆ. ದೀಪವಾಳಿ ಸಂದರ್ಭದಲ್ಲಿ ಚಿನ್ನದ ಬೆಲೆ ಇಳಿಕೆ ಆಗುತ್ತಿರುವುದು ಬಂಗಾರ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಇನ್ನಷ್ಟು ಇಳಿಕೆಯಾಗಬಹುದು ಎಂದು ಅಂದಾಜಿಸಲಾಗಿದೆ.

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂಗೆ 10,416 ರೂಪಾಯಿ ಆಗಿದೆ. ಹತ್ತು ಗ್ರಾಂ ಚಿನ್ನದ ಬೆಲೆಯು 1,04,160 ರೂಪಾಯಿ ಆಗಿದೆ. ಚಿನ್ನದ ಬೆಲೆಯು ಕಳೆದ ನಾಲ್ಕು ದಿನಗಳಿಂದ ನಿರಂತರವಾಗಿ ಇಳಿಕೆಯಾಗಿದೆ. 18 ಕ್ಯಾರೆಟ್ ಚಿನ್ನದ ಬೆಲೆಯುಲ್ಲೂ ಇಳಿಕೆಯಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂಗೆ 12,730 ರೂಪಾಯಿ ಆಗಿದೆ. 18 ಕ್ಯಾರೆಟ್ ಚಿನ್ನದ ಬೆಲೆಯು ಹತ್ತು ಗ್ರಾಂಗೆ 1,27,300 ರೂ. ಆಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 18 ಕ್ಯಾರೆಟ್ ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆಯಂತೆ 24 ಕ್ಯಾರೆಟ್ ಚಿನ್ನದ ಬೆಲೆಯೂ ಸಹ ಭರ್ಜರಿ ಇಳಿಕೆಯಾಗಿದೆ. 24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆ 13,888 ರೂಪಾಯಿ ಆಗಿದೆ. ಹತ್ತು ಗ್ರಾಂ ಚಿನ್ನದ ಬೆಲೆಯು 1,38,880 ರೂ. ಆಗಿದೆ.
Gold Price Today: ಬೆಳ್ಳಿ ಬೆಲೆ ಎಷ್ಟಾಗಿದೆ ?
ಇನ್ನು ಚಿನ್ನದಂತೆ ಬೆಳ್ಳಿ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. ಬೆಳ್ಳಿ ಬೆಲೆಯು ಒಂದು ಗ್ರಾಂಗೆ 200 ರೂಪಾಯಿ ಆಗಿದೆ. ಬೆಳ್ಳಿ ಬೆಲೆಯು ಒಂದು ಕೆ.ಜಿಯು 2 ಲಕ್ಷ ರೂ ಆಗಿದೆ.
ಚಿನ್ನ - ಬೆಳ್ಳಿ ಬೆಲೆ ಇನ್ನಷ್ಟು ಇಳಿಕೆ ಸಾಧ್ಯತೆ
ಇನ್ನು ಚಿನ್ನ ಮತ್ತು ಬೆಳ್ಳಿ ಬೆಲೆಯು ಮುಂದಿನ ದಿನಗಳಲ್ಲಿ ಚಿನ್ನದ ಬೆಲೆಯು ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ. ಜಾಗತಿಕ ಮಾರುಕಟ್ಟೆಯಲ್ಲಿನ ಏರುಪೇರಿನ ಕಾರಣಕ್ಕೆ ಚಿನ್ನದ ಬೆಲೆಯಲ್ಲಿ ನಿರಂತರ ಇಳಿಕೆ ಕಂಡು ಬರುತ್ತಿದೆ.


Click it and Unblock the Notifications
