Today Gold Price: ಚಿನ್ನದ ಬೆಲೆ ಸತತ 4ನೇ ದಿನ ಇಳಿಕೆ; ಅ.23ರ 18, 22, 24 ಕ್ಯಾರೆಟ್ ಬಂಗಾರ - ಬೆಳ್ಳಿ ಬೆಲೆ ಎಷ್ಟಾಗಿದೆ?
Today Gold Price: ಬಂಗಾರ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ಚಿನ್ನ ಮತ್ತು ಬೆಳ್ಳಿ ಬೆಲೆಯು ಭರ್ಜರಿ ಇಳಿಕೆಯಾಗಿದೆ. ಬಂಗಾರದ ಬೆಲೆಯು ಸತತ ನಾಲ್ಕನೇ ದಿನವೂ ಸಹ ಕಡಿಮೆಯಾಗಿದೆ. ಕಳೆದ ಹತ್ತು ದಿನಗಳಿಗೆ ಹೋಲಿಕೆ ಮಾಡಿದರೆ ಎರಡು ದಿನ ಮಾತ್ರ ಚಿನ್ನದ ಬೆಲೆ ಏರಿಕೆಯಾಗಿದೆ. ಈ ಎರಡು ದಿನವೂ ಸಹ ಅಲ್ಪ ಪ್ರಮಾಣದಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದೆ. ಉಳಿದಂತೆ ಒಟ್ಟಾರೆ ಚಿನ್ನದ ಬೆಲೆಯು ಕಡಿಮೆಯಾಗಿದೆ. ದಸರಾ ಸಂಭ್ರಮಾಚರಣೆ ಹಾಗೂ ದೀಪವಾಳಿಗೆ ಕೆಲವೇ ದಿನಗಳು ಬಾಕಿ ಉಳಿದಿರುವಾಗ ಚಿನ್ನದ ಬೆಲೆಯಲ್ಲಿ ಇಳಿಕೆಯಾಗುತ್ತಿರುವುದು ಬಂಗಾರ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ. ಅಕ್ಟೋಬರ್ 20ನೇ ತಾರೀಖಿನಿಂದಲೂ ಚಿನ್ನದ ಬೆಲೆ ಭರ್ಜರಿ ಇಳಿಕೆಯ ಹಾದಿಯಲ್ಲಿ ಸಾಗಿದೆ.
ಇನ್ನು ಅಕ್ಟೋಬರ್ 23ರ ಶುಕ್ರವಾರವೂ ಸಹ 18 ಕ್ಯಾರೆಟ್, 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯು ಭರ್ಜರಿ ಇಳಿಕೆಯಾಗಿದೆ. ಇಂದು ಮೂರು ಕ್ಯಾರೆಟ್ ಚಿನ್ನದ ಬೆಲೆ ಕಡಿಮೆಯಾಗಿದೆ. ಅಕ್ಟೋಬರ್ 23ರಂದು 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು 1,30,600 ರೂ. ಆಗಿದೆ. ಅಲ್ಲದೆ 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು 1,42,480 ರೂ. ಆಗಿದೆ. ವಿವಿಧ ಕ್ಯಾರೆಟ್‌ನ ಚಿನ್ನದ ಬೆಲೆ ಅಕ್ಟೋಬರ್ 23ರ ಶುಕ್ರವಾರ ಎಷ್ಟಾಗಿದೆ ಎನ್ನುವ ಸಂಪೂರ್ಣ ಹಾಗೂ ನಿಖರ ವಿವರ ಇಲ್ಲಿದೆ.

18 ಕ್ಯಾರೆಟ್ ಚಿನ್ನದ ಬೆಲೆ: ಅಕ್ಟೋಬರ್ 23ರ ಶುಕ್ರವಾರ 18 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 10,686 ರೂಪಾಯಿ ಆಗಿದೆ. ಇನ್ನು ಹತ್ತು ಗ್ರಾಂ ಚಿನ್ನದ ಬೆಲೆಯು 1,06,860 ರೂ. ಆಗಿದೆ. ಅಕ್ಟೋಬರ್ 22ರ ಗುರವಾರಕ್ಕೆ ಹೋಲಿಕೆ ಮಾಡಿದರೆ ಶುಕ್ರವಾರ 18 ಕ್ಯಾರೆಟ್‌ನ ಒಂದು ಗ್ರಾಂನ ಮೇಲೆ 143 ರೂಪಾಯಿ ಹಾಗೂ ಹತ್ತು ಗ್ರಾಂನ ಮೇಲೆ 1,430 ರೂಪಾಯಿ ಕಡಿಮೆಯಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 13,060 ರೂ. ಆಗಿದೆ. ಹತ್ತು ಗ್ರಾಂ ಚಿನ್ನದ ಬೆಲೆಯು 1,30,600 ರೂ. ಆಗಿದೆ. ಗುರುವಾರಕ್ಕೆ ಹೋಲಿಕೆ ಮಾಡಿದರೆ 22 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಮೇಲೆ 175 ರೂಪಾಯಿ ಹಾಗೂ ಹತ್ತು ಗ್ರಾಂನ ಮೇಲೆ 1,750 ರೂ. ಕಡಿಮೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: 18 ಹಾಗೂ 22 ಕ್ಯಾರೆಟ್‌ನಂತೆಯೇ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. 24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 14,248 ರೂಪಾಯಿ ಹಾಗೂ ಹತ್ತು ಗ್ರಾಂ ಚಿನ್ನದ ಬೆಲೆಯು 1,42,480 ರೂ. ಆಗಿದೆ. 24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 190 ಹಾಗೂ ಹತ್ತು ಗ್ರಾಂ ಚಿನ್ನದ ಬೆಲೆಯು 1,900 ರೂ. ಕಡಿಮೆಯಾಗಿದೆ.
ಬೆಳ್ಳಿ ಬೆಲೆ ಎಷ್ಟಾಗಿದೆ ?
ಬೆಳ್ಳಿ ಬೆಲೆಯು ಒಂದು ಗ್ರಾಂಗೆ 220 ರೂಪಾಯಿ ಹಾಗೂ ಒಂದು ಕೆ.ಜಿ ಬೆಳ್ಳಿಯು 2.20 ಲಕ್ಷ ರೂ. ಆಗಿದೆ. ಗುರುವಾರಕ್ಕೆ ಹೋಲಿಕೆ ಮಾಡಿದರೆ ಬೆಳ್ಳಿ ಬೆಲೆಯು ಒಂದು ಗ್ರಾಂನ ಮೇಲೆ 5 ರೂಪಾಯಿ ಹಾಗೂ ಒಂದು ಕೆ.ಜಿ ಬೆಲೆಯು 5,000 ರೂಪಾಯಿ ಕಡಿಮೆಯಾಗಿದೆ.


Click it and Unblock the Notifications
