Gold Price Today: ಅ.3ರಂದು ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ; 10 ಗ್ರಾಂಗೆ ಇಷ್ಟು ಸಾವಿರ ಕಡಿತ, ಬೆಳ್ಳಿ ಬೆಲೆ ಎಷ್ಟಾಗಿದೆ ?

Gold Price Today: ಚಿನ್ನ ಮತ್ತು ಬೆಳ್ಳಿ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ ಸಿಕ್ಕಿದೆ. ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಇಳಿಕೆಯಾಗುತ್ತಿದೆ. ಕಳೆದ ಒಂದು ವಾರದಿಂದಲೂ ಚಿನ್ನದ ಬೆಲೆ ಇಳಿಕೆ ಹಾದಿಯಲ್ಲಿದೆ. ಚಿನ್ನದ ಬೆಲೆ ಇಳಿಕೆ ಬಂಗಾರ ಪ್ರಿಯರಿಗೆ ಸಂತೋಷವನ್ನುಂಟು ಮಾಡಿದರೂ, ಹೂಡಿಕೆದಾರರಿಗೆ ಹಾಗೂ ಚಿನ್ನದ ಬೆಲೆ ಹೆಚ್ಚಾಗಲಿದೆ ಅಂದಾಜಿಸಿ ಚಿನ್ನದ ಮೇಲೆ ಹೂಡಿಕೆ ಮಾಡಿದವರಿಗೆ ಶಾಕ್ ಎದುರಾಗಿದೆ. ಚಿನ್ನದ ಬೆಲೆಯಲ್ಲಿ ಇಳಿಕೆ ಆಗುತ್ತಿರುವುದು ಹೂಡಿಕೆದಾರರಲ್ಲಿ ಭಾರೀ ಆತಂಕ ಎದುರಾಗಿದೆ. ಅಕ್ಟೋಬರ್ 03ರಂದು 18 ಕ್ಯಾರೆಟ್, 22 ಕ್ಯಾರೆಟ್ ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆಯಾಗಿದೆ. ಆದರೆ ಬೆಳ್ಳಿ ಬೆಲೆಯು ಯಥಾಸ್ಥಿತಿ ಮುಂದುವರಿದಿದೆ. ಇಂದಿನ ಚಿನ್ನ ಮತ್ತು ಬೆಳ್ಳಿ ನಿಖರ ಬೆಲೆಯ ಸಂಪೂರ್ಣ ವಿವರ ಇಲ್ಲಿದೆ.

ಚಿನ್ನದ ಬೆಲೆಯು ಅಕ್ಟೋಬರ್ ಮೊದಲ ವಾರವೇ ಭರ್ಜರಿ ಇಳಿಕೆಯಾಗಿದೆ. ಸೆಪ್ಟೆಂಬರ್ ಅಂತ್ಯ ಹಾಗೂ ಅಕ್ಟೋಬರ್ ಮೊದಲ ವಾರದಲ್ಲಿ ಅಂದರೆ ಕಳೆದ ಒಂದು ವಾರದ ಅವಧಿಯಲ್ಲಿ ಚಿನ್ನದ ಬೆಲೆಯು ಬರೋಬ್ಬರಿ 5,000 ರೂ. ಭರ್ಜರಿ ಇಳಿಕೆಯಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಆಗುತ್ತಿರುವ ಕೆಲವೊಂದು ಪ್ರಮುಖ ಬದಲಾವಣೆಗಳಿಂದಾಗಿ ಚಿನ್ನದ ಬೆಲೆಯು ನಿರಂತರವಾಗಿ ಇಳಿಕೆಯಾಗುತ್ತಿದೆ. ಪ್ರಮುಖ ನಗರಗಳಲ್ಲಿ ಅಕ್ಟೋಬರ್‌ 3ರಂದು ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆಯಾಗಿದೆ. ವಾರಾಂತ್ಯದ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆಯು ಬಂಗಾರ ಪ್ರಿಯರಲ್ಲಿ ಭಾರೀ ಸಂತೋಷವನ್ನುಂಟು ಮಾಡಿದೆ.

Gold Price Today Gold Rates Fall Sharply on October 3 1 100 Cut Per 10 Grams Whats Silver Rate

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಚಿನ್ನದ ಬೆಲೆಯು ಅಕ್ಟೋಬರ್ 3ರಂದು ಒಂದು ಕ್ಯಾರೆಟ್ ಬೆಲೆಯು 11,189 ರೂ. ಹಾಗೂ ಹತ್ತು ಗ್ರಾಂ ಚಿನ್ನದ ಬೆಲೆಯು 1,11,890 ರೂಪಾಯಿ ಆಗಿದೆ. ಅಕ್ಟೋಬರ್ 2ರ ಶುಕ್ರವಾರಕ್ಕೆ ಹೋಲಿಕೆ ಮಾಡಿದರೆ, 18 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂನ ಮೇಲೆ 82 ರೂಪಾಯಿ ಹಾಗೂ 10 ಗ್ರಾಂನ ಮೇಲೆ 820 ರೂಪಾಯಿ ಕಡಿಮೆಯಾಗಿದೆ.

22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂಗೆ 13,675 ರೂ. ಹಾಗೂ ಹತ್ತು ಗ್ರಾಂಗೆ 1,36,750 ರೂ. ಆಗಿದೆ. 22 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂ ಮೇಲೆ 100 ರೂಪಾಯಿ ಹಾಗೂ ಹತ್ತು ಗ್ರಾಂನ ಮೇಲೆ 1,000 ರೂ. ಕಡಿಮೆಯಾಗಿದೆ.

24 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 18 ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆಯಂತೆಯೇ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. 24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 14,918 ರೂ. ಹಾಗೂ ಹತ್ತು ಗ್ರಾಂ ಚಿನ್ನದ ಬೆಲೆಯು 1,49,180 ರೂ. ಶುಕ್ರವಾರಕ್ಕೆ ಹೋಲಿಕೆ ಮಾಡಿದರೆ, ಒಂದು ಗ್ರಾಂ ಚಿನ್ನದ ಬೆಲೆಯ ಮೇಲೆ 110 ರೂಪಾಯಿ ಹಾಗೂ ಹತ್ತು ಗ್ರಾಂನ ಮೇಲೆ 1,100 ರೂಪಾಯಿ ಕಡಿಮೆಯಾಗಿದೆ.

ಅಕ್ಟೋಬರ್ 3ರಂದು ಬೆಳ್ಳಿ ಬೆಲೆ ಎಷ್ಟಾಗಿದೆ ?

ಅಕ್ಟೋಬರ್ 3ರಂದು ಬೆಳ್ಳಿ ಬೆಲೆಯು ಒಂದು ಗ್ರಾಂಗೆ 235 ರೂಪಾಯಿ ಆಗಿದೆ. ಇನ್ನು ಒಂದು ಕೆ.ಜಿ ಬೆಳ್ಳಿ ಬೆಲೆಯು 2.35 ಲಕ್ಷ ರೂ. ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+