Gold Price Today: ಅ.8ರಂದು ಚಿನ್ನದ ಬೆಲೆಯಲ್ಲಿ ಭರ್ಜರಿ ಗುಡ್‌ನ್ಯೂಸ್: 18K, 22K, 24K ಬಂಗಾರ, ಬೆಳ್ಳಿ ಬೆಲೆ ಎಷ್ಟಿದೆ ?
Gold Price Today: ಬಂಗಾರದ ಬೆಲೆಯು ಅಕ್ಟೋಬರ್ 8ರ ಗುರುವಾರದಂದು ಸ್ಥಿರವಾಗಿದ್ದು, ಚಿನ್ನ ಪ್ರಿಯರಿಗೆ ಸಂತೋಷವನ್ನುಂಟು ಮಾಡಿದೆ. ಚಿನ್ನದ ಬೆಲೆಯು ಯಾವಾಗಲೂ ಅನಿಶ್ಚಿತವಾಗಿರುತ್ತದೆ. ಇದೀಗ ಅಮೆರಿಕದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಚಿನ್ನದ ಬೆಲೆ ಕಡಿಮೆ ಆಗುವುದಕ್ಕೆ ಮುಖ್ಯ ಕಾರಣವಾಗಿದೆ. ಇನ್ನು ಭಾರತದಲ್ಲಿ ಪಿತೃ ಪಕ್ಷ ಹಾಗೂ ಯಾವುದೇ ಶುಭ ಸಮಾರಂಭಗಳು ಇಲ್ಲದೆ ಇರುವುದರಿಂದ ಚಿನ್ನ ಖರೀದಿ ಮಾಡುವ ಪ್ರಮಾಣವೂ ಸಹ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗಿದೆ. ಆದರೆ, ಮುಂದಿನ ದಿನಗಳಲ್ಲಿ ದಸರಾ - ದೀಪಾವಳಿಯಂತಹ ಪ್ರಮುಖ ಹಾಗೂ ದೊಡ್ಡ ಹಬ್ಬಗಳು ಇವೆ. ಹೀಗಾಗಿ, ಮುಂದಿನ ದಿನಗಳಲ್ಲಿ ಚಿನ್ನ ಖರೀದಿ ಹೆಚ್ಚಾಗಬಹುದು. ಅಲ್ಲದೆ ಭವಿಷ್ಯದಲ್ಲಿ ಚಿನ್ನದ ಬೆಲೆ ಹೆಚ್ಚಾಗುವ ಸಾಧ್ಯತೆಯೂ ಇದೆ. ಅಕ್ಟೋಬರ್ 8ರಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಾಗಿದೆ ಎನ್ನುವ ನಿಖರವಾದ ವಿವರ ಇಲ್ಲಿದೆ.
18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 11,218 ರೂಪಾಯಿ ಆಗಿದೆ. 18 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯು 1,12,180 ರೂ. ಆಗಿದೆ. ಬುಧವಾರಕ್ಕೆ ಹೋಲಿಕೆ ಮಾಡಿದರೆ, ಗುರುವಾರ 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.

22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 13,710 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,37,100 ರೂ. ಆಗಿದೆ. ಬುಧವಾರಕ್ಕೆ ಹೋಲಿಕೆ ಮಾಡಿದರೆ, 22 ಕ್ಯಾರೆಟ್‌ನ ಒಂದು ಗ್ರಾಂ ಹಾಗೂ ಹತ್ತು ಗ್ರಾಂನ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ.
24 ಕ್ಯಾರೆಟ್ ಚಿನ್ನದ ಬೆಲೆ: 24 ಕ್ಯಾರೆಟ್ ಚಿನ್ನದ ಬೆಲೆಯು 1 ಗ್ರಾಂಗೆ 14,957 ರೂಪಾಯಿ ಆಗಿದೆ. 24 ಕ್ಯಾರೆಟ್‌ನ 10 ಚಿನ್ನದ ಬೆಲೆಯು 1,49,570 ರೂಪಾಯಿ ಆಗಿದೆ. ಇನ್ನು 18 ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆಯಂತೆ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಯಾವುದೇ ವ್ಯತ್ಯಾಸ ಆಗಿಲ್ಲ.
ಇಂದಿನ ಬೆಳ್ಳಿ ಬೆಲೆ ಎಷ್ಟಾಗಿದೆ ?
ಚಿನ್ನದ ಬೆಲೆಯು ನಿರಂತರವಾಗಿ ಇಳಿಕೆಯಾಗುತ್ತಿದ್ದು, ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಆಗಿಲ್ಲ. ಬೆಳ್ಳಿ ಬೆಲೆಯು 1 ಗ್ರಾಂಗೆ 235 ರೂಪಾಯಿ ಹಾಗೂ ಒಂದು ಕೆ.ಜಿ ಬೆಳ್ಳಿ ಬೆಲೆಯು 2.35 ಲಕ್ಷ ರೂ. ಆಗಿದೆ. ಬೆಳ್ಳಿ ಬೆಲೆಯಲ್ಲಿ ಯಾವುದೇ ವ್ಯತ್ಯಾಸ ಕಂಡು ಬಂದಿಲ್ಲ. ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ನಿರಂತರವಾಗಿ ಇಳಿಕೆಯಾಗುತ್ತಿರುವುದು ಬಂಗಾರ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ.
ಚಿನ್ನದ ಬೆಲೆ ಹೆಚ್ಚಳವಾಗುವ ಸಾಧ್ಯತೆ ?
ಇನ್ನು ಚಿನ್ನದ ಬೆಲೆಯು ಮುಂದಿನ ದಿನಗಳಲ್ಲಿ ಹೆಚ್ಚಾಗುವ ಸಾಧ್ಯತೆ ಇದೆ. ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದ್ದರೂ ಒಟ್ಟಾರೆ ಮೊತ್ತದಲ್ಲಿ ಕಡಿಮೆ ಆಗಿಲ್ಲ. ಆದರೆ ಬಂಗಾರದ ಬೆಲೆಯು ಮುಂದಿನ ದಿನಗಳಲ್ಲಿ ಅಲ್ಪ ಪ್ರಮಾಣದಲ್ಲಿ ಹೆಚ್ಚಳವಾಗುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.


Click it and Unblock the Notifications
