Gold Price November 11: ಚಿನ್ನದ ಬೆಲೆ ದಿಢೀರ್ 2,460 ರೂಪಾಯಿ ಹೆಚ್ಚಳ, ಬಂಗಾರ & ಬೆಳ್ಳಿ ಬೆಲೆ
Gold Price November 11: ಚಿನ್ನ ಪ್ರಿಯರಿಗೆ ಮಂಗಳವಾರವೂ ಶಾಕ್ ಮುಂದುವರಿದಿದೆ. ದೇಶದಲ್ಲಿ ಅಹಿತಕರ ಘಟನೆ ನಡೆದಿರುವುದು ಸಹ ಚಿನ್ನ ಮತ್ತು ಬೆಳ್ಳಿ ಸೇರಿದಂತೆ ವಿವಿಧ ಹೂಡಿಕೆಗಳ ಮೇಲೆ ಪರಿಣಾಮ ಬೀರಿದೆ. ದೆಹಲಿಯ ಹೃದಯಭಾಗವಾದ ಕೆಂಪು ಕೋಟೆಯ ಕೂಗಳತೆಯ ದೂರದಲ್ಲಿ (ಮೆಟ್ರೋ ನಿಲ್ದಾಣದ ಸಮೀಪ) ಬಾಂಬ್ ಸ್ಫೋಟವಾಗಿದ್ದು, 9 ಜನ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಏರುಪೇರು ಶುರುವಾಗಿದೆ. ಚಿನ್ನದ ಬೆಲೆ ಸಹ ಭಾರೀ ಹೆಚ್ಚಳ ಕಂಡಿದೆ. ನವೆಂಬರ್ 11ರ ಚಿನ್ನ ಮತ್ತು ಬೆಳ್ಳಿ ಬೆಲೆಯ ನಿಖರ ವಿವರ ಇಲ್ಲಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದ ಪ್ರಮುಖ ನಗರಗಳು ಮತ್ತು ದೇಶದಾದ್ಯಂತ ಚಿನ್ನದ ಬೆಲೆಯು ದಿಢೀರ್ ಹೆಚ್ಚಳವಾಗಿದೆ. ಇದಕ್ಕೆ ಮುಖ್ಯ ಕಾರಣಗಳಲ್ಲಿ ದೇಶದಲ್ಲಿ ನಡೆದಿರುವ ಅಹಿತಕರ ಘಟನೆಯೂ ಒಂದಾಗಿದೆ. ಇನ್ನು ನೆನ್ನೆ ಸಹ ಚಿನ್ನದ ಬೆಲೆ ಏರಿಕೆಯಾಗಿತ್ತು. ಈ ವಾರದಲ್ಲಿ ಚಿನ್ನದ ಬೆಲೆಯು ಇನ್ನಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ.

24 ಕ್ಯಾರೆಟ್ ಚಿನ್ನದ ಬೆಲೆ: ಚಿನ್ನ ಪ್ರಿಯರಿಗೆ ಮಂಗಳವಾರವೂ ಶಾಕ್ ಮುಂದುವರಿದಿದೆ. ಮಂಗಳವಾರ 24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 12,628 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 1,26,280 ರೂಪಾಯಿ ಆಗಿದೆ. ಒಂದು ಗ್ರಾಂ ಚಿನ್ನದ ಬೆಲೆಯು 246 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 2,460 ರೂಪಾಯಿ ಆಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್ ಚಿನ್ನದ ಬೆಲೆಯು ಪ್ರತಿ ಗ್ರಾಂಗೆ 11,575 ರೂಪಾಯಿ ಹಾಗೂ 10 ಗ್ರಾಂಗೆ 1,15, 750 ರೂಪಾಯಿ ಆಗಿದೆ. ಒಂದು ಗ್ರಾಂ ಚಿನ್ನದ ಬೆಲೆಯು ನೆನ್ನೆಗೆ ಹೋಲಿಕೆ ಮಾಡಿದರೆ, ಒಂದು ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆಯು 225 ರೂಪಾಯಿ ಹಾಗೂ 10 ಗ್ರಾಂ ಚಿನ್ನದ ಬೆಲೆಯು 2,250 ರೂಪಾಯಿ ಹೆಚ್ಚಳವಾಗಿದೆ.
18 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 18 ಕ್ಯಾರೆಟ್ ಚಿನ್ನದ ಬೆಲೆ ಸಹ ಹೆಚ್ಚಳವಾಗಿದೆ. 18 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 9,471 ರೂಪಾಯಿ ಹಾಗೂ 10 ಗ್ರಾಂಗೆ 94,710 ರೂಪಾಯಿ ಆಗಿದೆ. ನೆನ್ನೆಗೆ ಹೋಲಿಕೆ ಮಾಡಿದರೆ ಒಂದು ಗ್ರಾಂ ಚಿನ್ನದ ಬೆಲೆಯು 184 ರೂಪಾಯಿ ಹಾಗೂ 10 ಗ್ರಾಂಗೆ 1,840 ರೂಪಾಯಿ ಹೆಚ್ಚಳವಾಗಿದೆ.
ಬೆಳ್ಳಿ ಬೆಲೆ: ಇನ್ನು ಬೆಳ್ಳಿ ಬೆಲೆಯಲ್ಲೂ ಭರ್ಜರಿ ಹೆಚ್ಚಳವಾಗಿದೆ. ಬೆಳ್ಳಿ ಬೆಲೆಯು ಪ್ರತಿ ಗ್ರಾಂಗೆ 160 ರೂಪಾಯಿ ಆಗಿದ್ದು, 3 ರೂಪಾಯಿ ಹೆಚ್ಚಳವಾಗಿದೆ. ಪ್ರತಿ ಕೆ.ಜಿ ಬೆಳ್ಳಿ ಬೆಲೆಯು 1,60,000 ಸಾವಿರ ರೂಪಾಯಿ ಆಗಿದೆ. ಅಲ್ಲದೇ ಒಂದು ಕೆ.ಜಿ ಬೆಳ್ಳಿ ಬೆಲೆಯು 3,000 ಸಾವಿರ ರೂಪಾಯಿ ಹೆಚ್ಚಳವಾಗಿದೆ.












Click it and Unblock the Notifications