Gold Price Today: ದೀಪಾವಳಿ ಸಮಯದಲ್ಲಿ ಬಂಗಾರ ಪ್ರಿಯರಿಗೆ ಭಾರೀ ಶಾಕ್; ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬದಲಾವಣೆ!
ಚಿನ್ನದ ಬೆಲೆಯಲ್ಲಿ ಏರಿಳಿತವು ಮುಂದುವರಿದಿದೆ. ಆದರೆ, ಅಕ್ಟೋಬರ್ 24ರಿಂದಲೂ ಚಿನ್ನದ ಬೆಲೆಯು ನಿರಂತರವಾಗಿ ಹೆಚ್ಚಳವಾಗುತ್ತಿದೆ. ಚಿನ್ನದ ಬೆಲೆಯ ನಿರಂತರ ಹೆಚ್ಚಳವು ಬಂಗಾರ ಪ್ರಿಯರಲ್ಲಿ ಆತಂಕವನ್ನುಂಟು ಮಾಡಿದೆ. ಆದರೆ, ಇದೇ ಸಂದರ್ಭದಲ್ಲಿ ಚಿನ್ನದ ಮೇಲೆ ಹೂಡಿಕೆ ಮಾಡಿರುವವರು ನಿಟ್ಟುಸಿರು ಬಿಡುವಂತಾಗಿದೆ. ಕಳೆದ ಒಂದು ವಾರದಿಂದಲೂ ಚಿನ್ನದ ಬೆಲೆ ಏಕಮುಖವಾಗಿ ಏರಿಕೆಯಾಗಿದೆ. ಅಕ್ಟೋಬರ್ 29ರಂದು ಚಿನ್ನ ಮತ್ತು ಬೆಳ್ಳಿಯ ಬೆಲೆ ಎಷ್ಟಾಗಿದೆ ಎನ್ನುವ ನಿಖರ ವಿವರ ಇಲ್ಲಿದೆ.
ಅಕ್ಟೋಬರ್ 3ನೇ ವಾರದ ವರೆಗೂ ಚಿನ್ನದ ಬೆಲೆ ಇಳಿಕೆ ಹಾದಿಯಲ್ಲಿತ್ತು ಚಿನ್ನದ ಬೆಲೆಯು ನಿರಂತರವಾಗಿ ಇಳಿಕೆಯಾಗುತ್ತಿತ್ತು. ಆದರೆ, ಇದೀಗ ಮಾಸಾಂತ್ಯದಲ್ಲಿ ಚಿನ್ನದ ಬೆಲೆಯು ಭರ್ಜರಿ ಹೆಚ್ಚಳವಾಗಿದೆ. 18, 22 ಹಾಗೂ 24 ಕ್ಯಾರೆಟ್ ಚಿನ್ನದ ಬೆಲೆಯು ಭಾರೀ ಹೆಚ್ಚಳವಾಗಿದೆ. ಆದರೆ, ಅಚ್ಚರಿಯ ರೀತಿಯಲ್ಲಿ ಬೆಳ್ಳಿ ಬೆಲೆ ಇಳಿಕೆಯಾಗಿದೆ. ಚಿನ್ನದ ಬೆಲೆ ಏರಿಳಿತ ಸಾಮಾನ್ಯವಾಗಿದ್ದರೂ ಸಹ ಬೆಳ್ಳಿಯ ಬೆಲೆಯು ಸ್ಥಿರವಾಗಿರುತ್ತಿತ್ತು. ಆದರೆ, ಇದೀಗ ಬೆಳ್ಳಿಯ ಬೆಲೆ ಇಳಿಕೆಯಾಗಿದೆ. ಇಂದಿನ ಚಿನ್ನ ಮತ್ತು ಬೆಳ್ಳಿ ಬೆಲೆಯ ನಿಖರ ವಿವರ ನೋಡೋಣ.

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 10,796 ರೂಪಾಯಿ ಹಾಗೂ ಹತ್ತು ಗ್ರಾಂ ಚಿನ್ನದ ಬೆಲೆಯು 1,07,960 ರೂ. ಆಗಿದೆ. ಅಕ್ಟೋಬರ್ 28ರ ಬುಧವಾರಕ್ಕೆ ಹೋಲಿಕೆ ಮಾಡಿದರೆ, 18 ಕ್ಯಾರೆಟ್‌ನ ಒಂದು ಗ್ರಾಂ ಹಾಗೂ ಹತ್ತು ಗ್ರಾಂ ಚಿನ್ನದ ಬೆಲೆಯು ಸ್ಥಿರವಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: ಇನ್ನು 22 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಬೆಲೆಯು 13,195 ರೂಪಾಯಿ ಹಾಗೂ ಹತ್ತು ಗ್ರಾಂ ಚಿನ್ನದ ಬೆಲೆಯು 1,31,950 ರೂ. ಆಗಿದೆ. ಬುಧವಾರಕ್ಕೆ ಹೋಲಿಕೆ ಮಾಡಿದರೆ 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ.
24 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆಯಂತೆ 24 ಕ್ಯಾರೆಟ್ ಚಿನ್ನದ ಬೆಲೆಯು ಸ್ಥಿರವಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂಗೆ 14,395 ರೂಪಾಯಿ ಆಗಿದೆ ಹಾಗೂ ಹತ್ತು ಗ್ರಾಂ ಚಿನ್ನದ ಬೆಲೆಯು 1,43,950 ರೂ. ಆಗಿದೆ.
ಬೆಳ್ಳಿಯ ಬೆಲೆ ಎಷ್ಟಾಗಿದೆ ?
ಇನ್ನು ಚಿನ್ನದ ಬೆಲೆ ಹೆಚ್ಚಳವಾಗುತ್ತಿದ್ದರೆ ಬೆಳ್ಳಿ ಬೆಲೆಯು ಕಡಿಮೆಯಾಗಿದೆ. ಬೆಳ್ಳಿ ಬೆಲೆಯು ಒಂದು ಗ್ರಾಂಗೆ 215 ರೂಪಾಯಿ ಹಾಗೂ ಒಂದು ಕೆ.ಜಿ ಬೆಳ್ಳಿ ಬೆಲೆಯು 2.15 ಲಕ್ಷ ರೂ. ಆಗಿದೆ. ಬುಧವಾರಕ್ಕೆ ಹೋಲಿಕೆ ಮಾಡಿದರೆ ಒಂದು ಗ್ರಾಂ ಬೆಳ್ಳಿ ಬೆಲೆಯ ಮೇಲೆ 5 ರೂಪಾಯಿ ಹಾಗೂ ಒಂದು ಕೆ.ಜಿಯ ಮೇಲೆ 5,000 ರೂ. ಭರ್ಜರಿ ಇಳಿಕೆಯಾಗಿದೆ.
Gold Price Today: ದೀಪಾವಳಿಗೆ ಚಿನ್ನದ ಬೆಲೆ ಇನ್ನಷ್ಟು ಹೆಚ್ಚಳ ಸಾಧ್ಯತೆ ?
ದೀಪಾವಳಿಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈ ರೀತಿ ಇರುವಾಗ ಚಿನ್ನದ ಬೆಲೆ ಹೆಚ್ಚಳವಾಗುತ್ತಿದ್ದು, ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಭರ್ಜರಿ ಹೆಚ್ಚಳವಾಗುವ ಸಾಧ್ಯತೆ ಇದೆ. ದೀಪಾವಳಿ ಹಬ್ಬದ ಸಮಯಕ್ಕೆ 10 ಚಿನ್ನದ ಬೆಲೆಯು ಬರೋಬ್ಬರಿ 2 ಲಕ್ಷ ರೂಪಾಯಿ ತಲುಪುವ ಸಾಧ್ಯತೆಯೂ ಇದೆ ಎಂದು ನಿರೀಕ್ಷಿಸಲಾಗಿದೆ.


Click it and Unblock the Notifications
