Gold Price Today: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ; ಅಕ್ಟೋಬರ್ 7ರ 18, 22, 24 ಕ್ಯಾರೆಟ್ ದರ ಎಷ್ಟು? ಬೆಳ್ಳಿಯೂ ಕುಸಿತ
Gold Price Today: ಚಿನ್ನದ ಬೆಲೆ ಭರ್ಜರಿ ಇಳಿಕೆಯಾಗಿದ್ದು, ನಿರಂತರವಾಗಿ ಚಿನ್ನದ ಬೆಲೆ ಇಳಿಕೆಯಾಗುತ್ತಿರುವುದು ಬಂಗಾರ ಪ್ರಿಯರಲ್ಲಿ ಸಂತೋಷವನ್ನುಂಟು ಮಾಡಿದೆ. ಕಳೆದ ಒಂದು ವಾರದಿಂದಲೂ ಚಿನ್ನದ ಬೆಲೆಯು ನಿಂತರವಾಗಿ ಇಳಿಕೆಯಾಗುತ್ತಿದೆ. ಡಾಲರ್ ಬಲಗೊಂಡಿರುವುದು ಹಾಗೂ ಟ್ರೆಜರಿ ಇಳುವರಿ ಹೆಚ್ಚಾಗಿರುವ ಕಾರಣದಿಂದ ಬಂಗಾರದ ಬೆಲೆ ಕಡಿಮೆಯಾಗುತ್ತಿದೆ. ಆಗಸ್ಟ್‌ನಿಂದಲೂ ಚಿನ್ನದ ಬೆಲೆ ಇಳಿಕೆಯ ಹಾದಿಯಲ್ಲಿದೆ.
ಶೇ 12ರಷ್ಟು ಚಿನ್ನದ ಬೆಲೆ ಇಳಿಕೆಯಾಗಿದೆ. ಈ ವರ್ಷದ ಪ್ರಾರಂಭಕ್ಕೆ ಹೋಲಿಕೆ ಮಾಡಿದರೆ ಒಟ್ಟಾರೆ ಶೇ 20ರಷ್ಟು ಚಿನ್ನದ ಬೆಲೆ ಕಡಿಮೆಯಾಗಿದೆ. ಚಿನ್ನದ ಬೆಲೆಯು ಒಂದು ವರ್ಷದ ಅವಧಿಯಲ್ಲಿ ಶೇ.20ರಷ್ಟು ಚಿನ್ನದ ಬೆಲೆ ಇಳಿಕೆಯಾಗಿದೆ. ಚಿನ್ನದ ಬೆಲೆ ಇಳಿಕೆಯಾಗುತ್ತಿದ್ದರೂ ಬೆಳ್ಳಿ ಬೆಲೆಯಲ್ಲಿ ಯಾವುದೇ ಇಳಿಕೆಯಾಗಿಲ್ಲ. ಅಕ್ಟೋಬರ್ 7ರಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

18 ಕ್ಯಾರೆಟ್ ಚಿನ್ನದ ಬೆಲೆ: 18 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂಗೆ 11,218 ರೂಪಾಯಿ ಆಗಿದೆ. ಹತ್ತು ಗ್ರಾಂ ಚಿನ್ನದ ಬೆಲೆಯು 1,12,180 ರೂ. ಆಗಿದೆ. ಅಕ್ಟೋಬರ್ 6ರ ಮಂಗಳವಾರಕ್ಕೆ ಹೋಲಿಕೆ ಮಾಡಿದರೆ, 18 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂನ ಮೇಲೆ 49 ರೂಪಾಯಿ ಹಾಗೂ ಹತ್ತು ಗ್ರಾಂನ ಮೇಲೆ 490 ರೂಪಾಯಿ ಕಡಿಮೆಯಾಗಿದೆ.
22 ಕ್ಯಾರೆಟ್ ಚಿನ್ನದ ಬೆಲೆ: 22 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂಗೆ 13,710 ರೂಪಾಯಿ ಆಗಿದೆ. ಹತ್ತು ಗ್ರಾಂ ಚಿನ್ನದ ಬೆಲೆಯು 1,37,100 ರೂ. ಆಗಿದೆ. ಇನ್ನು ಮಂಗಳವಾರಕ್ಕೆ ಹೋಲಿಕೆ ಮಾಡಿದರೆ, 22 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂಗೆ 60 ರೂಪಾಯಿ ಹಾಗೂ ಹತ್ತು ಗ್ರಾಂಗೆ 600 ರೂಪಾಯಿ ಕಡಿಮೆಯಾಗಿದೆ.
24 ಕ್ಯಾರೆಟ್ ಚಿನ್ನದ ಬೆಲೆ: 18 ಹಾಗೂ 22 ಕ್ಯಾರೆಟ್ ಚಿನ್ನದ ಬೆಲೆಯಂತೆಯೇ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಭರ್ಜರಿ ಇಳಿಕೆಯಾಗಿದೆ. 24 ಕ್ಯಾರೆಟ್ ಚಿನ್ನದ ಬೆಲೆಯು ಒಂದು ಗ್ರಾಂಗೆ 14,957 ರೂಪಾಯಿ ಹಾಗೂ ಹತ್ತು ಗ್ರಾಂನ ಮೇಲೆ 1,49,570 ರೂ. ಆಗಿದೆ. ಮಂಗಳವಾರಕ್ಕೆ ಹೋಲಿಕೆ ಮಾಡಿದರೆ, 24 ಕ್ಯಾರೆಟ್‌ನ ಒಂದು ಗ್ರಾಂ ಚಿನ್ನದ ಮೇಲೆ 65 ರೂಪಾಯಿ ಹಾಗೂ ಹತ್ತು ಗ್ರಾಂನ ಮೇಲೆ 650 ರೂಪಾಯಿ ಕಡಿಮೆಯಾಗಿದೆ.
ಅಕ್ಟೋಬರ್ 7ರಂದು ಬೆಳ್ಳಿ ಬೆಲೆ ಎಷ್ಟಾಗಿದೆ ?
ಅಕ್ಟೋಬರ್ 7ರಂದು ಬೆಳ್ಳಿ ಬೆಲೆಯು ಸ್ಥಿರವಾಗಿದೆ. ಬೆಳ್ಳಿ ಬೆಲೆಯು ಒಂದು ಗ್ರಾಂನ ಮೇಲೆ 235 ರೂಪಾಯಿ ಹಾಗೂ ಒಂದು ಕೆ.ಜಿ ಬೆಳ್ಳಿ ಬೆಳೆಯು 2.35 ಲಕ್ಷ ರೂ. ಆಗಿದೆ.
ಚಿನ್ನದ ಬೆಲೆ ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ?
ಬಂಗಾರದ ಬೆಲೆಯು ನಿರಂತರವಾಗಿ ಇಳಿಕೆಯಾಗುತ್ತಿದೆ. ಈಗಿನ ಪರಿಸ್ಥಿತಿ ನೋಡಿದರೆ ಮುಂದಿನ ದಿನಗಳಲ್ಲಿ ಬಂಗಾರದ ಬೆಲೆಯು ಇನ್ನಷ್ಟು ಇಳಿಕೆಯಾಗುವ ಸಾಧ್ಯತೆ ಇದೆ.
ಇನ್ನು ಚಿನ್ನದ Base Value / ಮೂಲ ಮೌಲ್ಯ; 1,37,100 ಹಾಗೂ Making Charge / ತಯಾರಿಕಾ ಶುಲ್ಕವು 16,452 ರೂ ಹಾಗೂ GST/ ಜಿಎಸ್‌ಟಿ 4,607 ರೂಪಾಯಿ ಆಗಿದೆ.


Click it and Unblock the Notifications
